ಮುಳಬಾಗಿಲು,ಜೂ.16 : ಮುಳಬಾಗಲು ಬೈರಕೂರು ಹೋಬಳಿ ಹೀರೇಗೌಡನಹಳ್ಳಿಯಲ್ಲಿ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡುತ್ತೇನೆಂದು ಮಾತು ತಪ್ಪಿದ ಸರ್ಕಾರದ ವಿರುದ್ದ ಸಾಲ ಕಟ್ಟಲ್ಲ ಎಂದು ಸಿಡಿದೆದ್ದ ಮಹಿಳೆಯರುಸಾಲ ಮನ್ನಾ ಮಾಡುತ್ತೇನೆಂದು ಮಾತಿದ ತಪ್ಪಿದ ಕಾಂಗ್ರೇಸ್ ಸರ್ಕಾರ ಮಹಿಳೆಯರ ಆಕ್ರೋಶಕ್ಕೆ ಗುರಿಯಾದ ಪಲವಾಗಿ ಇಂದು ಸಾಲವಸೂಲಿಗೆ ಹೋದ ಸೋಸೈಟಿ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದು ಆಗಿ ಸಾಲ ವಸೂಲಿ ಮಾಡಲು ಬಂದರೆ ಹುಷಾರ್ ಸಾಲ ಮನ್ನಾ ಮಾಡುತ್ತೇವೆಂದು ನಮಗೆ ಮೋಸ ಮಾಡಿದ ಮುಖ್ಯಮಂತ್ರಿಗಳ ಬಳಿ ಸಾಲ ವಸೂಲಿ ಮಾಡಿಕೊಳ್ಳಿ […]
ಕೋಲಾರ ಜೂ.16: ಕಳಪೆ ರೇಷ್ಮೆ ಹುಳ ವಿತರಣೆಯಿಂದ ನಷ್ಟವಾಗಿರುವ ರೈತರಿಗೆ ಪ್ರತಿ 100 ಮೊಟ್ಟೆಗೆ 1 ಲಕ್ಷ ಪರಿಹಾರ ಜೊತೆಗೆ ದುಬಾರಿ ಚಾಕಿ ಹುಳ ಬೆಲೆ ನಿಯಂತ್ರಣಕ್ಕೆ ತಂಡ ರಚನೆ ಮಾಡಿ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ರೇಷ್ಮೆ ಸಚಿವರನ್ನು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯ ಮಾಡಿದರು.ಕಳಪೆ ರೇಷ್ಮೆ ಹುಳ ವಿತರಣೆಯಿಂದ ನಷ್ಟವಾಗಿರುವ ವರದೇನಹಳ್ಳಿ ರೈತ ರಮೇಶ್ ಅವರ ಹುಳ ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ಟೊಮೇಟೊ ಮಾವಿಗೆ ರೋಗ ಬಾಧೆ, ಹೈನೋದ್ಯಮಕ್ಕೆ ಕಲಬೆರಕೆ […]
ಶ್ರೀನಿವಾಸಪುರ: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಹಾಗೂ ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ವಿರುದ್ಧ ಆಧಾರ ರಹಿತ ಆಪಾದನೆ ಮಾಡುತ್ತಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಶೇಷಾಪುರ ಗೋಪಾಲ್ ಅವರನ್ನು ಆ ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೆ.ಕೆ.ಮಂಜುನಾಥರೆಡ್ಡಿ ಆಗ್ರಹಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಕೆಲಸ ಮಾಡಿದ ಶೇಷಾಪುರ ಗೋಪಾಲ್ ಅವರಿಗೆ, ಕೆ.ಆರ್.ರಮೇಶ್ […]
ಕೋಲಾರ, ಜೂ.13: ಪ್ರಜಾಯಾತ್ರೆ ಸಮಾವೇಶಗಳಲ್ಲಿ ಸಾವಿರಾರು ಮಹಿಳೆಯರ ಸಮ್ಮುಖದಲ್ಲಿ ನಮ್ಮ ಪಕ್ಷಕ್ಕೆ ಮಹಿಳೆಯಾದ ನೀವು ಮತ ನೀಡಿದರೆ ಸಹಕಾರ ಬ್ಯಾಂಕ್ಗಳಲ್ಲಿ ಪಡೆದಿರುವ ಸ್ತ್ರೀಶಕ್ತಿ ಸಾಲ ಮನ್ನಾ ಮಾಡುತ್ತೇವೆಂಧು ಮಾತು ನೀಡಿ ಮತ ಪಡೆದ ಸಿದ್ದರಾಮಯ್ಯನವರ ಸರ್ಕಾರ ಸ್ತ್ರೀಶಕ್ತಿ ಸಾಲ ಮನ್ನಾ ಮಾಡದೆ ಇರುವುದು ಮಹಿಳೆಯರಿಗೆ ಮಾಡಿದ ದ್ರೋಹವನ್ನು ಖಂಡಿಸಿ ಹೊಸಮಟ್ನಹಳ್ಳಿ ಮತ್ತು ಮಂಗಸಂದ್ರ ಗ್ರಾಮಗಳಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಾಲ ವಸೂಲಾತಿಗೆ ನಮ್ಮ ಗ್ರಾಮಕ್ಕೆ ಬರಬೇಡಿ ಎಂದು ಬೋರ್ಡ ಹಾಕಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.
ಕೋಲಾರ:- ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ವತಿಯಿಂದ ಜಿಲ್ಲೆಯಲ್ಲೆ ಮೊಟ್ಟ ಮೊದಲ ಸಂಚಾರಿ ರಕ್ತದಾನ ಘಟಕವನ್ನು ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಪ್ರಾರಂಭಿಸಿದ್ದು, ರಕ್ತದಾನಿಗಳು ಸಂಚಾರಿ ರಕ್ತದಾನ ಘಟಕದ ಸದುಪಯೋಗವನ್ನು ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ರವರು ಕರೆ ನೀಡಿದರು.ನಗರದ ಸರ್ಕಾರಿ ಬಾಲಕರ ಕಾಲೇಜು ವೃತ್ತದಲ್ಲಿ ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ಸಂಚಾರಿ ರಕ್ತದಾನ ಘಟಕದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಕಾರ್ಲ್ ಲ್ಯಾಂಡ್ ಸ್ಟೀನರ್ […]
ಶ್ರೀನಿವಾಸಪುರ ವಿಧಾನಸಭಾ ಕ್ಷೆತ್ರ ಹೊಸ ಮಟ್ನಹಳ್ಳಿ ಗ್ರಾಮದ ಮಡಿವಾಳ ವೃತ್ತಿಯಿಂದ ಜೀವನ ಮಾಡುವ ಬಸವರಾಜ್ ಅವರಿಗೆ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ಹೊಸ ಸೈಕಲ್ ಕೊಡುಗೆಯಾಗಿ ನೀಡಿದರು.
ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.ಪಟ್ಟಣದ ಕನಕ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 47 ಸಾವಿರ ವಿದ್ಯಾರ್ಥಿಗಳಿಗೆ ರೂ.60 ಕೋಟಿ ಸುಜ್ಞಾನ ನಿಧಿ ಶಿಷ್ಯ ವೇತನ ನೀಡಲಾಗಿದೆ. ತಾಲ್ಲೂಕಿನಲ್ಲಿ ವೃತ್ತಿ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ 187 […]
ಶ್ರೀನಿವಾಸಪುರ : ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. , ಶ್ರೀನಿವಾಸಪುರ ಶಿಬಿರ ಕಛೇರಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಯವರ ನಿವೃತ್ತಿ ಪ್ರೋತ್ಸಾಹ ಧನ ಚೆಕ್ಗಳು ಮತ್ತು ಮೃತಪಟ್ಟ ಸದಸ್ಯರ ಕೋಮುಲ್ ವಿಮಾ ಚೆಕ್ಗಳ ವಿತರಣಾ ಕಾರ್ಯಕ್ರಮದಲ್ಲಿ ಒಕ್ಕೂಟದ ನಿರ್ದೇಶಕರಾದ ಎನ್.ಹನುಮೇಶ್ ರವರು ಮಾತನಾಡಿ , ನಿವೃತ್ತಿ ಹೊಂದಿದ ಎಲ್ಲಾ ಸಿಬ್ಬಂದಿಗಳನ್ನು ಸನ್ಮಾನಿಸಿ , ಸಂಘಗಳಿಗೆ ನೀಡಿದ ನಿರಂತರ ಸೇವೆಯನ್ನು ಸ್ಮರಿಸುತ್ತಾ ಸಿಬ್ಬಂದಿಯವರ ನಿವೃತ್ತಿ ಪ್ರೋತ್ಸಾಹ ಧನ ಚೆಕ್ಗಳು ಮೊತ್ತ 12,25,000 […]
ಕೋಲಾರ: ಮನುಷ್ಯನಾಗಿ ಹುಟ್ಟುವುದೆ ಹೆಮ್ಮೆ ಆದುದರಿಂದ ಸುಸಂಸ್ಕøತರಾಗಿ ಜೀವನದಲ್ಲಿ ಇಡುವ ಹೆಜ್ಜೆ ನೋಡುವ ನೋಟ ಉಡುವ ಬಟ್ಟೆ ಆಡುವ ಮಾತು ಸುಸಂಸ್ಕøತವಾಗಿದ್ದರೆ ಮಾನವನಾಗಿ ಹುಟ್ಟಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಎಸ್ಪಿವೈಎಸ್ಸೆಸ್ಸ್ ಜಿಲ್ಲಾ ಶಿಕ್ಷಣ ಪ್ರಮುಖ ಚೌಡಪ್ಪ ಹೇಳಿದರು.ಪಟ್ಟಣ ತ್ಯಾಗರಾಜ ಬಡಾವಣೆಯ ಯೋಗ ಮಂದಿರದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಏರ್ಪಡಿಸಿದ್ದ 91 ನೇ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ಶಿಬಿರದ ಭಾರತ ಮಾತಾ ಪೂಜಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ಸಮಾಜದಿಂದ ಎಲ್ಲವನ್ನು ಪಡೆಯುವ ಮನುಷ್ಯರು ಸಮಾಜಕ್ಕೇನು ಕೊಡದೆ ನಶ್ವರವಾಗುತ್ತಿದ್ದೇವೆ. ಭಾರತ ಎಂದರೆ […]