ಭಾರೀ ಮಳೆಗೆ ಕರಾವಳಿ ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಅನಾಹುತ ಸೃಷ್ಟಿಯಾಗಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದೆ. ಈ ಬಾರಿ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಲಾ ಲಿನಾ ಮಾರುತ ರೂಪುಗೊಳ್ಳಲಿದೆ. ಇದು ಭಾರಿ ಮಳೆಯನ್ನೇ ತರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮುಂದಿನ ಎರಡು ತಿಂಗಳುಕಾಲ ಮಳೆ ಮುಂದುವರೆಯುವುದಾಗಿ ತಿಳಿಸಲಾಗಿದೆ ಅಗಸ್ಟ್ ಮೊದಲ ವಾರಾಂತ್ಯಕ್ಕೆ ಮಳೆ ಕಡಿಮೆಯಾಗಲಿದೆ. ಆದರೆ ಆಗಸ್ಟ್ ಅಂತ್ಯ ಹಾಗೂ ಸೆಪ್ಟೆಂಬರ್ ನಲ್ಲಿ ಲಾ ನಿನಾ ಮಾರುತ […]
ಕೋಲಾರ, ಆ-1, ಸ್ಥಗಿತವಾಗಿರುವ 2ನೇ ಹಂತದ ಅರಣ್ಯ ಭೂ ಒತ್ತುವರಿ ಕಾರ್ಯಾಚರಣೆ ಮುಂದುವರೆಸಿ ಒತ್ತುವರಿದಾರರ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ ಸರ್ಕಾರದ ಅರಣ್ಯ ಭೂಮಿಯನ್ನು ಉಳಿಸಬೇಕೆಂದು ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲು ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.1 ಎಕರೆ 2 ಎಕರೆ ಒತ್ತುವರಿ ಮಾಡಿಕೊಂಡಿರುವ ಸಣ್ಣ ರೈತರ ಮೇಲೆ ತಮ್ಮ ಪ್ರತಾಪವನ್ನು ತೋರಿಸಿ ಒತ್ತುವಿರ ತೆರವುಗೊಳಿಸಿದ ಅರಣ್ಯ ಅಧಿಕಾರಿಗಳು ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಲಾಡ್ಯ ರಾಜಕೀಯ ವ್ಯಕ್ತಿಗಳ ಭೂ […]
ಕುಂದಾಪುರ. ಜುಲೈ 31: ಸಾರ್ವಜನಿಕ ಶಿಕ್ಷಣ ಇಲಾಖೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಸಂಚಾಲಕರಾದ ಅತಿ. ವಂದನಿಯ ಪೌಲ್ ರೇಗೊ ಅವರು ಚೆಸ್ ಒಂದು ಮೆದುಳಿನ ಕೌಶಲ್ಯದ ಆಟ. ಆಟದಲ್ಲಿ ಸೋಲು ಎನ್ನುವುದು ಸೋಲಲ್ಲ […]
ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ.ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ […]
ಸಕಲೇಶಪುರ : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಇಂದು ಮತ್ತೆ ಭೂ ಕುಸಿತ ಉಂಟಾಗಿದೆ. ಎತ್ತಿನಹಳ್ಳ ಪೈಪ್ ಲೈನ್ ಹಾದು ಹೋಗುವ ಹೆಗ್ಗದೆ ಕಪ್ಪಳ್ಳಿ ಮಧ್ಯದಲ್ಲಿ ಭೂ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ವಾಹನ ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾಗಿತ್ತು. ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿ ಸ್ಥಳಕ್ಕೆ ಆಗಮಿಸಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣನು ತೆರವುಗೊಳಿಸಿದ ನಂತರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಶಿವಮೊಗ್ಗ, ಜುಲೈ 26, 2024: ಶಿಕಾರಿಪುರದ ಸೇಂಟ್ ಥೆರೇಸಾ ಆಫ್ ಚೈಲ್ಡ್ ಜೀಸಸ್ ಚರ್ಚ್‌ನ ಪ್ಯಾರಿಷ್ ಧರ್ಮಗುರು ರೆ.ಫಾ.ಅಂಥೋನಿ ಪೀಟರ್ ಅವರ ಅಂತ್ಯಕ್ರಿಯೆಯು ಇಂದು ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಿತು. ಆಂಟನಿ ಪೀಟರ್ ಅವರು ಮಂಗಳವಾರ ಜುಲೈ 23 ರಂದು ಮಧ್ಯಾಹ್ನ ತಮ್ಮ ಪ್ಯಾರಿಷ್ ಶಿಕಾರಿಪುರಕ್ಕೆ ಹೋಗುವ ಮಾರ್ಗದಲ್ಲಿ ಚಿನ್ನಿಕಟ್ಟೆಯಲ್ಲಿ ರಸ್ತೆ ಅಪಘಾತಕ್ಕೊಳಗಾದರು. ಅವರು ಶಿವಮೊಗ್ಗದಿಂದ ಪ್ರಯಾಣಿಸುತ್ತಿದ್ದರು. ಆವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 7 ಗಂಟೆಗೆ […]
ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಿದ ಶಿಕ್ಷಕಿ ಪದ್ಮಾವತಮ್ಮ ಅವರನ್ನು ಸನ್ಮಾನಿಸಲಾಯಿತು.
ಶಿವಮೊಗ್ಗ: ಮದುವೆಯಾಗುವಂತೆ ಪೀಡಿಸುತ್ತಿದ್ದಳೆಂದು ಪ್ರಿಯತಮೆ ಮೇಲೆ ಹಲ್ಲೆ ನಡೆಸಿ ಪ್ರಿಯಕರ ಹತ್ಯೆಗೂ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಯುವತಿ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಕೊಲೆ ಮಾಡಿದ ಆರೋಪಿ. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಿಯಕರ ಕೊಲೆ ಮಾಡಿದ್ದಾನೆಂದು ತಿಳಿದುಬಂದಿದೆ. ತೀರ್ಥಹಳ್ಳಿಯಲ್ಲಿ ಫೈನಾನ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಯುವತಿ ನರ್ಸಿಂಗ್ ವ್ಯಾಸಂಗ […]
ಬೆಂಗಳೂರು: ಮಹಿಳಾ ಪೇಯಿಂಗ್ ಗೆಸ್ಟ್ ಒಂದಕ್ಕೆ ತಡರಾತ್ರಿ ಯುವಕನೊಬ್ಬ 11.10ರ ಸುಮಾರಿಗೆ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾದ ಯುವತಿ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ […]