
ಬೆಂಗಳೂರು: ಕಾಂಗ್ರಸ್ ಸರ್ಕಾರದ ಮಕತ್ವಾಕಾಂಕ್ಷೆಯ ಪಂಚಖಾತ್ರಿ ಯೋಜನಗಳ ಪೃಕಿ ಕೂನೆಯದಾದ ಯುವನಿಧಿಗೆ ಇಂದಿನಿಂದ ಚಾಲನೆನೀಡಲಾಗಿದೆ. ಸ್ವಾಮಿ ವಿವೇಕಾನಂದರ 161 ನೇ ಜಯಂತಿ ಪ್ರಯುಕ್ತ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ ನಿರುದ್ಯೋಗಿಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಈ ಯೋಜನೆ ಜಾರಿಗೊಳಿಸಲಾಗಿದೆ. ದೇಶದಲ್ಲಿ ದಿನಬಳಕೆ, ಪೆಟ್ರೋಲ್, ಡಿಸೇಲ್ ದರಏರಿಕೆಯಾಗಿದೆ. ಜನಸಮಾನ್ಯರಿಗೆ […]

ಕುಂದಾಪುರ (ಜನವರಿ 12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅವನಿ ಎ ಶೆಟ್ಟಿಗಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2023-24 ವೈಯಕ್ತಿಕ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅಶೋಕ್ ಜಿ ಶೆಟ್ಟಿಗಾರ್ ಮತ್ತು […]

ಕೋಲಾರ,ಜ.10: ಇಂದಿನ ಅಧುನಿಕತೆಯ ಸಂಶೋಧನೆಗಳಲ್ಲಿ ಎಷ್ಟೇ ಅವಿಷ್ಕಾರಗಳು ಕಂಡು ಬಂದರೂ ಸಹ ಟೆಕ್ನಲಾಜಿಗಳು ಬದಲಾಗದು. ಇಂದು ರೊಬೊಟಿಕ್ಸ್ ತಂತ್ರಜ್ಞಾನ ಮತ್ತು ಕೃತಕ ಬುದ್ದಿವಂತಿಕೆ ಪರಿಚಯದೊಂದಿಗೆ ಶಸ್ತ್ರ ಚಿಕಿತ್ಸೆ ವಿಧಾನವು ಬದಲಾಗುತ್ತಿದೆ ಇದರಿಂದ ರೋಗಿಗಳಿಗೆ ಮತ್ತು ಶಸ್ತ್ರ ಚಿಕಿತ್ಸಕರಿಗೆ ಹೆಚ್ಚಿನ ಅನುವುಂಟಾಗುತ್ತಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಸ್ಪೈನ್ ಸರ್ಜರಿ ಮತ್ತು ಕನ್ಸಲ್ಟೆಂಟ್-ರೋಬೋಟಿಕ್ ಸ್ಪೈನ್ ಸರ್ಜರಿ ವಿಭಾಗದ ಅಧ್ಯಕ್ಷರು ಹಾಗೂ ಎಚ್.ಓ.ಡಿ. ಡಾ. ಎಸ್. ವಿದ್ಯಾಧರ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಮಣಿಪಾಲ್ ಆಸ್ಪತ್ರೆಯ ವಿವಿಧ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥರು […]

ಉಡುಪಿ ಜಿಲ್ಲಾ ಬರಹಗಾರರ ಕೋಶ’ ಬಿಡುಗಡೆಕಾರ್ಯಕ್ರಮದಲ್ಲಿಉಪನ್ಯಾಸ ಕೋಲಾರ: ಜಗತ್ತಿಗೆ ಅಪಾರ ಪ್ರಮಾಣದಲ್ಲಿ ಚಿನ್ನ ಕೊಟ್ಟ; ನಾಡಿಗೆ ಹಾಲು, ತರಕಾರಿ, ಟೊಮಾಟೋ, ಮಾವು ಕೊಡುತ್ತಿರುವ ಅವಿಭಜಿತ ಕೋಲಾರ ಜಿಲ್ಲೆಯ ಶ್ರಮಜೀವಿಗಳ ಹೋರಾಟಗಳೊಂದಿಗೆ ಜಿಲ್ಲಾ ಪತ್ರಿಕೆಗಳು ಹಾಸುಹೊಕ್ಕಾಗಿವೆ. ಪತ್ರಿಕೆಗಳ ಜೊತೆ ಚಳವಳಿಗಳು ಬೆಳೆದಿವೆ, ಆಂದೋಲನಗಳ ಜೊತೆ ಪತ್ರಿಕೆಗಳು ಬೆಳೆದಿವೆ ಎನ್ನುವಷ್ಟರ ಮಟ್ಟಿಗೆ ಅವು ಒಂದಕ್ಕೊಂದು ಬೆಸೆದುಕೊಂಡಿವೆಎಂದು ಹಿರಿಯ ಪತ್ರಕರ್ತ, ಲೇಖಕ ವಿಶ್ವಕುಂದಾಪುರಅಭಿಪ್ರಾಯ ಪಟ್ಟಿದ್ದಾರೆ. ಭಾಷಾ ಅಸ್ಮಿತೆಯ ಹೋರಾಟಕ್ಕೂ ಭಾಷಾ ಸೌಹಾರ್ದತೆಗೂ ಬಯಲುಸೀಮೆಯ ಈ ನೆಲ ಉದಾಹರಣೆಯಾಗಿದೆಎಂದುಉಡುಪಿಯಎಂಜಿಎಂಕಾಲೇಜಿನಅಮೃತ ಮಹೋತ್ಸವದ ಸುಸಂದರ್ಭದಲ್ಲಿಕಾಲೇಜಿನರವೀಂದ್ರ ಭವನದಲ್ಲಿಜನವರಿ […]

ಕುಂದಾಪುರ: ಖ್ಯಾತ ವಿದ್ವಾಂಸ, ರಂಗ ನಿರ್ದೇಶಕ, ಸಾಹಿತಿ, ವಾಚಿಕಾಭಿನಯಪಟು ಕೊರ್ಗಿ ಶಂಕರನಾರಾಯಣ ಉಪಾಧ್ಯಾಯರಿಗೆ “ಕುಂದಪ್ರಭ” ಸಂಸ್ಥೆಯ ಆಶ್ರಯದಲ್ಲಿ ನೀಡಲಾಗುವ ಕೋ. ಮ. ಕಾರಂತ ಪ್ರಶಸ್ತಿಯನ್ನು ಆದಿತ್ಯವಾರ ಜ.7 ರಂದು ಪ್ರದಾನ ಮಾಡಲಾಯಿತು.ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆದ ಸಮಾರಂಭವನ್ನು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವಿಶ್ರಾಂತ ಆಡಳಿತ ಮೊಕ್ತೇಸರರೂ, ಪ. ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲರೂ ಆದ ಕೆ. ಸೂರ್ಯನಾರಾಯಣ ಉಪಾಧ್ಯಾಯರು ಉದ್ಘಾಟಿಸಿದರು.ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. […]

ಶ್ರೀನಿವಾಸಪುರ : ಫವತಿ ಖಾತೆ ಬಾಕಿ ಇರುವ ಪ್ರಕರಣಗಳನ್ನು ಅರ್ಜಿದಾರರು ಅರ್ಜಿ ಸಲ್ಲಿಸಿ , ಫವತಿಯನ್ನ ಯಾರ ಹೆಸರಿಗೆ ಬದಲಾವಣೆ ಮಾಡಿಕೊಡಬೇಕು ಎನ್ನುವವರಿಗೆ ಬೇಕಾದ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವಂತೆ ಉಪತಹಶೀಲ್ದಾರ್ ಎನ್. ವಿನೋದ್ ತಿಳಿಸಿದರು.ತಾಲೂಕಿನ ರೋಣೂರು ಹೋಬಳಿಗೆ ಸಂಬಂದಿಸಿದಂತೆ ನಾಡಕಛೇರಿಯಲ್ಲಿ ತಾಲೂಕು ಕಂದಾಯ ಇಲಾಖೆವತಿಯಿಂದ ಫವತಿವಾರಸ್ಸು ಖಾತೆ ಆಂದೋಲನಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.ಈ ಆಂದೋಲನವು ಸರ್ಕಾರದ ಮಹತ್ವದ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. 15 ದಿನಗಳ ವರೆಗೆ ಫವತಿಖಾತೆಯನ್ನು ಬದಲಾಯಿಸಿ ಕೊಡಲಾಗುವುದು. ಈ […]

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ಮೂರು ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸಹ ಮಳೆಯ ಎಚ್ಚರಿಕೆ ನೀಡಿದ್ದು, ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶವು ಹವಾಮಾನ ಪರಿಸ್ಥಿತಿಗಳಿಗೆ ಕಾರಣವಾಗಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು […]
ವರದಿ: ವಂದನೀಯ ಅನಿಲ್ ಐವನ್ ಫೆನಾರ್ಂಡಿಸ್ ಚಿತ್ರಗಳು: ಸ್ಟಾನ್ಲಿ ಬಂಟ್ವಾಳ್ ಹಾಗೂ ಜೋನ್‍ಡಿಸೋಜಾ ಮಂಗಳೂರು, ಜನವರಿ 07: ಮಂಗಳೂರುಧರ್ಮಕ್ಷೇತ್ರದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಜನವರಿ 7ರ ಭಾನುವಾರದಂದು ನಗರದ ಮಿಲಾಗ್ರಿಸ್ ಚರ್ಚ್‍ನಿಂದ ರೊಸಾರಿಯೊ ಕೆಥೆಡ್ರಲ್ ಚರ್ಚ್‍ವರೆಗೆ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.ಕ್ರಿಸ್ತ ಜಯಂತಿ-2025ರ ಜುಬಿಲಿ ಪ್ರಯುಕ್ತ ಜಗದ್ಗುರು ಪೆÇೀಪ್ ಫ್ರಾನ್ಸಿಸ್ ಅವರು ‘2024′ ಅನ್ನು ‘ಪ್ರಾರ್ಥನೆಯ ವರ್ಷ’ ಎಂದು ಘೋಷಿಸಿರುವುದರಿಂದ “ಪ್ರಾರ್ಥನೆ ಮೂಲಕ ದೇವರೊಡನೆ ಮತ್ತು ಪರರೊಡನೆ ಸಂಬಂಧ ಬೆಳೆಸೋಣ” ಎಂಬ ಸಂದೇಶವನ್ನು […]

ಕುಂದಾಪುರ: ಮಾದಕ ವ್ಯಸನದ ಜಾಗೃತಿ ಕಾರ್ಯಕ್ರಮದಲ್ಲಿ ಯುವ ಸಮುದಾಯ ತೊಡಗಿಸಿಕೊಳ್ಳಲು ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿದೆ. ಮಾದಕ ವಸ್ತುವಂತ ಸಾಮಾಜಿಕ ಪಿಡುಗನ್ನು ತಡೆಗಟ್ಟಲು ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕೆಂದು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರು ಹಾಗೂ ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಶೃತಿಶ್ರೀ ಎಸ್. ಹೇಳಿದರು. ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪವಿಭಾಗದ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕ ಜಾಗೃತಿಗಾಗಿ ‘ಸೇ ನೋ ಟು ಡ್ರಗ್ಸ್’ ಧ್ಯೇಯ ವಾಕ್ಯದಡಿ ರವಿವಾರ ಬೆಳಿಗ್ಗೆ […]