ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ದಲಿತ ಮುಖಂಡ ವಿಶ್ವನಾಥ್ ಕೊಲೆಗೆ ಯತ್ನ, ಮಚ್ಚಿನಿಂದ ಮಾರಣಾಂತಿಕ ದಾಳಿ ಆರೋಪಿಗಳ ಮೇಲೆ ರೌಡಿ ಶೀಟರ್ ದಾಖಲಿಸಿ ಗಡೀಪಾರು ಮಾಡಲು ಒತ್ತಾಯ: ಕೆ.ಎಂ.ಸಂದೇಶ್ ಕೋಲಾರ: ಅಂಬೇಡ್ಕರ್ ಸೇವಾ ಸಮಿತಿ ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ವಿಶ್ವನಾಥ್ ಅವರ ಕೊಲೆಗೆ ಯತ್ನಿಸಿ ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿದ ಘಟನೆ ಗೌನಿಪಲ್ಲಿ ಪೋಲಿಸ್ ಠಾಣಾ ವ್ಯಾಪ್ತಿಯ ತಿಮ್ಮಿನಪಲ್ಲಿ ಗ್ರಾಮದಲ್ಲಿ ನಡೆದಿದೆ. ದಿನಾಂಕ: 22.06.2019 ರಂದು ರಾತ್ರಿ ತಿಮ್ಮಿನಪಲ್ಲಿಯ ವಿಶ್ವನಾಥ್ ಅವರ ಮನೆಯ ಮೇಲೆ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸರ್ಕಾರಿ ವಂಚಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಜಿಲ್ಲೆಗೆ ತರಲು ಸಂಸದ ಮುನಿಸ್ವಾಮಿ ಗಮನ ಹರಿಸುವರೇ ಕೋಲಾರ : ಹಲವು ಪ್ರಥಮಗಳಿಗೆ ಮೂಲವಾದ ಕೋಲಾರ ಜಿಲ್ಲೆ ಹಿಂದುಳಿಯಲು ಕಾರಣರಾದ ಸ್ಥಳೀಯ ಸಂಸ್ಥೆಗಳ ಪಟ್ಟಿ ನಾಗರೀಕ ಸಮಾಜ ಆತಂಕದಲ್ಲಿದೆ. ಉನ್ನತ ಮತ್ತು ವೃತ್ತಿಪರ ಕೋರ್ಸುಗಳ ವಿದ್ಯಾಭ್ಯಾಸಕ್ಕೆ ಇಲ್ಲಿನ ವಿದ್ಯಾರ್ಥಿ ಸಮುದಾಯ ಬೇರೆ ಜಿಲ್ಲೆಗಳಲ್ಲಿನ ಸರ್ಕಾರಿ ಕಾಲೇಜುಗಳನ್ನು ಅವಲಂಬಿಸಬೇಕಾಗಿದೆ. ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದ ಬೆರಳಣಿಕೆಯಷ್ಟು ಸಂಸ್ಥೆಗಳನ್ನು ಹೊರತು ಪಡಿಸಿದರೆ ಮತ್ಯಾವುದೂ ಸರ್ಕಾರಿ ಸಂಸ್ಥೆಗಳು ಇಲ್ಲದಿರುವುದರಿಂದ ಈ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮವಹಿಸಿ : ಲಕ್ಷ್ಮೀನಾರಾಯಣ್ ಕೋಲಾರ: ಮಹಿಳೆಯರು ಸರ್ವಕಾಲದಿಂದಲೂ ಶೋಷಣೆಗೆ ಒಳಗಾಗುತ್ತಿದ್ದು ಇವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಉಪ ಕಾರ್ಯದರ್ಶಿಯಾದ ಲಕ್ಷ್ಮೀನಾರಾಯಣ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಭಾಗಿತ್ವದಲ್ಲಿ, ಗ್ಲೋಬಲ್ ಕನ್ಸರ್ನ್ ಇಂಡಿಯಾ ಮತ್ತು ಹ್ಯಾನ್ಸ್ ಸೈಡೆಲ್ ಫೌಂಡೇಶನ್ ಸಂಸ್ಥೆಯು ಹಮ್ಮಿಕೊಳ್ಳಲಾಗಿದ್ದ, ಮಹಿಳೆಯರು ಮತ್ತು ಮಕ್ಕಳ ವಿರುದ್ಧ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ವಿವಿಧ ಇಲಾಖೆಯಗಳ ಕಚೇರಿಗಳ ನೂತನ ಕಟ್ಟಡ ಹಾಗೂ ಭವನಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಕೃಷಿ ರಥಕ್ಕೆ ಚಾಲನೆ ನೀಡಿದರು. ಶ್ರೀನಿವಾಸಪುರ: ಜನರ ಅನುಕೂಲದ ದೃಷ್ಟಿಯಿಂದ ಎಲ್ಲ ಸರ್ಕಾರಿ ಕಚೇರಿಗಳನ್ನೂ ಒಂದೇ ಕಡೆ ನಿರ್ಮಿಸಲಾಗುತ್ತಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ಹೊರ ವಲಯದ ಅಮಾನಿ ಕೆರೆ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿವಿಧ ಇಲಾಖೆಯಗಳ ಕಚೇರಿಗಳ ನೂತನ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಾಗೃತಿ ವಹಿಸಿ- ಜೆ.ಮಂಜುನಾಥ್ ಕೋಲಾರ, ಜೂನ್ 18 ಜಿಲ್ಲೆಯ 105 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಪೈಕಿ 45 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ 60 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರನ್ನು ಪೂರೈಸಲಾಗುತ್ತಿದೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಾಗ್ರತಿ ವಹಿಸಿ ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವವಾದುದು- ಪ್ರತಾಪ್‍ರೆಡ್ಡಿ ಕೋಲಾರ, ಜೂನ್ 18 ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಕೆಲಸವು ಅತ್ಯಂತ ಮಹತ್ವದ್ದಾಗಿದ್ದು ದಾಖಲಾಗುವ ದೂರಗಳ ಬಗ್ಗೆ ಸೂಕ್ತವಾಗಿ ತನಿಖೆ ನಡೆಸಿ ಸಾಕ್ಷಾಧಾರಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ಅವರು ತಿಳಿಸಿದರು. ನಗರ ಹೊರವಲಯದಲ್ಲಿನ ಡಿ.ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಎಂಪೋರಿಂಗ್ ಪೊಲೀಸ್ ಪೋರ್ಸ್ ಕ್ರೈಂ ಸಿನ್ ಅಂಡ್ ಸ್ಟ್ರೆಸ್ ಮ್ಯಾನೇಜ್‍ಮೆಂಟ್ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರೈತರು ಕಂದಾಯ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು – ಜಿಲ್ಲಾಧಿಕಾರಿ ಸಿ.ಮಂಜುನಾಥ್ ಶ್ರೀನಿವಾಸಪುರ: ತಾಲ್ಲೂಕಿನ ರಾಯಲ್ಪಾಡ್ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ರೈತರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ರೈತರು ತಮ್ಮ ಸಮಸ್ಯೆಗಳ ನಿವಾರಣೆಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸು ದೃಷ್ಟಿಯಿಂದ ಕಂದಾಯ ಅದಾಲತ್ ನಡೆಸಲಾಗುತ್ತಿದೆ. ಗಡಿ ಗ್ರಾಮದಲ್ಲಿ ಏರ್ಪಡಿಸಿರುವ ಕಂದಾಯ ಅದಾಲತ್‌ಗೆ ತನ್ನದೇ ಆದ ಮಹ್ವವಿದೆ ಎಂದು ಹೇಳಿದರು. ದೇಶದ ಮುನ್ನಡೆಯಲ್ಲಿ ರೈತ ಸಮುದಾಯದ ಪಾತ್ರ ಹಿರಿದು. […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಎಲ್‌ಐಸಿ ಪ್ರತಿನಿಧಿಗಳು ಹೂಡಿಕೆದಾರರ ಹಿತ ಕಾಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು – ಹನುಮಂತ ನಾಯಕ್ ನಿವಾಸಪುರ: ಎಲ್‌ಐಸಿ ಪ್ರತಿನಿಧಿಗಳು ಹೂಡಿಕೆದಾರರ ಹಿತ ಕಾಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನರು ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡದಂತೆ ತಿಳಿಹೇಳಬೇಕು ಎಂದು ಭಾರತೀಯ ಜೀವ ವಿಮಾ ನಿಗಮದ ಜಿಲ್ಲಾ ವ್ಯವಸ್ಥಾಪಕ ಹನುಮಂತ ನಾಯಕ್ ಹೇಳಿದರು. ಪಟ್ಟಣದ ಎಲ್‌ಐಸಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಎಲ್‌ಐಸಿ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಮಾತನಾಡಿ, ಜನರು ಅಧಿಕ ಬಡ್ಡಿ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಳೆಯಿಂದ ಹಾನಿಯಾಗಿರುವ ರೈತರಿಗೆ ಕೂಡಲೆ ಪರಿಹಾರ ವಿತರಿಸಿ-ಗೀತಮ್ಮ ಆನಂದರೆಡ್ಡಿ ಕೋಲಾರ, ಜೂನ್ 17 ಮೇ ತಿಂಗಳಲ್ಲಿ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಯಿಂದ ಜಿಲ್ಲೆಯ ರೈತರ ಬೆಳೆ ನಷ್ಟ ಹೊಂದಿದ್ದು, ಕೂಡಲೇ ಎಲ್ಲಾ ರೈತರಿಗೂ ಪರಿಹಾರ ವಿತರಿಸುವ ವ್ಯವಸ್ಥೆ ಮಾಡುವಂತೆ ಕೃಷಿ ಮತ್ತು ತೋೀಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಮ್ಮ ಆನಂದರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು […]