ದಾವಣಗೆರೆ: ನ್ಯಾಮತಿಯ ಎಸ್‍ಬಿಐ ಬ್ಯಾಂಕ್‍ನಲ್ಲಿದ್ದ 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಸುನೀಲ್ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ. ನಗರದ ನೆಹರು ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಕಿಟಕಿ ಸರಳುಗಳನ್ನು ಮುರಿದು ಲಾಕರ್‌ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದರು. ಎರಡು ದಿನಗಳ ಹಿಂದೆ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶನಿವಾರ ಹಾಗೂ ಭಾನುವಾರ ಎರಡು ದಿನ […]
ಶಂಕರನಾರಾಯಣ: ದಿನಾಂಕ 28/10/2024 ರಂದು ಮೈಸೂರಿನ ಶಾರದಾ ವಿಲಾಸ್ ಶಿಕ್ಷಣ ಸಂಸ್ಥೆಗಳ ಶತಮಾನೋತ್ಸವ ಭವನದಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಟಿ ಸಿ ಎಸ್ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ಮಾಸ್ಟರ್ ಸುಜನ್ ಶೆಟ್ಟಿ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಟಿ ಸಿ ಎಸ್ ಗ್ರಾಮೀಣ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆಅತ್ಯಂತ ಪೈಪೋಟಿಯಿಂದ ಕೂಡಿದ […]
ಉಡುಪಿ: ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಹೋಗುತ್ತಿದ್ದ ರೈಲು ಪ್ರಯಾಣಿಕರೊಬ್ಬರು ಮೂಲ್ಕಿ ಸಮೀಪ ರೈಲಿನಲ್ಲಿ ಅಸ್ಪಸ್ಥರಾಗಿದ್ದು, ಅವರನ್ನು ರೈಲ್ವೆ ಪೊಲೀಸರು ಉಡುಪಿಯಲ್ಲಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆದರೆ ಈ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತವಾಗಿದೆ. ಮೂಲ್ಕಿ ಪೊಲೀಸರು ಉಡುಪಿಗೆ ತೆರಳಿ ಮೃತ ವ್ಯಕ್ತಿಯ ಅಂಗಿಯ ಕಾಲರ್ ಪಟ್ಟಿಯ ಮೂಲಕ ಟೈಲರ್ ವಿಳಾಸ ಕಂಡುಕೊಂಡು ಮನೆಯವರನ್ನು ಪತ್ತೆ ಮಾಡಿ ಮಾಹಿತಿ ಪಡೆದಾಗ ಮೃತ ವ್ಯಕ್ತಿ ಚಿಕ್ಕಬಳ್ಳಾಪುರ ಜಿಲ್ಲೆಯ ಕುಮಾರಪೇಟೆಯ ನಿವಾಸಿ ಅಮೀರ್ ಖಾನ್ […]
112 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ತನ್ನ ವ್ಯಾಪ್ತಿಯನ್ನು ಕರ್ನಾಟಕ ರಾಜ್ಯಕ್ಕೆ ರಾಜ್ಯಾದ್ಯಂತ ವ್ಯಾಪಿಸಿದ್ದು, ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ತನ್ನ 17ನೇ ಹೊಸ ಶಾಖೆಯನ್ನು ಬ್ರಹ್ಮಾವರದಲ್ಲಿ ಪ್ರಾರಂಭಿಸಿದೆ. ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ಕರಾವಳಿ ಭಾಗದ ಕುಂದಾಪುರ, ಬ್ರಹ್ಮಾವರ, ಉಡುಪಿ ಶಾಖೆಗಳ ವತಿಯಿಂದ ಸಾರ್ವಜನಿಕರಿಗೆ ದೀಪಗಳ ಜೊತೆ ಸಮೂಹ ಭಾವಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯ ಪೋಸ್ಟರ್ ಅನಾವರಣ ಕಾರ್ಯಕ್ರಮವು ದಿನಾಂಕ 24/10/2024 ರಂದು ಎಂ.ಸಿ.ಸಿ. ಬ್ಯಾಂಕಿನ ಬ್ರಹ್ಮಾವರ ಶಾಖೆಯಲ್ಲಿ ಜರಗಿತು. ಬ್ರಹ್ಮಾವರ ಪರಿಸರದ […]
ಕೋಲಾರ : ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ 24,000ಗಳ ಸ್ಕಾಲರ್‌ಶೀಪ್ ಸೌಲಭ್ಯವಿರುವ ಕುರಿತಾದ ಸುಳ್ಳು ಸುದ್ದಿಯ ಅಧಿಕೃತ ಸಹಿಯಿಲ್ಲದ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ಸಾರ್ವಜನಿಕರು ನಂಬದಿರಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮೇಲಿನ ಸುದ್ದಿಯು ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿದ್ದು, ಸಾರ್ವಜನಿಕರು ವಿವಿಧ ಕಛೇರಿಗಳಿಗೆ ಅರ್ಜಿಗಾಗಿ ಅಲೆದಾಡುತ್ತಿರುವುದು ಕಂಡುಬಂದಿರುತ್ತದೆ. ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆಯಿಲ್ಲದ ಮಕ್ಕಳಿಗೆ ಅನ್ವಯವಾಗುವುದಿಲ್ಲ. ಈ ಯೋಜನೆಯ ಬಗ್ಗೆ […]
ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತ ಸ್ಥಳಕ್ಕೆ ಸಿಎಂ ಭೇಟಿ ಮಾಡಿದ್ದಾರೆ, ಅಧಿಕಾರಿಗಳ ಜೊತೆ ಮಾತುಕತೆ ನೆಡೆಸಿ, ದುರಂತದಲ್ಲಿ ಮಡಿದವದ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ ಗಾಯಗೊಂಡವರಿಗೆ ವೈದ್ಯಕೀಯ ವೆಚ್ಚ ಭರಿಸಲಾಗುವುದು ತಿಳಿಸಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ನಿನ್ನೆ ವೈಯಾನಡ್‌ಗೆ ಹೋಗಿದ್ದೆ. ಹಾಗಾಗಿ ಇಲ್ಲಿಗೆ ಬರುವುದು ತಡವಾಗಿದೆ. ಕಟ್ಟಡ ಕುಸಿತ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯಳಾಗಿವೆ ಅವರ ಆಸ್ಪತ್ರೆ ಖರ್ಚು ಸರ್ಕಾರ ಭರಿಸುತ್ತದೆ. ಮೃತರ […]
ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ ಮ್ರತರ ಸಂಖೆ 8 ಕ್ಕೆ ಎರಿದೆ. ಕಟ್ಟಡ ಅನಧಿಕ್ರತ ಹಾಗೂ ಕಳಪೆ ಮಟ್ಟದ ಕಾಮಗಾರಿಯೆಂದು ಪರಿಗಣಿಸಿ, ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಇಇ ಕೆ.ವಿನಯ್ ಅವರನ್ನು ಅಮಾನತು ಮಾಡಲಾಗಿದೆ.ಹೊರಮಾವು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ವಿನಯ್ ಅವರನ್ನು ಅಮಾನತು ಮಾಡಿ ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಕಟ್ಟಡದ ಅವಷೇಶಗಳಡಿ ಇನ್ನೂ ಇಬ್ಬರು ಇದ್ದಾರೆಂದು ತಿಳಿದು ಬಂದು ಶೋಧ ಕಾರ್ಯ ಮುಂದುವರಿದಿದೆ. ನಿಗದಿ ಅವಧಿಯಲ್ಲಿ ನೋಟಿಸ್ ನೀಡಿದ್ದರೂ, […]
ದಾವಣಗೆರೆ: ಗೃಹಲಕ್ಷ್ಮೀ ಯೋಜನೆ ಹಣ ತರಲು ಬ್ಯಾಂಕ್ಗೆ ಹೋಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಸಿರುಗಟ್ಟಿಸಿ ಪತ್ನಿ ಸತ್ಯಮ್ಮಳನ್ನು ಕೊಲೆಮಾಡಿ ಪತಿ ಅಣ್ಣಪ್ಪ ಪರಾರಿಯಾಗಿದ್ದಾನೆ. ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಸತ್ಯಮ್ಮ ತವರು ಮನೆ ಸೇರಿದ್ದರು. ಆದ್ರೆ, […]
ಬೆಂಗಳೂರು, ಅ.23: ಕೆಪಿಸಿಸಿ ಕಚೇರಿಯಲ್ಲಿ ಇಂದು ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಕ್ಕದಲ್ಲಿ ಕಾಂಗ್ರೆಸ್ ಸೇರ್ಪಡೆ ಗೊಂಡರು. ನಂತರ ಮಾತನಾಡಿದ ಡಿಕೆ ಶಿವಕುಮಾರ್ ಅವರು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದೆ ಉದಾಹರಣೆ ಯೋಗೇಶ್ ಮತ್ತೆ ಮರಳಿ ಮಾತೃ ಪಕ್ಷಕ್ಕೆ ಬಂದಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ವರಿಷ್ಠರ ಗಮನಕ್ಕೆ ತಂದು ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ,ಜಮೀರ್ ಅಹಮದ್,ಚೆಲುವರಾಯಸ್ವಾಮಿ,ಡಿ.ಕೆ.ಸುರೇಶ್ ಸೇರಿದಂತೆ ಇತರ ಅನೇಕ ಮುಖಂಡರಿದ್ದರು.