ಶ್ರೀನಿವಾಸಪುರ 1 : ನಮ್ಮ ಮತವು ನಮ್ಮ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಮತದಾನದ ಬಗ್ಗೆ ನಿರ್ಲಕ್ಷ್ಯತೆ ತೊರದೆ ಎಲ್ಲರೂ ಕಡ್ಡಾಯ ಮತದಾನ ಮಾಡಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಕೃಷ್ಣಪ್ಪ ಹೇಳಿದರು.ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ನಡೆದ ವನಿತಾ ವೈಭವ ಕಾರ್ಯಕ್ರಮದ ಅಂಗವಾಗಿ ನಡೆದ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕೇಂದ್ರ ಚುನಾವಣಾ ಆಯೋಗವು ಮತದಾನ ಪ್ರಮಾಣ ಹೆಚ್ಚಿಸಲು ಸಾಕಷ್ಟು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ, ಈ ಬಾರಿ 80 ವರ್ಷಕಿಂತ ಹೆಚ್ಚಿನ ವಯೋವೃದ್ಧರು ಮತಗಟ್ಟೆಗೆ ಬಂದು […]
ಶ್ರೀನಿವಾಸಪುರ: ಫೆಬ್ರವರಿ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕಂಪ್ಯೂಟರ್ OFFICE AUTOMATION ಪರೀಕ್ಷೆಗಳಲ್ಲಿ ಪಟ್ಟಣದ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (KIIT) 17 ಡಿಸ್ಟಿಂಗ್‍ಷನ್ಸ್ ನೊಂದಿಗೆ (DISTINCTIONS) ಶೇಕಡ100ರಷ್ಟು ಫಲಿತಾಂಶ ದೊರೆತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.ಪಟ್ಟಣದ ಎಂ.ಜಿ.ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (KIIT) ಕಳೆದ ಆಗಸ್ಟ್ ಮಾಹೆಯಲ್ಲಿರಾಜ್ಯ ಮಟ್ಟದಲ್ಲಿ ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕಂಪ್ಯೂಟರ್ OFFICE AUTOMATION ಪರೀಕ್ಷೆಗೆ […]
ಶ್ರೀನಿವಾಸಪುರ: ತಾಲ್ಲೂಕಿನ ಆವಲಕುಪ್ಪ ಗ್ರಾಮದ ಸಮೀಪ ಭಾನುವಾರ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ.1.70 ಲಕ್ಷ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.ವಲಯ ಅಬಕಾರಿ ಇನ್ಸ್‍ಪೆಕ್ಟರ್ ಬಿ.ಎಸ್.ರೋಹಿತ್ ಮತ್ತು ಸಿಬ್ಬಂದಿ ಚುನಾವಣೆ ಪ್ರಯುಕ್ತ ಗಸ್ತು ತಿರುಗುತ್ತಿದ್ದಾಗ, ಅವಲುಕುಪ್ಪ ಗ್ರಾಮದ ಸಮೀಪ 46.8 ಲೀಟರ್ ಬಿಯರ್ ಮತ್ತು 17.28 ಲೀಟರ್ ಮದ್ಯವನ್ನು ಕಾರಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದುದನ್ನು ಪತ್ತೆಹಚ್ಚಲಾಯಿತು. ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
ಶ್ರೀನಿವಾಸಪುರ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮತದಾರರು ಜೆಡಿಎಸ್ ಬೆಂಬಲಿಸಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಏರ್ಪಡಿಸಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಡಿನ ಅಭಿವೃದ್ಧಿ ಬಗ್ಗೆ ಕೈಗೊಂಡಿರುವ ದೀಕ್ಷೆ ಸಾಕಾರಗೊಳ್ಳಲು, ಮತದಾರರು ಶಕ್ತಿ ತುಂಬಬೇಕು ಎಂದು ಹೇಳಿದರು.ಜೆಡಿಎಸ್‍ನ ಜಲಧಾರೆ ಯೋಜನೆ ಜಿಲ್ಲೆಗೆ ವರದಾನವಾಗಲಿದೆ. ಈ ಯೋಜನೆಯಡಿ ಜಿಲ್ಲೆಗೆ ಕುಡಿಯಲು ಹಾಗೂ ವ್ಯವಸಾಯಕ್ಕೆ ಯೋಗ್ಯವಾದ ನೀರು ಪೂರೈಸಲಾಗುವುದು. ಪಂಚರತ್ನ ಯೋಜನೆ ಸಮಾಜದ ಎಲ್ಲ […]
ಶ್ರೀನಿವಾಸಪುರ; ಏ.7: ಕಳೆದುಹೋಗಿರುವ ಪಣಸಮಾಕನಹಳ್ಳಿ ಕೆರೆಯನ್ನು ಹುಡುಕಿಕೊಟ್ಟು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಸರ್ಕಾರಿ ಕೆರೆಯನ್ನು ಉಳಿಸಬೇಕೆಂದು ಏ.12ರ ಬುಧವಾರ ತಾಲೂಕು ಕಚೇರಿ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ಪ್ರವಾಸಿ ಮಂದಿರದಲ್ಲಿ ಕರೆದಿದ್ದ ರೈತಸಂಘದ ಸಭೆಯಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ನಗರಕ್ಕೆ ಕೂಗಳತೆ ದೂರದಲ್ಲಿರುವ ಮಳೆ ನೀರು ಸಂಗ್ರಹವಾಗುವ ಸರ್ಕಾರಿ ಕೆರೆ ಸರ್ವೇ ನಂ.72ರಲ್ಲಿ 15 ಎಕರೆ 24 ಗುಂಟೆ ಕೆರೆ ಜಮೀನನ್ನು ಕಂದಾಯ ಹಾಗೂ ಸರ್ವೇ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂದು ಕೋಟ್ಯಾಂತರ […]
ಮುಳಬಾಗಿಲು, ಏ.06: ಎಂ.ಎಸ್.ಪಿ.ಸಿ (ಅಂಗನವಾಡಿ ಕೇಂದ್ರಗಳಿಗೆ) ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪಧಾರ್ಥಗಳನ್ನು ಸರಬರಾಜು ಮಾಡುವ ಕಿಸಾನ್ ಟ್ರೇಡರ್ಸ್ ಟೆಂಡರ್ ಪರವಾನಗಿ ರದ್ದು ಮಾಡಿ ಅಂಗನವಾಡಿ ಹಾಜರಾತಿ ಪರೀಶೀಲನೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ಏ.11 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಕಳಪೆ ಆಹಾರ ಸಮೇತ ಪ್ರತಿಭಟನೆ ಮಾಡಲು ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.ಅಂಗನವಾಡಿ ಮಕ್ಕಳ ಹಾಗೂ ಗರ್ಭಿಣಿ ಸ್ತ್ರೀಯರ ಅಪೌಷ್ಠಿಕತೆ ಸಮಸ್ಯೆ ಹೋಗಲಾಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾg ನಿಡುವ ಅನುದಾನದಲ್ಲಿ ವಿತರಣೆ ಮಾಡುವ […]
ಕೋಲಾರ : ಸಾರ್ವತ್ರಿಕ ಚುನಾವಣೆ -2023 ಸಂಬಂಧವಾಗಿ ನೀತಿ ಸಂಹಿತೆ ಜಾರಿಯಾಗಿದ್ದು , ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ನಗದು ಅಕ್ರಮಗಳು ನಡೆಯದಂತೆ ಕಡಿವಾಣ ಹಾಕಲು ಬ್ಯಾಂಕ್‌ಗಳವರು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಮನವಿ ಮಾಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಬ್ಯಾಂಕ್ ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ನೀತಿ ಸಂಹಿತೆ ಜಾರಿಯಾಗಿರುವುದರಿಂದ ಎಲ್ಲ ತರಹದ ಖಾತೆಗಳಲ್ಲಿ ನಗದು ವ್ಯವಹಾರದ ಮೇಲೆ ನಿಗಾ ಇಡಬೇಕಾಗುತ್ತದೆ.ಸಾರ್ವಜನಿಕರೂ ಇದಕ್ಕೆ ಸಹಕರಿಸಬೇಕು. […]
ಶ್ರೀನಿವಾಸಪುರ: ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಸಭಾಂಗಣದಲ್ಲಿ ಬುಧವಾರ ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಿಸಲಾಯಿತು. ಶಾಸಕ ಕೆ.ಆರ್.ರಮೇಶ್ ಕುಮಾರ್ ಡಾ. ಬಾಬು ಜಗಜೀವನ್ ರಾಂ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಅರ್ಪಿಸಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಮುಖಂಡರಾದ ವೆಂಕಟೇಶ್, ಎನ್.ಮುನಿಸ್ವಾಮಿ, ಕೆ.ಕೆ.ಮಂಜು, ಸೀತಾರಾಮರೆಡ್ಡಿ, ವರ್ತನಹಳ್ಳಿ ವೆಂಕಟೇಶ್, ಮುನಿರಾಜು, ಕೆ.ನಾರಾಯಣಸ್ವಾಮಿ ಇದ್ದರು.ಮಾಲಾರ್ಪಣೆ: ಬಾಬು ಜಗಜೀವನ್ ರಾಂ ಜಯಂತಿ ಅಂಗವಾಗಿ ತಾಲ್ಲೂಕು ಕಚೇರಿ ಮುಂಭಾಗ ಅಂಬೇಡ್ಕರ್ ಉದ್ಯಾನದಲ್ಲಿನ […]
ಶ್ರೀನಿವಾಸಪುರ: ಹಸಿರು ಕ್ರಾಂತಿಗೆ ರಾಷ್ಟ್ರದ ಮಾಜಿ ಹಂಗಾಮಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಕೊಡುಗೆ ಅಪಾರ. ಅವರು ತಮ್ಮ ಸಾಮಾಜಿಕ ಬದ್ಧತೆಯಿಂದಾಗಿ ಸಮಾಜದ ಎಲ್ಲ ಸಮುದಾಯಗಳ ಪ್ರೀತಿಗೆ ಪಾತ್ರರಾಗಿದ್ದರು ಎಂದು ದಲಿತ ಮುಖಂಡ ಸೀತಪ್ಪ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಡಾ. ಬಾಬು ಜಗಜೀವನ್ ರಾಂ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಬಾಬು ಜಗಜೀವನ್ ರಾಂ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ […]