ಕುಂದಾಪುರ: ದಿನಾಂಕ 10.9.22 ರಂದು ಭಾರತೀಯ ವೈದ್ಯಕೀಯ ಸಂಘ (I M A) ಯ ರಾಜ್ಯಾಧ್ಯಕ್ಷರಾದ ಸುರೇಶ್ ಕುಡ್ವರು ಕುಂದಾಪುರ ಶಾಖೆಯ ತಮ್ಮ ಅಧಿಕೃತ ಭೇಟಿ ಗಾಗಿ ಆಗಮಿಸಿದ್ದರು.ಅವರೊಂದಿಗೆ ಜೊತೆ ಕಾರ್ಯದರ್ಶಿಗಳಾದ ವೈ . ಎಸ್ . ರಾವ್ ಅವರೂ ಆಗಮಿಸಿದ್ದರು .ಸಮಾರಂಭವು ಗಿಳಿಯಾರ ಕುಶಾಲ್ ಹೆಗ್ಡೆ ರೋಟರಿ ಭವನದಲ್ಲಿ ನಡೆಯಿತು. ರಾಜ್ಯಾಧ್ಯಕ್ಷರು ima ಯ ವಿವಿಧ ಕಾರ್ಯಕ್ರಮ ಗಳ ಮಹತ್ವ ದ ಬಗ್ಗೆ ವಿಶೇಷ ಮಾಹಿತಿ ನೀಡಿದರು.ಎಲುಬು ಕೀಲು ಶಸ್ತ್ರ ಚಿಕಿತ್ಸಕ ತಜ್ಞ Dr ಸಂದೀಪ […]
ಶಿಕ್ಷಕರ ದಿನಾಚರಣೆಯ ಪ್ರಯುಕ್ತ 92 ವಯಸ್ಸಿನ ಆದರ್ಶ ಶಿಕ್ಷಕರಾದ, ಸ್ವತಃ ತಾವೇ ಜಪ್ತಿ ಗ್ರಾಮದಲ್ಲಿ ಶ್ರೀ ರಾಮಚಂದ್ರ ವಿದ್ಯಾಲಯವನ್ನು ಸ್ಥಾಪಿಸಿ, ಬೆಳೆಸಿದ ಶ್ರೀ ಸುಬ್ರಾಯ ಉಡುಪ ಬಳ್ಕೂರು ಇವರನ್ನು ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಕಾರ್ಯದರ್ಶಿ ಸಚಿನ್ ನಕ್ಕತ್ತಾಯ, ಕೆ.ಪಿ.ಭಟ್ ಹಾಗೂ ಮನೋಹರ ಪಿ ಉಪಸ್ಥಿತರಿದ್ದರು.
ಕುಂದಾಪುರ:ರೆಡ್ ಕ್ರಾಸ್ ಒಂದು ಸಮಾಜಸೇವೆ ಸಂಸ್ಥೆಯಾಗಿದ್ದು ವಿದ್ಯಾರ್ಥಿಗಳು ರೆಡ್ ಕ್ರಾಸ್ ನಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಕುಂದಾಪುರ ರೆಡ್ ಕ್ರಾಸ್ ಚೇರ್ಮನ್ ಜಯಕರ್ ಶೆಟ್ಟಿ ಹೇಳಿದರು.ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಕಿರಿಯ ರೆಡ್ ಕ್ರಾಸ್ ಘಟಕ ಉದ್ಘಾಟಿಸಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ವಹಿಸಿದ್ದರು.ಇದೇ ಸಂದರ್ಭದಲ್ಲಿ ಕಿರಿಯ ರೆಡ್ ಕ್ರಾಸ್ ಘಟಕದ ಅಧ್ಯಕ್ಷೆ ಕು.ಅರ್ಚನಾ ಸೇರಿದಂತೆ ಒಟ್ಟು 52 ವಿದ್ಯಾರ್ಥಿಗಳು ರೆಡ್ ಕ್ರಾಸ್ ಪ್ರತಿಜ್ಞೆ ಸ್ವೀಕರಿಸಿದರು.ಕುಂದಾಪುರ ಜೂನಿಯರ್ ರೆಡ್ ಕ್ರಾಸ್ ಸಂಯೋಜಕ […]
ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರಿಂದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಯೂತ್ ರೆಡ್ ಕ್ರಾಸ್ ಘಟಕವನ್ನು ಕುಂದಾಪುರ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಬರಾದ ಶ್ರೀ ಜಯಕರ ಶೆಟ್ಟಿ ಉದ್ಭಾ, ಟಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರಿ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ, ಕೋಶಾಧಿಕಾರಿ ಶ್ರೀ ಶಿವರಾಮ ಶೆಟ್ಟಿ, ಕಾರ್ಯಕಾರಿಣಿ ಸದಸ್ಯರಾದ ಶ್ರೀ […]
2021-22 ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಪಲ್ಲವಿ. ಪಿ ಇವರು 97.84 ಪರ್ಸೆಂಟೈಲ್ ಪಡೆದಿರುತ್ತಾಳೆ..ಪಲ್ಲವಿ ಯ ಈ ಉತ್ಕೃಷ್ಟ ಸಾಧನೆಯನ್ನು ಶ್ಲಾಘಿಸಿ ಕಾಲೇಜಿನ ಸಂಚಾಲಕರಾದ ಶ್ರೀ ಸುಕುಮಾರ್ ಶೆಟ್ಟಿಯವರು, ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕರ್ಣಾಟಕ ಬ್ಯಾಂಕ್ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು ಎಲ್ಲರ ಜೀವನಕ್ಕೆ ಸ್ಪೂರ್ತಿಯಾಗಿರುವ ಉತ್ತಮ ಸಂಗೀತ, ಸಾಹಿತ್ಯ, ಸಾಂಸ್ಕøತಿಕ ಚಟುವಟಿಕೆಗಳಿಗೆ ನಿರಂತರವಾಗಿ ಸ್ಪೂರ್ತಿ, ಪ್ರೇರಣೆ ನೀಡುತ್ತಾ ಬಂದಿದೆ. ಅದರಲ್ಲೂ ಯುವ ಜನಾಂಗ ಶಿಕ್ಷಣ, ವೃತ್ತಿಯ ಒತ್ತಡದಲ್ಲೂ ಸಾಹಿತ್ಯ ಸಂಗೀತದಂತಹ ಉತ್ತಮ ಚಟುವಟಿಕೆಯ ಬಗ್ಗೆ ಆಸಕ್ತಿ ತೋರುವಾಗ ಸಂತೋಷವಾಗುತ್ತದೆ. ಕುಂದಾಪುರದಲ್ಲಿ ಸಂಗೀತ ಭಾರತಿ ಟ್ರಸ್ಟ್ (ರಿ.), ಚಿರಂತನ ಚಾರಿಟೆಬಲ್ ಟ್ರಸ್ಟ್ (ರಿ.) ಸುರತ್ಕಲ್ ಸಂಯುಕ್ತ ಆಶ್ರಯದಲ್ಲಿ ಹದಿಮೂರು ಮಂದಿ ಯುವ ಕಲಾವಿದರು ತಮ್ಮ ಸಂಗೀತ ಹಾಗೂ […]
ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ, ಚಿರಂತನ ಚಾರಿಟೆಬಲ್ ಟ್ರಸ್ಟ್ ಸುರತ್ಕಲ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮ್ಯಾಕ್ಸ್ ಮೀಡಿಯಾ ಉಡುಪಿ, ಭಂಡಾರ್ಕಾರ್ಸ್ ಕಾಲೇಜು ಇವುಗಳ ಸಹಯೋಗದಲ್ಲಿ ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ರವಿವಾರ “ಅಮೃತಭಾರತಿಗೆ ಸಂಗೀತದಾರತಿ” ಹಿಂದುಸ್ಥಾನಿ ಯುವ ಶಾಸ್ತ್ರಿಯ ಸಂಗೀತೋತ್ಸವ ಕಾರ್ಯಕ್ರಮ ನಡೆಯಿತು.ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ವಿಶ್ವಸ್ಥ ಕೆ. ಶಾಂತಾರಾಮ ಪ್ರಭು ಕಾರ್ಯಕ್ರಮ ಉದ್ಘಾಟಿಸಿ ಸಂಗೀತಕ್ಕೆ ತನ್ನದೇ ಆದ ಮಾಂತ್ರಿಕ ಶಕ್ತಿ ಇದ್ದು, ಇಂತಹ ಸಂಗೀತೋತ್ಸವ ಯುವ ಕಲಾವಿದರಿಗೆ ಉತ್ತಮ ವೇದಿಕೆ. ಇಂತಹ […]
ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅ|ವಂ| ಧರ್ಮಗುರು ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರು 8 ಸೆಪ್ಟೆಂಬರ್ 2022 ರಂದು ತೊಟ್ಟಂನ ಸೇಂಟ್ ಆನ್ಸ್ ಚರ್ಚ್ನಲ್ಲಿ ಮೋಂತಿ ಹಬ್ಬದ ಪ್ರಯುಕ್ತ ದಿವ್ಯ ಬಲಿದಾನವನ್ನು ಅರ್ಪಿಸಿ ಆಚರಿಸಿದರು. ಬೆಳಗ್ಗೆ 7.30ಕ್ಕೆ ಸೇಂಟ್ ಆನ್ಸ್ ಪ್ರಾರ್ಥನಾ ಮಂದಿರದ ಮುಂಭಾಗದಲ್ಲಿ ಧರ್ಮಗುರು ವಂ| ಡೆನಿಸ್ ಡೆಸಾ ಅವರು ಹೊಸ ತೇನೆಯನ್ನು ಆಶೀರ್ವದಿಸಿದರು. ನಂತರ ಸೇಂಟ್ ಆನ್ಸ್ ಚರ್ಚ್ ತೊಟ್ಟಂಗೆ ಮೆರವಣಿಗೆ ನಡೆಸಿ ಮೇರಿ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಾಮೂಹಿಕ ಬಲಿದಾನದ ವೇಳೆ ಬಿಷಪ್ […]
‘ಮೊಬೈಲ್, ಟಿ.ವಿ ಯಂಥ ಯಾವುದೇ ತಾಂತ್ರಿಕ ಉಪಕರಣಗಳಿಲ್ಲದ ಪ್ರಾಚೀನ ಕಾಲದಿಂದಲೂ ಗುರುವೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಶಕ್ತಿಯಾಗಿದ್ದರು. ಇಂದಿಗೂ ವಿದ್ಯಾರ್ಥಿ- ಶಿಕ್ಷಕ ಸಂಬಂಧ ನಾಜೂಕತೆಯಿಂದ ಕೂಡಿದ್ದಾಗಿದೆ. ಪ್ರತಿಯೊಂದು ವಿಷಯವನ್ನು ಕೂಲಂಕಷವಾಗಿ ಗಮನಿಸುವ ವಿದ್ಯಾರ್ಥಿಗಳಿಗೆ ಶಿಕ್ಷಕರೂ ಎಲ್ಲ ಆಯಾಮಗಳಿಂದಲೂ ಆದರ್ಶರಾಗಿರಬೇಕು’ಎಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆಯ ಪ್ರಯಕ್ತ ಆಯೋಜಿಸಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಸಂಖ್ಯಾಶಾಸ್ತ್ರ ಪಾಧ್ಯಾಪಕರಾದ ಪ್ರೊ.ಬಾಲಕೃಷ್ಣ ಭಟ್ ರವರು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ […]