
ಶ್ರೀನಿವಾಸಪುರ : ಒಂಟಿ ಮನೆ ಗುರಿಯಾಗಿಸಿಕೊಂಡು ದರೋಡೆ ಮಾಡಿರುವ ಖದೀಮರು, ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಜೀವನ ಮಾಡುತ್ತಿದ್ದ ರಾಮಕೃಷ್ಣಪ್ಪ ಕುಟುಂಬ, ಮನೆಯಲ್ಲಿ ಇಬ್ಬರು ಮಹಿಳೆಯರು ಇದ್ದನ್ನು ಗಮನಿಸಿ ದರೋಡೆ ಮಾಡಿರುವ ಶಂಕೆ.ಗೌನಿಪಲ್ಲಿ ಪೊಲೀಸ್ ಠಾಣಾವ್ಯಾಪ್ತಿಯ ತಾಡಿಗೋಲ್ ಕ್ರಾಸ್ ಬಳಿ ಪಿಸ್ತೂಲ್, ಲಾಂಗುಗಳು ತೋರಿಸಿ ಮನೆಯಲ್ಲಿ ದರೋಡೆ ಬುಧವಾರ ರಾತ್ರಿ 8 ಗಂಟೆ ಸಮಯದಲ್ಲಿ ನಡೆದಿದೆ. ಮನೆಯ ಯಜಮಾನ ರೇಷನ್ ತರಲು ಹೋಗಿದ್ದ ವೇಳೆ ಘಟನೆ, ನಾಲ್ವರು ದರೋಡೆಕೊರ ಬಂದಿರಬಹುದೆದು ಮಾಹಿತಿ ನೀಡಿದರು.1 ತಾಳಿ,3 […]

ಕೋಲಾರ,ಜು.26: ಜನರಿಗೆ ಜಾಗೃತಿ ಮೂಡಿಸಲು, ಸರಿಯಾದ ಮಾಹಿತಿ ತಲುಪಿಸಲು ಮಾಧ್ಯಮ ಬೇಕು. ಸಮಾಜದಲ್ಲಿನ ತಪ್ಪುಗಳನ್ನು ಹೊರತರಲು ಜೊತೆಯಾಗಿ ಕೆಲಸ ಮಾಡೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಶುಕ್ರವಾರ ಆಯೋಜಿಸಿದ್ದ ಸಂವಾದ ಮತ್ತು ಕೇಂದ್ರ ಸರ್ಕಾರ ಹೊಸದಾಗಿ ರೂಪಿಸಿರುವ ಭಾರತೀಯ ನ್ಯಾಯ ಸಂಹಿತೆ ಕುರಿತು ಪತ್ರಕರ್ತರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವ ಜನತೆಗೆ ತಿಳಿವಳಿಕೆ ಮೂಡಿಸುವುದು. 15 ದಿನಕ್ಕೊಮ್ಮೆ ಆರಕ್ಷಕರ ದಿನ […]

ಕೋಲಾರ : ಎಸ್.ಎಸ್.ಎಲ್.ಸಿ ನಂತರ ಶೀಘ್ರದಲ್ಲಿಯೇ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಏನು ಮಾಡಬೇಕು ಎಂದು ಯೋಚಿಸುವ ಯುವಕ, ಯುವತಿಯರಿಗೆ ಅತಿ ಕಡಿಮೆ ಅವಧಿಯಲ್ಲಿ ಹಾಗೂ ಕಡಿಮೆ ಖರ್ಚಿನಲ್ಲಿ ತಾಂತ್ರಿಕ ಕೌಶಲ್ಯಗಳನ್ನು ಗಳಿಸಿಕೊಂಡು ಉದ್ಯೋಗಸ್ಥರಾಗಲು ಕೈಗಾರಿಕಾ ತರಬೇತಿ ಸಂಸ್ಥೆಗಳು ಹಾಗೂ ಜಿ.ಟಿ.ಟಿ.ಸಿ ಸಂಸ್ಥೆಗಳಲ್ಲಿ ಭೋದಿಸಲಾಗುತ್ತಿರುವ ಕೋರ್ಸ್‌ಗಳು ದಾರಿದೀಪಗಳಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜುಲೈ 22 ರಂದು ಜಿಲ್ಲೆಯ ಎಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಗಳ ಹಾಗೂ ಜಿ.ಟಿ.ಟಿ.ಸಿ ಸಂಸ್ಥೆಯ ಪ್ರಾಂಶುಪಾಲರು, ಶಾಲಾ ಶಿಕ್ಷಣ ಮತ್ತು […]

ಕೋಲಾರ:- ರಾಜ್ಯ ಸರಕಾರ 2018-19 ನೇ ಸಾಲಿನಲ್ಲಿ ಘೋಷಿಸಿದ್ದ 1 ಲಕ್ಷ ರೂ ಅಲ್ಪಾವಧಿ ಬೆಳೆ ಸಾಲ ಮನ್ನಾ ಯೋಜನೆಯಡಿ ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನ ಚಿಂತಾಮಣಿ ಶಾಖೆಯಲ್ಲಿ 11 ಕೋಟಿ ರೂ ಸಾಲ ಮನ್ನಾದ ಮೊತ್ತವು ನೇರವಾಗಿ ರೈತರ ಖಾತೆಗಳಿಗೆ ಜಮಾ ಆಗಿದೆ ಎಂದು ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎನ್.ಶೀಲಾ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.ತಳಗವಾರ ಟಿ.ಎಸ್.ಪ್ರತಾಪ್ ಎಂಬುವರು ಜೂನ್.26, 2024 ರಲ್ಲಿ ಡಿಸಿಸಿ ಬ್ಯಾಂಕಿನ ಚಿಂತಾಮಣಿ ಶಾಖೆಯಲ್ಲಿ 11 ಕೋಟಿ ಅವ್ಯವಹಾರ ಆಗಿದೆ ಎಂದು […]

ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡಲು ಅವಕಾಶ ನೀಡಬಾರದು ಎಂದು ಜಿಲ್ಲಾ ಲೋಕಾಯುಕ್ತ ವರಿಷ್ಠಾಧಿಕಾರಿ ಡಿ.ಕೆ.ಉಮೇಶ್ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಲೋಕಾಯುಕ್ತ ಕಚೇರಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿಗಳು ಅರ್ಜಿ ಸ್ವೀಕರಿಸಿದ 30 ದಿನಗಳ ಒಳಗೆ ಸಮಸ್ಯೆ ಬಹೆಹರಿಸಬೇಕು. ಸಾಧ್ಯವಿಲ್ಲವಾದರೆ ಅದಕ್ಕೆ ಪೂರಕವಾಗಿ ಹಿಂಬರಹ ನೀಡಬೇಕು ಎಂದು ಹೇಳಿದರು.ಅಧಿಕಾರಿಗಳು ತಮ್ಮ ಕಚೇರಿಗೆ ಬರುವ […]

ಕೋಲಾರ : ಸರ್ಕಾರಿ ದತ್ತು ಸಂಸ್ಥೆಯು 0-6 ವರ್ಷದೊಳಗಿನ ಕುಟುಂಬದ ಪ್ರೀತಿ ವಂಚಿತ, ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳ ಪುನರ್ವಸತಿಗೆ ನೆರವಾಗುವ ಒಂದು ಸೂಕ್ತ ಸಂಸ್ಥೆಯಾಗಿದೆಯೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಿಷನ್ ವಾತ್ಸಲ್ಯ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ವತಿಯಿಂದ ಹಮ್ಮಿಕೊಂಡಿದ್ದ ಮಿಷನ್ ವಾತ್ಸಲ್ಯ ವಿವಿಧ ಯೋಜನೆಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, […]

ಕೋಲಾರ,ಜು.23: ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ದಿಗೆ ಭೂಸ್ವಾಧಿನಾವಾಗಿರುವ ಗಡಿಭಾಗದ ರೈತರ 2ನೇ ಕಂತಿನ ಪರಿಹಾರ ವಿತರಣೆ ಮಾಡಲು ವಿಳಂಭ ಮಾಡುತ್ತಿರುವ ವಿಶೇಷ ಭೂಸ್ವಾಧಿನಾಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಪರಿಹಾರ ವಿತರಣೆ ಮಾಡಬೇಕೆಂದು ರೈತ ಸಂಘದಿಂದ ಮಾನ್ಯ ಸಂಸದರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಗಡಿಭಾಗದ ರೈತರಿಗೆ ಪರಿಹಾರ ವಿತರಣೆ ಮಾಡಬೇಕಾದರೆ ವಿಶೇಷ ಭೂ ಸ್ವಾದಿನಾಧಿಕಾರಿಗಳಿಗೆ ತಾಲ್ಲೂಕು ದಂಡಾಧಿಕಾರಿಗಳ ವರದಿ ಬೇಕು ಆದರೆ ಕೊಳತೂರು ಮಾಲೂರು ವ್ಯಾಪ್ತಿಯ ರೈತರ ಪರಿಹಾರ ನೀಡಲು ಯಾವುದೇ ವರದಿ ಕೇಳುತ್ತಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ […]

ಕೋಲಾರ:- ಗ್ರಾಮೀಣಭಾಗದಲ್ಲಿ ಸ್ವಚ್ಚತೆಗೆ ಒತ್ತು ನೀಡಿ, ಸಾಂಕ್ರಾಮಿಕ ರೋಗ ಮುಕ್ತ ವಾತಾವರಣ ನಿರ್ಮಿಸುವಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಬದ್ದತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಬಸವಂತಪ್ಪ ಕರೆ ನೀಡಿದರು.ತಾಲ್ಲೂಕಿನ ಸೂಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಚಭಾರತ ಅಭಿಯಾನದಡಿ ನಡೆದ ಸ್ವಚ್ಚತಾ ಕಾರ್ಯಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ದಾಖಲೀಕರಣ ಮಾಡುವ ಕಾರ್ಯಕ್ರಮಕ್ಕೆ ಗಿಡ ನೆಟ್ಟು ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಮಾರಕ ಡೆಂಗ್ಯೂ ಮತ್ತಿತರ ಮಾರಕ ರೋಗಗಳಿಂದ ಮುಕ್ತವಾದ ವಾತಾವರಣ ನಿರ್ಮಾಣದಲ್ಲಿ ಗ್ರಾಮ […]

ಕೋಲಾರ:- ಜಿಲ್ಲೆಯಲ್ಲಿರುವ ೬೫೦೦ ಯೋಧರ ಕುಟುಂಬಗಳ ಆರೋಗ್ಯ ತಪಾಸಣೆಗೆ ಅಗತ್ಯವಾದ ಇ.ಸಿ.ಹೆಚ್.ಎಸ್. ಆಸ್ಪತ್ರೆಗಾಗಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ತಹಸೀಲ್ದಾರ್ ಹರ್ಷವರ್ಧನ್ ಬುಧವಾರ ತಾಲ್ಲೂಕಿನ ಅರಾಭಿಕೊತ್ತನೂರಿನಲ್ಲಿ ಸ್ಥಳ ಪರಿಶೀಲನೆ ನಡೆಸಿದರು.ಇತ್ತೀಚೆಗೆ ನಿವೃತ್ತ ಯೋಧರ ಟ್ರಸ್ಟ್ ಅಧ್ಯಕ್ಷ ಜಗನ್ನಾಥನ್ ನೇತೃತ್ವದಲ್ಲಿ ಪದಾಧಿಕಾರಿಗಳು ಸುದ್ದಿಗೋಷ್ಟಿ ನಡೆಸಿ, ನಮ್ಮ ಬೇಡಿಕೆಗಳು ಈಡೇರದಿದ್ದರೆ ಕಾರ್ಗಿಲ್ ವಿಜಯೋತ್ಸವ ಬಹಿಷ್ಕರಿಸುವ ಎಚ್ಚರಿಕೆಯನ್ನೂ ನೀಡಿದ್ದರು. ಈ ನಡುವೆ ಜಿಲ್ಲಾಧಿಕಾರಿಗಳು ಯೋಧರ ಬೇಡಿಕೆಗಳಿಗೆ ಸ್ಪಂದಿಸಿ ಕೂಡಲೇ ಯೋಧರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಾದ ಜಾಗ ಗುರುತಿಸಲು ತಹಸೀಲ್ದಾರ್ ಅವರಿಗೆ ಸೂಚಿಸಿದ್ದರು ಎನ್ನಲಾಗಿದೆ.ಈ ಹಿನ್ನಲೆಯಲ್ಲಿ […]