ಶ್ರೀನಿವಾಸಪುರ : ಈಗ ನಡೆಯುತ್ತಿರುವ ಯುದ್ದದ ಸೂಚನೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಳೆದ 3 ತಿಂಗಳ ಹಿಂದೆಯೇ ಮಾಹಿತಿ ಇದ್ದರೂ ಸಹ ಗಂಭೀರ ಯೋಜನೆ ಮಾಡದೆ ನಿರ್ಲಕ್ಷ ವಹಿಸಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡಿದರು. ನಮ್ಮ ರಾಜ್ಯವು ಟ್ಯಾಕ್ಸ್ ಕಟ್ಟುವ ವಿಚಾರದಲ್ಲಿ ದೇಶಕ್ಕೆ ಎರಡು ಸ್ಥಾನ . ಹೀಗಿದ್ದರು ಸಹ ನಮ್ಮ ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆಹಾರ ಮತ್ತು ನಾಗರೀಕ ಸರಬಾರಜು ಸಚಿವ ಕೆ.ಎಚ್.ಮುನಿಯಪ್ಪಪಟ್ಟಣದಲ್ಲಿ ಬುಧವಾರ ಖಾಸಗಿ ಕಾರ್ಯಕ್ರಮದಲ್ಲಿ […]

Read More

ಬೆಂಗಳೂರು : ಬೀದರ ಜಿಲ್ಲೆಯ ಬಸವನನಾಡಿನಲ್ಲಿ ಇದೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ ಖಂಡ್ರೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಬೆಂಗಳೂರಿನ ಸಿಎಂ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನ ಪತ್ರವನ್ನು ಸಲ್ಲಿಸಿದರು. ಬೀದರ ನಗರವು ಬಸವಣ್ಣನವರ ನಾಡು ಮತ್ತು ಸೂಫಿ ಸಂತರ ನೆಲೆಬೀಡು ಎಂಬ […]

Read More

ಕೋಲಾರ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನ ವಿದ್ಯಾರ್ಥಿನಿ ಕು. ಎಂ. ಚಿರಂತನ ಅವರು 596 ಅಂಕಗಳನ್ನು ಗಳಿಸಿ ಕೋಲಾರ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ನಿರಂತರ ಪರಿಶ್ರಮ, ದೃಢ ನಿಷ್ಠೆ ಮತ್ತು ಶಿಸ್ತಿನ ಅಧ್ಯಯನದ ಫಲವಾಗಿ ಚಿರಂತನ ಅವರು ಈ ಉನ್ನತ ಸಾಧನೆ ಮಾಡಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಅವರ ಸಾಧನೆಗೆ ತಂದೆ ಮಾರುತಿ ತಾಯಿ ಕೆಂಪಮ್ಮ ಮತ್ತು […]

Read More

ಶ್ರೀನಿವಾಸಪುರ : ಹಾಲು ಉತ್ತಮ ಗುಣಮಟ್ಟದಲ್ಲಿದ್ದರೆ ಮಾತ್ರ ಅದಕ್ಕೆ ಹೆಚ್ಚಿನ ಬೆಲೆ ಲಭ್ಯವಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ತಾಲ್ಲೂಕಿನ ಆರ್. ತಿಮ್ಮಸಂದ್ರ ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಂಘದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘದ ಲೆಕ್ಕಪತ್ರಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಹೈನುಗಾರಿಕೆ ಒಂದು ದೊಡ್ಡ ಉದ್ಯಮವಾಗಿದ್ದು, ಅದನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವುದು ಅಗತ್ಯ ಎಂದು ಹೇಳಿದರು.  ದಿವಂಗತ ಎಂ.ವಿ. ಕೃಷ್ಣಪ್ಪ ಅವರು ಕ್ಷೀರ ಕ್ರಾಂತಿಯ ಹರಿಕಾರರಾಗಿದ್ದು, ಅವರ […]

Read More

ಶ್ರೀನಿವಾಸಪುರ : ಸ್ಥಳೀಯ ಸಹಕಾರ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿ, ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಪಾತಪಳ್ಳಿ ಪಿ.ಎನ್. ಮಂಜುನಾಥ ರೆಡ್ಡಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಶಬ್ಬೀರ್ ಅಹ್ಮದ್ ಪಾಷಾ ಅಧಿಕಾರ ಸ್ವೀಕರಿಸಿದ್ದಾರೆ. ಈ ಆಯ್ಕೆಯಲ್ಲಿ ವಿಶೇಷವೆಂದರೆ, ಸಂಘದ ಇತಿಹಾಸದಲ್ಲಿ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿ ಶಬ್ಬೀರ್ ಅಹ್ಮದ್ ಪಾಷಾ ಉಪಾಧ್ಯಕ್ಷ ಸ್ಥಾನಕ್ಕೇರಿರುವುದು ಗಮನಾರ್ಹ ಮೈಲಿಗಲ್ಲಾಗಿದೆ. ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ […]

Read More

ಶ್ರೀನಿವಾಸಪುರ : ತಾಲ್ಲೂಕನ್ನು ಜಿಲ್ಲೆಯಲ್ಲಿ ಸ್ವಚ್ಛತೆಯ ಮಾದರಿಯನ್ನಾಗಿಸಲು ಸಂಕಲ್ಪ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಸರ್ವೇಶ್ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 25 ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ವಾರದಿಂದಲೇ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಶ್ರೀನಿವಾಸಪುರವನ್ನು ಸ್ವಚ್ಛತೆಯ ಕ್ಷೇತ್ರದಲ್ಲಿ ಜಿಲ್ಲೆಗೆ ಮಾದರಿಯನ್ನಾಗಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಮನ್ವಯದಿಂದ […]

Read More

ಶ್ರೀನಿವಾಸಪುರ : ಓಂ ಶ್ರೀ ಮಂಜುನಾಥಾಯ ನಮ ಎಂಬ ಭಕ್ತಿಭಾವದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬವನ್ನು ಶ್ರೀನಿವಾಸಪುರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ರಾಜ್ಯದ ಲಕ್ಷಾಂತರ ಮಹಿಳೆಯರ ಸಬಲಿಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವ ಮಾತೃಶ್ರೀ ಹೇಮಾವತಿ ಅಮ್ಮನವರು, ನೊಂದವರು, ನಿರ್ಗತಿಕರು ಹಾಗೂ ಆಶ್ರಯವಿಲ್ಲದವರಿಗೆ ಆಶಾಕಿರಣವಾಗಿ ಪರಿಣಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮಾಸಿಕ ರೂ.1000 ರಿಂದ ರೂ.3000ರವರೆಗೆ ನೆರವು […]

Read More

ಶ್ರೀನಿವಾಸಪುರ : ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಶ್ರೀ ಪಾರ್ವತಿ ಸಮೇತ ಸಹಮನೇಶ್ವರಸ್ವಾಮಿ ಬ್ರಹ್ಮರಥೋತ್ಸವವು ಗುರುವಾರ ಭಕ್ತಿಭಾವದಿಂದ, ಸಂಪ್ರದಾಯಬದ್ಧವಾಗಿ ಹಾಗೂ ಅದ್ದೂರಿಯಾಗಿ ನಡೆಯಿತು. ಉತ್ಸವದ ಅಂಗವಾಗಿ ಬೆಳಗ್ಗಿನಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆಗಳು, ಅಭಿಷೇಕ, ಅಲಂಕಾರ ಕಾರ್ಯಗಳು ನೆರವೇರಿದವು. ನಂತರ ಗ್ರಾಮ ದೇವರ ಉತ್ಸವ ಮೂರ್ತಿಯನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.  ಈ ವೇಳೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಭಕ್ತರು ಹೂವು, ಹಣ್ಣು, ಪೂಜೆ ಸಾಮಗ್ರಿಗಳನ್ನು ಸಮರ್ಪಿಸಿ ಭಕ್ತಿಭಾವದಿಂದ […]

Read More

ಶ್ರೀನಿವಾಸಪುರ : ಜಿಲ್ಲಾ ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಕೆ. ಮಹೇಶ್ ಅವರು ಮೊದಲಿನಿಂದಲೂ ಸಂಘಟನೆ ಕಾರ್ಯಗಳಲ್ಲಿ ತೊಡಗಿಸಿಕೊಂಡು ಅನುಭವ ಹೊಂದಿದ್ದಾರೆ ಎಂದು ತಾಲೂಕು ಪಂಚಾಯಿತಿ ಇಒ ಕೆ. ಸರ್ವೇಶ್ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷೆ ಹಾಗೂ ಖಜಾಂಚಿಯನ್ನು ಸನ್ಮಾನಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಲಾಖೆಯಲ್ಲಿ ಹಲವು ಸವಾಲುಗಳು ಎದುರಾಗುತ್ತಿದ್ದು, ಅವುಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಮಹೇಶ್ […]

Read More
1 10 11 12 13 14 389