ಶ್ರೀನಿವಾಸಪುರ : ಸೋಮವಾರದಿಂದ ರಾಜ್ಯಾದ್ಯಾಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಸಕಲ ಸಿದ್ದತೆಯೊಂದಿಗೆ ಸರ್ಕಾರದ ಸುತ್ತೋಲೆಯಂತೆ ಪ್ರತಿ ಕೊಠಡಿಗಳಿಗೆ ಸಿಸಿ ಕ್ಯಾಮರಗಳನ್ನು ಆಳವಡಿಸಲಾಗಿದೆ. ಇದರ ಮುಖ್ಯ ಉದ್ದೇಶ ಯಾವುದೇ ಕಾರಣಕ್ಕೂ ನಕಲು ಆಗಬಾರದು ಎನ್ನುವ ಉದ್ದೇಶದಿಂದ ಪ್ರತಿ ಕೊಠಡಿಗಳಿಗೂ ಸಿಸಿ ಕ್ಯಾಮರಗಳನ್ನು ಆಳವಡಿಸಲಾಗಿದೆ ಎಂದು ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ಹೇಳಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.ತಾಲೂಕಿನಾದ್ಯಾಂತ ಒಟ್ಟು 2580 ವಿದ್ಯಾರ್ಥಿಗಳು ಪರೀಕ್ಷೆ ಪ್ರವೇಶವನ್ನು ಪಡೆದಿದ್ದು, 10 ಪರೀಕ್ಷಾ ಕೇಂದ್ರಗಳನ್ನ ತೆರೆಯಲಾಗಿದೆ. ವಿದ್ಯಾರ್ಥಿಗಳು ನಿರ್ಭೀತಿಯಿಂದ , ಬರೆಯಲು […]
ಶ್ರೀನಿವಾಸಪುರ : ಇಂದಿನ ನಾಗರೀಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಉದ್ಯೋಗ , ವ್ಯವಹಾರ , ಮತ್ತು ಹಣ ಸಂಪಾದನೆಗಾಗಿ ವಿನಿಯೋಗಿಸುತ್ತಿದ್ದಾರೆ . ದಿನಕ್ಕೊಂದಿಷ್ಟು ಸಮಯವನ್ನು ದೇವರ ದ್ಯಾನ, ಭಜನೆಯತ್ತಾ ವಿಯೋಗಿಸಿದರೆ ಮನಸ್ಸು ಉಲ್ಲಾಸವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವರದಬಾಲಾಂಜನೇಯ ಸ್ವಾಮಿ ದೇವಾಲಯದಲ್ಲಿ ಸೋಮವಾರ ನಡೆದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಶನಿವಾರ ಬ್ರಹ್ಮರಥೋತ್ಸವದ ಅಂಗವಾಗಿ ಅಂಕುರಾರ್ಪಣೆ, ದ್ವಜಾರೋಹಣ, ಶೇಷವಾಹನೋತ್ಸವ , ಕಲ್ಯಾಣೋತ್ಸವ , ಗರುಡೋತ್ಸವ, ಬ್ರಹ್ಮರಥೋತ್ಸವದ ಅಂಗವಾಗಿ ಹೆಸರು ಬೇಳೆ , ಪಾನಕವನ್ನ […]
ಕೋಲಾರ:- ಜಿಲ್ಲೆಯ 65 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, 171 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.ನಗರದ ಚಿನ್ಮಯ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಬರುವ ಮಕ್ಕಳಿಗೆ ಸ್ವತಃ ಹೂ ನೀಡಿ ಸ್ವಾಗತಿಸಿ, ಶುಭ ಕೋರಿದ ಅವರು, ಪರೀಕ್ಷೆ ಮುಗಿದ ನಂತರ ಮಾಧ್ಯಮಗಳಿಗೆ ಮಾಹಿತಿ ಒದಗಿಸಿದರು.ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ 19743 ವಿದ್ಯಾರ್ಥಿಗಳ ಪೈಕಿ 19572 ಮಂದಿ ಹಾಜರಾಗಿದ್ದು, 171 ಮಂದಿ ಗೈರಾಗಿದ್ದರು. ಪರೀಕ್ಷೆ ಯಾವುದೇ […]
ಕೋಲಾರ,ಮಾ.23: ದಿ.ಕರ್ನಾಟಕ ಪ್ರಿಂಟರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ ಬೆಂಗಳೂರು ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೋಲಾರ ಜಿಲ್ಲೆಯ ಹಿರಿಯ ಸಹಕಾರಿ ಅಬ್ಬಣಿ ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಬೆಂಗಳೂರಿನ ಎಸ್.ಶಿವರಾಮ್ ಅವಿರೋಧವಾಗಿ ಆಯ್ಕೆಯಾದರು.ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಬ್ಬಣಿ ಶಂಕರ್ ಮತ್ತು ಶಿವರಾಮ್ ವಿರುದ್ಧ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಘೋಷಿಸಲಾಯಿತು.ಅಬ್ಬಣಿ ಶಂಕರ್ ರವರು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದ್ದೋದ್ಧೇಶ ಸಹಕಾರ ಸಂಘದ ಉಪಾಧ್ಯಕ್ಷರಾಗಿ, […]
ಶ್ರೀನಿವಾಸಪುರ : ವಿದ್ಯೆ ಎಂಬುದು ಯಾರೊಬ್ಬರ ಸ್ವತ್ತು ಅಲ್ಲ, ವಿದ್ಯೆಯನ್ನು ಯಾರು ಶ್ರದ್ಧೆಯಿಂದ ಶ್ರಮವಹಿಸಿ ವಿದ್ಯೆಯನ್ನು ಕಲಿಯುತ್ತಾರೊ ಅವರಿಗೆ ಮಾತ್ರ ವಿದ್ಯೆ ಒಲಿಯುತ್ತದೆ ಪಟ್ಟಣದ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿಗೆ ಶನಿವಾರ ಬೇಟಿ ನೀಡಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಮಾತನಾಡಿದರು.ವಿದ್ಯಾರ್ಥಿಗಳು ಕಾಲಹರಣ ಮಾಡದೆ ಓದಿನ ಕಡೆ ಲಕ್ಷ್ಯವಹಿಸಬೇಕು. ಪೋಷಕರ ಭರವಸೆ ನೆರವೇರಿಸಬೇಕು. ಹಿರಿಯರ ಅನುಕರಣೆ ಮಾಡಬೇಕು ಅವಕಾಶಗಳನ್ನು ಬಳಸಿಕೊಂಡು ಚೆನ್ನಾಗಿ ಓದಬೇಕು ಎಂದರು.ಇದೇ […]
ಶ್ರೀನಿವಾಸಪುರ : ಪ್ರಜಾಪ್ರಭುತ್ವದಲ್ಲಿ ಭಾತರದ ಪೌರರಾದ ನಾವು ನಮ್ಮ ದೇಶದ ಪ್ರಜಾತತ್ಮಕ ಸಂದ್ರಾಯಗಳು ಮತ್ತು ಮುಕ್ತ , ನ್ಯಾಯಸಮ್ಮತ, ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು , ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿಭೀತವಾಗಿ ಮತ್ತು ಧರ್ಮ , ಜನಾಂಗ , ಜಾತಿ, ಮತ, ಬಾಷೆ ಅಥವಾ ಯಾವುದೇ ಪ್ರೇರೆಪಣಿಗೆ , ದಾಕ್ಷಣ್ಯಗಳಿಂದ ಪ್ರಭಾವಿತರಾಗದೆ, ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆಯನ್ನು ಸ್ವೀಕರಿಸುತ್ತೇವೆ ಪ್ರತಿಜ್ಞೆಯನ್ನು ಎಆರ್‍ಒ ಎಂ.ಆರ್.ಸುಮ ಬೋಧಿಸಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಶುಕ್ರವಾರ ಮತದಾನ ಜಾಗೃತಿ […]
ಕೋಲಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸ್ವೀಪ್ ಹಾಗೂ ಕೋಲಾರ ತಾಲೂಕು ಸ್ವೀಪ್ ಸಮಿತಿಯ ವತಿಯಿಂದ ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿ “ಚುನಾವಣಾ ಪರ್ವ ಮೂಲಕ – ದೇಶದ ಗರ್ವ” ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನಗರದ ಗಾಂಧಿ ಚೌಕ್ ಬಳಿ ಪಂಜು ಬೆಳಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮೊಂಬತ್ತಿ ಜಾಥಾಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಅಕ್ರಂ ಪಾಷ ಅವರು ಚಾಲನೆ ನೀಡಿದರು. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ […]
ಕೋಲಾರ:- ಪಿಯುಸಿ,ಪದವಿ ಪರಿಕ್ಷೆಗಳಿಗಿಲ್ಲದ ವೆಬ್‍ಕಾಸ್ಟಿಂಗ್ ಎಸ್ಸೆಸ್ಸೆಲ್ಸಿ ಮಕ್ಕಳಿಗ್ಯಾಕೆ, ಈಗಾಗಲೇ ಮಕ್ಕಳ ಬದುಕಿನೊಂದಿಗೆ ಸಾಕಷ್ಟು ಚೆಲ್ಲಾಟವಾಡಿದ್ದೀರಿ, 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಸದೇ ಗೊಂದಲ ಸೃಷ್ಟಿಸಿದ್ದೀರಿ, ದಿನಕ್ಕೊಂದು ಆದೇಶ ಮಾಡಿ ತಪ್ಪು ಮಾಡುತ್ತಿದ್ದೀರಿ, ನಿಮ್ಮ ಯಡವಟ್ಟುಗಳಿಗೆ ಕೊನೆಯಾಡಿ ಎಂದು ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಕಳೆದ ಒಂದು ವರ್ಷದಿಂದ ಮಾಡಿರುವ ಯಡವಟ್ಟುಗಳು ಬೇರಾವ ಇಲಾಖೆಯಲ್ಲೂ ನಡೆದಿಲ್ಲ, ಎಸ್ಸೆಸ್ಸೆಲ್ಸಿ, ಪಿಯುಸಿ ಮೂರು ಪರೀಕ್ಷೆ ಅಂತಾರೆ ಇದರ ಸಾಧಕಬಾಧಕಗಳ […]
ಶ್ರೀನಿವಾಸಪುರ : ತಾಲೂಕಿನಲ್ಲಿ ಮುಂಬರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಸುಸೂತ್ರವಾಗಿ ನಡೆಸಲು ಕೊಠಡಿ ಮೇಲ್ವಿಚಾರಕರು ಜವಾಬ್ದಾರಿ ಯುತವಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಭಯದ ವಾತಾವರಣ ಸೃಷ್ಟಿಸದೇ, ಪರೀಕ್ಷಾ ನಿಯಮಗಳ ಬಗ್ಗೆ ಮಾಹಿತಿ ನೀಡಬೇಕು. ವಸ್ತುನಿಷ್ಟವಾಗಿ ಮಕ್ಕಳು ಪರೀಕ್ಷೆ ಎದುರಿಸಲು ಎಲ್ಲಾ ಪರೀಕ್ಷಾ ಸಿಬ್ಬಂದಿಯೂ ಮುಂದಾಗಬೇಕು ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ಎಂದು ಸೂಚಿಸಿಲಾಗಿದೆ.ಪಟ್ಟಣದ ಬಿಆರ್‍ಸಿ ಕಛೇರಿಯಲ್ಲಿ ಗುರುವಾರ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು. […]