
ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ರಾಷ್ಟ್ರೀಯ ತೋಟಗಾರಿಕೆ ಮೇಳದಲ್ಲಿ ಆಕರ್ಷಿಸಿದ ಕೋಲಾರದ ತರಕಾರಿಗಳು ಕೋಲಾರ : ಬೆಂಗಳೂರಿನ ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ವತಿಯಿಂದ ಫ್ರೆ 5 ರಿಂದ 8 ರವರೆಗೂ ರಾಷ್ಟ್ರೀಯ ತೋಟಗಾರಿಕೆ ಮೇಳ-2020 ವನ್ನು ಆಯೋಜಿಸಲಾಗಿತ್ತು. ಈ ಮೇಳದಲ್ಲಿ ಕೋಲಾರದ ತರಕಾರಿಗಳು, ಹಣ್ಣು ಮತ್ತು ಹೂವುಗಳನ್ನು ಪ್ರದರ್ಶಿಸಲಾಯಿತು. ಇವು ಸಾರ್ವಜನಿಕರನ್ನು ಹೆಚ್ಚು ಆಕರ್ಷಿಸಿದವು. ಮೇಳದಲ್ಲಿ ಕೋಲಾರದ ಕೃಷಿ ವಿಜ್ಞಾನ ಕೇಂದ್ರದ ಸ್ಟಾಲ್‍ನಲ್ಲಿ ಪಾಲಿಹೌಸ್ ತಾಂತ್ರಿಕತೆಯಲ್ಲಿ ಬೆಳೆದ ಕ್ಯಾಪಿಕ್ಸಂ ತಳಿಗಳಾದ ಇನ್ಸ್ಪಿರೇಶನ್, ಬಚಟ ಮತ್ತು […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಜಂತುಹುಳು ನಿವಾರಣೆಗಾಗಿ ವೈಯಕ್ತಿಕ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ – ಸಿ.ಎಸ್ ವೆಂಕಟೇಶ್ ಕೋಲಾರ:ಜಂತುಹುಳು ನಿವಾರಣೆಗಾಗಿ ವೈಯಕ್ತಿಕ ಸ್ವಚ್ಚತೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕೆಂದು ಜಿಲ್ಲಾ ಪಂಚಾಯತ್‍ನ ಅಧ್ಯಕ್ಷರಾದ ಸಿ.ಎಸ್ ವೆಂಕಟೇಶ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಇವರ ವತಿಯಿಂದ ಸರ್ಕಾರಿ ಮಹಿಳಾ ಕಾಲೇಜು ಕೋಲಾರ ಇಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ -10 ಫೆಬ್ರವರಿ 2020 ರ ಕಾರ್ಯಕ್ರಮವನ್ನು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶಿಕ್ಷಣವೇ ಶಕ್ತಿ, ಯುಕ್ತಿ ಹಾಗೂ ಸರ್ವತೋಮುಖ ಅಭಿವೃದ್ಧಿ ಹೊಂದಲು ಬೇಕಾದ ಆಯುಧ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರತ್ನಯ್ಯ ಶ್ರೀನಿವಾಸಪುರ: ಶಿಕ್ಷಣವೇ ಶಕ್ತಿ, ಯುಕ್ತಿ ಹಾಗೂ ಸರ್ವತೋಮುಖ ಅಭಿವೃದ್ಧಿ ಹೊಂದಲು ಬೇಕಾದ ಆಯುಧ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರತ್ನಯ್ಯ ಹೇಳಿದರು. ಪಟ್ಟಣದ ಜಿಜಿ ವೇಣು ಸೆಂಟ್ರಲ್ ಶಾಲೆಯ ಮೈದಾನದಲ್ಲಿ ಏರ್ಪಡಿಸಿದ್ದ ಜಿಜಿ ವೇಣು ಸಮೂಹ ಶಿಕ್ಷಣ ಸಂಸ್ಥೆಗಳ 30ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ, ಅಡ್ಡಿ ಆತಂಕಗಳನ್ನು ಎದುರಿಸಿ, ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಬಡವರ ಪರ ಕೆಲಸ ಮಾಡುವುದನ್ನು ನಿಲ್ಲಿಸುವುದಿಲ್ಲ : ಶಾಸಕ ಕೆ.ಆರ್.ರಮೇಶ್ ಕುಮಾರ್. ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 180 ಸ್ತ್ರೀ ಶಕ್ತಿ ಸಂಘಗಳಿಗೆ ರೂ.7 ಕೋಟಿ ಸಾಲ ವಿತರಿಸಿ ಮಾತನಾಡಿ, ಬಡ ಮಹಿಳೆಯರು ಖಾಸಗಿ ಲೇವಾದೇವಿ ಮಾಡುವ ವ್ಯಕ್ತಿಗಳ ಕಿರುಕುಳದಿಂದ ಮುಕ್ತರಾಗಿ, ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವಂತೆ ಬಡ್ಡಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ, ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು : ಶಾಸಕ ಕೆ.ಆರ್.ರಮೇಶ್ ಕುಮಾರ್. ತಾಲ್ಲೂಕಿನ ಕೊಡಿಚೆರುವು ಗ್ರಾಮದಲ್ಲಿ ಶುಕ್ರವಾರ ರೂ.8.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕ್ಷೀರ ಭವನ ಉದ್ಘಾಟಿಸಿ ಮಾತನಾಡಿ, ಕ್ಷೀರೋತ್ಪಾದನೆಯಲ್ಲಿ ಮಹಿಳೆಯರ ಪಾತ್ರ ಹಿರಿದು. ಗ್ರಾಮೀಣ ಬದುಕಿನ ಜೀವನಾಡಿಯಾಗಿರುವ ಹಸು ಸಾಕಾಣಿಕೆ ಮಹಿಳೆಯ ಮುಖ್ಯ ಕಸುಬಾಗಿದೆ. ಕುಟುಂಬ ನಿರ್ವಹಣೆಗೆ ಮಹಿಳೆಯರ ಶ್ರಮ ಆಧಾರವಾಗಿದೆ ಎಂದು ಹೇಳಿದರು. ತಾಲ್ಲೂಕಿನಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವಂತೆ ಡಿಸಿಸಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಪಠ್ಯಪುಸ್ತಕ ವಿತರಣೆ ಮಾಡದ ರಮಣಪ್ಪ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ಮಾಡಿದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳದ ಉಪ ನಿರ್ದೇಶಕರ ವಿರುದ್ದ ಕ್ರಮ ಕೈಗೊಳ್ಳಬೇಕು: ರೈತ ಸಂಘ ಕೋಲಾರ, ಪೆ.05: ಪಠ್ಯಪುಸ್ತಕ ವಿತರಣೆ ಮಾಡದ ರಮಣಪ್ಪ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ಮಾಡಿದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳದ ಉಪ ನಿರ್ದೇಶಕರ ವಿರುದ್ದ ಕ್ರಮ ಕೈಗೊಳ್ಳಬೇಕು. ಹಾಗೂ ಯಾವುದೇ ಹೊಸ ಖಾಸಗಿ ಶಾಲೆಗೆ ಅನುಮತಿ ನೀಡಬಾರದು ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸಬೇಕೆಂದು […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಶ್ರೀನಿವಾಸಪುರ,ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣದ ಹಂತದಲ್ಲಿ ಗುಣಾತ್ಮಕ ಫಲಿತಾಂಶ ಪಡೆಯಬೇಕು:ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಶೈಲ ಶ್ರೀನಿವಾಸಪುರ: ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣದ ಹಂತದಲ್ಲಿ ಗುಣಾತ್ಮಕ ಫಲಿತಾಂಶ ಪಡೆಯಬೇಕು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಶೈಲ ಹೇಳಿದರು. ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಜೀವನದಲ್ಲಿ […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಸಾರ್ವಜನಿಕರು ಸರ್ಕಾರಿ ನೌಕರ ನಿವೃತ್ತಿಯಾದ ಬಳಿಕವೂ ಗೌರವದಿಂದ ಕಾಣುವುದಾದರೆ, ಅವರ ಸೇವೆ ಸಾರ್ಥಕ:ಎಸ್.ಆನಂದ್ ಶ್ರೀನಿವಾಸಪುರ: ಸಾರ್ವಜನಿಕರು ಸರ್ಕಾರಿ ನೌಕರ ನಿವೃತ್ತಿಯಾದ ಬಳಿಕವೂ ಗೌರವದಿಂದ ಕಾಣುವುದಾದರೆ, ಅವರ ಸೇವೆ ಸಾರ್ಥಕವಾಗಿರುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತರಾದ ಪಿಡಿಒ ಜಿ.ವಿ.ರಾಮಚಂದ್ರಪ್ಪ ಹಾಗೂ ಡಿ ಗ್ರೂಪ್ ನೌಕರ ಎಂ.ವಿ.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಿ ಮಾತನಾಡಿ, ವಯೋನಿವೃತ್ತಿ ಹೊಂದಿರುವ ಇಬ್ಬರೂ ಸಹ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಮಾದಿಗ ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು – ಜೆ.ಎಂ.ದೇವರಾಜ್ ಶ್ರೀನಿವಾಸಪುರ: ಮಾದಿಗ ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಎಂದು ರಾಜ್ಯ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್ ಆಗ್ರಹಪಡಿಸಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮೀಸಲಾಗಿ ಹೋರಾಟ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿ, ಮಾದಿಗರು ಭಾರತದ ಮೂಲ ನಿವಾಸಿಗಳು. ಆದರೂ ಎಲ್ಲ ರಂಗಗಳಲ್ಲೂ […]