
ಬಳ್ಕೂರಿನ ರಿಕ್ಷಾ ಚಾಲಕನ ಮಗಳು ಅಕ್ಷತಾ, ಪಿ. ಯು.ಸಿ. ವಿದ್ಯಾರ್ಥಿನಿ ಕಿಡ್ನಿ ಸಮಸ್ಯೆ ಯಿಂದ ಬಳಲುತ್ತಿದ್ದು. ಔಷಧ ಮತ್ತು ಡೈಲೆಸಿಸ್ ಬಗ್ಗೆ ತುಂಬಾ ಖರ್ಚು ಆಗುತ್ತಿದೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಇತರ ಕೆಲವು ಸದಸ್ಯರು ಕೊಡಮಾಡಿದ ರೂಪಾಯಿ 61,000/- ವನ್ನು ರೆಡ್ ಕ್ರಾಸ್ ಸಭಾಪತಿ ಎಸ್ ಜಯಕರ ಶೆಟ್ಟಿ ಇವರು ರೋಗಿಯ ತಂದೆಗೆ ಹಸ್ಥಾತರಿಸಿದರು. ಅಲ್ಲದೇ ದೇಣಿಗೆ ನೀಡಿದ ಎಲ್ಲಾ ಸದಸ್ಯರನ್ನು ಅಭಿನಂದಿಸಿದರು.

ಕುಂದಾಪುರ: ಕುಂದಾಪುರ ಸಂಚಾರ ಠಾಣಾ ವ್ಯಾಪ್ತಿಯ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಫಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನೆಡೆದಿದೆ. ಬೈಕ್ ಸವಾರ ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ ಪೂಜಾರಿ (48) ಗುರುತಿಸಲಾಗಿದೆ. ಮೃತರು ಖಾಸಗಿ ಬಸ್ಸು ಚಾಲಕರಾಗಿದ್ದು, ಕೊನೆಯ ಟ್ರಿಪ್ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಅವಘಡ ನೆಡೆದಿದೆ. ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸ್ ಭೇಟಿ ನೀಡಿದ್ದಾರೆ.

ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಪ್ರಸ್ತುತ ವರ್ಷದ ಸಾಂಸ್ಕೃತಿಕ ತಂಡಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಪ್ರತಿವರ್ಷವೂ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿಧ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಲು ಅವಕಾಶವನ್ನು ಒದಗಿಸಲಾಗುತ್ತಿದ್ದು ಈ ವರ್ಷ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಎಲ್ಲ ವಿಧ್ಯಾರ್ಥಿಗಳನ್ನು ಹತ್ತು ತಂಡಗಳಾಗಿ ವಿಂಗಡಿಸಿ ಮುಂದಿನ ಎಲ್ಲ ಸ್ಪರ್ದೆಗಳನ್ನು ತಂಡದ ಮಧ್ಯೆ ನಡೆಸಲಾಗುತ್ತದೆ. ಈ ಮೂಲಕ ವಿಧ್ಯಾರ್ಥಿಗಳ ಕ್ರಿಯಾಶೀಲತೆ ಹಾಗೂ ಪ್ರತಿಭೆ ಹೊರಹಾಕಲು ಉತ್ತಮ ವೇದಿಕೆ ಸಿಕ್ಕಂತಾಗುತ್ತದೆ. ಮೊದಲ ಸ್ಪರ್ದೆಯಾಗಿ ಫ಼್ಯಾಶನ್ ಶೋ […]

ಕುಂದಾಪುರ: ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಬುಧವಾರ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಬಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕಚೇರಿಯಲ್ಲಿ ಲಿಪಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜು ಪೂಜಾರಿ ಎಂಬವರು ನಾಗರಿಕರೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಈ ದಾಳಿ ನಡೆದಿದೆ. ವಾಹನವೊಂದು ಅರಣ್ಯ ಇಲಾಖೆಯಿಂದ ಮುಟ್ಟುಗೋಲಾಗಿದ್ದು ಅದನ್ನು ಬಿಡಿಸುವ ಸಂಬಂಧ ಕಡತವನ್ನು ಸಂಬಂಧಪಟ್ಟ ಅಧಿಕಾರಿಗೆ ಕಳುಹಿಸಲು ಮಂಜು ಪೂಜಾರಿ ಲಂಚದ ಬೇಡಿಕೆಯಿಟ್ಟಿದ್ದರು. ಮಾತುಕತೆ ಪ್ರಕಾರ ಕಚೇರಿ ವೇಳೆಯಲ್ಲಿ […]

ಉದ್ಯಾವರ : ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದ ಬಿಜೆಪಿ ಬೆಂಬಲದಿಂದ ಆಯ್ಕೆಯಾಗಿದ್ದ ಗ್ರಾಮ ಪಂಚಾಯತ್ ಸದಸ್ಯರಿಬ್ಬರು ಮಾಜಿ ಸಚಿವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಜೆಪಿಯ ಅಧಿಕೃತ ಅಧ್ಯಕ್ಷೆ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಬೆಂಬಲದಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 12ನೇ ವಾರ್ಡ್ ನ ಮಾಲತಿ ಸಂದೀಪ್ ಮತ್ತು ಮೂರು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ಗಿರೀಶ್ ಸುವರ್ಣ […]

ಉಡುಪಿ: ಪ್ರಕರಣಕ್ಕೆ ಸಂಬಂಧಪಟ್ಟಂತೆ 1ನೇ ಆರೋಪಿ ಎಂದು ಗುರುತಿಸಲಾಗಿರುವ ಕೆಳಾರ್ಕಳಬೆಟ್ಟು ಗ್ರಾಮ ನೇಜಾರು ಓಡ್ರಿನ್ ಡಿಸೋಜಾ ಮತ್ತು 2ನೇ ಆರೋಪಿಯಾಗಿರುವ ಆಂದ್ರ ಪ್ರದೇಶ ಮೂಲದ ರಾಜು ಕೈ ಎಂಬವರ ವಿರುದ್ಧ ತೋನ್ಸೆ ಕಲ್ಯಾಣಪುರ ನಿವಾಸಿಯಾಗಿರುವ ರಾಯ್ಸನ್ ಅಂಟೋನಿ ಬರೆಟ್ಟೊ ದೂರು ದಾಖಲು ಮಾಡಿದ್ದಾರೆ. ಆರೋಪಿತರಾಗಿರುವ ಓಡ್ರಿನ್ ಡಿಸೋಜಾ ಅವರು ಯು.ಕೆ. ಮತ್ತು ಕೆನಡಾ ದೇಶದಲ್ಲಿ ಉದ್ಯೋಗಗಳಿದ್ದು ಅದಕ್ಕೆ 5,00,000 ಖರ್ಚಾಗುತ್ತದೆ. ಹಣವನ್ನು 2 ಕಂತುಗಳಲ್ಲಿ ಪಾವತಿಸಬೇಕೆಂದು ತಿಳಿಸಿದ್ದಾರೆ. ಅದಕ್ಕೆ ರಾಯ್ಸನ್ ಅಂಟೋನಿ ಬರೆಟ್ಟೊ ಅವರು ಒಪ್ಪಿಕೊಂಡಿದ್ದಾರೆ. ವೀಸಾದ […]

ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಮಾಡುವ ಕುಂದಾಪುರದ ಶಾಸಕರು. ಕುಂದಾಪುರದ ಶಾಸಕರ ಹುಟ್ಟೂರಾದ ಅಮಾವಾಸ್ಯೆಬೈಲಿನ ಅಭಿವೃದ್ಧಿಯಲ್ಲಿ ಸುದೀರ್ಘ ಅವಧಿಯ ರಾಜಕಾರಣಿ ಹಾಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರ ಕೊಡುಗೆ ಶೂನ್ಯ ಆದರೆ ಈಗ ಪ್ರಸಕ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ನಾಯಕರುಗಳ ವಿಶೇಷ ಮುತುವರ್ಜಿಯಿಂದ ಸಿ ಎಸ್ ಆರ್ ಅನುದಾನದಡಿ ಅಮವಾಸ್ಯೆಬೈಲು ಗ್ರಾಮ ಪಂಚಾಯತ್ ಗೆ ಸುಮಾರು 25 ಲಕ್ಷ ಅನುದಾನ ಮಂಜೂರಾಗಿದ್ದು, ಕರಾವಳಿಯ ಆರಾಧ್ಯ ದೈವಿ ಪುರುಷರಾದ ಕೋಟಿ ಚನ್ನಯ್ಯರ ಗರಡಿಗೆ […]

ಉಡುಪಿ;ಜಿಲ್ಲಾ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ರವರ ಸಮ್ಮುಖದಲ್ಲಿ ಶಾಸಕ ಸುನೀಲ್ ಕುಮಾರ್ ರವರು ಜಿಲ್ಲಾ ಎಸ್ಪಿಯವರ ಮೇಲೆ ಕ್ಷುಲ್ಲಕ ಕಾರಣಹೊರಿಸಿ ಹರಿಹಾಯ್ದ ಅಸಾಂವಿಧಾನಿಕ ನಡೆಯ ಹಿಂದೆ ಪೂರ್ವನಿಯೋಜಿತ ಸಂಚು ಅಡಗಿದೆ. ಇದನ್ನು ತಿಳಿದೇ ಸಚಿವೆಯವರು ಎಸ್ಪಿಯವರನ್ನು ಸುಮ್ಮನಿರಲು ಹೇಳಿದ್ದಾರೆ. ಇದರ ಹಿಂದೆ ಕೆಸರಿನೊಂದಿಗೆ ಹೊಡೆದಾಟ ಸಲ್ಲ ಎಂಬ ಸೂಕ್ಷ್ಮ ಸಂದೇಶ ಅಡಗಿದೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಅನ್ಯತಾ ಅರ್ಥವಿಸಲಾಗದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.ಇಲಾಖಾ ಮಾರ್ಗಸೂಚಿ […]

ಉಡುಪಿ: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಜರುಗಿತು.ಪರಮಪ್ರಸಾದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ವಹಿಸಿ ಭಕ್ತಾದಿಗಳಿಗೆ ಸಂದೇಶ ನೀಡಿದರು.ಧರ್ಮಾಧ್ಯಕ್ಷರು ತಮ್ಮ ಸಂದೇಶದಲ್ಲಿ ನಾವು ತೋರಿಸುವ ಪ್ರೀತಿ ಕೇವಲ ತೋರ್ಪಡಿಕೆಯ ಪ್ರೀತಿಯಾಗಿರದೆ ಅದನ್ನು ಕಾರ್ಯದ ಮೂಲಕ ಮಾಡಿ ತೋರಿಸುವಂತಿರಬೇಕು. ಪ್ರೀತಿ ಸೇವೆ ಕ್ರೈಸ್ತ ಧರ್ಮದ ಮೂಲ ತತ್ತ್ವವಾಗಿದ್ದು, ಅದನ್ನು […]