
JANANUDI.COMNETWORK ದುಬೈ ಜೆಬೆಲ್ ಅಲಿ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿ ಮೃತ್ಯು ದುಬೈ, : ಇಲ್ಲಿನ ಶೇಖ್ ಜಾಯೆದ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತವು ಜುಲೈ 12 ರಂದು ನಡೆದಿತ್ತು. ಇಬ್ಬರು ಮೃತರ ಪೈಕಿ ಮಂಗಳೂರಿನ ವೆಲೇನ್ಸಿಯಾ ಮೂಲದ ಲುದಿನಾ ಮೊಂತೇರೋ (30) ಒಬ್ಬರೆಂದು ಗುರುತಿಸಲಾಗಿದೆ. ಅವರು ತನ್ನ ಕಂಪನಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಜುಲೈ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜೀವ ಉಳಿಸಲು ಎಲ್ಲ ಅರ್ಹ ವ್ಯಕ್ತಿಗಳು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೋತ್ಥಾನ ರಕ್ತ ನಿಧಿ ವತಿಯಿಂದ ಬುಧವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಅಗತ್ಯ ಸಂದರ್ಭಗಳಲ್ಲಿ ಬೇಕ್ತದ ಕೊರತೆ ಇದೆ. ಇದರಿಂದ ಹಲವು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ರಕ್ತದಾನ ಮಾಡುವುದರಿಂದ ಅಮೂಲ್ಯವಾದ ಜೀವ ಉಳಿಯುತ್ತದೆ ಎಂದು ಹೇಳಿದರು. […]

JANANUDI.COM NETWORK ಜು.೧೪: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಲಾಗಿದ್ದು, ಒಟ್ಟಾರೆ ಶೇಕಡ 69.20 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇಕಡ 68.68 ರಷ್ಟಿತ್ತು. ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮವಾಗಿದ್ದು. ಎಂದಿನ ವರ್ಷದಂತ್ತೆ ಈ ಬಾರಿ ಬಾಲಕಿಯರು ಶೇ 68.73, ಬಾಲಕರು ಶೇ 54.77 ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಫಲಿತಾಂಶ ಒಟ್ಟಾರೆ ಶೇ 61.73 ಇತ್ತು. ಉಡುಪಿ ಈ ಬಾರಿಯೂ ಪ್ರಥಮ ಪಡೆದರೆ. ದಕ್ಷಿಣ ಕನ್ನಡ ದ್ವಿತೀಯ, ಕಳೆದ ಸಾಲಿನಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡ ಕೊಡಗು ಮೂರನೇ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆರೋಗ್ಯ ಇಲಾಖೆಯ ಟಿ.ಜಯಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ನಚಿಕೇತ ನಿಲಯ ಆವರಣದಲ್ಲಿರುವ ಬುದ್ಧ ವಿಹಾರ ಭವನದಲ್ಲಿ ಶನಿವಾರ ಸಂಜೆ ಜರುಗಿದ ಪದಗ್ರಹಣ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷೆ ವಿಜಯಮ್ಮ ನೂತನ ಅಧ್ಯಕ್ಷ ಟಿ.ಜಯಪ್ರಕಾಶ್ರಿಗೆ ಅಧಿಕಾರ ಹಸ್ತಾಂತರಿಸಿದರು. ಸಂಘದ ಗೌರವಾಧ್ಯಕ್ಷರಾಗಿ ನೂತನ ಸರಕಾರಿ ಪ್ರೌಢಶಾಲೆಯ ಪ್ರಾಂಶುಪಾಲ ಜಯರಾಮ್, ಕಾರ್ಯಾಧ್ಯಕ್ಷರಾಗಿ ಪಿಡಿಒ ಎಸ್.ಸುರೇಶ್ಕುಮಾರ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಪ್ರೌಢ […]

JANANUDI.COM NETWORK ಜುಲಾಯ್ 12 ರಿಂದ 16 ರ ತನಕ ಕರ್ನಾಟಕದಲ್ಲಿ ಭಾರಿ ಮಳೆ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 12 ರಿಂದ 16ರ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಭಾನುವಾರದಿಂದ ಮಂಗಳವಾರದ ತನಕ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ. […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರಿಂದ ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಪ್ರತಿಭಟನೆ ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಮುಂದೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರು, ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್ ಪ್ರತಿಭಟನೆ ನಿರತ ನೌಕರರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಕಾರ್ಯನಿರ್ವಹಣೆ ಸಂದರ್ಭದಲ್ಲಿ ಬಂಗಾರಪೇಟೆ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕೆ ಪತ್ರಿಕೆಗಳಸಂಘದ ಉಪಾಧ್ಯಕ್ಷರಾಗಿ ಕೆ.ಎಸ್.ಗಣೇಶ್ ಆಯ್ಕೆ ಕೋಲಾರ: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಉಪಾಧ್ಯಕ್ಷರಾಗಿ ಕೋಲಾರದ ಕೆ.ಎಸ್.ಗಣೇಶ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರದ ಮುನಿಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಹಿತ ಕಾಪಾಡುವ ಉದ್ದೇಶದಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಂಘದ ಅಧ್ಯಕ್ಷರಾಗಿ ಹಾಸನದ ಕೆಂಚೇಗೌಡ, ಪ್ರಧಾನ ಕಾರ್ಯದರ್ಶಿಯಾಗಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ 16 ಲಕ್ಷ ಕಟ್ಟಡ ಕಾರ್ಮಿಕರಿಗೆ 800 ಕೋಟಿ ರೂ ಪರಿಹಾರಧನ ಪಾವತಿ – ಶಿವರಾಮ್ ಹೆಬ್ಬಾರ ಕೋಲಾರ : ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ 16 ಲಕ್ಷ ಕಾರ್ಮಿಕರಿಗೆ 800 ಕೋಟಿ ರೂಪಾಯಿ ಹಣವನ್ನು ಪರಿಹಾರಧನವಾಗಿ ಪಾವತಿ ಮಾಡಲಾಗಿದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಶಿವರಾಮ್ ಹೆಬ್ಬಾರ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಮಾವಿನ ಮರಗಳ (ಮಧ್ಯದ ಹಾಗೂ ಒತ್ತಾದ ರೆಂಬೆಗಳನ್ನು) ಸವರುವಿಕೆಯ ಉಪಯೋಗಗಳು (ಇಸ್ರೇಲ್ ತಂತ್ರಜ್ಞಾನ) ಕೋಲಾರ; ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆಯ ಜಿ. ನಾರಾಯಣಗೌಡ ಮಾದರಿ ತೋಟಗಾರಿಕ ಕ್ಷೇತ್ರದಲ್ಲಿ ಇಂಡೋ – ಇಸ್ರೇಲ್ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿರುವ ಮಾವು ಬೆಳೆ ಉತ್ಕøಷ್ಟ ಕೇಂದ್ರದಲ್ಲಿ ಮಾವಿನ ಬೆಳೆಯ ಆಧುನಿಕ ಬೇಸಾಯ ತಂತ್ರಜ್ಞಾನಗಳನ್ನು ಇಸ್ರೇಲ್ ದೇಶದ ತಜ್ಞರಿಂದ ಪಡೆದು ಇಲ್ಲಿನ ಹವಾಮಾನ ಹಾಗೂ ಮಣ್ಣಿನ ಗುಣಗಳಿಗೆ ಹೊಂದುವಂತೆ ಪ್ರಾತ್ಯಕ್ಷತೆಗಳನ್ನು ಕೈಗೊಂಡು ಇಳುವರಿ […]