ಕೋಲಾರ,ನ.25: ರಾಜ್ಯ ಸರ್ಕಾರದ ಮುಂದಿನ ಬಜೆಟ್ನಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷರೂ ನೀಡಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳ ಪತ್ರಿಕಾ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ತುಮಕೂರಿನಲ್ಲಿ ನಡೆದ ಪತ್ರಕರ್ತರ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ಜಿಲ್ಲೆಯ ಘನತೆ ಹೆಚ್ಚಿಸಿದ ಪತ್ರಕರ್ತರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಬ್ಬಡ್ಡಿಯಲ್ಲಿ ಚಾಂಫಿಯನ್ ಆಗಿ ಹೊರಹೊಮ್ಮಿದ ಜಿಲ್ಲಾ ತಂಡಕ್ಕೆ ವೈಯಕ್ತಿಕವಾಗಿ ಇಪ್ಪತ್ತೈದು ಸಾವಿರ ರೂ ಬಹುಮಾನ ಘೋಷಿಸಿ ಅವರು ಮಾತನಾಡುತ್ತಿದ್ದರು.ರಾಜ್ಯದಲ್ಲೇ ಕೋಲಾರ ಜಿಲ್ಲಾ […]
ಕೋಲಾರ ; ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ದಿಸೆಯಲ್ಲಿ ಅವಧಿಗಿಂತ ಮುಂಚೆಯೇ ಗುರಿ ತಲುಪಿ ಕೋಲಾರ ಜಿಲ್ಲೆಯನ್ನು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವಂತೆ ಮಾಡಿದ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ರಾಜ್ಯ ಸರ್ಕಾರ ಅಭಿನಂದಿಸಿದೆ. ಕಂದಾಯ ಇಲಾಖೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಈ ಕುರಿತು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ಅಭಿನಂದನಾ ಪತ್ರ ಬರೆದಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ […]
ಶ್ರೀನಿವಾಸಪುರ : ಸರ್ಕಾರದ ಸೌಲಭ್ಯಗಳನ್ನು ಹಾಗು ದಾನಿಗಳು ನೀಡುವಂತಹ ಲೇಖನಿ ಸಾಮಾಗ್ರಿಗಳನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾವಂತರಾಗುವಂತೆ ಎಂದು ದಾನಿ ಆವಲಕುಪ್ಪ ಎಂ. ರಂಗಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ತಾಲೂಕಿನ ಆವಲಕುಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ದಾನಿಗಳಾದ ಎಂ. ರಂಗಪ್ಪ ಕುಟುಂಬದವರಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು , ಬ್ಯಾಗ್, ಲೇಖನಿ , ಆಟದ ಸಾಮಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು.ಹಿಂದೆ ಬಡತನದ ಕಾರಣಕ್ಕಾಗಿ ಅನೇಕ ಮಕ್ಕಳು ಶಾಲೆಯನ್ನು ತೊರೆಯುತ್ತಿದ್ದರು ದೂರದ ಊರುಗಳಿಗೆ ಹೋಗಿ ಶಿಕ್ಷಣವನ್ನು ಪಡೆಯಲು […]
ಶ್ರೀನಿವಾಸಪುರ : ನಮ್ಮ ನಾಯಕ ಕೆ.ಆರ್.ರಮೇಶ್ಕುಮಾರ್ ರವರಿಗೆ ದೇವರು ಆಯಸ್ಸು, ಆರೋಗ್ಯ ನೀಡಿ ಕಾಪಾಡಲಿ ಎಂದು ಆಶಿಸುತ್ತೇನೆ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ಹೇಳಿದರು.ಪಟ್ಟಣದ ಪಿಎಲ್ಡಿ ಬ್ಯಾಂಕ್ ಆವರಣದಲ್ಲಿ ಶುಕ್ರವಾರ ಕೆ.ಆರ್.ರಮೇಶ್ಕುಮಾರ್ರವರ ಹುಟ್ಟುಹಬ್ಬದ ಆಚರಣೆ ಅಂಗವಾಗಿ ಕೇಕ್ ಕಟ್ಟುಮಾಡುವುದರ ಮೂಲಕ ಆಚರಣೆ ಮಾಡಿದರು.ಇದೇ ಸಂದರ್ಭದಲ್ಲಿ ಕೆ.ಆರ್ .ರಮೇಶ್ ಕುಮಾರ್ರವರ ಮಗ ಹರ್ಷ ರವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದರು.ಕೆಪಿಸಿಸಿ ಸದಸ್ಯ ಸಂಜಯ್ರೆಡ್ಡಿ , ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಕೃಷ್ಣಾರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬೈರಪಲ್ಲಿ ವೆಂಕಟರೆಡ್ಡಿ, […]
ಐಸಿಎಆರ್ – ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ, ರೇಷ್ಮೆ ಇಲಾಖೆ, ಕೋಲಾರ, ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ “ಗುಣಮಟ್ಟದ ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ಸುಧಾರಿತ ಯಂತ್ರಗಳು ಮತ್ತು ಆಧುನಿಕ ತಾಂತ್ರಿಕತೆಗಳ” ಅರಿವು ಕಾರ್ಯಾಗಾರವನ್ನು ದಿನಾಂಕ: 20.11.2024 ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ಆಯೋಜಿಸಲಾಗಿತ್ತು.ಉದ್ಘಾಟನೆಯನ್ನು ನೆರವೇರಿಸಿದ ಶ್ರೀ. ನಾಗರಾಜ್ ಎಂ ರೇಷ್ಮೆ ಉಪನಿರ್ದೇಶಕರು, ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ, ಕೋಲಾರರವರು ಮಾತನಾಡಿ, ರೇಷ್ಮೆ ನೂಲು ಬಿಚ್ಚಾಣಿಕೆದಾರರು ಈ ಹಿಂದೆ ಚರಕ, […]
ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದ ಯಲ್ಲಪ್ಪರ ಪುತ್ರಿ ವಿದ್ಯಾರ್ಥಿನಿ ದಿವ್ಯಭಾರತಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಕಾರಣ ಡಾನ್ ಬೋಸ್ಕೋ ಕಾಲೇಜಿನ ರಾಜ್ಯೋತ್ಸವ ಸಮಾರಂಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿ ಪೆÇ್ರ.ನಿರಂಜನವಾನಳ್ಳಿ ಹಾಗೂ ಕಾಲೇಜಿನ ಮುಖ್ಯಸ್ಥರು ಸನ್ಮಾನಿಸಿದರು
ಶ್ರೀನಿವಾಸಪುರ ಪಟ್ಟಣದ ಪುರಸಭೆಯಲ್ಲಿ ಇಂದು ಪುರಸಭಾ ಅದ್ಯಕ್ಷರಿಂದ ಪತ್ರಿಕಾ ಗೊಷ್ಟಿಯನ್ನು ಹಮ್ಮಿಕೊಂಡಿದ್ದರು ಈ ಸಮಯದಲ್ಲಿ ಮಾತನಾಡಿದ ಪುರಸಭಾ ಅದ್ಯಕ್ಷರಾದ ಭಾಸ್ಕರ್ ರವರು ಇಷ್ಟು ದಿನ ಖಾತೆ ಬದಲಾವಣೆಗೆ ಲಂಚ ಕೊಡಬೇಕಾದ ಅನಿವಾರ್ಯತೆ ಇತ್ತು ಆದರೆ ನಾನು ಅದ್ಯಕ್ಷನಾಗಿ ಮೂರು ತಿಂಗಳು ಕಳೆದಿದ್ದು ಖಾತೆ ಬದಲಾವಣೆಗೆ ಮಾಡಲು ಒಂದೆ ಒಂದು ರೂಪಾಯಿ ಲಂಚ ಇಲ್ಲದೆ ಖಾತೆ ಮಾಡುಕೊಡುತ್ತಿದ್ದೇವೆ ಎಂದರು ನಾನು ಅದ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಬಹಳಷ್ಟು ವ್ಯತ್ಯಾಸಗಳು ಅಗಿದ್ದು ಭ್ರಷ್ಟಾಚಾರ ಗೆ ಕಡಿವಾಣ ಹಾಕುತ್ತಿದ್ದೇನೆ ಯಾರಾದರು ನಿಮ್ಮನ್ನು ಖಾತೆ […]
ಶ್ರೀನಿವಾಸಪುರ : ವಿದ್ಯಾರ್ಥಿಗಳಲ್ಲಿ ವೖಜ್ಙಾನಿಕ ಮನೋಭಾವ, ಮಾನವೀಯತೆ, ವೖಚಾರಿಕ ಮನೋಧರ್ಮ ಮತ್ತು ಸುಧಾರಣೆಯನ್ನು ತರಲು ವಿಜ್ಞಾನ ಸ್ಪರ್ಧಾ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ನಿವೃತ್ತ ಕಂದಾಯ ಅಧಿಕಾರಿ ಎಸ್. ಎನ್. ಸುಬ್ರಮಣ್ಯಂ ಹೇಳಿದರು. ಶ್ರೀನಿವಾಸಪುರ ತಾಲೂಕಿನ ಯಲ್ಡೂರುಗ್ರಾಮದ ನ್ಯಾಷನಲ್ ಹೖಸ್ಕೂಲಿನಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಂತರ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿಜ್ಞಾನ ವಿಷಯಗಳ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಾ, ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ವಿಜ್ಞಾನದ ಬಳಕೆಯಾಗುತ್ತಿದೆ. ಮಕ್ಕಳಿಗೆ ಈಗನಿಂದಲೇ ವಿಜ್ಞಾನದ […]
ಶ್ರೀನಿವಾಸಪುರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವಿದ್ಯಾದೀಪ್ತಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ವಿ. ವೇದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಹೆಚ್. ಎಸ್.ಬಿಂದುಶ್ರೀ ಚರ್ಚಾಸ್ಪರ್ಧೆ ದ್ವಿತೀಯ ಸ್ಥಾನ, ಕೆ. ಎ.ಸಿಂಧುಶ್ರೀ ಭರತನಾಟ್ಯ ತೃತೀಯಸ್ಥಾನ, ಫರೀನಾಜ್ ಗಝಲ್ ತೃತೀಯಸ್ಥಾನ, ಎನ್. ಸಂಜಿತಾ ಇಂಗ್ಲೀಷ್ ಕಂಠಪಾಠ ಸ್ಪರ್ಧೆ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಎಸ್. ಕೋದಂಡರಾಮಯ್ಯ, ಎಸ್. ಯಶೋದ ಹಾಗೂ ಶಿಕ್ಷಕರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

