ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರದಲ್ಲಿ ಕರ್ನಾಟಕ ಜನಸೇನೆ ಸಂಘಟನೆಯಿಂದ ಜಾಗೃತಿ ಜಾಥಾ ಕೋಲಾರ: ಕರ್ನಾಟಕ ಜನಸೇನೆ ಸಂಘಟನೆಯು ಕೋಲಾರದಲ್ಲಿ ಋಣಮುಕ್ತ ಕಾಯ್ದೆ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಥಾವನ್ನು ನಡೆಸಿ ನಂತರ ಕೋಲಾಋ ಉಪವಿಭಾಗಾಧಿಕಾರಿಗಳಿಗೆ ಸಾರ್ವಜನಿಕರ ಪರವಾಗಿ ಬೇಡಿಕೆಗಳ ಮನವಿ ಪತ್ರವನ್ನು ನೀಡಿತು.ಕರ್ನಾಟಕ ಜನಸೇನೆ ಸಂಘಟನೆಯು ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಮತ್ತು ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಕರ್ನಾಟಕ ಋಣಮುಕ್ತ ಪರಿಹಾರ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭೆ ಕಾರ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಪೌರ ಕಾರ್ಮಿಕರಿಗೆ ಸುರಕ್ಷಾ ಕವಚಗಳನ್ನು ವಿತರಿಸಿದರು. ಶ್ರೀನಿವಾಸಪುರ: ಪೌರ ಕಾರ್ಮಿಕರು ಆರೋಗ್ಯ ರಕ್ಷಣೆಗೆ ಸುರಕ್ಷಾ ಕವಚ ಧರಿಸಬೇಕು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪೌರ ಕಾರ್ಮಿಕರಿಗೆ ಸುರಕ್ಷಾ ಕವಚಗಳನ್ನು ವಿತರಿಸಿ ಮಾತನಾಡಿ, ಕೈಗವಚ, ಬಾಯಿಗವಚ, ಬೂಟು ಹಾಗೂ ಹೆಲ್ಮೆಟ್ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸೋಣ – ಜೆ. ಮಂಜುನಾಥ್ ಕೋಲಾರ : ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಗೆ ಯಾವುದೇ ಧಕ್ಕೆಯಾಗದಂತೆ ಎಲ್ಲರೂ ಸೇರಿ ಗೌರಿ ಗಣೇಶ ಹಬ್ಬವನ್ನು ಆಚರಿಸೋಣ ಎಂದು ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ತಿಳಿಸಿದರು. ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿವಿಧ ಧರ್ಮದ ಮುಖಂಡರೊಂದಿಗೆ ಹಮ್ಮಿಕೊಂಡಿದ್ದ ಶಾಂತಿ ಸೌಹಾರ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಧಾರ್ಮಿಕ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಹೊರ ವಲಯದಲ್ಲಿನ ಪುಂಗನೂರು ಕ್ರಾಸ್ ಸಮೀಪದ ಸೀತಾ ರಾಮ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ಪ್ರದೇಶಿಕ ಸಭೆಯನ್ನು ಕೋಚಿಮುಲ್ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಚ್.ವಿ.ತಿಪ್ಪಾರೆಡ್ಡಿ ಉದ್ಘಾಟಿಸಿದರು. ಶ್ರೀನಿವಾಸಪುರ: ಹಾಲು ಉತ್ಪಾದಕರ ಸಹಕಾರ ಸಂಘಗಳು ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಬೇಕು ಎಂದು ಕೋಚಿಮುಲ್ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಚ್.ವಿ.ತಿಪ್ಪಾರೆಡ್ಡಿ ಹೇಳಿದರು. ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಪ್ರಮಾಣ ಕುಸಿದಿದೆ. […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಹಿಳೆಯರ, ಮಕ್ಕಳ ಸುರಕ್ಷತೆಗಾಗಿ ಸಜ್ಜಾದ ಕೋಲಾರಮ್ಮ ಪಡೆ -ಕೆ.ವಿ ಶರತ್‍ಚಂದ್ರ ಕೋಲಾರ: ಶಾಲಾ-ಕಾಲೇಜು ಸಾರ್ವಜನಿಕ ಸ್ಥಳಗಳು ಸೇರಿದಂತೆ ಮಹಿಳೆಯರ, ಮ್ಕಕಳ ಸುರಕ್ಷತೆಗಾಗಿ ಕಾರ್ಯನಿರ್ವಹಿಸಲು ಕೋಲಾರಮ್ಮ ಪಡೆಯು ಸಜ್ಜಾಗಿದೆ ಎಂದು ಬೆಂಗಳೂರು ಕೇಂದ್ರವಲಯದ ಪೊಲೀಸ್ ಮಹಾನಿರೀಕ್ಷಕರಾದ ಕೆ.ವಿ ಶರತ್‍ಚಂದ್ರ ಅವರು ತಿಳಿಸಿದರು. ಇಂದು ನಗರದ ಕೋಲಾರ ಜಿಲ್ಲಾ ಪೊಲೀಸ್ ಮತ್ತು ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ, ಗಲ್‍ಪೇಟೆ ಪೊಲೀಸ್ ಠಾಣೆ ಮುಂಭಾಗದಲ್ಲಿ ನಿರ್ಮಿಸಿರುವ ಪೊಲೀಸ್ ಫಾರ್ಮ ಮತ್ತು ಕೋಲಾರಮ್ಮ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಹಿಳಾ ಸ್ವಸಹಾಯ ಸಂಘಗಳಿಗೆ 10 ಕೋಟಿ ರೂ ಸಾಲ ವಿತ ರಣೆ , ವಾಣಿಜ್ಯ ಬ್ಯಾಂಕುಗಳಿಗೆ ಬಡವರ ಬಗ್ಗೆ ಕಾಳಜಿಯಿಲ್ಲ-ಶಾಸಕ ಕೆ.ಆರ್.ರಮೇಶ್‍ಕುಮಾರ್ ಬ್ಯಾಂಕುಗಳಿಗೆ ಬಡವರ ಬಗ್ಗೆ ಕಾಳಜಿಯಿಲ್ಲ ಎಂದ ಮೇಲೆ ಸರ್ಕಾರದ ವಿವಿಧ ಇಲಾಖೆಗಳ ಹಣ ಈ ಬ್ಯಾಂಕುಗಳಲ್ಲಿ ಏಕೆ ಠೇವಣಿ ಇಡಬೇಕು ಎಂದು ಮಾಜಿ ಸ್ವೀಕರ್ ಮತ್ತು ಶಾಸಕ ಕೆ.ಆರ್.ರಮೇಶ್‍ಕುಮಾರ್ ಕೋಲಾರ:- ಸಾವಿರಾರು ಕೋಟಿ ರೂ ದೋಚಿಕೊಂಡು ಹೋಗುವ ಸಾಹುಕಾರರಿಗೆ ಸಾಲ ನೀಡುವ ವಾಣಿಜ್ಯ ಬ್ಯಾಂಕುಗಳಿಗೆ ಬಡವರ ಬಗ್ಗೆ ಕಾಳಜಿಯಿಲ್ಲ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಪ್ರೌಢ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸಿದರು. ಶ್ರೀನಿವಾಸಪುರ: ರೈತರು ಕೃಷಿ ಹಾಗೂ ತೋಟಗಾರಿಕೆಯಲ್ಲಿ ವೈಜ್ಞಾನಿಕ ಪದ್ಧತಿ ಅನುಸರಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್‌ಕುಮಾರ್‌ಹೇಳಿದರು. ತಾಲ್ಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಪ್ರೌಢ ಶಾಲೆ ಆವರಣದಲ್ಲಿ ಕೃಷಿ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪಿಂಚಣಿದಾರರ ಅನುಕೂಲಕ್ಕಾಗಿ ಬ್ಯಾಂಕ್‍ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಿರಿ -ಜೆ. ಮಂಜುನಾಥ್ ಕೋಲಾರ: ಪಿಂಚಣಿದಾರರಿಗೆ ಬ್ಯಾಂಕ್‍ಗಳಲ್ಲಿ ಪ್ರತ್ಯೇಕ ಕೌಂಟರ್‍ಗಳನ್ನು ತೆರೆದು ಅಲ್ಲಿ ಉತ್ತಮವಾಗಿ ಹಿರಿಯರೊಂದಿಗೆ ಸ್ಪಂದಿಸುವ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ತಾಲ್ಲೂಕು ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ನಿವೃತ್ತ ನೌಕರರ ಪಿಂಚಣಿ ಅದಾಲತ್ ಆಂದೋಲನದ ಅಧ್ಯಕ್ಷತೆ ವಹಿಸಿದ್ದ ಅವರು, ಪಿಂಚಣಿದಾರರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಬ್ಯಾಂಕ್‍ಗಳಿಗೆ ಬರುವ ಹಿರಿಯ ನಾಗರೀಕರು ಮತ್ತು ನಿವೃತ್ತಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಿಲ್ಲೆಯ ಅಂಗನವಾಡಿ, ಶಾಲೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ – ಎನ್. ಕೃಷ್ಣಮೂರ್ತಿ ಕೋಲಾರ : 3 ದಿನಗಳ ಕಾಲ ಜಿಲ್ಲೆಯ ಅಂಗನವಾಡಿ, ಶಾಲೆ, ನ್ಯಾಯಬೆಲೆ ಅಂಗಡಿಗಳು, ಗೋಡನ್‍ಗಳು ಹಾಗೂ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗಿದ್ದು, ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಎನ್. ಕೃಷ್ಣಮೂರ್ತಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ […]