ಶ್ರೀನಿವಾಸಪುರ: ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಶೇ.4 ರಷ್ಟು ಮೀಸಲಾತಿ ವಾಪಸ್ ಪಡೆಯುವುದರ ಮೂಲಕ ಒಂದು ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಮಾರುತಿ ಸಭಾ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸಮಾಜದಲ್ಲಿ ಮತೀಯವಾದ ಬಿತ್ತುತ್ತಿದೆ. ಸಮಾಜ ಒಡೆಯುವ ಕಾರ್ಯ ಮಾಡುತ್ತಿದೆ. ಸಮಾಜದಲ್ಲಿ ಗೋಡೆಗಳನ್ನು ನಿರ್ಮಿಸುತ್ತಿದೆ ಎಂದು ಹೇಳಿದರು.ಬಿಜೆಪಿ ಸರ್ಕಾರ ಅಲ್ಪ ಸಂಖ್ಯಾತರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತಿಲ್ಲ. ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಅಲ್ಪ ಸಂಖ್ಯಾತರು […]
ಗ್ರಾಮೀಣ ಭಾಗದಲ್ಲಿ ಪಕ್ಷಾತೀತವಾಗಿ ವಸತಿ ರಹಿತರಿಗೆ ವಸತಿ ನೀಡಲಾಗಿದೆ. ಕುಡಿಯುವ ನೀರು, ಸಮುದಾಯಭವನಗಳನ್ನು ನಿರ್ಮಿಸಲಾಗುತ್ತಿದೆ. ಮುಖ್ಯವಾಗಿ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ವಿವಿಧ ಯೋಜನೆಯಲ್ಲಿ 30 ಲಕ್ಷ ವೆಚ್ಚದ ಕಾಮಗಾರಿಗಳನ್ನು ಹಾಗು ಜಿಲ್ಲಾ ಕೋಮುಲ್ ಹಾಲು ಒಕ್ಕೂಟದಿಂದ ನಿರ್ಮಿಸಲಾದ ಹಾಲಿನ ಡೈರಿ ಕಟ್ಟಡವನ್ನು ಶುಕ್ರವಾರ ಉದ್ಗಾಟಿಸಿ ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ರೈತ ಹಾಗೂ ಬಡ ಕುಟುಂಬಗಳ ಆರ್ಥಿಕವಾಗಿ ಸಭಲರಾಗಲು ಕಾರಣವಾಗಿದ್ದು, ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಮಾಡುವಂತೆ ಸಲಹೆ […]
ಶ್ರೀನಿವಾಸಪುರ : ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ , ಆಂತಸ್ತು, ಮಾಡಿಕೊಟ್ಟರೆ ಮಾರಿಕೊಳ್ಳುತ್ತಾರೆ . ಆದರೆ ವಿದ್ಯೆ ಕೊಟ್ಟರೆ ಶಾಶ್ವತವಾಗಿ ನಿಮ್ಮ ಮಕ್ಕಳು ಸುಖ ಜೀವನ ನಡೆಸಲು ಕಾರಣರಾಗುತ್ತೀರಿ ಎಂದು ಮಕ್ಕಳ ಪೋಷಕರಿಗೆ ಶಾಸಕ ಕೆ.ಆರ್.ರಮೇಶ್‌ಕುಮಾರ್ ಕಿವಿಮಾತು ಹೇಳಿದರು. ಗೌಡತಾತಗಡ್ಡ ಗ್ರಾಮದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಚುನಾವಣೆಯು ಐದು ವರ್ಷಗಳಿಗೊಮ್ಮೆ ನಡೆಯುವಂತಹ ಕಾರ್ಯಕ್ರಮ. ಈ ದೇಶವನ್ನು ಯಾವ ರೀತಿಯಲ್ಲಿ ನಡೆಸಬೇಕು ಎಂದು ಆಲೋಚನೆ ಮಾಡಲು, ನೀವು ಎಲ್ಲರೂ ಸೇರಿ […]
ಕುಂದಾಪುರ : ವಿಶ್ವ ಕ್ಷಯರೋಗ ದಿನಾಚರಣೆಯ ಅಂಗವಾಗಿ, ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ದಲ್ಲಿ ನಡೆದ ಕಾರ್ಯ ಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ ಇವರು ಉದ್ಘಾಟಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆಯು ಅತೀ ಹೆಚ್ಚು ಟಿ. ಬಿ. ರೋಗಿಗಳನ್ನು ದತ್ತು ಪಡೆದುದಕ್ಕಾಗಿ ಸನ್ಮಾನಿಸಲಾಯಿತು. ರೆಡ್ ಕ್ರಾಸ್ ಕುಂದಾಪುರ ಘಟಕ ಇಪ್ಪತ್ತೈದು ಕ್ಷಯ ರೋಗಿಗಳನ್ನು ಆರು ತಿಂಗಳ ಕಾಲ ದತ್ತು ಪಡೆದಿದೆ. ಈ ಸನ್ಮಾನವನ್ನು ಸಭಾಪತಿ ಶ್ರೀ […]
ಶ್ರೀನಿವಾಸಪುರ: ಸರ್ಕಾರವೇ ಜನರ ಬಳಿ ಬಂದು ಅವರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಸರ್ಕಾರದಿಂದ ಬರುವ ಪ್ರತಿಯೊಂದು ಯೋಜನೆಯ ಅನುದಾನಗಳ ಬಗ್ಗೆ ಪ್ರತಿಯೊಬ್ಬ ರೈತರಿಗೂ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂಬ ಉದ್ಧೇಶದಿಂದ ಸರ್ಕಾರವು ಗ್ರಾಮ ವಾಸ್ತವ್ಯ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಮುಖೇನ ನಮ್ಮ ವ್ಯಾಪ್ತಿಗೆ ಬರುವ ಸಮಸ್ಯೆಗಳು ಏನೇ ಇದ್ದರೂ ಇತ್ಯಾರ್ಥ ಪಡಿಸುವುದಾಗಿ ತಾಲ್ಲೂಕು ದಂಡಾಧಿಕಾರಿಗಳಾದ ಶೀರೀನಾ ತಾಜ್ ರವರು ತಿಳಿಸಿದರು.ಯಲ್ದೂರು ಹೋಬಳಿ ಕೊಳತೂರು ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಿದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ […]
ಶ್ರೀನಿವಾಸಪುರ : ಮಹಿಳೆಯರು ಸ್ವ-ಸಹಾಯ ಸಂಘಗಳ ಮೂಲಕ ಬದುಕು ಕಟ್ಟಿಕೊಳ್ಳುವುದರ ಜೊತೆಗೆ ತಮ್ಮ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಕಲಿಸಿಕೊಡಬೇಕು ಇಲ್ಲವಾದರೆ ವೃದ್ಧಾಶ್ರಮಗಳು ಹೆಚ್ಚುಸ್ಥಾಪಿಸಬೇಕಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಂಗಳೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ಎಂ ತಿಳಿಸಿದರು. ಪಟ್ಟಣದ ಮಾರುತಿ ಸಭಾ ಭವನದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿದ್ದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಮಹಿಳೆಯರು ರಚಿಸಿಕೊಂಡಿರುವ ಸ್ವ-ಸಹಾಯ ಸಂಘಗಳು ಪಾರದರ್ಶಕವಾಗಿ ನಡೆಯಲು ಶಿಸ್ತು, […]
ಶ್ರೀನಿವಾಸಪುರ: ಪಟ್ಟಣದ ಪುರಸಭೆ ಕಚೇರಿ ಮುಂದೆ ಶನಿವಾರ ವಿವಿಧ ದಲಿತಪರ ಸಂಘಟನೆಗಳ ಸದಸ್ಯರು, ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ನೇತೃತ್ವದಲ್ಲಿ ಧರಣಿ ನಡೆಸಿದರು.ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಅವರ ಕೆಲಸಕ್ಕೆ ವಿನಾಕಾರಣ ಅಡ್ಡಿಪಡಿಸುವುದರ ಮೂಲಕ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಜಮೀನಿಗೆ ಇ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಧರಣಿ ನಿರತರು ಆಪಾದಿಸಿದರು.ಮುಖ್ಯಾಧಿಕಾರಿ ಪುರಸಭೆಯಲ್ಲಿ ನಡೆಸಿರುವ ಅಕ್ರಮ ವ್ಯವಹಾರ ಕುರಿತು ತನಿಖೆ ನಡೆಸಬೇಕು. ಹಣಕಾಸು ವಹಿವಾಟಿನ […]
ಕೋಲಾರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಡಿ.ವಿ.ಜಿ ಅವರ ಮಂಕುತಿಮ್ಮನ ಕಗ್ಗವನ್ನು ಆಧುನಿಕ ಭಗವದ್ಗೀತೆ ಎಂದು ಕರೆಯುತ್ತಾರೆ. ಮಂಕುತಿಮ್ಮನ ಕಗ್ಗವನ್ನು ಅರ್ಥ ಮಾಡಿಕೊಂಡರೆ ಬದುಕಿನಲ್ಲಿ ಎಲ್ಲಾ ಸವಾಲುಗಳನ್ನು ಧೈರ್ಯವಾಗಿ ಎದುರಿಸಬಹುದು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಇಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಕೆಯುಡಬ್ಲ್ಯೂಜೆ ಸಂಸ್ಥಾಪಕರಾದ ಡಿ.ವಿ.ಜಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ […]
ಶ್ರೀನಿವಾಸಪುರ: ಪಟ್ಟಣದಲ್ಲಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಲಗದ ವತಿಯಿಂದ ಶುಕ್ರವಾರ ಪುನೀತ್ ರಾಜ್ಕುಮಾರ್ ಅವರ 48ನೇ ಹುಟ್ಟು ಹಬ್ಬ ಆಚರಿಸಲಾಯಿತು. ಹುಟ್ಟು ಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ಉಚಿತ ರಕ್ತದಾನ ಶಿಬಿರದಲ್ಲಿ 135 ಮಂದಿ ರಕ್ತದಾನ ಮಾಡಿದರು. 35 ಮಂದಿ ನೇತ್ರದಾನ ಮಾಡಲು ನೋಂದಾಯಿಸಿಕೊಂಡರು. ಈ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಗೆ ಸನ್ಮಾನ ಮಾಡಲಾಯಿತು. ಸಾರ್ವಜನಿಕರಿಗೆ ಪುನೀತ್ ರಾಜ್ಕುಮಾರ್ ಅವರು ಹೆಚ್ಚಾಗಿ ಇಷ್ಟಪಡುತ್ತಿದ್ದ ಬಿರಿಯಾನಿ ಹಾಗೂ ಮೊಟ್ಟೆ ಊಟ ನೀಡಲಾಯಿತು. ಪುರಸಭೆ ಮುಖ್ಯಾಧಿಕಾರಿ […]