ಶ್ರೀನಿವಾಸಪುರ: ಪಟ್ಟಣದಲ್ಲಿ ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ರಾತ್ರಿ ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಪಂಜಿನ ಮೆರವಣಿಗೆ ನಡೆಯಿತು.ತಹಶೀಲ್ದಾರ್ ಶಿರಿನ್ ತಾಜ್ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಪ್ರತಿ ಮತದಾರನೂ ತಪ್ಪದೆ ಮತದಾನ ಮಾಡಬೇಕು. ಮತದಾನ ಪವಿತ್ರ ಹಕ್ಕು ಹಾಗೂ ಕರ್ತವ್ಯವಾಗಿದ್ದು, ಯಾವುದೇ ಆಮಿಷಕ್ಕೆ ಒಳಗಾಗಬಾರದು. ಪ್ರಜಾಪ್ರಭುತ್ವ ರಕ್ಷಣೆ ನಿಸ್ವಾರ್ಥ ಮತದಾರರಿಂದ ಮಾತ್ರ ಸಾಧ್ಯ ಎಂದು ಹೇಳಿದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ಪೊಲೀಸ್ ಇನ್ಸ್‍ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಮಾತನಾಡಿ ಮತದಾರರು […]
ಶ್ರೀನಿವಾಸಪುರ: ತಾಲ್ಲೂಕಿನ ಕೊಡಿಚೆರುವು ಗ್ರಾಮದಲ್ಲಿ ಬುಧವಾರ ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವ ನಡೆಯಿತು. ರಥೋತ್ಸವದ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು, ಬಿರುಬಿಸಿಲು ಲೆಕ್ಕಿಸದೆ ರಥೋತ್ಸವದಲ್ಲಿ ಭಾಗವಹಿಸಿದ್ದರು. ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಗ್ರಾಮಸ್ಥರಿಂದ ಪಾನಕ ಸೇವೆ ನೀಡಲಾಯಿತು. ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎ.ಶಿವಾರೆಡ್ಡಿ, ಉಮಾದೇವಿ, ಕೆ.ಎಚ್.ಕೃಷ್ಣಪ್ಪ, ಜಯಣ್ಣ, ಶಿವಾನಂದ, ವೆಂಕಟೇಶ್, ಅಶೋಕ್, ರೆಡ್ಡಪ್ಪ, ಶ್ರೀನಿವಾಸ್, ಅರ್ಜುನ್, ರಂಗಸ್ವಾಮಿಶೆಟ್ಟಿ ಇದ್ದರು.
ಕೋಲಾರ ಏಪ್ರಿಲ್ 26 : ಸುಳ್ಳು ಜಾತಿ ಪ್ರಮಾಣಪತ್ರದ ಪ್ರಕರಣದಲ್ಲಿ ಜೈಲಿನಲ್ಲಿರಬೇಕಾಗಿದ್ದ ಕೊತ್ತೂರು ಮಂಜುನಾಥ್‍ಗೆ ಕೋಲಾರ ವಿಧಾನಸಭಾ ಕ್ಷೇತ್ರದ ಟಿಕೇಟ್‍ನ್ನು ಕಾಂಗ್ರೆಸ್ ಪಕ್ಷವು ನೀಡಿರುತ್ತದೆ. ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡಿ ಶಾಸಕನಾಗಿ ಐದು ವರ್ಷಗಳ ಅಧಿಕಾರವನ್ನು ನಡೆಸಿ ದಲಿತರ ಮೀಸಲಾತಿಯನ್ನು ಕಿತ್ತುಕೊಂಡ ಕೊತ್ತೂರು ಮಂಜುನಾಥ್ ರವರಿಗೆ ಕ್ಷೇತ್ರದ ಜನತೆ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸುವ ಮೂಲಕ ತಕ್ಕ ಪಾಠವನ್ನು ಕಲಿಸುವಂತೆ ಬಾಲಾಜಿ ಚನ್ನಯ್ಯ ಆಗ್ರಹಿಸಿರುತ್ತಾರೆ.ಪತ್ರಿಕಾಗೋಷ್ಠಿ ನಡೆಸಿದ ಇವರು ಕೊತ್ತೂರು ಮಂಜುನಾಥ್ ಹಿಂದುಳಿದ ವರ್ಗಗಳ ಪ್ರವರ್ಗ-1 ಬೈರಾಗಿ […]
ಕೋಲಾರ:- ಸರ್ವವ್ಯಾಪಿ,ಸರ್ವಸ್ಪರ್ಶಿಯಾಗಿ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಿರುವ ವಿಶ್ವವೇ ಮೆಚ್ಚುವ ನಾಯಕರಾದ ಪ್ರಧಾನಿ ಮೋದಿ ಹೆಸರೇ ವಿರೋಧಿಗಳಲ್ಲಿ ನಡುಕ ಹುಟ್ಟಿಸುತ್ತದೆ, ಕೋಲಾರಕ್ಕೆ ಅವರು ಬರುತ್ತಿರುವುದರಿಂದ ಇಲ್ಲಿನ ಪಕ್ಷದ ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಲಿದ್ದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸುನಾಮಿ ಅಪ್ಪಳಿಸಿ, ಭರ್ಜರಿ ಗೆಲುವು ದಾಖಲಿಸಲಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.ಬುಧವಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಕೆಂದಟ್ಟಿ ಸಮೀಪ ಏ.30ರ ಪ್ರಧಾನಿಯವರ ರ್ಯಾಲಿಯ ಪೂರ್ವಸಿದ್ದತೆಗಳನ್ನು ಪರಿಶೀಲಿಸಿ ಅವರು ಮಾತನಾಡಿ, ಪ್ರಧಾನಿಗಳ ಪ್ರಚಾರದಿಂದ ಹಳೆ ಮೈಸೂರು ಜಿಲ್ಲೆಗಳಲ್ಲಿ ಬಿಜೆಪಿ ಮತ್ತಷ್ಟು […]
ಕೋಲಾರ ಏಪ್ರಿಲ್ 25 : ಕರ್ನಾಟಕ ರಾಜ್ಯದಾದ್ಯಂತ ಹೊರವಲಯದ ಚೆಕ್ ಪೋಸ್ಟ್‍ಗಳಲ್ಲಿ ಕರ್ನಾಟಕ ರಾಜ್ಯದ ಚುನಾವಣಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಪೊಲೀಸ್ ಹಾಗೂ ಇತರೆ ಸಿಬ್ಬಂದಿಗೆ ಊಟ, ತಿಂಡಿ, ಕಾಫಿ, ನೀರಿನ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಅಥವಾ ಸರ್ಕಾರದ ವತಿಯಿಂದ ಒದಗಿಸುವಂತೆ ಜಿಲ್ಲಾಡಳಿತ ಮುಖಾಂತರ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ವಂದಿತಾ ಶÀರ್ಮಾ ರವರಿಗೆ ಮನವಿಯನ್ನು ಸಾಮಾಜಿಕ ಕಾರ್ಯಕರ್ತ ಗೌರಿಪೇಟೆ ಕೆ.ಎನ್.ರವೀಂದ್ರನಾಥ್, ಬೆಗ್ಲಿಹೊಸಹಳ್ಳಿ ಬಿ.ಎಂ.ಮುನಿಕೃಷ್ಣಯ್ಯ, ನಿವೃತ್ತ ಪಿಡಬ್ಲೂಡಿ ಅಧಿಕಾರಿ ಎನ್. ರಾಮಚಂದ್ರ ಮನವಿ ಮಾಡಿದ್ದಾರೆ.ಕರ್ನಾಟಕ ರಾಜ್ಯ […]
ಶ್ರೀನಿವಾಸಪುರ: ತಾಲ್ಲೂಕಿನ ರೈತರಿಗೆ ಕೆಸಿ ವ್ಯಾಲಿ ನೀರು ವರದಾನವಾಗಿದೆ. ಕ್ಷೇತ್ರದ ಕೆರೆ ತುಂಬುವ ಕಾರ್ಯ ಪ್ರಗತಿಯಲ್ಲಿದ್ದು, ಅಂತರ್ಜಲ ಹೆಚ್ಚಿದೆ. ರೈತರು ನೆಮ್ಮದಿ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಈತರಾಸನಹಳ್ಳಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳಾ ಸಂಘಗಳಿಗೆ ಬಡ್ಡಿರಹಿತ ಸಾಲ ನೀಡಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಸಾಲದ ಪ್ರಮಾಣ ಹೆಚ್ಚಿಸಲಾಗುವುದು ಎಂದು ಹೇಳಿದರು.ನನ್ನ ಎದುರಾಳಿಗಳು ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ […]
ಶ್ರೀನಿವಾಸಪುರ 3: ಶ್ರೀನಿವಾಸಪುರ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಸೋಮವಾರ ಅಂತಿಮ ಪಟ್ಟಿಯನ್ನು ಮಾಡಲಾಗಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೆ.ಆರ್.ರಮೇಶ್‍ಕುಮಾರ್, ಜೆಡಿಎಸ್ ಪಕ್ಷದಿಂದ ಜಿ.ಕೆ.ವೆಂಕಟಶಿವಾರೆಡ್ಡಿ, ಬಿಜೆಪಿ ಪಕ್ಷದಿಂದ ಆರ್.ಶ್ರೀನಿವಾಸರೆಡ್ಡಿ, ಎಎಪಿ ಪಕ್ಷದಿಂದ ವೈ.ವಿ.ವೆಂಕಟಾಚಲ, ಕೆ.ಆರ್.ಪಕ್ಷದಿಂದ ಜಿ.ಕೆ.ಆನಂದ್ , ಪಕ್ಷೇತರ ಅಭ್ಯರ್ಥಿಗಳಾಗಿ ಎನ್.ಎಸ್.ರಮೇಶ್‍ಕುಮಾರ್, ಎಸ್.ರಮೇಶ್‍ಕುಮಾರ್, ವೆಂಕಟಶಿವಾರೆಡ್ಡಿ, ಟಿ.ಎನ್.ವೆಂಕಟಶಿವಾರೆಡ್ಡಿ ಅಂತಿಮ ಕಣದಲ್ಲಿ ಇದ್ದಾರೆ
ಶ್ರೀನಿವಾಸಪುರ: ಕ್ಷೇತ್ರದ ಅಭಿವೃದ್ಧಿಗೆ ನನ್ನ ಕೊಡುಗೆ ನೋಡಿ ಚುನಾವಣೆಯಲ್ಲಿ ಆಶೀರ್ವಾದ ಮಾಡಿ ಎಂದು ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸೂಟು ಬೂಟು ಹಾಕಿಕೊಂಡು ಬಂದು ಮತ ಕೇಳುತ್ತಾರೆ. ಕ್ಷೇತ್ರಕ್ಕೆ ಅವರ ಕೊಡುಗೆ ಏನೂ ಇರುವುದಿಲ್ಲ. ಎಂದೂ ನಿಮ್ಮ ಕಷ್ಟಕ್ಕೆ ಸ್ಪಂದಿಸಿದವರು ಅವರಲ್ಲ ಎಂದು ಹೇಳಿದರು.ಸಂವಿಧಾನ ಸಮಾಜದ ಭಾವ ಬೆಸೆದಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಯಾದ ಸಂವಿಧಾನ ಶಾಂತಿಯುತ ಸಹಬಾಳ್ವೆಗೆ ಅನುವು ಮಾಡಿಕೊಟ್ಟಿದೆ. […]
ಮುಳಬಾಗಿಲು-ಏ-20, ಬೇಸಿಗೆಯಲ್ಲಿ ರೈತರ ಬೆಳೆ ರಕ್ಷಣೆಗೆ 10 ತಾಸು ಗುಣಮಟ್ಟದ ವಿದ್ಯುತ್ ನೀಡುವ ಜೊತೆಗೆ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಹ್ಮಾಂಡ ಭ್ರಷ್ಟಾಚಾರ ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತ ಸಂಘದಿಂದ ನಷ್ಠ ಬೆಳೆ ಸಮೇತ ಬೈರಕೂರು ವಿದ್ಯುತ್ ಉಪ ಕೇಂದ್ರದ ಮುಂದೆ ಹೋರಾಟ ಮಾಡಿ ಬೆಸ್ಕಂ ಅಧಿಕಾರಿ ಸಂತೋಷ್ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ದೇವರು ವರ ಕೊಟ್ಟರು ಪೂಜಾರಿ ನೀಡಲಿಲ್ಲ ಎಂಬ ಗಾದೆಯಂತೆ ಸರ್ಕಾರ ಬೇಸಿಗೆಯಲ್ಲಿ ರೈತರು ಬೆಳೆದ ಬೆಳೆಗಳ ರಕ್ಷಣೆಗೆ ನೀರು ಹಾಯಿಸಲು ಗುಣಮಟ್ಟದ […]