ಕುಂದಾಪುರ: ಖ್ಯಾತ ವಿದ್ವಾಂಸ, ರಂಗ ನಿರ್ದೇಶಕ, ಸಾಹಿತಿ, ವಾಚಿಕಾಭಿನಯಪಟು ಕೊರ್ಗಿ ಶಂಕರನಾರಾಯಣ ಉಪಾಧ್ಯಾಯರಿಗೆ “ಕುಂದಪ್ರಭ” ಸಂಸ್ಥೆಯ ಆಶ್ರಯದಲ್ಲಿ ನೀಡಲಾಗುವ ಕೋ. ಮ. ಕಾರಂತ ಪ್ರಶಸ್ತಿಯನ್ನು ಆದಿತ್ಯವಾರ ಜ.7 ರಂದು ಪ್ರದಾನ ಮಾಡಲಾಯಿತು.ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆದ ಸಮಾರಂಭವನ್ನು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವಿಶ್ರಾಂತ ಆಡಳಿತ ಮೊಕ್ತೇಸರರೂ, ಪ. ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲರೂ ಆದ ಕೆ. ಸೂರ್ಯನಾರಾಯಣ ಉಪಾಧ್ಯಾಯರು ಉದ್ಘಾಟಿಸಿದರು.ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. […]

Read More

ಶ್ರೀನಿವಾಸಪುರ : ಫವತಿ ಖಾತೆ ಬಾಕಿ ಇರುವ ಪ್ರಕರಣಗಳನ್ನು ಅರ್ಜಿದಾರರು ಅರ್ಜಿ ಸಲ್ಲಿಸಿ , ಫವತಿಯನ್ನ ಯಾರ ಹೆಸರಿಗೆ ಬದಲಾವಣೆ ಮಾಡಿಕೊಡಬೇಕು ಎನ್ನುವವರಿಗೆ ಬೇಕಾದ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವಂತೆ ಉಪತಹಶೀಲ್ದಾರ್ ಎನ್. ವಿನೋದ್ ತಿಳಿಸಿದರು.ತಾಲೂಕಿನ ರೋಣೂರು ಹೋಬಳಿಗೆ ಸಂಬಂದಿಸಿದಂತೆ ನಾಡಕಛೇರಿಯಲ್ಲಿ ತಾಲೂಕು ಕಂದಾಯ ಇಲಾಖೆವತಿಯಿಂದ ಫವತಿವಾರಸ್ಸು ಖಾತೆ ಆಂದೋಲನಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.ಈ ಆಂದೋಲನವು ಸರ್ಕಾರದ ಮಹತ್ವದ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. 15 ದಿನಗಳ ವರೆಗೆ ಫವತಿಖಾತೆಯನ್ನು ಬದಲಾಯಿಸಿ ಕೊಡಲಾಗುವುದು. ಈ […]

Read More

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ಮೂರು ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸಹ ಮಳೆಯ ಎಚ್ಚರಿಕೆ ನೀಡಿದ್ದು, ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶವು ಹವಾಮಾನ ಪರಿಸ್ಥಿತಿಗಳಿಗೆ ಕಾರಣವಾಗಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು […]

Read More

ವರದಿ: ವಂದನೀಯ ಅನಿಲ್ ಐವನ್ ಫೆನಾರ್ಂಡಿಸ್ ಚಿತ್ರಗಳು: ಸ್ಟಾನ್ಲಿ ಬಂಟ್ವಾಳ್ ಹಾಗೂ ಜೋನ್‍ಡಿಸೋಜಾ ಮಂಗಳೂರು, ಜನವರಿ 07: ಮಂಗಳೂರುಧರ್ಮಕ್ಷೇತ್ರದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಜನವರಿ 7ರ ಭಾನುವಾರದಂದು ನಗರದ ಮಿಲಾಗ್ರಿಸ್ ಚರ್ಚ್‍ನಿಂದ ರೊಸಾರಿಯೊ ಕೆಥೆಡ್ರಲ್ ಚರ್ಚ್‍ವರೆಗೆ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.ಕ್ರಿಸ್ತ ಜಯಂತಿ-2025ರ ಜುಬಿಲಿ ಪ್ರಯುಕ್ತ ಜಗದ್ಗುರು ಪೆÇೀಪ್ ಫ್ರಾನ್ಸಿಸ್ ಅವರು ‘2024′ ಅನ್ನು ‘ಪ್ರಾರ್ಥನೆಯ ವರ್ಷ’ ಎಂದು ಘೋಷಿಸಿರುವುದರಿಂದ “ಪ್ರಾರ್ಥನೆ ಮೂಲಕ ದೇವರೊಡನೆ ಮತ್ತು ಪರರೊಡನೆ ಸಂಬಂಧ ಬೆಳೆಸೋಣ” ಎಂಬ ಸಂದೇಶವನ್ನು […]

Read More

ಕುಂದಾಪುರ: ಮಾದಕ ವ್ಯಸನದ ಜಾಗೃತಿ ಕಾರ್ಯಕ್ರಮದಲ್ಲಿ ಯುವ ಸಮುದಾಯ ತೊಡಗಿಸಿಕೊಳ್ಳಲು ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿದೆ. ಮಾದಕ ವಸ್ತುವಂತ ಸಾಮಾಜಿಕ ಪಿಡುಗನ್ನು ತಡೆಗಟ್ಟಲು ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕೆಂದು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರು ಹಾಗೂ ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಶೃತಿಶ್ರೀ ಎಸ್. ಹೇಳಿದರು. ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪವಿಭಾಗದ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕ ಜಾಗೃತಿಗಾಗಿ ‘ಸೇ ನೋ ಟು ಡ್ರಗ್ಸ್’ ಧ್ಯೇಯ ವಾಕ್ಯದಡಿ ರವಿವಾರ ಬೆಳಿಗ್ಗೆ […]

Read More

ಮಂಡ್ಯ: 2008-09 ಮತ್ತು 2011-12ರ ಅವಧಿಯಲ್ಲಿ ಮೈಷುಗರ್‌ ಅಧ್ಯಕ್ಷರಾಗಿದ್ದ ಮಂಡ್ಯದ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿಎಸ್‌ಯಡಿಯೂರಪ್ಪ ಅವರ ಅತ್ಯಾಪ್ತನಾಗಿರುವ ನಾಗರಾಜಪ್ಪನ ವಿರುದ್ಧ ಕೇಳಿ ಬಂದಿದ್ದ ನೂರಾರು ಕೋಟಿ ಅಕ್ರಮ ಮತ್ತು ಭ್ರಷ್ಟಾಚಾರ ಆರೋಪತನಿಖೆಯಿಂದ ಸಾಬೀತಾಗಿದೆ. ತನ್ನ ಅಧ್ಯಕ್ಷತೆಯ ಅಧಿಕಾರವಧಿಯಲ್ಲಿ ಮೈಷುಗರ್‌ ಕಾರ್ಖಾನೆ ಬರೋಬ್ಬರಿ ₹121 ಕೋಟಿಗಳಷ್ಟು ನಷ್ಟವನ್ನು ಉಂಟು ಮಾಡಿರುವುದು ಉಪ ಲೋಕಾಯುಕ್ತರ ತನಿಖೆಯಿಂದ ಸಾಬೀತಾಗಿದ್ದು ಇದೀಗ ರಾಜ್ಯದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಪಾನೆ ಮೈಶುಗರ್‌ ಮಾಜಿ ಅಧ್ಯಕ್ಷ ನಾಗರಾಜಪ್ಪನಿಂದ ನಷ್ಟದ ಹಣ ವಸೂಲಿ […]

Read More

ಬೆಂಗಳೂರು: ಬಿಎ ಪದವಿ ಪಡೆದ ಅಂಧ ಪದವಿಧರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಜನಸ್ಪಂದನಾ ಕಾರ್ಯಕ್ರಮದ ಸ್ಥಳದಲ್ಲೇ ನೀಡಿದರರು ಸುಂಕದಕಟ್ಟೆ ಶಾಂತಿಧಾಮ ಸಂಸ್ಥೆಯ ಅಂಧ ವಿದ್ಯಾರ್ಥಿನಿಯಾಗಿರುವ ದಿವ್ಯಾಂಜಲಿ ಎಂಬುವವರಿಗೆ ಸ್ಥಾವಲಂಬಿ ಜೀವನ ನಡೆಸುವ ಉದ್ದೇಶದಿಂದ ಕೆಲಸವೊಂದನ್ನು ಕೊಡಿಸುವ ಮೂಲಕ ಅಂಧ ವಿದ್ಯಾರ್ಥಿನಿ ಬಾಳಿಗೆ ಬೆಳಕಾಗಿದ್ದಾರೆ. ಯಲಹಂಕದ ಅಂಬೇಡ್ಕರ್‌ ಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ದಿವ್ಯಾಂಜಲಿ ಅವರು,“ನನಗೆ ಕಣ್ಣು ಕಾಣಲ್ಲ ಹಾಗಾಗಿ ಎಲ್ಲೂ ಕೆಲಸ ಸಿಗುತ್ತಿಲ್ಲ ಹೀಗಾಗಿ ಕೆಲಸ ಕೊಡಿಸುವಂತೆ ಡಿಕೆ ಶಿವಕುಮಾರ್‌ ಅವರಿಗೆ […]

Read More

ಕೋಲಾರ,ಜ.05: 3 ನೇ ಅಂತರಾಷ್ಟ್ರೀಯ ಮಾರ್ಷಲ್ ಆರ್ಟ್ಸ್ 9 ಚಾಂಪಿಯನ್ ಶಿಫ್ ಹೈದರಾಬಾದ್ ತೆಲಂಗಾಣ ರಾಜ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಟಾದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆಗಳ ಪ್ರಶಸ್ತಿ 2024ನ್ನು ಹಾಗೂ ಮೆರಿಟ್ ಸರ್ಟಿಫಿಕೇಟನ್ನು ಅಂತರಾಷ್ಟ್ರೀಯ ಕರಾಟೆಪಟು ನಗರದ ಮಹಾಲಕ್ಷ್ಮೀ ಲೇಔಟ್‍ನ ನಿವಾಸಿ ರುಮಾನಾ ಕೌಸರ್ ಬೇಗ್ ಪಡೆದುಕೊಂಡಿದ್ದಾರೆ.ಕರಾಟೆ ಕ್ರೀಡೆಯಲ್ಲಿ ವಸತಿ ಶಾಲೆಗಳಲ್ಲಿ 3000 ಬಾಲಕಿಯರಿಗೆ ಆತ್ಮ ರಕ್ಷಣೆ ಕಲೆಯನ್ನು ಕರಾಟೆ ತರಬೇತಿ ನೀಡುತ್ತಿರುವ ಕೋಲಾರ ಜಿಲ್ಲೆಯ ಕರ್ನಾಟಕ ರಾಜ್ಯದ ರುಮಾನಾ ಕೌಸರ್ ಬೇಗ್ ರಾಜ್ಯ ಮಟ್ಟದಲ್ಲಿ […]

Read More

ಶ್ರೀನಿವಾಸಪುರ ಜ-4, ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪರವಾನಿಗೆ ಪಡೆದು ಎಂ.ಜಿ.ರಸ್ತೆಯಲ್ಲಿ ಅವರೇಕಾಯಿ ವಹಿವಾಟು ನಡೆಸುತ್ತಿರುವ ಪರವಾನಿಗೆದಾರರ ವಿರುದ್ದ ಕ್ರಮಕೈಗೊಂಡು ಅವರೆ ಕಾಯಿ ವಹಿವಾಟನ್ನು ಮಾರುಕಟ್ಟೆಗೆ ಸ್ಥಳಾಂತರಿಸಿ ಇಲ್ಲವೆ ಸೂಕ್ತವಾದ ಜಾಗ ಗುರುತಿಸಿ ಜನ ಸಾಮಾನ್ಯರಿಗೆ ಹಾಗೂ ರೈತರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ರೈತ ಸಂಘದಿಂದ ಇಂದ್ರಾ ಭವನ ಸರ್ಕಲ್‍ನಲ್ಲಿ ಅವರೆಕಾಯಿ ಸಮೇತ ಹೋರಾಟ ಮಾಡಿ ತಾಲ್ಲೂಕು ದಂಡಾಧಿಕಾರಿಗಳು ಎ.ಪಿ.ಎಂ.ಸಿ. ಅಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಬರ ಹಾಗೂ ಬೆಳೆ ನಷ್ಟದಿಂದ ತತ್ತರಿಸಿರುವ ರೈತ ಮೂರು ತಿಂಗಳು ಭೂಮಿ […]

Read More