
ಕುಂದಾಪುರ : 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಕನ್ನಡಭಿಮಾನ ಡಾ| ರಾಜ್ ಸಂಘಟನೆಯ ಅಧ್ಯಕ್ಷ ರತ್ನಾಕರ್ ಪೂಜಾರಿ ಅವರು ದೀಪ ಪ್ರಜ್ವಲನೆ ಮಾಡಿ ಚಾಲನೆ ನೀಡುವ ಮೂಲಕ ಕುಂದಾಪುರದ ಹೊಸ ಬಸ್ ನಿಲ್ದಾಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಹಿರಿಯ ವಕೀಲರಾದ ಶಿರಿಯಾರ ಮುದ್ದಣ್ಣ ಶೆಟ್ಟಿಯವರು ಕನ್ನಡ ಧ್ವಜಾರೋಹಣ ಮಾಡಿದರು ಸಂಘದ ದುಂಡಿರಾಜ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಪತ್ರಕರ್ತ ಮಝರ್ ಕುಂದಾಪುರ ಕನ್ನಡ ರಾಜ್ಯೋತ್ಸವ ಮತ್ತು ರಾಜ್ ಸಂಘಟನೆಯ ಅವಿನಾಭಾವ ಸಂಬಂಧದ ಬಗ್ಗೆ ಹೇಳಿದರು. ಕಾರ್ಯದರ್ಶಿ ಸುನಿಲ್ ಖಾರ್ವಿ […]

ಸೇಂಟ್ ಜೋಸೆಫ್ಸ್ ಇಂಡಿಯನ್ ಪ್ರೌಢಶಾಲೆಯಲ್ಲಿ 2024-25ರ ಶೈಕ್ಷಣಿಕ ಸಾಲಿನ 120 ನೇಯ ವಾರ್ಷಿಕ ಕ್ರೀಡೋತ್ಸವವನ್ನು ಅಕ್ಟೋಬರ್ 30 ರಂದು ಆಚರಿಸಲಾಯಿತು. ಕ್ರೀಡಾಕೂಟವು ಚರ್ತುವರ್ಣಧಾರಿಗಳಾದ ಬಾಬಾ ,ಲೊಯೋಲಾ, ನೆಹರು, ಟಾಗೋರ್ ಎಂದು ನಾಮಾಂಕಿತಗೊಂಡ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡಗಳು ಹಾಗು ಎನ್.ಸಿ ಸಿ , ಭಾರತ್ ಸ್ಕೌಟ್ಸ್, ಮತ್ತುಹಿಂದೂಸ್ಥಾನ ಸ್ಕೌಟ್ಸ್, ನೇವಲ್ ಮತ್ತು ಏರ್ ವಿಂಗ್ ಇವರ ಆಕರ್ಷಕ ಪಥ ಸಂಚಲನದ ಮೂಲಕ ಈ ವರ್ಣರಂಜಿತ ಕಾರ್ಯಕ್ರಮವು ಅದ್ಧೂರಿಯಾಗಿ ಆರಂಭವಾಯಿತು . ಈ ವಿಶೇಷ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ […]

ಬೆಂಗಳೂರು; ಅ.೩೦ಃ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರಾದ ರೆ| ಫಾ| ಪ್ರಶಾಂತ್ ಮಾಡ್ತ ರು ಬೆಂಗಳೂರು ವಿ.ವಿಯಿಂದ ಸ್ವರ್ಣ ಪದಕಗಳೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾನಕೊತ್ತರ ಪದವಿ ಪಡೆದ ಬಳಿಕ ಮಂಗಳೂರಿನ ಸಂತ ಅಲೋಶೀಯಸ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕ ವೃತ್ತಿಯ ಬಳಿಕ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಮಾಡಿದ್ದಾರೆ, ಹಾಗೂ ಶ್ರೇಷ್ಟ ಶಿಕ್ಶಣ ತಜ್ಞರಾಗಿ ಹೊರಹೊಮ್ಮಿದರು. ‘ಯೇಸು ಸಭೆ’ಯನ್ನು ಸೇರಲು ಅವರು ಪೂರ್ವಭಾವಿಯಾಗಿ ಜಗದ ಹಲವು ಧರ್ಮಗಳನ್ನು, ತತ್ವಶಾಸ್ತ್ರಗಳನ್ನು ದಶಕಗಳ ಕಾಲ ಅದ್ಯಯನ ಮಾಡಿದ್ದರು. ರೆ|ಪ್ರಶಾಂತ್ ಅವರು ಸಾಹಿತ್ಯ […]

ದಾವಣಗೆರೆ: ನ್ಯಾಮತಿಯ ಎಸ್ಬಿಐ ಬ್ಯಾಂಕ್ನಲ್ಲಿದ್ದ 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಸುನೀಲ್ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ. ನಗರದ ನೆಹರು ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಕಿಟಕಿ ಸರಳುಗಳನ್ನು ಮುರಿದು ಲಾಕರ್ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದರು. ಎರಡು ದಿನಗಳ ಹಿಂದೆ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶನಿವಾರ ಹಾಗೂ ಭಾನುವಾರ ಎರಡು ದಿನ […]

ಶಂಕರನಾರಾಯಣ: ದಿನಾಂಕ 28/10/2024 ರಂದು ಮೈಸೂರಿನ ಶಾರದಾ ವಿಲಾಸ್ ಶಿಕ್ಷಣ ಸಂಸ್ಥೆಗಳ ಶತಮಾನೋತ್ಸವ ಭವನದಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಟಿ ಸಿ ಎಸ್ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ಮಾಸ್ಟರ್ ಸುಜನ್ ಶೆಟ್ಟಿ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಟಿ ಸಿ ಎಸ್ ಗ್ರಾಮೀಣ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆಅತ್ಯಂತ ಪೈಪೋಟಿಯಿಂದ ಕೂಡಿದ […]

ಉಡುಪಿ: ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಹೋಗುತ್ತಿದ್ದ ರೈಲು ಪ್ರಯಾಣಿಕರೊಬ್ಬರು ಮೂಲ್ಕಿ ಸಮೀಪ ರೈಲಿನಲ್ಲಿ ಅಸ್ಪಸ್ಥರಾಗಿದ್ದು, ಅವರನ್ನು ರೈಲ್ವೆ ಪೊಲೀಸರು ಉಡುಪಿಯಲ್ಲಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆದರೆ ಈ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತವಾಗಿದೆ. ಮೂಲ್ಕಿ ಪೊಲೀಸರು ಉಡುಪಿಗೆ ತೆರಳಿ ಮೃತ ವ್ಯಕ್ತಿಯ ಅಂಗಿಯ ಕಾಲರ್ ಪಟ್ಟಿಯ ಮೂಲಕ ಟೈಲರ್ ವಿಳಾಸ ಕಂಡುಕೊಂಡು ಮನೆಯವರನ್ನು ಪತ್ತೆ ಮಾಡಿ ಮಾಹಿತಿ ಪಡೆದಾಗ ಮೃತ ವ್ಯಕ್ತಿ ಚಿಕ್ಕಬಳ್ಳಾಪುರ ಜಿಲ್ಲೆಯ ಕುಮಾರಪೇಟೆಯ ನಿವಾಸಿ ಅಮೀರ್ ಖಾನ್ […]

112 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ತನ್ನ ವ್ಯಾಪ್ತಿಯನ್ನು ಕರ್ನಾಟಕ ರಾಜ್ಯಕ್ಕೆ ರಾಜ್ಯಾದ್ಯಂತ ವ್ಯಾಪಿಸಿದ್ದು, ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ತನ್ನ 17ನೇ ಹೊಸ ಶಾಖೆಯನ್ನು ಬ್ರಹ್ಮಾವರದಲ್ಲಿ ಪ್ರಾರಂಭಿಸಿದೆ. ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ಕರಾವಳಿ ಭಾಗದ ಕುಂದಾಪುರ, ಬ್ರಹ್ಮಾವರ, ಉಡುಪಿ ಶಾಖೆಗಳ ವತಿಯಿಂದ ಸಾರ್ವಜನಿಕರಿಗೆ ದೀಪಗಳ ಜೊತೆ ಸಮೂಹ ಭಾವಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯ ಪೋಸ್ಟರ್ ಅನಾವರಣ ಕಾರ್ಯಕ್ರಮವು ದಿನಾಂಕ 24/10/2024 ರಂದು ಎಂ.ಸಿ.ಸಿ. ಬ್ಯಾಂಕಿನ ಬ್ರಹ್ಮಾವರ ಶಾಖೆಯಲ್ಲಿ ಜರಗಿತು. ಬ್ರಹ್ಮಾವರ ಪರಿಸರದ […]

ಕೋಲಾರ : ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ 24,000ಗಳ ಸ್ಕಾಲರ್ಶೀಪ್ ಸೌಲಭ್ಯವಿರುವ ಕುರಿತಾದ ಸುಳ್ಳು ಸುದ್ದಿಯ ಅಧಿಕೃತ ಸಹಿಯಿಲ್ಲದ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ಸಾರ್ವಜನಿಕರು ನಂಬದಿರಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮೇಲಿನ ಸುದ್ದಿಯು ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿದ್ದು, ಸಾರ್ವಜನಿಕರು ವಿವಿಧ ಕಛೇರಿಗಳಿಗೆ ಅರ್ಜಿಗಾಗಿ ಅಲೆದಾಡುತ್ತಿರುವುದು ಕಂಡುಬಂದಿರುತ್ತದೆ. ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆಯಿಲ್ಲದ ಮಕ್ಕಳಿಗೆ ಅನ್ವಯವಾಗುವುದಿಲ್ಲ. ಈ ಯೋಜನೆಯ ಬಗ್ಗೆ […]

ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತ ಸ್ಥಳಕ್ಕೆ ಸಿಎಂ ಭೇಟಿ ಮಾಡಿದ್ದಾರೆ, ಅಧಿಕಾರಿಗಳ ಜೊತೆ ಮಾತುಕತೆ ನೆಡೆಸಿ, ದುರಂತದಲ್ಲಿ ಮಡಿದವದ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ ಗಾಯಗೊಂಡವರಿಗೆ ವೈದ್ಯಕೀಯ ವೆಚ್ಚ ಭರಿಸಲಾಗುವುದು ತಿಳಿಸಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ನಿನ್ನೆ ವೈಯಾನಡ್ಗೆ ಹೋಗಿದ್ದೆ. ಹಾಗಾಗಿ ಇಲ್ಲಿಗೆ ಬರುವುದು ತಡವಾಗಿದೆ. ಕಟ್ಟಡ ಕುಸಿತ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯಳಾಗಿವೆ ಅವರ ಆಸ್ಪತ್ರೆ ಖರ್ಚು ಸರ್ಕಾರ ಭರಿಸುತ್ತದೆ. ಮೃತರ […]