
ಕೋಲಾರ,ಅ.31: ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಎಲೆಮರೆಯ ಕಾಯಂತೆ ಕನ್ನಡ ತಾಯಿಯ ಸೇವೆಯಲ್ಲಿ ತೊಡಗಿರುವ ರಮೇಶ್ ಮತ್ತು ಸುರೇಶ್ ನಮಗೆ ಮಾದರಿ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯೋತ್ಸವ ಸಲುವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಕನ್ನಡದ ಸೇವೆಯಲ್ಲಿ ತೊಡಗಿರುವ ಕನ್ನಡ ತಾಯಿಯ ಪರಿಚಾರಕರನ್ನು ಸನ್ಮಾನಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗ ಪರಿಚಾರಕರು ಎಂಬ ಮನಸ್ಥಿತಿ ಹೋಗಿದೆ. ಮೌಲ್ಯ ಕಳೆದುಕೊಂಡಿದೆ. ಕನ್ನಡದ […]

ಶ್ರೀನಿವಾಸಪುರ : ಪಟ್ಟಣದ ಜಾಕಿರ್ ಹುಸೇನ್ ಮೊಹಲ್ಲಾದಲ್ಲಿರುವ ಉರ್ದು ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಇಂದು ಅಕ್ತಾರ್ ಟ್ರೇಡರ್ಸ್ ಮಾಲೀಕರು ಮತ್ತು ಸಮಾಜ ಸೇವಕ ನದೀಮ್ ಅಕ್ತರ್ , ಅಜ್ಮೀರ್ ದರ್ಗಾದ ಸೂಫಿ ಸಲ್ಮಾನ್ ಚಿಸ್ತಿ ಅವರೊಂದಿಗೆ ಶಾಲೆಗೆ ಭೇಟಿ ನೀಡಿದರು.ಶಾಲೆಯ ಮಕ್ಕಳಿಗೆ ಚಾಕಲೇಟ್ ಗಳು ನೀಡಿ ಖುಷಿಪಟ್ಟರು ಮತ್ತು ತಮ್ಮ ಬಾಲ್ಯವನ್ನು ನೆನಪಿಸಿಕೊಂಡರು. ಸರ್ಕಾರಿ ಶಾಲೆಯ ಮಕ್ಕಳಿಗೆ ಕಂಪ್ಯೂಟರ್ ಜ್ಞಾನವನ್ನು ಬೆಳೆಸಿಕೊಳ್ಳಲು ನಾಲ್ಕು ಕಂಪ್ಯೂಟರ್ ಗಳನ್ನು ನೀಡುವ ಭರವಸೆ ನೀಡಿದರು. ಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣದಲ್ಲಿ ಹಿಂದುಳಿದಿದ್ದಾರೆ […]

ಕೋಲಾರ / ಅಕ್ಟೋಬರ್ 30 : ಶಾಲೆಗಳು ಸಹ ಸಮುದಾಯದ ಒಂದು ಭಾಗ ಆಗಿರುವುದರಿಂದ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರಿಗೂ ಮಹತ್ವದ ಹೊಣೆಗಾರಿಕೆ ಇದೆ. ಮಕ್ಕಳಂತೆ ಸಸಿ ಗಿಡಗಳನ್ನು ಪ್ರೀತಿಸಿ, ಬೆಳೆಸಿ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸಿ. ಆರ್.ಅಶೋಕ್ ಅಭಿಪ್ರಾಯಪಟ್ಟರು.ತಾಲ್ಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ಏರ್ಪಡಿಸಿದ್ದ ಸಮುದಾಯದತ್ತ ಶಾಲೆ ಕಾರ್ಯಕ್ರಮವನ್ನು ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಶಾಲೆಯೆಂದರೆ ಕೇವಲ ಶಿಕ್ಷಕರು ಮತ್ತು ಮಕ್ಕಳಿಗμÉ್ಟೀ ಸೀಮಿತವಲ್ಲ. ಎಲ್ಲರ ಶೈಕ್ಷಣಿಕ ಬದುಕು ಆರಂಭವಾಗುವುದೇ ಶಾಲೆಯಿಂದ ಶಾಲೆಗಳೂ […]

ಶ್ರೀನಿವಾಸಪುರ:ವಾಲ್ಮೀಕಿ ಸಮುದಾಯದ ಅರ್ಹ ಫಲಾನುಭವಿಗಳಿಗೆ ಕೃಷಿ ಕೊಳವೆ ಬಾವಿ ಮತ್ತಿತರ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿ ಅವರು, ವಾಲ್ಮೀಕಿ ಸಮುದಾಯದ ಅನುಕೂಲಕ್ಕಾಗಿ ತಾಲ್ಲೂಕು ಕೇಂದ್ರದಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗುವುದು. ಸರಾಮಾಯಣ ಮಹಾಕಾವ್ಯ ರಚಿಸುವುದರ ಮೂಲಕ ಮಾನವ ಕುಲಕ್ಕೆ ಆದರ್ಶ ಕಟ್ಟಿಕೊಟ್ಟ ಮಹರ್ಷಿ ವಾಲ್ಮೀಕಿ ಅವರನ್ನು ಯಾವುದೇ ಒಂದು […]

ಕೋಲಾರ ಆ,27, ನಗರಾದ್ಯಂತ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಿ ಮಕ್ಕಳು ಹಾಗೂ ಹಿರಿಯರ ಜೀವವನ್ನು ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ನಗರಸಭೆ ಆಯುಕ್ತರಾದ ಶಿವಾನಂದ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಕೋಲಾರ ನಗರದಲ್ಲಿ ಕತ್ತಲಾದರೆ ನಾಯಿಗಳೇ ಹುಲಿಗಳಂತೆ ಮಕ್ಕಳು ಹಾಗೂ ವೃದ್ದರ ಮೇಲೆ ದಾಳಿ ಮಾಡುವ ಭಯದ ವಾತಾವರಣ ನಿರ್ಮಾಣವಾಗಿದ್ದರೂ ನಾಯಿಗಳ ಆಕ್ರಮಗಣಕ್ಕೆ ಕಡಿವಾಣ ಹಾಕದ ನಗರಸಭೆ ಅಧಿಕಾರಿಗಳ ವಿರುದ್ದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಆಕ್ರೋಷ ವ್ಯಕ್ತಪಡಿಸಿದರು. ಜಿಲ್ಲಾ ಕೇಂದ್ರದಲ್ಲಿ ಕಳೆದ […]

ಶ್ರೀನಿವಾಸಪುರ:ಖರೀದಿಸುವ ವಸ್ತುವಿನ ಮೇಲೆ ಗುಣಮಟ್ಟ ಕುರಿತು ಪ್ರಮಾಣೀಕರಿಸಿದ ಮುದ್ರೆ ಇರುವುದನ್ನು ಖಾತ್ರಿಪಡಿಸಿಕೊಂಡು ವಸ್ತು ಖರೀದಿಸಬೇಕು ಎಂದು ಬೆಂಗಳೂರಿನ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ಸಂಸ್ಥೆ ಅಧಿಕಾರಿ ಹೇಳಿದರು.ತಾಲ್ಲೂಕಿನ ಪುಲಗೂರುಕೋಟೆ ಗ್ರಾಮದಲ್ಲಿ ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಂದ ಏರ್ಪಡಿಸಲಾಗಿರುವ ಎನ್ಎಸ್ಎಸ್ ಶಿಬಿರದಲ್ಲಿ ಭಾಗವಹಿಸಿರುವ ವಿದ್ಯಾರ್ಥಿನಿಯರಿಂದ ಗುರುವಾರ ಏರ್ಪಡಿಸಿದ್ದ ವಸ್ತುಗಳ ಗುಣಮಟ್ಟ ಕುರಿತ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.ವಿದ್ಯಾವಂತ ಸಮುದಾಯ ಗ್ರಾಮೀಣ ಪ್ರದೇಶದ ನಾಗರಿಕರಲ್ಲಿ ವಸ್ತು ಖರೀದಿಸುವಾಗ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಬೇಕು. […]

ಶ್ರೀನಿವಾಸಪುರ : ಆದಿ ಕವಿಯಂದೇ ಖ್ಯಾತರಾದ ಮಹರ್ಷಿ ವಾಲ್ಮೀಕಿ ರಾಮಾಯಣ ಕಾವ್ಯದ ಮೂಲಕ ಮನಕುಲಕ್ಕೆ ಬದುಕಿನ ಸಂದೇಶವನ್ನು ಸಾರಿದ ಸರ್ವತೋಮುಖ ಚಿಂತಕ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಬುಧವಾರ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜೋತ್ಸವ ಆಚರಣೆಗಾಗಿ ನಡೆದ ಪೂರ್ವ ಬಾವಿ ಸಭೆಯಲ್ಲಿ ಮಾತನಾಡಿದರು.ತಾಲೂಕಿನ ಎಲ್ಲಾ ಪಂಚಾಯಿತಿ ಕೇಂದ್ರಗಳಿಂದ ವಾಲ್ಮೀಕಿ ಸ್ತಬ್ದ ಚಿತ್ರವನ್ನು ಹೊತ್ತು ತಾಲೂಕಿನ ಕೇಂದ್ರಕ್ಕೆ ಬರವಂತೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿ, ಮುಂದಿನ ತಿಂಗಳು ನವಂಬರ್ ೧ ರಂದು ಕನ್ನಡ […]

ಶ್ರೀನಿವಾಸಪುರ: ದಸರಾ ನಾಡಿನ ಸಾಂಸ್ಕøತಿಕ ಪರಂಪರೆಯ ಸಂಕೇತ. ದಸರಾ ಸಂಭ್ರಮದಲ್ಲಿ ಸಮಾಜದ ಎಲ್ಲ ಸಮುದಾಯದ ಜನರೂ ಭಾಗವಹಿಸುವುದು ಒಂದು ವಿಶೇಷ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಬಾಲಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮಂಗಳವಾರ ವಿಜಯದಶಮಿ ಪ್ರಯುಕ್ತ ಏರ್ಪಡಿಸಿದ್ದ ಸಮಾರಂಭದಲ್ಲಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ, ಬಿಲ್ಲಿಗೆ ಬಾಣ ಹೂಡಿ ಬಿಟ್ಟ ಬಳಿಕ ಮಾತನಾಡಿದ ಅವರು, ಮಾನವ ಕುಲ ಒಂದೇ ಎಂದು ಸಾರುವುದು ನಿಜವಾದ ಧರ್ಮ. ಸಕಲ ಪ್ರಾಣಿಗಳಲ್ಲಿ ದಯೆ ತೋರುವುದು ಮಾನವ ಧರ್ಮ ಎಂದು ಹೇಳಿದರು.ದುಷ್ಟ ಶಕ್ತಿ […]

ಶ್ರೀನಿವಾಸಪುರ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಿಳೆಯರ ಪಾತ್ರ ಹಿರಿದು. ಅಂಥ ಮಹಿಳೆಯರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮುಂಚೂಣಿಯಲ್ಲಿದ್ದರು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ದಿನಾಚರಣೆ ಸಮಾರಂಭದಲ್ಲಿ, ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.ಕಿತ್ತೂರು ರಾಣಿ ಚೆನ್ನಮ್ಮ ಅವರ ದೇಶ ಪ್ರೇಮ ಹಾಗೂ ಶೌರ್ಯ ಮಹಿಳಾ ಸಮುದಯಕ್ಕೆ ಮಾದರಿಯಾಗಿದೆ. ಹಾಗಾಗಿಯೇ ಅವರು ದೇಶದ […]