ಕೋಲಾರ:- ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಗುರಿ ಸಾಧನೆಗೆ ಕಲಿಕೆಯ ಹಸಿವು, ಛಲ, ಸತತ ಪರಿಶ್ರಮ, ಶ್ರದ್ಧೆ ಅಗತ್ಯವಾಗಿದ್ದು, ಸಂಕಲ್ಪದೊಂದಿಗೆ ಅಭ್ಯಾಸ ಮುಂದುವರೆಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕೆ.ಶ್ರೀನಿವಾಸ್ ಕಿವಿಮಾತು ಹೇಳಿದರು.ಬುಧವಾರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸ್ಟಡೀ ಸರ್ಕಲ್ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿತವಾಗಿರುವ ಹಲವು ಹುದ್ದೆಗಳ ಆಯ್ಕೆಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ತಯಾರಿಗಾಗಿ ನಡೆಸಲಾದ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧನೆಗೆ ದೈನಂದಿನ ವೃತ್ತಪತ್ರಿಕೆಗಳಲ್ಲಿ ಸಿಗುವ ಸಾಮಾನ್ಯ ಜ್ಞಾನ ನಿಮ್ಮದಾಗಿಸಿಕೊಳ್ಳಿ, […]

Read More

ಕೋಲಾರ ತಾಲ್ಲೂಕು ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯಹೋತ್ಸವದ ಹಿನ್ನಲೆಯಲ್ಲಿ ಭಾರತೀಯ ಯೋಧ ಆನಂದ್ ಕುಟುಂಬದವರು ಶಾಲೆಯ ಎಸ್ಸೆಸ್ಸೆಲ್ಸಿ ಸಾಧಕ ಕೆ.ಆರ್.ರಾಘವೇಂದ್ರ ಅವರಿಗೆ 5 ಸಾವಿರ ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು. ಸಹೋದರರಾದ ಶಂಕರ್,ಆನಂದ್,ಶೇಖರ್, ಮೂರ್ತಿ,ಅಶೋಕ್, ಗೋವಿಂದರಾಜು, ಎಸ್‍ಡಿಎಂಸಿ ಸದಸ್ಯ ರಾಮಚಂದ್ರಪ್ಪ ಹಾಜರಿದ್ದರು.

Read More

ಕೋಲಾರ ತಾಲೂಕು ಮಾರ್ಜೇನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ವಿದ್ಯಾಶ್ರೀ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಸ್ಮರಣೆಗಾಗಿ ಪಂಚಾಯ್ತಿ ಆವರಣದಲ್ಲಿ ಸಸಿ ನೆಟ್ಟರು. ಪಿಡಿಒ ನಾರಾಯಣಸ್ವಾಮಿ ಇತರೇ ಸದಸ್ಯರು ಹಾಜರಿದ್ದರು.

Read More

ಕೋಲಾರ:- ದೇಶವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಲು ಶ್ರಮಿಸಿದ ಮಹನೀಯರ ತ್ಯಾಗ,ಬಲಿದಾನ ಮಾಡಿದ್ದಾರೆ ಅವರ ತ್ಯಾಗ ವ್ಯರ್ಥವಾಗದಂತೆ ನಾವೆಲ್ಲಾ ದೇಶದ ಘನತೆ ಹೆಚ್ಚಿಸೋಣ, ದೇಶಕ್ಕಾಗಿ ನಾವು ಎಂದು ಸಾರೋಣ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಎಸ್‍ಡಿಎಂಸಿ ಅಧ್ಯಕ್ಷ ಎ.ಮಹೇಂದ್ರ ಕರೆ ನೀಡಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಗಾಂಧೀಜಿ,ಪಟೇಲ್,ನೆಹರು,ತಿಲಕ್,ನೇತಾಜಿ,ಅಜಾದ್,ಭಗತ್‍ಸಿಂಗ್ ಮತ್ತಿತರ ಸಾವಿರಾರು ಮಂದಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ್ದಾರೆ, ಅವರ ತ್ಯಾಗ,ಬಲಿದಾನದಿಂದ ನಾವಿಂದು ಸಂಭ್ರಮಿಸುತ್ತಿದ್ದೇವೆ ಎಂದರು.ಪರಕೀಯರ ದಾಳಿಯಿಂದ ಬಿಡುಗಡೆಯಾದ ಈ ದಿನವನ್ನು ನಾವು […]

Read More

ಕೋಲಾರ,ಆ.15: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಕಛೇರಿಯ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಸಂಘದ ಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಧ್ವಜಾರೋಹಣವನ್ನು ನೆರವೇರಿಸಿದರು.ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್.ಗಣೇಶ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ ಸುರೇಶ್‍ಕುಮಾರ್, ಹಿರಿಯ ಪತ್ರಕರ್ತರಾದ ಬಿ.ಸುರೇಶ್, ಅಬ್ಬಣಿ ಶಂಕರ್, ಕೆ.ಬಿ.ಜಗದೀಶ್, ಕೋ.ನಾ.ಮಂಜುನಾಥ್, ಎಸ್.ಸಚ್ಚಿದಾನಂದ, ಪ್ರಕಾಶ್ ಮಾಮಿ, ಸಿ.ಜಿ.ಮುರಳಿ, ರಾಜೇಂದ್ರಸಿಂಹ, ಅಯ್ಯೂಬ್ ಖಾನ್, ಆಸೀಫ್ ಪಾಷ, ಮಹೇಶ್, ಸ್ಕಂದಕುಮಾರ್, ಎಸ್ ಸೋಮಶೇಖರ್, ಸಮೀರ್ ಅಹಮದ್, ಎಸ್.ರವಿಕುಮಾರ್, ಲಕ್ಷ್ಮೀಪತಿ, ಶಿವಶಂಕರ್, ವೆಂಕಟೇಶಪ್ಪ, […]

Read More

ಶ್ರೀನಿವಾಸಪುರ: ಜನರು ಜನಪರವಲ್ಲದ ಸರ್ಕಾರದ ವಿರುದ್ಧ ದನಿಯೆತ್ತಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು.ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಪ್ರಚಾರಾಂದೊನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಶ್ರೀಮಂತರ ಪರವಾಗಿದೆ. ರೈತರು, ಕಾರ್ಮಿಕರು ಹಾಗೂ ಕೂಲಿಕಾರರ ಬಗ್ಗೆ ಕಾಳಜಿ ಇಲ್ಲ ಎಂದು ಹೇಳಿದರು.ದೇಶದ ಸ್ವಾಂತಂತ್ರ್ಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಪ್ರಜೆಗಳು ಎಚ್ಚೆತ್ತುಕೊಳ್ಳಬೇಕು. ದೇಶ […]

Read More

ಶ್ರೀನಿವಾಸಪುರ: ಎಲ್‍ಐಸಿ ಪ್ರತಿನಿಧಿಗಳು ಚುರುಕಾಗಿ ಕಾರ್ಯನಿರ್ವಹಿಸಿ ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು ಎಂದು ಎಲ್‍ಐಸಿ ಉಪ ಶಾಖಾ ವ್ಯವಸ್ಥಾಪಕ ಎಸ್.ವಿ.ಪ್ರಸಾದ್ ಹೇಳಿದರು.ಪಟ್ಟಣದ ಎಲ್‍ಐಸಿ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಎಲ್‍ಐಸಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಎಲ್‍ಐಸಿ ಒಂದು ಸಮಾಜ ಮುಖಿ ಸಂಸ್ಥೆಯಾಗಿದ್ದು, ಜನಪರ ಕಾಳಜಿ ಹೊಂದಿದೆ. ಜನರ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ. ದೇಶದ ಆರ್ಥಿಕಾಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ ಎಂದು ಹೇಳಿದರು.ಪ್ರತಿನಿಧಿಗಳು ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ಪಾಲಿಸಿ ಪಡೆಯಬೇಕು. ಸಮಾಜದ ಎಲ್ಲ […]

Read More

ಕೋಲಾರ; ಆ.10: ಎಸ್ಸೆನ್ನಾರ್ ಜಿಲ್ಲಾಸ್ಪತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಕೋಮಾ ಸ್ಥಿತಿಯಲ್ಲಿರುವ ಡಯಾಲಿಸಿಸ್ ಘಟಕಕ್ಕೆ ಮರುಜೀವ ಕೊಟ್ಟು ಬಡರೋಗಿಗಳ ಆರೋಗ್ಯ ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್.ಎನ್.ವಿಜಯ್‍ಕುಮಾರ್‍ಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲೆ ಸೇರಿದಂತೆ ನೆರೆಯ ಆಂಧ್ರ ತಮಿಳುನಾಡು ರಾಜ್ಯಗಳಿಂದಲೂ ಎಸ್ಸೆನ್ನಾರ್ ಜಿಲ್ಲಾಸ್ಪತ್ರೆಗೆ ದಿನನಿತ್ಯ ಸಾವಿರಾರು ಹೊರರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಾರೆ. ಅಲ್ಲದೆ ನೂರಾರು ಮಂದಿ ಒಳರೋಗಿಗಳು ದಾಖಲಾಗಿದ್ದು, ವಿಶೇಷವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿರುವುದರಿಂದ ಹೆರಿಗೆ ಪ್ರಕರಣಗಳು […]

Read More

ಶ್ರೀನಿವಾಸಪುರ 3 : ತಾಲೂಕಿನ ರಾಯಲ್ಪಾಡು ಹೋಬಳಿಯ ಕೋಡಿಪಲ್ಲಿ ಗ್ರಾಮಪಂಚಾಯಿತಿಗೆ ಸಂಬಂದಿಸಿದಂತೆ ನಡೆದ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರೆಡ್ಡಮ್ಮೆ , ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷರಾಗಿ ಮುನಿಯಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿ ಗ್ರಾಮ ಪಂಚಾಯಿತಿಯು ಪುನಃ 2 ನೇ ಅವಧಿಗೆ ಕಾಂಗ್ರೆಸ್ ಮುಡಿಲು ಸೇರಿದೆ.ಕೋಡಿಪಲ್ಲಿ ಗ್ರಾಮಪಂಚಾಯಿತಿಗೆ ಸಂಬಂದಿಸಿದಂತೆ ಒಟ್ಟು 16 ಸದಸ್ಯರಿದ್ದು, 14 ಕಾಂಂಗ್ರೆಸ್ ಬೆಂಬಲಿತ ಸದಸ್ಯರಿದ್ದು, 2 ಜೆಡಿಎಸ್ ಬೆಂಬಲಿತ ಸದಸ್ಯರಿದ್ದು ಗ್ರಾಮಪಂಚಾಯಿತಿ ಕಛೇರಿಯಲ್ಲಿ ಬುಧವಾರ 2ನೇ ಅವಧಿಗೆ […]

Read More
1 90 91 92 93 94 333