ಶ್ರೀನಿವಾಸಪುರ : ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಸಮೀಪ ಭಾನುವಾರ ಅಭಿನಯ ಗೀತೆಯೊಂದರ ಚಿತ್ರೀಕರಣಕ್ಕೆ ಮುಖ್ಯ ಶಿಕ್ಷಕ ಎಂ.ಬೈರೇಗೌಡ ಚಾಲನೆ ನೀಡಿ ನಾಡು ನುಡಿ ಅಭಿವೃದ್ಧಿಗೆ ಸಾಂಘಿಕ ಪ್ರಯತ್ನ ಅಗತ್ಯ ಎಂದು ಮುಖ್ಯ ಶಿಕ್ಷಕ ಎಂ.ಬೈರೇಗೌಡ ಹೇಳಿ ‘ಗಡಿ ಪ್ರದೇಶದ ನಾಗರಿಕರು ಸ್ಥಳೀಯ ಸಾಹಿತಿ ಕಲಾವಿದರನ್ನು ಪ್ರೋತ್ಸಾಹಿಸಬೇಕು. ನಾಡು ನುಡಿ ಅಭಿವೃದ್ಧಿಗೆ ಸಾಂಘಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಸಮೀಪ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದ ಉದ್ಯಾನದಲ್ಲಿ ಭಾನುವಾರ, ಕೇರ್ ಆಫ್ ಅಡ್ರಸ್ ಫಿಲಿಂಸ್ ವತಿಯಿಂದ, ಕವಿ […]

Read More

ಕೋಲಾರ : ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಚುನಾವಣೆ ನಡೆ ಸದೇ ಆಡಳಿತಾಧಿಕಾರಿ ನೇಮಿಸುವ ಮೂಲಕ ವೈಯಕ್ತಿಕ ಭಿನ್ನಾಭಿಪ್ರಾಯಗಳಿಗಾಗಿ ಜಿಲ್ಲೆಯ ಬಡ ಮಹಿಳೆಯರು , ರೈತರ ಜೀವನಾಡಿಯಾಗಿದ್ದ ಡಿಸಿಸಿ ಬ್ಯಾಂಕ್ ಅನ್ನು ಬಲಿಕೊಡುವ ಪ್ರಯತ್ನ ಖಂಡನಿಯವಾಗಿದ್ದು , ಕೂಡಲೇ ತಾಯಂದಿರು ಎಚ್ಚೆತ್ತುಕೊಳ್ಳುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಕರೆ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ , ಜಿಲ್ಲಾ ಸಹಕಾರ ಒಕ್ಕೂಟ , ಡಿಸಿಸಿ ಬ್ಯಾಂಕ್ , ಕೋಲಾರ ಮತ್ತು ಚಿಕ್ಕಬಳ್ಳಾಪುರಜಿಲ್ಲಾ ಕಾರ್ಯನಿರತ […]

Read More

ಬಂಗಾರಪೇಟೆ, ನ.20, ರಾಜ್ಯದ ಬರ ನಿರ್ವಹಣೆಗೆ ಕೇಂದ್ರ ಸರ್ಕಾರ 25 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿ ಕುಡಿಯುವ ನೀರು ಜಾನುವಾರುಗಳಿಗೆ ಮೇವು ಬೆಳೆ ಪರಿಹಾರ ವಿತರಣೆ ಮಾಡುವಂತೆ ಮಾನ್ಯ ಪ್ರಧಾನ ಮಂತ್ರಿಗಳನ್ನು ಒತ್ತಾಯಿಸಿ ನ.25 ರ ಶನಿವಾರ ಒಣ ಮೇವು , ಜಾನುವಾರುಗಳ ಸಮೇತ ರೈಲ್ವೆ ನಿಲ್ದಾಣ ಮುತ್ತಿಗೆ ಹಾಕಲು ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.ಗ್ಯಾರಂಟಿಗಳ ಅನುಕಂಪದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರ ರಾಜ್ಯದ 224 ತಾಲ್ಲೂಕುಗಳನ್ನು ಬರ ಪೀಡಿತವೆಂದು […]

Read More

ಕೋಲಾರ: ಚುನಾವಣಾ ಸೆಕ್ಟರ್ ಅಧಿಕಾರಿಗಳು ಸದಾ ಸಂವೇದನಾಶೀಲರಾಗಿ ಕಾರ್ಯನಿರ್ವಹಿಸಬೇಕು.ಲೋಕಸಭಾ ಚುನಾವಣೆಯ ಅಧಿಸೂಚನೆಯು ಮಾರ್ಚ್ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದ್ದು, ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕಿದೆ. ಆದ್ದರಿಂದ ಸೆಕ್ಟ‌ರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳ ಬಗ್ಗೆ ಮಾಹಿತಿಯನ್ನು ನಿಗಧಿತ ಕಾಲಾವಧಿ ಒಳಗೆ ಒದಗಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಲೋಕಸಭಾ […]

Read More

ಶ್ರೀನಿವಾಸಪುರ: ಪದ್ಮಾ ಬಸವಂತಪ್ಪ, ಐ.ಎ.ಎಸ್ ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಮುದುವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅನಿರೀಕ್ಷಿತ ಭೇಟಿ ನೀಡಿ ಶಾಲಾ ಕಟ್ಟಡದ ಸುಸ್ಥಿತಿ ಪರಿಶೀಲಿಸಿ, ಶಿಕ್ಷಕರು ಹಾಗೂ ಮಕ್ಕಳೊಂದಿಗೆ ವಿದ್ಯಾಭ್ಯಾಸ ಹಾಗೂ ಚಟುವಟಿಕೆಗಳ ಕುರಿತು ಚರ್ಚಿಸಿದರು.

Read More

ಶ್ರೀನಿವಾಸಪುರ: ಕಂದಾಯ ಇಲಾಖೆ ಜಮೀನು ಸರ್ವೆ ಕಾರ್ಯ ಕೈಗೊಂಡು, ಜಮೀನು ವಿವಾದ ಪರಿಹರಿಸಬೇಕು. ಸಾಗುವಳಿ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಖಾತೆ ಮಾಡಿಕೊಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಮಾರುತಿ ಸಭಾ ಭವನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕಂದಾಯ ಅದಾಲತ್ ನಡೆಸಬೇಕು. ಪುರಸಭೆ ವ್ಯಾಪ್ತಿಯಲ್ಲಿ ಖಾತಾ ಅದಾಲತ್ ನಡೆಸಿ ಅರ್ಹ ಫಲಾನುಭವಿಗಳಿಗೆ ಖಾತೆ ಮಾಡಿಕೊಡಬೇಕು ಎಂದು ಹೇಳಿದರು.ಜಲ ಜೀವನ ಮಿಷನ್ […]

Read More

ಶ್ರೀನಿವಾಸಪುರ: ಪಟ್ಟಣದ ಮಾರುತಿ ಸಭಾ ಭವನದಲ್ಲಿ ನ.17 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಮಟ್ಟದ ಜನತಾ ದರ್ಶನ ಸಕರ್ಾರದ ಮಹತ್ವಪೂರ್ಣ ಕಾರ್ಯಕ್ರಮವಾಗಿದ್ದು, ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ವೇದಿಕೆ ಕಲ್ಪಿಸುತ್ತದೆ ಎಂದು ಹೇಳಿದರು.ತಾಲ್ಲೂಕಿನ ಎಲ್ಲ ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು. ತಮ್ಮ ಇಲಾಖೆಗಳಿಂದ ಫಲಾನುಭವಿಗಳಿಗೆ ದೊರೆಯುವ ಅನುಕೂಲಗಳ […]

Read More

ಕೋಲಾರ : ಜಿಲ್ಲಾಡಳಿತದ ವತಿಯಿಂದ ನವೆಂಬರ್ 30 ರಂದು ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನಗರದ ಚನ್ನಯ್ಯ ರಂಗಮಂದಿರದ ಆವರಣದಲ್ಲಿ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಕನಕದಾಸ ಜಯಂತಿ ಅಂಗವಾಗಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾಯದ ಮುಖಂಡರ ಸಲಹೆಗಳನ್ನು ಆಲಿಸಿ ಅವರು ಮಾತನಾಡಿದರು. ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನೂ ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಅನುಸರಿಸಿಕೊಂಡು. ಅರ್ಥಪೂರ್ಣವಾಗಿ ಜಿಲ್ಲೆಯಲ್ಲಿ ಆಚರಿಸಬೇಕಿದೆ. […]

Read More

ಕೋಲಾರ, ನ-15, ಆರ್.ಟಿ.ಓ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಖಾಯಂ ಆರ್.ಟಿ.ಓ ನೇಮಕ ಮಾಡಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಠಾಚಾರವನ್ನು ಕಡಿವಾಣ ಹಾಕಲು ವಿಶೇಷ ತಂಡ ರಚನೆ ಮಾಡಿ ಜನಪರ ಇಲಾಖೆಯಾಗಿ ಮಾರ್ಪಾಡು ಮಾಡಬೇಕೆಂದು ರೈತ ಸಂಘದಿಂದ ಆರ್.ಟಿ.ಓ ಕಛೇರಿ ಮುಂದ ಕೋಳಿಗಳ ಸಮೇತ ಹೋರಾಟ ಮಾಡಿ ಆರ್.ಟಿ.ಓ ಅಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ತೇಲಗಿ ಛಾಪಾಕಾಗದ ಹಗರಣದಂತೆ ಆರ್.ಟಿ.ಓ ಕಛೇರಿಯಲ್ಲಿ ಪ್ರತಿ ಹೆಜ್ಜೆ ಹೆಜ್ಜೆಗೂ ಭ್ರಷ್ಠಾಚಾರ […]

Read More
1 74 75 76 77 78 333