ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಶಿಕ್ಷಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್. ಕೋದಂಡರಾಮಯ್ಯ ಹೇಳಿದರು. ತಾಲ್ಲೂಕಿನ ಯಲ್ದೂರು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ಮಗುವಿಗೂ ಉತ್ತಮ ಶಿಕ್ಷಣ ಸಿಗುವಂತೆ ಸರ್ಕಾರದೊಂದಿಗೆ ದಾನಿಗಳೂ ಕೈಜೋಡಿಸಬೇಕು ಎಂದರು. ಇದರಿಂದ ಸರ್ಕಾರಿ ಶಾಲೆಯ […]

Read More

ಶ್ರೀನಿವಾಸಪುರ: ಮಾವಿನ ಹಣ್ಣಿನ ಸೀಸನ್ ಹಿನ್ನೆಲೆಯಲ್ಲಿ ಎಪಿಎಂಸಿ ಹಾಗೂ ವಿವಿಧ ಮಾವು ಮಾರುಕಟ್ಟೆಗಳಿಗೆ ಪ್ರತಿದಿನ ನೂರಾರು ಟ್ರ್ಯಾಕ್ಟರ್‌ಗಳ ಮೂಲಕ ಮಾವಿನಕಾಯಿ ಮತ್ತು ಮಾವಿನ ಹಣ್ಣಿನ ಸಾಗಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಗೆ ಒತ್ತು ನೀಡಿ ಶ್ರೀನಿವಾಸಪುರ ಪೊಲೀಸರು ರೇಡಿಯಂ ಸ್ಟಿಕ್ಕರ್ ಅಳವಡಿಕೆ ಕುರಿತು ಜಾಗೃತಿ ಮೂಡಿಸಿದರು. ಎಪಿಎಂಸಿ ಮಾವು ಮಾರುಕಟ್ಟೆ ಪ್ರದೇಶದಲ್ಲಿ ನಡೆದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಟ್ರ್ಯಾಕ್ಟರ್‌ಗಳ ಪರಿಶೀಲನೆ ನಡೆಸಿದ ಪೊಲೀಸರು, ವಾಹನಗಳ ಮುಂಭಾಗ ಮತ್ತು ಹಿಂಭಾಗಗಳಲ್ಲಿ ಕಡ್ಡಾಯವಾಗಿ ರೇಡಿಯಂ ಸ್ಟಿಕ್ಕರ್ ಅಳವಡಿಸಿಕೊಳ್ಳುವಂತೆ ಚಾಲಕರು ಹಾಗೂ […]

Read More

ಶ್ರೀನಿವಾಸಪುರ: ಮಾವಿನ ಬೆಲೆ ಭಾರೀ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಬೆಳೆಗಾರರ ರಕ್ಷಣೆಗೆ ಪ್ರತಿ ಕೆ.ಜಿ.ಗೆ ಕನಿಷ್ಠ ₹10 ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಜೂನ್‌ 15ರಂದು ರೋಜರನಹಳ್ಳಿ ಗೇಟ್‌ನಲ್ಲಿ ಮಾವು ಸಮೇತ ರಾಜ್ಯ ಹೆದ್ದಾರಿ ಬಂದ್‌ ನಡೆಸಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ರಾಜ್ಯದಲ್ಲಿ ಮಾವು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕೋಲಾರ ಜಿಲ್ಲೆಯ ಬೆಳೆಗಾರರು ಇಂದು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಹವಾಮಾನ ವೈಪರೀತ್ಯ, […]

Read More

ಶ್ರೀನಿವಾಸಪುರ : ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡಿ, ಮತದಾರನ ಋಣವನ್ನು ತೀರಿಸುತ್ತಾ , ಮತದಾರನು ನೀಡಿರುವ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳುಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.ಪಟ್ಟಣದ ಗುರುವಾರ ವಿವದಡೆ 9 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಹಿನ್ನೆಲೆಯಲ್ಲಿ ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜಿನ ಕಾಂಪೌಡ್ ನಿರ್ಮಿಸಲು ಈಗಾಗಲೇ 30 ಲಕ್ಷ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು . ಅಲ್ಲದೆ ಕಾಲೇಜು ಆವರಣದಲ್ಲಿ ಹಳೆ ಕಟ್ಟಡಗಳನ್ನು […]

Read More

ಕೋಲಾರ, ಜೂ. 9: ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಿಂದ ಆರಂಭವಾದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಪ್ರದರ್ಶಿಸಿ, ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಎತ್ತಿನಗಾಡಿ […]

Read More

ಶ್ರೀನಿವಾಸಪುರ: ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ ಸರ್ಕಾರಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮಾದರಿ ಶಾಲೆಗೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಜಿಲ್ಲಾ ಸಮಿತಿ ಸದಸ್ಯ ಶಬ್ಬೀರ್ ಅಹ್ಮದ್ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ದಾಖಲಾತಿ ಪ್ರಗತಿ ಹಾಗೂ ವಿದ್ಯಾರ್ಥಿಗಳ ಸಾಧನೆ ಕುರಿತು ಮಾಹಿತಿ ಪಡೆದರು. ಶಾಲೆಯ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದ ಅವರು, ಹೊಸ ಶೈಕ್ಷಣಿಕ ವರ್ಷದ ದಾಖಲಾತಿ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಕೈಗೊಳ್ಳಲಾಗುತ್ತಿರುವ […]

Read More

ಶ್ರೀನಿವಾಸಪುರ, ಜೂನ್ 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಎಸ್‌ಎಫ್‌ಎಸ್ ಶಾಲೆಯ ವತಿಯಿಂದ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಆವರಣದಿಂದ ಆರಂಭವಾದ ಜಾಥಾವು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಮರಗಳ ಮಹತ್ವ, ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಹಾಗೂ ಹಸಿರು ವಾತಾವರಣ ನಿರ್ಮಾಣಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರ ಗಮನ ಸೆಳೆದರು. ಕಾರ್ಯಕ್ರಮದ ಅಂಗವಾಗಿ ಫಾದರ್ ಫ್ಯಾನ್ಸಿ ಯಕ್ಕ ಅವರು […]

Read More

ಶ್ರೀನಿವಾಸಪುರ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಕಾರ್ಯಕ್ರಮವನ್ನು ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ದೊಡ್ಡ ಪರದೆಯ ಮೂಲಕ ವೀಕ್ಷಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ವಿಧಾನಸಭಾಧ್ಯಕ್ಷ  ಕೆ.ಆರ್. ರಮೇಶ್ ಕುಮಾರ್ ಪಕ್ಷದ ಗೌರವ ಹೆಚ್ಚಾಗುವ ರೀತಿಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ ಬಳಿಕ, ಪಕ್ಷದ ಹೈಕಮಾಂಡ್ […]

Read More

ಶ್ರೀನಿವಾಸಪುರ: ವಿಶ್ವದ ಗಮನ ಸೆಳೆಯುವ ರುಚಿ, ಸುವಾಸನೆ ಮತ್ತು ಗುಣಮಟ್ಟದ ಮಾವಿನ ಹಣ್ಣುಗಳಿಗೆ ಹೆಸರಾಗಿರುವ ಮಾವು ರಾಜಧಾನಿ ಶ್ರೀನಿವಾಸಪುರದಲ್ಲಿ ಮೊದಲ ಬಾರಿಗೆ ಆಯೋಜಿಸಲಾದ ‘ಮಾವು ಮೇಳ-2026’ ಅದ್ಧೂರಿ ಯಶಸ್ಸು ಸಾಧಿಸಿದೆ. ಎರಡು ದಿನಗಳ ಕಾಲ ನಡೆದ ಈ ಮೇಳವು ಸಾವಿರಾರು ರೈತರು, ಕೃಷಿ ತಜ್ಞರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಕೃಷಿ, ಮಾರುಕಟ್ಟೆ ಹಾಗೂ ಗ್ರಾಮೀಣ ಆರ್ಥಿಕತೆಯ ಕುರಿತು ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಶ್ರೀ ಬಾಲಾಜಿ ಎಜುಕೇಷನಲ್ ಟ್ರಸ್ಟ್ ಆಶ್ರಯದಲ್ಲಿ ಸಮಾಜಸೇವಕಿ, ಶಿಕ್ಷಣ […]

Read More
1 2 3 385