ಕೋಲಾರ: ಜುಲೈ 1ರ ಪತ್ರಿಕಾ ದಿನಾಚರಣೆ ಅಂಗವಾಗಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಯನಿರತ ಪತ್ರಕರ್ತರು ಹಾಗೂ ಕುಟುಂಬ ಸದಸ್ಯರಿಗೆ ಒಂದು ದಿನದ ಕ್ರೀಡಾ ಹಬ್ಬವನ್ನು ಆಯೋಜಿಸಲಾಗಿದೆ. ಪುರುಷ ಪತ್ರಕರ್ತರಿಗೆ ಕ್ರಿಕೆಟ್, ಕಬಡ್ಡಿ ಹಾಗೂ ಹಗ್ಗಜಗ್ಗಾಟ ಹಾಗೂ ಪತ್ರಕರ್ತರ ಕುಟುಂಬದ ಸದಸ್ಯರಿಗೆ ಹಾಗೂ ಮಕ್ಕಳಿಗೆ ಮ್ಯೂಸಿಕಲ್ ಚೇರ್, ಮಡಕೆ ಒಡೆಯುವ ಸ್ಪರ್ಧೆ, ಮಡಕೆಯಲ್ಲಿ ಚೆಂಡು ಹಾಕುವ ಸ್ಪರ್ಧೆ ಮತ್ತು ಬಾಯಿಯಲ್ಲಿ ಚಮಚ ಇಟ್ಟುಕೊಂಡು ಅದರಲ್ಲಿ ನಿಂಬೆಹಣ್ಣು ಇಟ್ಟು ನಡೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವ […]
ಕೋಲಾರ.ಜೂ,05: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪ್ರತಿ ವರ್ಷದಂತೆ ಈ ಬಾರಿಯೂ ಜುಲೈ 1 ರಂದು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ಪತ್ರಕರ್ತರ ಮಕ್ಕಳು 2023 -2024 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಹಾಗೂ ಯಾವುದೇ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಲ್ಲಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜೂನ್ 10 ರೊಳಗಾಗಿ […]
ಕೋಲಾರ:- ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಂಕಲ್ಪವಾದರೆ ಮಾತ್ರವೇ ಸಮಾಜದಲ್ಲಿ ಉತ್ತಮ ಆರೋಗ್ಯ, ಮಾಲಿನ್ಯ ಮುಕ್ತ ವಾತಾವರಣ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಜಗದೀಶ್ ತಿಳಿಸಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಪ್ರತಿಯೊಬ್ಬರೂ ಕನಿಷ್ಟ ಒಂದೊಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡೋಣ ಇದರಿಂದ ಪಕ್ಷಿಗಳ ಕಲರವ ಕೇಳಬಹುದು, ನೀಲಗಿರಿ ನಾಶಪಡಿಸುವ ಮೂಲಕ ಅಂತರ್ಜಲ […]
ಶ್ರೀನಿವಾಸಪುರ : ಕಳೆದ 40 ದಿನಗಳ ಹಿಂದೆ ಲೋಕಸಭಾ ಚುನವಾಣೆಯ ಮತದಾನ ನಡೆದಿದ್ದು, ಮಂಗಳವಾರ ನಡೆದ ಮತ ಎಣಿಕೆಯ ವೀಕ್ಷಣೆ ಗಾಗಿ ನಾಗರೀಕರು ತಮ್ಮ ತಮ್ಮ ಮನೆಗಳಲ್ಲಿನ ಟಿವಿ ಪರದೆಯ ಮುಂದೆ ಕುಳಿತು ಕೇಂದ್ರದಲ್ಲಿ ಎನ್‍ಡಿಎ ಮೈತ್ರಿಕೂಟ ಆಡಳಿತ ನಡೆಸುತ್ತದಯೇ ಅಥವಾ ಇಂಡಿ ಮೈತ್ರಿಕೂಟ ಆಡಳಿತ ನಡೆಸುತ್ತದಯೇ ಎಂಬುದನ್ನ ಕುಟುಂಬದ ಸದಸ್ಯರೊಂದಿಗೆ ಚರ್ಚೆ ಮಾಡಿಕೊಳ್ಳುತ್ತಿದ್ದು ಕೇಳಿಬಂತು.ಲೋಕಸಭಾ ಚುನವಾಣೆ ಹಾಗು ನೆರೆಯ ಆಂದ್ರದ ವಿಧಾನ ಸಭಾ ಚುನಾವಣೆಯ ಫಲಿತಾಂಶವನ್ನು ವೀಕ್ಷಿಸಿಸುವ ಸಲುವಾಗಿ ಸಾರ್ವಜನಿಕರು ಟಿವಿ ಮುಂದೆ ಇನ್ನು ಕೆಲವರು […]
ಕೋಲಾರ ಲೋಕಸಭಾ ಚುನಾವಣೆ-2024 ಲೋಕಸಭಾ ಚುನಾವಣೆ: ಮತ ಎಣಿಕೆ ಸುಸೂತ್ರ: ಗೆದ್ದ ಅಭ್ಯರ್ಥಿಗೆ ಜೈಕಾರ ಎಣಿಕೆ ಕೇಂದ್ರದ ಸುತ್ತಮುತ್ತ ಜನಜಂಗುಳಿಕೋಲಾರ : ನಗರದ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಮಂಗಳವಾರ ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು.ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಕಾಲೇಜಿನ ಪ್ರತ್ಯೇಕ ಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆ 21 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು.ಬೆಳಿಗ್ಗೆ 7 ಗಂಟೆ ಸುಮಾರಿಗೆ ಕೇಂದ್ರದ ಬಳಿ ಬೆರಳೆಣಿಕೆ ಜನರಿದ್ದರು. ಸಮಯ ಕಳೆದಂತೆ ಜನಜಂಗುಳಿ […]
ಶ್ರೀನಿವಾಸಪುರ : ಪಟ್ಟಣದಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಮತದಾನವು ಶಾಂತಿಯುತವಾಗಿ ನಡೆಯಿತು. ಶೇಕಡ 96.44 % ರಷ್ಟು ನಡೆಯಿತು.ಈ ಸಮಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಡಾ|| ವೇಣುಗೋಪಾಲ್ ಮಾತನಾಡಿ ವೈ.ಎ.ಎನ್ ರವರು ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇಂತಹ ವ್ಯಕ್ತಿಯನ್ನು ಚುನಾವಣೆಯಲ್ಲಿ ಎಲ್ಲಾ ಶಿಕ್ಷಕರ ಸಹ ಗೆಲ್ಲಿಸುವ ನಿರ್ಧಾರ ಮಾಡಿರುವುದು ಹೆಮ್ಮೆಯ ವಿಚಾರ . ತಾಲೂಕಿನಲ್ಲಿ ಒಟ್ಟು 731 ಮತಗಳಿದ್ದು, ಎಲ್ಲಾ ಶಿಕ್ಷಕರು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ […]
ಕೋಲಾರ,ಜೂ.01: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ಡಾ.ವೈ.ನಾರಾಯಣಸ್ವಾಮಿ ಅವರ ಗೆಲುವು ನಿಶ್ಚಿತ ಎಂದುಪ್ರಚಾರ ಸಭೆಯಲ್ಲಿ ಕೆಯುಡಿ ಮಾಜಿ ಅಧ್ಯಕ್ಷ ವಿಜಯಕುಮಾರ್ ಹಾಗೂ ಮಾಧ್ಯಮ ಸಹ ಸಂಚಾಲಕ್ ಕೆಂಬೋಡಿ ನಾರಾಯಣಸ್ವಾಮಿ ಜಂಟಿ ಹೇಳಿಕೆ ನೀಡಿರುತ್ತಾರೆಇಂದು ನಗರದ ಹಲವು ಶಾಲೆಗಳಲ್ಲಿ ಮತದಾರರನ್ನು ಭೇಟಿ ಮಾಡಿ ಡಾ. ವೈ.ಎ.ನಾರಾಯಣಸ್ವಾಮಿ ರವರ ಪರವಾಗಿ ಮತಯಾಚನೆ ಮಾಡಲಾಯಿತು.ಇಡೀ ಜಿಲ್ಲಾದ್ಯಂತ ವೈ.ಎ.ನಾರಾಯಣಸ್ವಾಮಿ ಅವರ ಪರ ಅಲೆ ಜೋರಾಗಿದೆ. ಖಾಸಗಿ, ಸರ್ಕಾರಿ, ಅನುಧಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಜೂ, 3 ರಂದು ನಡೆಯುವ ಚುನಾವಣೆಯಲ್ಲಿ […]
ಶ್ರೀನಿವಾಸಪುರ : ಪರಿಸರದ ಬಗ್ಗೆಯ ಜಾಗೃತಿ ಕಾರ್ಯಕ್ರಮಗಳು ಯಾವುದೇ ಕಾರಣಕ್ಕೂ ಹೇಳಿಕೆ ಸಿಮೀತವಾಗಬಾರದು , ಪರಿಸರದ ಮಧ್ಯೆ ಹಬ್ಬದ ರೀತಿಯಲ್ಲಿ ಆಚರಣೆಯಾಗಬೇಕಾಗಿದೆ ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್ ಹೇಳಿದರು.ತಾಲೂಕಿನ ಲಕ್ಷ್ಮೀಪುರ ಕ್ರಾಸ್‍ನ ವಿಎಸ್‍ಆರ್ ಶಾಲಾವರಣದಲ್ಲಿ ಶುಕ್ರವಾರ ಕೃಷಿ ಇಲಾಖೆವತಿಯಿಂದ ವಿಶ್ವ ಪರಿಸರ ದಿನಾಚರಣೆ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ರತಿಯೊಬ್ಬರು ಸಸಿ ನೆಟ್ಟು ಅದನ್ನ ಕಾಪಾಡುವ ನಿಟ್ಟಿನಲ್ಲಿ ಸನ್ನಧರಾಗಬೇಕು. ಈಗಾಗಲೇ ಪರಿಸರ ಕಲುಷಿತಗೊಂಡಿದ್ದು, ಕಲುಷಿತಗೊಂಡಿರುವುದಕ್ಕೆ ನಾನಾ ಕಾರಣಗಳು ಇವೆ. ಒಂದು ರೀತಿಯಲ್ಲಿ ನಾಗರೀಕತೆಯ […]
ಕೋಲಾರ : ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ಬಂದಿದ್ದು ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ತಿಗಳ ಒತ್ತುವರಿಗೆ ಅವಕಾಶ ಇಲ್ಲ. ಈ ತಂತ್ರಶದಲ್ಲಿ ಸರ್ಕಾರಿ ಜಮೀನುಗಳ ದಾಖಲೆ ಹಾಗೂ ಜಿಯೋ ಫೆನ್ಸ್ ಮೂಲಕ ನಿಗಾ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಎಚ್ಚರಿಸಿದ್ದಾರೆ. ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ. ಈ […]