ಕುಂದಾಪುರ, ಡಿ.24: ಸ್ಥಳೀಯ ಸಂತ ಜೋಸೆಫ್ ವಸತಿ ಶಾಲಾ ಮಕ್ಕಳೊಂದಿಗೆ ಕ್ರಿಸ್ಮಸ್ ಸಂತೋಷ ಕೂಟ ದಾನಿಗಳಾದ ಸ್ಟ್ಯಾನ್ಲಿ ಚೆರೀಯನ್ ಮತ್ತು ಕುಂದಾಪುರದ ಐವನ್ ಆಲ್ಮೇಡ ಕುಟುಂಬದ ವತಿಯಿಂದ ಡಿಸೆಂಬರ್ 23 ರಂದು ಜೋಸೆಫ್ ವಸತಿ ಗ್ರಹದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ “ಕ್ರಿಸ್ಮಸ್ ಸಮಯದಲ್ಲಿ ಇಡೀ ಜಗತ್ತು ಸಂತೋಷವನ್ನು ಆಚರಿಸುತ್ತದೆ, ಇವತ್ತು ನಾವುಗಳು ನಿಮ್ಮ ಜೊತೆ ಈ ಸಂತೋಷವನ್ನು ಹಂಚಿಕೊಳ್ಳಲಿಕ್ಕೆ ನಿಮ್ಮ ಜೊತೆ ಸೇರಿದ್ದೆವೆ. ಯೇಸು ಸ್ವಾಮಿ […]
ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ರೋ. ರಮಾನಂದ ಕಾರಂತರ ಸಂಬಂಧಿಕರು ಹಾಗೂ ಸವಿತಾ ಫೌಂಡೇಶನ್, “ಆಯಿ” ಹಂಗಳೂರು ಇವರ ದೇಣಿಗೆಯಿಂದ ಬೆಚ್ಚನೆಯ ಹಾಗೂ ತಣ್ಣನೆಯ ಶುದ್ಧ ಕುಡಿಯುವ ನೀರಿನ ಘಟಕವನ್ನು ಬಿ. ಬಿ. ಹೆಗ್ಡೆ ಕಾಲೇಜಿಗೆ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ರೋಟರಿ ದಕ್ಷಿಣದ ಅಧ್ಯಕ್ಷ ರೋ. ಸತ್ಯನಾರಾಯಣ ಪುರಾಣಿಕ, ಮಾಜಿ ಅಧ್ಯಕ್ಷ ರೋ. ಯು.ಎಸ್.ಶೆಣೈ, ರೋ.ರಮಾನಂದ ಕಾರಂತ, ಪ್ರಾಂಶುಪಾಲ ಪ್ರೊ. ಕೆ. ಉಮೇಶ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲ ಕೋವಾಡಿ ಚೇತನ್ ಶೆಟ್ಟಿ ಉಪಸ್ಥಿತರಿದ್ದರು.
ನನ್ನ ಆತ್ಮೀಯ ಸ್ನೇಹಿತರೇ,ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಕ್ರಿಸ್ಮಸ್ ಎಂದಾಕ್ಷಣ ಮೊದಲ ಅನಿಸಿಕೆ ಸಂತೋಷ ಹಾಗೂ ಉತ್ಸಾಹ. ವಿದ್ಯುತಾಲಂಕಾರಗಳು, ರಂಗುರಂಗಿನ ವಾತಾವರಣ. ಇನ್ನೊಂದು ಮನ ಸೆಳೆಯುವ ದೃಶ್ಯವೆಂದರೆ ದನದ ಕೊಟ್ಟಿಗೆಯಲ್ಲಿನ ಗೋದಲಿಯಲ್ಲಿ ಹುಟ್ಟಿದ ಬಾಲಯೇಸು. ಅಲ್ಲಿ ನೆಲೆಸಿದೆ ಸರಳತೆ ಹಾಗೂ ಶಾಂತತೆ. ಈ ದಿನ ನಮ್ಮ ಸಂತೋಷದಲ್ಲಿ ಭಾಗಿಯಾಗಲು ಬಂದಿದ್ದಕ್ಕಾಗಿ ಧನ್ಯವಾದಗಳು. “ಎನಗಿಂತ ಕಿರಿಯರಿಲ್ಲ” ಎಂಬಂತೆ ದೇವರು ಆತೀ ಸಣ್ಣವರಾಗಿ ಮಾನವರ ನಡುವೆ ಜನಿಸಿದರು. ಕೊಟ್ಟಿಗೆಯಲ್ಲಿ ಯೇಸುವಿನ ಜನನವು ನಮ್ಮ ಗಮನವನ್ನು ಸೆಳೆಯುತ್ತದೆ. ಚಿಕ್ಕದು, ಸುಂದರ ಎಂದು […]
ಕುಂದಾಪುರ: ಡಿ.21, ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ಸಿದ್ಢಾರ್ಥ ಜೆ ಶೆಟ್ಟಿ ಅವರು ಕ್ರಿಸ್ಮಸ್ ಕೇಕ್ ಕತ್ತರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಇಂಜಿನಿಯರಿಂಗ್, ಎಮ್ ಬಿ ಎ, ಬಿಸಿಎ, ಬಿಕಾಂ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿದ್ದಲ್ಲದೆ ಬಿಸಿಎ ವಿಧ್ಯಾರ್ಥಿ ದಿಶಾಂಕ್ ಸಾಂತಾಕ್ಲಾಸ್ ವೇಷ ಧರಿಸಿ ಸಭಿಕರನ್ನು ರಂಜಿಸಿದರು. ಐ ಎಂ ಜೆ ಸಂಸ್ಥೆಗಳ ನಿರ್ದೇಶಕರಾದ ಪ್ರೊ. ದೋಮ ಚಂದ್ರಶೇಖರ್, ಎಂ ಐ ಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ […]
ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಸ್ವರ್ಣ ಪಲ್ಲಕಿ ನಿರ್ಮಾಣಕ್ಕೆ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಚಾಲನೆ ನೀಡಿದರು.ಕುಂದಾಪುರದ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಭರಣ ಜ್ಯುವೆಲ್ಲರ್ಸ್‍ನ ಮಹೇಶ್ ಕಾಮತ್ ಅವರಿಗೆ ಪ್ರಸಾದ ನೀಡಿ ಜವಾಬ್ದಾರಿ ಒಪ್ಪಿಸುವ ಮೂಲಕ ಸ್ವಾಮೀಜಿಯವರು ಚಾಲನೆ ನೀಡಿದರು.ದೇವಾಲಯದ ಆಡಳಿತ ಮೊಕ್ತೇಸರರಾದ ಕೆ. ರಾಧಾಕೃಷ್ಣ ಶೆಣೈ ಜತೆ ಮೊಕ್ತೇಸರರಾದ ಜನಾರ್ಧನ ಮಲ್ಯ, ತ್ರಿವಿಕ್ರಮ ಪೈ ಹಾಗೂ ಅಕ್ಷಯ ಶೆಣೈ, ಕೆ. ಪದ್ಮನಾಭ ಶೆಣೈ, ಯು. ಅರ್ಜುನ್ ಶೆಣೈ, ವಿನಾಯಕ ಪೈ, ರಮೇಶ್ […]
ಶಿಕ್ಷಣ ಜ್ಞಾನ ಸಂಸ್ಥೆಯ ವತಿಯಿಂದ ಕೊಡ ಮಾಡುವ ಈ ಬಾರಿಯ ರಾಜ್ಯ ಮಟ್ಟದ ಶಿಕ್ಷಣ ಜ್ಞಾನ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಉಡುಪಿ ಜಿಲ್ಲೆಯಿಂದ ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ, ಪೂರ್ವ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕ್ರಮವಾಗಿ ತೆಂಕನಿಡಿಯೂರು ಕಾಲೇಜಿನ ಕನ್ನಡ ಉಪನ್ಯಾಸಕ, ಪ್ರಾಂಶುಪಾಲ ವಿಶ್ವನಾಥ ಎನ್. ಕರಬ, ಕುಂದಾಪುರ ವಲಯದ ಕೋಡಿ ಬ್ಯಾರಿಸ್ ಸಂಸ್ಥೆಯ ಮುಖ್ಯೋಪಾಧ್ಯಾಯ ಜಯಶೀಲ ಶೆಟ್ಟಿ, ಬೈಂದೂರು ವಲಯದ ಆಲೂರು-ಕಳಿಯ ಶ್ರೀಮತಿ ಜಿ. ಹೆಗಡೆ ಬ್ರಹ್ಮಾವರ ವಲಯದ ಮುಂಡಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಜ್ಯೋತಿ ಶೆಟ್ಟಿ ಆಯ್ಕೆಯಾಗಿದ್ದಾರೆ. […]
ಕುಂದಾಪುರ: ಡಿಸೆಂಬರ್ 21ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಎಜುಕೇಶನ್ ಇದರ ಸಾಂಸ್ಕೃತಿಕ ಸಹಕಾರ ಸಮಿತಿಯ ಸಹಯೋಗದಲ್ಲಿ ದೆಹಲಿಯ ಸ್ಟಿಕ್ ಮೆಕೆಯಿಂದ ಕಥಕ್ ನೃತ್ಯ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನಡೆಯಿತು.ರಾಷ್ಟ್ರೀಯ ಕಥಕ್ ನೃತ್ಯ ಕಲಾವಿದ ಪಂಡಿತ್ ರಾಜೇಂದ್ರ ಗಂಗಾನಿ ಅವರು ಕಥಕ್ ನೃತ್ಯ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಜನಮನ ಸೆಳೆಯಿತು.ಮೋಹಿತ್ ಗಂಗಾನಿಯವರು ತಬಲಾ, ವಿನೋದ್ ಕುಮಾರ್ ಅವರು ಹಾಡುಗಾರಿಕೆ ಮತ್ತು ಹಾರ್ಮೋನಿಯಂ, ಕಿಶೋರ್ ಕುಮಾರ್ ಮೃದಂಗ ಮತ್ತು ರವಿಶಂಕರ್ ಶರ್ಮಾ ಅವರು […]
ಬೈಂದೂರು: ಕಥೊಲಿಕ್ ಸಭಾ ಬೈಂದೂರು, ಕುಂದಾಪುರ ವಲಯ ಕಥೊಲಿಕ್ ಸಭಾ ಮತ್ತು ಶೆವೊಟ್ ಶ್ರತಿಷ್ಟಾನ್, ಸಿ.ಎಸ್.ಐ., ಕ್ರೈಸ್ತ ಸಮಿತಿ ಕುಂದಾಪುರ ಮತ್ತು ಪವಿತ್ರ ಶಿಲುಭೆಯ ಇಗರ್ಜಿ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ, ಬೈಂದೂರು ಇಗರ್ಜಿಯ ಸಮುದಾಯ ಭವನದಲ್ಲಿ ಡಿ.೧೮ ರಂದು, ಕುಂದಾಪುರ ವಲಯ ಮಟ್ಟದಲ್ಲಿ “ಸೌರ್ಹಾದ ಕ್ರಿಸ್ಮಸ್” ಕಾರ್ಯಕ್ರಮ ಮತ್ತು ಶೆವೊಟ್ ಶ್ರತಿಷ್ಟಾನ್ ಇವರಿಂದ ಅಶಕ್ತರಿಗೆ ಸಹಾಯಧನ ವಿತರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಕ್ಷೆ ಶಾಂತಿ ಪಿರೇರಾ […]
ಜೇಸಿಐ ಕುಂದಾಪುರದ 49ನೇ ಅಧ್ಯಕ್ಷರಾಗಿ ಸುಧಾಕರ್ ಕಾಂಚನ್ ಕಾರ್ಯದರ್ಶಿಯಾಗಿ ರಾಕೇಶ್ ಶೆಟ್ಟಿ ಆಯ್ಕೆಜೇಸಿಐ ಕುಂದಾಪುರ ಘಟಕದ 49ನೇ ನೂತನ ಅಧ್ಯಕ್ಷರಾಗಿ ಜೇ.ಎಪ್.ಎಮ್.ಸುಧಾಕರ್ ಕಾಂಚನ್ ನಿಕಟಪೂರ್ವಧ್ಯಕ್ಷರಾಗಿ ಶ್ರೀಮತಿ ನಾಗರತ್ನ ಜಿ ಹೆರ್ಳೆ ಉಪಾಧ್ಯಕ್ಷರುಗಳಾಗಿ ಪ್ರವೀಣ್ ಎಮ್ , ಶ್ರೀಮತಿ ಶರ್ಮಿಳಾ ಕಾರಂತ್, ಚಂದನ್ ಗೌಡ , ಸುಬ್ರಮಣ್ಯ ಆಚಾರ್ಯ , ಶಶಿಧರ್ ಶೆಟ್ಟಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ರಾಕೇಶ್ ಶೆಟ್ಟಿ ವಕ್ವಾಡಿ , ಜೊತೆ ಕಾರ್ಯದರ್ಶಿಯಾಗಿ ಚೇತನ್ ದೇವಾಡಿಗ , ಕೋಶಾಧಿಕಾರಿಯಾಗಿ ಧನುಷ್ ಕುಮಾರ್, ಜ್ಯೂನಿಯರ್ ಜೇ.ಸಿ ಅಧ್ಯಕ್ಷರಾಗಿ ಸತ್ಯನ್ ಎಸ್ […]