
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ .ಮೇ 18: ದ.ಕ. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 24ರ ಹರೆಯದ ಶಾಮಿಲಿ ಕೋವಿಡ್ಗೆ ಬಲಿಯಾಗಿದ್ದಾರೆ.ಕೋಲಾರದವರಾದ ಶಾಮಿಲಿ 7 ತಿಂಗಳ ಗರ್ಭಿಣಿಯಾಗಿದ್ದು, ಕೋಲಾರದ ಆರ್ಎಂ ಜಾಲಪ್ಪ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 4.30ಕ್ಕೆ ನಿಧನರಾಗಿದ್ದಾರೆ.ಗರ್ಭಿಣಿಯಾಗಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ತಿಂಗಳ ಹಿಂದೆ ಅವರು ರಜೆಯ ಮೇಲೆ ತಮ್ಮ ಊರಿಗೆ ತೆರಳಿದ್ದರು. ಮೇ 2ರಂದು ಕೋವಿಡ್ ಪಾಸಿಟಿವ್ ಆಗಿ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಕೋಲಾರದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸ೦ತೆ೦ರಲ್ಲಿ ಮಾರಾಟ ದಂಧ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಂರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ . ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಕಾಟ ಮಾಡುತ್ತಿದ್ದ ಜಾಲದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಸದ್ಯಕ್ಕೆ ಯಾವುದೇ ಮಾಹಿತಿ ನೀಡುತ್ತಿಲ್ಲ . ಕಳೆದ ಒಂದು […]

JANANUDI.COM NETWORK ಬೀದರ್: ಏಪ್ರಿಲ್ 1 ರಿಂದ ಮೇ 14 ವರೆಗೆ ಬಸವಕಲ್ಯಾಣ ಉಪಚುನಾವಣೆ ಹಾಗು ಬೀದರ್ ನಗರಸಭೆ ಚುನಾವಣಾ ಕರ್ತವ್ಯ ನಿರ್ವಹಿಸಿದ್ದ 52 ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.ಎಂದು ಸ್ಫೋಟಕ ಸುದ್ದಿ ವರದಿಯಾಗಿದೆ.ಚುನಾವಣೆಯ ಕರ್ತವ್ಯಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕಿನ ಒಟ್ಟು 1,434 ಬೋಧಕ ಮತ್ತು ಬೋಧಕೇತರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಚುನಾವಣಾ ಕರ್ತವ್ಯಕ್ಕೂ ಮುನ್ನ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ 67 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇವರನ್ನು ಬಿಟ್ಟು ಉಳಿದವರನ್ನು ಚುನಾವಣಾ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶನಿವಾರ ತಾಲ್ಲೂಕು ದಲಿತ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಕೋವಿಡ್ ಪರಿಹಾರಕ್ಕಾಗಿ ಪತ್ರ ಚಳುವಳಿ ಆರಂಭಿಸಲಾಯಿತು. ಮುಖಂಡರಾದ ವೆಂಕಟೇಶ್, ಮಂಜುನಾಥ್, ಮಂಜುಳ, ಆಂಜಿಲಪ್ಪ ಇದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಡೆಂಗ್ಯೂ ಜ್ವರ ಒಂದು ಸಾಂಕ್ರಾಮಿಕ ರೋಗವಾಗಿದ್ದು ಸಾರ್ವಜನಿಕರು ತಮ್ಮ ಮನೆ ಸುತ್ತಮುತ್ತ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ಶೇಖರಣೆಯಾಗದಂತೆ ಎಚ್ಚರ ವಹಿಸಬೇಕು. ವಿಶೇಷವಾಗಿ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವ ವೃದ್ದರು, ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆಯನ್ನು ಕಡ್ಡಾಯವಾಗಿ ಬಳಸಬೇಕು. ಸೊಳ್ಳೆಗಳು ಕಚ್ಚದಂತೆ ಮೈತುಂಬಾ ಬಟ್ಟೆ ಧರಿಸಿ, ಸೊಳ್ಳೆ ಬತ್ತಿ, ಮುಲಾಮು ದ್ರಾವಣ ಇವುಗಳನ್ನು ಉಪಯೋಗಿಸಿ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ|| ಕಮಲ.ಎಂ ಅವರು ತಿಳಿಸಿದ್ದಾರೆ.ಮೇ […]

JANANUDI.COM NETWORK ಬೆಂಗಳೂರು,ಮೇ.15; ಇಂದು (15-5-21) ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 349 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 21434ಕ್ಕೆ ಏರಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 349 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 21434ಕ್ಕೆ ಏರಿಕೆಯಾಗಿದೆ.ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 41,664 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 34425 ಗುಣಮುಖರಾಗಿದ್ದಾರೆ,ಎಂದು ಆರೋಗ್ಯ ಮತ್ತು ಕುಟುಂಬ […]

JANANUDI.COM NETWORK ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 41,779 ಕರೋನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 373 ಮಂದಿ ಬಲಿಯಾಗಿದ್ದಾರೆ.ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 14,316 ಸೋಂಕಿತರು ಪ್ರಕರಣಗಳು ಹೊಸದಾಗಿ ಕಂಡು ಬಂದರೆ, 121 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 1219 ಸೋಂಕಿತರು, 3 ಸಾವು, ದಕ್ಷಿಣಕನ್ನಡ ಜಿಲ್ಲೆಯಲ್ಲಿ 1215 ಸೋಂಕಿತರು 3 ಸಾವು. ಶಿವಮೊಗ್ಗದಲ್ಲಿ ಐದು ಸಾವು, ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ […]

JANANUDI.COM NETWORK ಬೆಂಗಳೂರು, ಮೇ. 14; “ನಮ್ಮ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ.1 ಕೋಟಿ ರೂ.ಗಳಂತೆ ಒಟ್ಟು ರೂ.100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿದ್ದೇವೆ’ ಎಂದು ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ’ನಾಡಿನ ಎಲ್ಲ ಜನರಿಗೆ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬುದೆ ನಮ್ಮ ಆಶಯ. ಈ ನಿಟ್ಟಿನಲ್ಲಿ ನಾವು ಹಣ ನೀಡುತ್ತಿದ್ದೇವೆ” ಎಂದರು.“ದೇಶದ […]

JANANUDI.COM NETWORK ಮೈಸೂರು,ಮೇ.14. ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಬಹಳ ಜೋರಾಗಿದ್ದು, ಈ ಸಮ್ಯದಲ್ಲಿ ಮೈಸೂರಿನಲ್ಲೆ ಔಷಧಿ ಕಂಪನಿಯೊಂದು ಕೊರೋನಾ ಚಿಕಿತ್ಸೆಗಾಗಿ ಔಷಧಿಯೊಂದನ್ನು ಅಭಿವೃದ್ಧಿಪಡಿಸಿದೆ. ಎಂದು ಹೇಳಿಕೊಂಡಿದೆ. ಇದೊಂದು ಮೌಖಿಕ (ಓರಲ್) ಔಷಧಿಯಾಗಿದೆಯೆಂದು ತಿಳಿಸಲಾಗಿದೆ.ಡಿಆರ್’ಎಂ ಇನ್ನೋವೇಶನ್ಸ್ ಕೃತಕ ಬುದ್ಧಿಮತ್ತೆಯನ್ನು ಬಳಸಿ ಈ ಔಷಧಿಯನ್ನು ಅಭಿವೃದ್ಧಿ ಪಡಿಸಿದೆ. ಡಿಆರ್ ಎಮ್ ಎಂಡಿ ಡಾ.ಮಂಜುನಾಥ್ ಬಿ.ಹೆಚ್ ನೇತೃತ್ವದ ತಜ್ಞರ ತಂಡ ರಾಸಾಯನಿಕ ಜೀವಶಾಸ್ತ್ರದ ಪ್ರಯೋಗಾಲಯ, ಮೈಸೂರು ವಿಶ್ವವಿದ್ಯಾಲಯದ ಸಾವಯವ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ಬಸಪ್ಪ ಮತ್ತು ಜೆಎಸ್ಎಸ್ […]