ಶ್ರೀನಿವಾಸಪುರ : ಪಟ್ಟಣದ ಪುರಸಭೆ ಕಚೇರಿಯ ಸಭಾಂಗಣದಲ್ಲಿ ಗುರುವಾರ ಖ್ಯಾತ ವಚನಕಾರ ಹಡಪದ ಅಪ್ಪಣ್ಣ ರವರ ಜಯಂತಿಯನ್ನು ಆಚರಣೆ ಮಾಡಲಾಯಿತು.ಕಂದಾಯ ನಿರೀಕ್ಷಕ ಎಸ್.ಶಂಕರ್, ಸದಸ್ಯ ಸಂಜಯ್ಸಿಂಗ್, ಸಿಬ್ಬಂದಿಗಳಾದ ಸಂತೋಷ್, ಸುರೇಶ್, ಶಿವಪ್ರಸಾದ್, ನಾಗೇಶ್, ಮಂಜುನಾಥ್, ವೆಂಕಟೇಶಯ್ಯ, ಸೀತಾರಾಮರೆಡ್ಡಿ, ಶ್ರೀನಿವಾಸ್, ಭಾಗ್ಯಮ್ಮ ಇದ್ದರು.
ಶ್ರೀನಿವಾಸಪುರ : ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥಮಾಡದೇ ಅಧ್ಯಯನ ಮಾಡಬೇಕು .ಅಧ್ಯಯನವನ್ನು ಇಷ್ಟಪಟ್ಟು ಮಾಡಬೇಕು. ಯಾವುದೇ ಕೆಲಸವನ್ನು ಇಷ್ಟವಿಲ್ಲದೇ ಮಾಡಿದರೆ ಅದು ಫಲನೀಡುವುದಿಲ್ಲ. ಹಾಗಾಗಿ ಅಧ್ಯಯನದಲ್ಲಿ ಶ್ರದ್ಧೆ, ಛಲ, ಸಮಯಪಾಲನೆ ಸೇರಿದಂತೆ ಶಿಸ್ತುಬದ್ದ ಜೀವನ ನಡೆಸುವ ಮೂಲಕ ಯಶಸ್ಸುಗಳಿಸಬೇಕು ಎಂದು ದಾನಿ ಕಾಣಿಪಾಕಂ ದೇವಾಲಯದ ಉಪಪ್ರಧಾನ ಅರ್ಚಕ ಎಸ್.ಎಸ್.ಗಣೇಶ್ ಗುರುಕುಲ್ ಹೇಳಿದರು.ತಾಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯ 136 ವಿದ್ಯಾರ್ಥಿಗಳಿಗೆ ಬುಧವಾರ ಉಚಿತ ಲೇಖನಿ ಸಾಮಾಗ್ರಿಗಳನ್ನು , ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.ನಾನು ವಿದ್ಯಾಬ್ಯಾಸ ಮಾಡಿರುವ ಶಾಲೆಗೆ ನನ್ನಿಂದಾಗುವ […]
ಕೋಲಾರ : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು. ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ಕಾರ್ಯಕ್ರಮ ತಲುಪಿಸುವುದು, ಆರ್ಥಿಕ ಚಟುವಟಿಕೆ ಬಲಪಡಿಸಲು ಸಾಲ ಸೌಲಭ್ಯ ಕಲ್ಪಿಸುವುದು. ನಾಗರಿಕ ಸೇವೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, […]
ಶ್ರೀನಿವಾಸಪುರ : ಜು 11 ರಂದು ಮ. 2.30 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದ್ದು, ಉಳಿದಂತೆ ಅವರ ಸ್ವಾಗತಕ್ಕೆ ಎಲ್ಲಾ ಸಿದ್ದತೆಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ಚಿಂತಾಮಣಿ ವೃತ್ತ ಬಳಿ ಭವ್ಯವಾಗಿ ಸ್ವಾಗತಿಸಲಿದ್ದು, ಅಲ್ಲಿಂದ ಬ್ಯಕ್ ರ್ಯಾಲಿ ಮೂಲಕ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮೂಲಕ ಪುಂಗನೂರು ಕ್ರಾಸ್ ನಲ್ಲಿ ನಡೆಯುವ ಕಾರ್ಯಕರ್ತರ ಸಭೆಗೆ ಹಾಜರಾಗಲಿದ್ದಾರೆ. ಈ ಸಭೆಯಲ್ಲಿ ನಮ್ಮ ಪಕ್ಷದ ಮುಂದಿನ ಚುಟುವಟಿಕೆಗಳ ಬಗ್ಗೆ ಹಾಗು ಪಕ್ಷದ ಸಂಘಟನೆಯ ಬಗ್ಗೆ ಮಾತನಾಡಲಿದ್ದಾರೆ […]
ಶ್ರೀನಿವಾಸಪುರ : ಸಂಕಷ್ಟದಲ್ಲಿದ್ದ ಮಾವು ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾವು ಖರೀದಿ ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ ಮಾಡಿದೆ. ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ಅವರ ಪ್ರಯತ್ನದಿಂದಾಗಿ ತಕ್ಷಣವೇ ಹಣ ಬಿಡುಗಡೆಗೆ ಸರ್ಕಾರಿ ಅದೇಶ ಹೊರ ಬಿದ್ದಿದೆ. ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರು ಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ […]
Aಕೋಲಾರ, 30 ಜೂನ್ 2025: ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ಮೊದಲು ತಮ್ಮ ಪಕ್ಷದ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಹೊರ ಹಾಕಲಿ. ನಂತರ ಬೇರೆಯವರ ತಟ್ಟೆಯಲ್ಲಿ ನೊಣದ ಬಗ್ಗೆ ಯೋಚನೆ ಮಾಡಲಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ತಿರುಗೇಟು ನೀಡಿದ್ದಾರೆ.ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಮೈಸೂರು ದಸರಾವನ್ನು ಹೊಸ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂಬ ಅಶೋಕ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಶೋಕ ಅವರು ಯಾವಾಗ ಕಾಂಗ್ರೆಸ್ ಪಕ್ಷದ […]
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ. ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ […]
ಶ್ರೀನಿವಾಸಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ಮಸೀದಿಯ ಎದುರು ಸಾರ್ವಜನಿಕರು ಶುಕ್ರವಾರದಂದು ಪ್ಲೇಕಾರ್ಡ್ ಹಿಡಿದು ಮಾನವ ಸರಪಳಿ ನಿರ್ಮಿಸಿ ಶಾಂತಿಯುತವಾಗಿ ಮೌನ ಪ್ರತಿಭಟನೆ ನಡೆಸಿದರು. ಕರ್ನಾಟಕದ ವಿವಿಧ ಭಾಗಗಳಲ್ಲಿನ ಮಸೀದಿಗಳ ಮುಂಭಾಗದಲ್ಲಿ ನಡೆಯುತ್ತಿರುವ ಈ ರಾಜ್ಯವ್ಯಾಪಿ ಶಾಂತಿಯುತ ಪ್ರತಿಭಟನೆಯಂತೆ, ಅಡ್ಡಗಲ್ನಲ್ಲಿಯೂ ಸಾಮೂಹಿಕ ಜುಮಾ ನಮಾಜಿನ ನಂತರ ಕಪ್ಪು ಬಟ್ಟೆ ಧರಿಸಿ, ಹಸ್ತಲಾಘವದ ಮೂಲಕ ಮಾನವ ಸರಪಳಿ ನಿರ್ಮಿಸಲಾಯಿತು. ಪ್ರತಿಭಟನಾಕಾರರು ವಕ್ಫ್ ತಿದ್ದುಪಡಿ […]
ಶ್ರೀನಿವಾಸಪುರ: ಕೊಲಾರ ಜಿಲ್ಲೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಮೈಲರಪ್ಪ ಎಂ. ಅವರು ಶ್ರೀನಿವಾಸಪುರದ ಜಕೀರ್ ಹುಸೇನ್ ಮೊಹಲ್ಲಾದಲ್ಲಿರುವ ಸರ್ಕಾರಿ ಉರ್ದು ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗೆ ಗುರುವಾರದಂದು ಭೇಟಿ ನೀಡಿ, ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ, ಮೂಲಭೂತ ಸೌಕರ್ಯಗಳು, ಮತ್ತು ಶಿಕ್ಷಣ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಶಿಕ್ಷಕರೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳ ಪಾಠಾಭ್ಯಾಸ ಹಾಗೂ ಸಾಧನೆಯಲ್ಲಿ ಸುಧಾರಣೆ ತರಬೇಕೆಂಬ ಸೂಚನೆ ನೀಡಿದರು. “ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಕರ್ತವ್ಯವಾಗಿದೆ. […]

