ಮಳೆಯ ಅವಂತಾರದಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರ ಪುನರಾರಂಭವಾಗಿದೆ. ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ. ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ […]

Read More

ಕಾರವಾರ : ಅಂಕೋಲ ಸಮೀಪ ಶಿರೂರಿನಲ್ಲಿ ಒಂದು ವಾರದ ಹಿಂದೆ ಸಂಭವಿಸಿದ ಭೀಕರ ಗುಡ್ಡ ಕುಸಿತ ಸಂದರ್ಭದಲ್ಲಿನಾಪತ್ತೆಯಾಗಿದ್ದ ಓರ್ವ ಮಹಿಳೆಯ ಶವ ಸಮೀಪದ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದು ಇದರೊಂದಿಗೆ ಇಷ್ಟರ ತನಕ 8 ಶವಸಿಕ್ಕಿದಂತಾಗಿದೆ. ಇಂದು ಮುಂಜಾನೆ ವೇಳೆ ನದಿ ಸಂಗಮದ ಮಂಜುಗುಣಿ ಎಂಬಲ್ಲಿ ಮಹಿಳೆಯ ಶವ ಸಿಕ್ಕಿದೆ. ಗುಡ್ಡ ಕುಸಿದಾಗ ನದಿಯ ಇನ್ನೊಂದುದಡದಲ್ಲಿರುವ ಉಳುವರೆ ಗ್ರಾಮದಲ್ಲೂ ಸಾಕಷ್ಟು ಅನಾಹುತ ಸಂಭವಿಸಿತ್ತು. ಈ ಸಂದರ್ಭ ಸಣ್ಣು ಎಂಬ ಮಹಿಳೆಯೊಬ್ಬರು.ನಾಪತ್ತೆಯಾಗಿರುವ ಕುರಿತು ಅವರ ಮನೆಯವರು ದೂರು ನೀಡಿದ್ದರು. ಆದರೆ […]

Read More

ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ  ಮಾಡಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಳಗಾವಿ, ಕಲಬುರಗಿ ಜಿಲ್ಲೆಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, […]

Read More

ಬೆಂಗಳೂರು: ಭೂಗಳ್ಳತನ, ಭೂಮಿಗೆ ಸಂಬಂಧಿಸಿದ ವಂಚನೆ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಜಮೀನು ಮಾಲೀಕರ ಭಾವಚಿತ್ರದೊಂದಿಗೆ ಆರ್ಟಿಸಿಗೆ (ಪಹಣಿ) ಆಧಾರ್ ಕಾರ್ಡ್ ಜೋಡಣೆ ಕಡ್ಡಾಯಗೊಳಿಸಿದೆ. ಆರ್ಟಿಸಿಗೆ ಆಧಾರ್ ಕಾರ್ಡ್ ಸಂಖ್ಯೆ ಲಿಂಕ್ ಮಾಡಲು ಜುಲೈ ಅಂತ್ಯದವರೆಗೆ ಗಡುವು ನೀಡಿದೆ. ಕಂದಾಯ ಇಲಾಖೆ ‘ನನ್ನ ಆಧಾರ್ ಕಾರ್ಡ್‌ನೊಂದಿಗೆ ನನ್ನ ಆಸ್ತಿ ಸುಭದ್ರ’ ಯೋಜನೆ ಪ್ರಾರಂಭಿಸಿದೆ. ಪ್ರಯೋಜನಗಳೇನು?: ರೈತರು ಆಧಾರ್ ಕಾರ್ಡ್ ಲಿಂಕ್ ಮಾಡುವುದರಿಂದ ಹಲವು ಲಾಭಗಳಿವೆ. ಸರ್ಕಾರದ ಸವಲತ್ತುಗಳು ಸಂಪೂರ್ಣವಾಗಿ ದೊರೆಯುತ್ತವೆ. ರೈತರ ಮಾಹಿತಿ ದಾಖಲಿಸುವ ಜೊತೆಗೆ ಭೂ […]

Read More

ಜು. 22: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೇತೃತ್ವದಲ್ಲಿ ಜು. 21 ರಂದು ನಂತೂರಿನ ಸಂದೇಶ ಪ್ರತಿಷ್ಠಾನದಲ್ಲಿ ಕೊಂಕಣಿ ಲೇಖಕರ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದ ಕಾರ್ಯಕ್ರಮದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಶ್ರೀಮತಿ ಐರಿನ್ ರೆಬೆಲ್ಲೋ,ಸಂದೇಶ ಪ್ರತಿಷ್ಠಾನದ ನಿರ್ದೇಶಕರಾದ ವಂದನೀಯ ಫಾ. ಸುದೀಪ್ ಪೌಲ್,ಅಕಾಡೆಮಿಯ ಸದಸ್ಯರುಗಳಾದ ನವೀನ್ ಲೋಬೊ, ಸಪ್ನಾ ಕ್ರಾಸ್ತಾ, ರೋನಾಲ್ಡ್ ಕ್ರಾಸ್ತಾ, ದಯಾನಂದ್ ಮಡ್ಕೆಕರ್ ಹಾಗೂ ಸಮರ್ಥ್ ಭಟ್ ಉಪಸ್ಥಿತರಿದ್ದರು. ಕೊಂಕಣಿಯ ಸರಿಸುಮಾರು 75ಕ್ಕೂ ಮಿಗಿಲಾಗಿ ಲೇಖಕರು ಹಾಗೂ […]

Read More

ಹಾವೇರಿ: ಸವಣೂರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆಯ ಮೇಲ್ಭಾವಣಿ ಕುಸಿದು ಸ್ಥಳದಲ್ಲೇ ಇಬ್ಬರು ಮಕ್ಕಳು ಹಾಗೂ ಮಹಿಳೆ ಮೃತಪಟ್ಟಿದ್ದು, ಮೂವರು. ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.ಗ್ರಾಮದ ಹರಕುಣಿ ಕುಟುಂಬಸ್ಥರ ಮನೆ ಮೇಲ್ಭಾವಣೆ ಕುಸಿದಿದೆ. ನಿದ್ರಿಸುತ್ತಿದ್ದ 18 ತಿಂಗಳ ಅವಳಿ ಮಕ್ಕಳಾದ ಅಮೂಲ್ಯ ಹಾಗೂ ಅನುಶ್ರೀ ಮತ್ತು ಮಕ್ಕಳ ಅತ್ತೆ ಚನ್ನಮ್ಮ (30)ಸ್ಥಳದಲ್ಲೇ ಮೃತಹಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆ ಮಾಲೀಕ ಮುತ್ತು ದೊಡ್ಡಬಸಪ್ಪ ಹರಕುಣಿ (35), ಪತ್ನಿ ಸುನೀತಾ ಮುತ್ತು ಹರಕುಣಿ (25) ತಾಯಿ […]

Read More

ಅಂಕೋಲಾ:ಜುಲೈ 16 ರಂದು ನಡೆದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು ಕಣ್ಮರೆಯಾಗಿದ್ದರು. ಐವರ ಪೈಕಿ ಮೂವರ ಮೃತದೇಹ ಪತ್ತೆಯಾಗಿತ್ತು. ಲಕ್ಷ್ಮಣ ನಾಯ್ಕ, ಪತ್ನಿ ಶಾಂತಿ ನಾಯ್ಕ, ಮಗ ರೋಶನ್ ನಾಯ್ಕ ಮೃತದೇಹ ಪತ್ತೆಯಾಗಿತ್ತು. ಇದೀಗ ಬಾಲಕಿ ಅವಂತಿಕಾ ಮೃತದೇಹ (6) ಕೂಡ ಪತ್ತೆಯಾಗಿದ್ದು, ಗ್ಯಾಸ್ ಟ್ಯಾಂಕರ್ ಚಾಲಕ ಮುರುಗನ್ ಮೃತದೇಹ ನದಿ ನೀರಿನಲ್ಲಿ ಪತ್ತೆಯಾಗಿದೆ. ಗಂಗಾವಳಿ ನದಿಯಲ್ಲಿ ಇಬ್ಬರು ಲಾರಿ ಚಾಲಕರ ಮೃತದೇಹ ಸಿಕ್ಕಿದೆ. ಅದರಲ್ಲೊಬ್ಬರನ್ನು ಗ್ಯಾಸ್ ಟ್ಯಾಂಕರ್ ಚಾಲಕ ಮುರುಗನ್ ಮೃತದೇಹ ಎಂದು ಗುರುತಿಸಲಾಗಿದೆ. […]

Read More
1 6 7 8 9 10 180