ಶ್ರೀನಿವಾಸಪುರ ಪಟ್ಟಣದ ಹೊರವಲಯದ ಎನುಮೇರಪಲ್ಲಿ ಗ್ರಾಮದ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದ ಆರಣದಲ್ಲಿ ಸೋಮವಾರ ತಾಲೂಕು ವೃತ್ತ ನಿರತ ಛಾಯಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದವತಿಯಿಂದ ಇತ್ತೀಚಿಗೆ ಕರ್ನಾಟಕ ರಾಜ್ಯ ಛಾಯಗ್ರಾಹಕರ ಸಂಘದವತಿಯಿಂದ ಛಾಯ ವಿಭೂಷಣ ಪ್ರಶಸ್ತಿಯನ್ನ ಪಡೆದ ವಿಶ್ವನಾಥಸಿಂಗ್ ರವರನ್ನು ಸನ್ಮಾನಿಸಲಾಯಿತು.ತಾಲೂಕು ಛಾಯಗ್ರಾಹಕರ ಸಂಘದ ಸದಸ್ಯರಾದ ವೇಣುಗೋಪಾಲರೆಡ್ಡಿ, ರಾಯಲ್ಪಾಡು ಅಶೋಕರೆಡ್ಡಿ, ರಘು , ಮಂಜು ಹಾಗು ಪದಾಧಿಕಾರಿಗಳು ಇದ್ದರು
ಶ್ರೀನಿವಾಸಪುರ : ತಾಲೂಕಿನ ಹೊಗಳಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಓದು ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ1 ನೇ ತರಗತಿಯಿಂದ 7ನೇ ತರಗತಿಗೆ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಈ ದಿನ ಓದುವ ಅಭಿಯಾನ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ ಬಿಆರ್ಸಿ ಕೆ.ಸಿ.ವಸಂತ ಕರೆ ನೀಡಿದರು.ಸರ್ಕಾರದ ಆದೇಶದಂತೆ ನಡೆಯುವ ಈ ಕಾರ್ಯಕ್ರಮ ಉತ್ತಮವಾದ ಯೋಜನೆಯಾಗಿರುತ್ತದೆ ಈ ದಿನದಿಂದ 21 ದಿನಗಳ ಕಾಲ ವಿವಿಧ ರೀತಿಯ ಚಟುವಟಿಕೆಗಳನ್ನು ಆಧರಿಸಿ ಈ ಕಾರ್ಯಕ್ರಮ […]
ಶ್ರೀನಿವಾಸಪುರ : ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಮಾತೃ ಹೃದಯದ ಮಾತೃಶ್ರೀ ಹೇಮಾವತಿ ಅಮ್ಮನವರ ಕೊಡುಗೆ ಆಪಾರ ಎಂದು ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ತಿಳಿಸಿದರು.ಪಟ್ಟಣದ ಹೇಮಾವತಿ ಜ್ಞಾನವಿಕಾಸ ಕೇಂದ್ರದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಳ್ಳಲಾದ ವಾರ್ಷಿಕೋತ್ಸವ ಹಾಗೂ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ವರಮಹಾಲಕ್ಷ್ಮೀ ವ್ರತ ಶ್ರೇಷ್ಠವಾದ ಹಾಗೂ ಅತ್ಯಂತ ಪವಿತ್ರವಾದ ವೃತ… ಲಕ್ಷ್ಮೀದೇವಿಯೂ ಅಷ್ಟಲಕ್ಷ್ಮೀಯಾಗಿ ಈ ಮನುಷ್ಯನಿಗೆ ಬೇರೆ ಬೇರೆ ಅವತಾರದಲ್ಲಿ ಅನುಗ್ರಹವನ್ನು ನೀಡುತ್ತಾರೆ. ಇವತ್ತು ಜನ ಸಾಮಾನ್ಯರಲ್ಲಿ ದೇವರ ಮೇಲಿನ […]
ಶ್ರೀನಿವಾಸಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆಯಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಮೋರಪಲ್ಲಿಯ ಲಕ್ಕಮ್ಮನ ಕೆರೆಯಲ್ಲಿ ಹಮ್ಮಿಕೊಂಡಿದ್ದು. ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾದ ಪ್ರಕಾಶ್ ಕುಮಾರ್ ಗಿಡ ನಾಟಿ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಪ್ರತ್ಯಕ್ಷವಾಗಿ ಪರಿಸರವನ್ನ ರಕ್ಷಣೆ ಮಾಡಿಕೊಂಡರೆ ಪರೋಕ್ಷವಾಗಿ ನಮ್ಮನ್ನು ನಾವು ರಕ್ಷಣೆ ಮಾಡಿಕೊಂಡಂತೆ ಎಂಬ ಮಾತನ್ನು ಹೇಳುತ್ತಾ. ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿ, ನಗರೀಕರಣ ಎಂಬ ಹೆಸರಿನಲ್ಲಿ ಮರಗಳನ್ನು ಕಡಿದು […]
ಶ್ರೀನಿವಾಸಪುರ : ಪುರಸಭಾ ಅಧ್ಯಕ್ಷರ ಕಛೇರಿಯಲ್ಲಿಂದು ಪುರಸಭಾ ಅಧ್ಯಕ್ಷರಾದ ಬಿ.ಆರ್. ಭಾಸ್ಕರ್ ರವರ ಅಧ್ಯಕ್ಷತೆಯಲ್ಲಿ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂಧಿಯವರ ಕುಂದು ಕೊರತೆಗಳ ಸಭೆ ನಡೆಸಿದರು. ಪ್ರತಿ ದಿನ ಬೆಳಿಗ್ಗೆ ಎಲ್ಲಾ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂಧಿಯವರು ಸಮವಸ್ತ್ರ-ಸುರಕ್ಷಿತ ಸಲಕರಣೆಗಳನ್ನು ಧರಸಿ ಕರ್ತವ್ಯಕ್ಕೆ ಹಾಜರಾಗಿ ಶ್ರೀನಿವಾಸಪುರ ನಗರದ ಸುಚ್ಚಿತ್ವವನ್ನು ಕಾಪಾಡಲು ತಿಳಿಸಿದರು. ಖಾಯಂ ಪೌರಕಾರ್ಮಿಕರಿಗೆ ಪ್ರತಿ ಮಾಹೆಯಾನ ವೇತನ ಪಾವತಿಯಾಗುವಂತೆ ಹೊರಗುತ್ತಿಗೆ ಕಾರ್ಮಿಕರಿಗೂ ಸಹ ಪ್ರತಿ ಮಾಹೆಯ 5ನೇ ತಾರೀಖಿನ ಒಳಗಾಗಿ ವೇತನ ಪಾವತಿ ಮಾಡುವಂತೆ ನೌಕರರು […]
ಶ್ರೀನಿವಾಸಪುರ ಪುರಸಭಾ ಸಭಾಂಗಣದಲ್ಲಿಂದು ಮಾನ್ಯ ಪುರಸಭಾ ಅಧ್ಯಕ್ಷರಾದ ಶ್ರೀ ಬಿ.ಆರ್. ಭಾಸ್ಕರ್ ರವರ ಅಧ್ಯಕ್ಷತೆಯಲ್ಲಿ “ಏಳ ಬಳಕೆ ಪ್ಲಾಸ್ಟಿಕ್ ನಿಷೇಧ” ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀನಿವಾಸಪುರ : ಪಟ್ಟಣದಲ್ಲಿ ಪ್ಲಾಸ್ಟಿಕ್ ಮುಕ್ತ ಜಾಗೃತಿ ಅಭಿಯಾನಕ್ಕೆ ಮಾನ್ಯ ಪುರಸಭಾ ಅಧ್ಯಕ್ಷರಾದ ಶ್ರೀ ಬಿ.ಆರ್. ಭಾಸ್ಕರ್ ರವರು ಚಾಲನೆ ನೀಡಿ ಮಾತನಾಡಿ ಕಡಿಮೆ ಉಪಯುಕ್ತತೆ ಮತ್ತು ಪರಿಸರ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಬೀರುತ್ತಿರುವ “ಏಳ ಬಳಕೆಯ ಪ್ಲಾಸ್ಟಿಕ್” ವಸ್ತುಗಳನ್ನು ಹಂತ ಹಂತವಾಗಿ ನಿರ್ಮೂಲನೆ ಮಾಡುವ ಸಲುವಾಗಿ ಸರ್ಕಾರದ […]
ಕೋಲಾರ,ಆ.28: ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಈಗಿರುವ ಕಾನೂನುಗಳ ಬಗ್ಗೆ ಅರಿವು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸುನೀಲ ಎಸ್ ಹೊಸಮನಿ ಅಭಿಪ್ರಾಯಪಟ್ಟರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಸಹಕಾರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಸಹಕಾರ ಒಕ್ಕೂಟದಲ್ಲಿ ಹಮ್ಮಿಕೊಂಡಿದ್ದ ಕೋಲಾರ ಜಿಲ್ಲೆಯ ಎಲ್ಲಾ ಹಾಲು ಉತ್ಪಾದಕರ ಮಹಿಳಾ […]
ಕೋಲಾರ,ಆ.28: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಅಜ್ಞನುಸಾರ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ಮಂಜುನಾಥ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ,ತಾಲೂಕಿನ ಸೀಸಂದ್ರ ಗ್ರಾಮದ ಎಂ.ಗೋಪಾಲಗೌಡ ಅವರು ಕಾಂಗ್ರೆಸ್ ವಿಧ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಾರೆ ವಿಧ್ಯಾರ್ಥಿ ದೆಸೆಯಿಂದಲೂ ಬೆಂಗಳೂರು ವಿವಿಯ […]
ಕೋಲಾರ:- ನಗರದ 12 ಕೇಂದ್ರಗಳಲ್ಲಿ ನಡೆದ 2023-24 ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆ ಯಾವುದೇ ಗೊಂದಲವಿಲ್ಲದೇ ನಡೆದಿದ್ದು, ಪರೀಕ್ಷೆಗೆ ನೋಂದಾಯಿಸಿದ್ದ 4422 ಅಭ್ಯರ್ಥಿಗಳ ಪೈಕಿ ಬೆಳಗಿನ ಅವಧಿ ಪರೀಕ್ಷೆಗೆ 1630 ಮಂದಿ ಹಾಗೂ ಮಧ್ಯಾಹ್ನದ ಅವಧಿಯ ಪರೀಕ್ಷೆಗೆ 1634 ಮಂದಿ ಗೈರಾಗಿದ್ದು, ಕೇಂದ್ರಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷಾ, ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪರೀಕ್ಷೆಗೆ ಗೈರಾದವರ ಕುರಿತು ಮಾಹಿತಿ ನೀಡಿರುವ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಕೃಷ್ಣಮೂರ್ತಿ, […]

