ಮದರ್ ತೆರೇಸಾ ಪದವಿ ಪೂರ್ವ ಕಾಲೇಜು, ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಹೆಮ್ಮೆಯ ವಿದ್ಯಾರ್ಥಿನಿ ಪ್ರಣತಿಯವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯವರು ಅಕ್ಟೋಬರ್ ತಿಂಗಳಿನಲ್ಲಿ “ಸೈಬರ್ ಸುರಕ್ಷತಾ ಜಾಗೃತಿ” ಬಗ್ಗೆ ಆಯೋಜಿಸಿದ MEMES ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು, ಪಿಯು ಕಾಲೇಜು ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಕುಂದಾಪುರ: ಕಲೆ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲು ಯಕ್ಷಗಾನವು ಆಧಾರವಾಗಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.ಅವರು ನವೆಂಬರ್ 1 ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎರಡು ದಿನಗಳ ಕಾಲ ನಡೆಯುವ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ 50ನೆ ವರ್ಷದ ಕಾರ್ಯಕ್ರಮ “ಸುವರ್ಣಾಕ್ಷ” ನನ್ನು ಉದ್ಘಾಟಿಸಿ ಮಾತನಾಡಿದರು .ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಉಳಿಸುವಲ್ಲಿ ಕರ್ನಾಟಕದ ಸಾಂಸ್ಕೃತಿಕ ಕಲೆ ಯಕ್ಷಗಾನವು ಬಹುದೊಡ್ಡ ಪಾತ್ರ ವಹಿಸಿದೆ. ಕಳೆದ 3 ವರ್ಷಗಳಿಂದ ಕುಂದಾಪುರದ 22 ಪ್ರೌಢಶಾಲೆಗಳಲ್ಲಿ ಯಕ್ಷಗಾನ […]
ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ದಿನಾಂಕ:01.11.2025 ರಂದು ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಶ್ರೀ ಯುತ ಡಾ. ಯು.ಸಿ ಪೌಲೋಸ್ ರವರು ನೆರವೇರಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಸದಸ್ಯರುಗಳು, ಆಡಳಿತಮಂಡಳಿಯವರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.
ಕಾಪುವಿನ ಕೊಂಕಣಿ ಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ಧಿ ಮಹೋತ್ಸವದ ಅಂಗವಾಗಿ ನಡೆಯುವ ಶತ ನಮನ ಶತ ಸ್ಮರಣ ಶತ ಕಲಾವಿದ ಕಲಾರಾಧನಾ ಕಲಾ ಪ್ರದರ್ಶನದಲ್ಲಿ ಸ್ವಾಮೀಜಿಯರವರ ಭಾವಶಿಲ್ಪದೊಂದಿಗೆ ಅರಳಿದ ಆಕóರ್ಷಕ ಮರಳು ಶಿಲ್ಪದ ರಚನೆ ‘ಸ್ಯಾಂಡ್ ಥೀಂ’ ಉಡುಪಿ, ಕಲಾವಿದರಾದ ಹರೀಶ್ ಸಾಗಾ ಮತ್ತು ಸಂತೋಷ ಭಟ್ ಹಾಲಾಡಿ ಯವರಿಂದ ರಚಿತ ಕಲಾಕೃತಿ.
“ಪ್ಲೇಸ್ಟೋರ್ ನಿಂದ ಯಾವುದೇ ಆ್ಯಪ್ ಡೌನ್ಲೋಡ್ ಮಾಡುವಾಗ ವೈಯುಕ್ತಿಕ ಮಾಹಿತಿ ಮತ್ತು ಪಾಸ್ ವರ್ಡ್ ನೀಡುವಲ್ಲಿ ನಾವು ಜಾಗರೂಕರಾಗಿರಬೇಕು.ಸಾಮಾಜಿಕ ಜಾಲತಾಣಗಳ ಸ್ನೇಹ ಸಂಪರ್ಕಗಳ ಬಗ್ಗೆ ಎಚ್ಚರವಹಿಸಿ ಸೈಬರ್ ಮೋಸಜಾಲಕ್ಕೆ ಬಲಿಪಶುಗಳಾಗದಂತೆ ನೋಡಿಕೊಳ್ಳಬೇಕು” ಎಂದು ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ ಸೈಬರ್ ಕ್ರೈಮ್ ತಡೆಗಟ್ಟುವಿಕೆ ವಿಷಯಾಧಾರಿತ ಕಾರ್ಯಕ್ರಮದಲ್ಲಿ ಕುಂದಾಪುರ ಟೌನ್ ಪೊಲೀಸ್ ಸ್ಟೇಶನ್ ಠಾಣಾಧಿಕಾರಿ ಶ್ರೀ ನಂಜಾ ನಾಯ್ಕ ಇವರು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈಯವರು ಕಾರ್ಯಕ್ರಮ ನಿರ್ವಹಿಸಿದರು.
ಬಲಿಷ್ಠ ,ಸ್ವಾವಲಂಬಿ ಮತ್ತು ಸ್ವಾಭಿಮಾನಿ ಭಾರತದ ಶಿಲ್ಪಿ ಮಾಜಿ ಪ್ರಧಾನಿ ಇಂದಿರಾಗಾಂಧಿ. ಅವರ ಆಡಳಿತ ಅವಧಿಯಲ್ಲಿ ಬಾಹ್ಯ ಮತ್ತು ಆಂತರಿಕ ಶತ್ರುಗಳ ವಿರುದ್ಧ ದುರ್ಗೆಯಂತೆ ಹೋರಾಡಿ ಹುತಾತ್ಮರಾದರು. ಬಡತನ ಮತ್ತು ಅಸಮಾನತೆಯ ನಿರ್ಮೂಲನೆಗಾಗಿ ಅವರು ಹಮ್ಮಿಕೊಂಡ ಕಾರ್ಯಕ್ರಮ ಗಳು ಇಂದಿಗೂ ಮಾದರಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಯಾಡಿ ಶಿವರಾಮ ಶೆಟ್ಟಿ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರು , ಗೃಹ ಸಚಿವರಾದ ಪಟೇಲರು ಸ್ವಾತಂತ್ರ್ಯ ಹೋರಾಟದಲ್ಲಿ ಮಂಚೂಣಿಯಲ್ಲಿದ್ದು , ಸ್ವಾತಂತ್ರ್ಯ […]
ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ಮಂಗಳೂರು; ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿವೆ ಎಂದು ಅಖಿಲ ಭಾರತೀಯ ಕ್ರೈಸ್ತ ಒಕ್ಕೂಟ ಇದರ ಕರ್ನಾಟಕ ರಾಜ್ಯಾಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ. ಅವರು ನೀಡಿದ ಹೇಳಿಕೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ನಿಷ್ಕಳಂಕ ಹಾಗೂ ಜನಪರ ನಾಯಕರಲ್ಲಿ ಒಬ್ಬರಾಗಿರುವ ಸನ್ಮಾನ್ಯ ಯು.ಟಿ. […]
ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಾದ್ಯಂತ 120ಕ್ಕೂ ಹೆಚ್ಚು ಕ್ಲಬ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ […]
ಬಸ್ರೂರು; ನಾಟ್ಯಾಂಜಲಿ ಕಲಾ ನಿಕೇತನ ಬಸ್ರೂರು, ಇಲ್ಲಿನ ನೃತ್ಯಗುರು ವಿದುಷಿ ಶ್ರೀಮತಿ ಕಲಾಶ್ರೀ ಪುನೀತ್ ಆಚಾರ್ಯ ಇವರು ತಮ್ಮ ನೃತ್ಯ ಶಿಷ್ಯಯರಿಗೆ ಗೆಜ್ಜೆಪೂಜೆ ಕಾರ್ಯಕ್ರಮವನ್ನು ಬಸ್ರೂರಿನ ಶ್ರೀ ದೇವಿ ಅಮ್ಮನವರ ದೇವಸ್ಥಾನದಲ್ಲಿ ದಿನಾಂಕ 27.10.2025 ರಂದು ಏರ್ಪಡಿಸಿದ್ದರು.ಗೋಧೂಳಿಯ ಸಮಯದಲ್ಲಿ ತಾಯಿಗೆ ಪೂಜೆ ನೆರವೇರಿಸಿ ವಿದ್ಯಾರ್ಥಿಗಳ ಗೆಜ್ಜೆಗೆ ದೇವಿಯ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ, ಪ್ರಸಾದದೊಂದಿಗೆ ಶಿಷ್ಯಯರಿಗೆ ಗೆಜ್ಜೆ ನೀಡಿ ಹರಸಿದರು ಮತ್ತು ವಿದ್ಯಾರ್ಥಿಗಳು ಗುರುಕಾಣಿಕೆ ನೀಡಿ ತಮ್ಮ ಗೌರವ ಅರ್ಪಿಸಿದರು. ಅಲ್ಲದೆ ಶ್ರೀ ದೇವಿಯ ಮುಂದೆ ತಮ್ಮ ತಮ್ಮ […]

