
ಕೋಲಾರ/ 26 ನವೆಂಬರ್ (ಹಿ.ಸ) : ನಮ್ಮ ದೇಶ ಭಾರತದ ಸಂವಿಧಾನವನ್ನು 1949ರ ನವೆಂಬರ್ 26ರಂದು ಅಂಗೀಕರಿಸಲಾಗಿದ್ದು, ಆ ದಿನವನ್ನು ಸಂವಿಧಾನ ದಿನ ಎಂದು ಆಚರಿಸಲಾಗುತ್ತಿದೆ. ಇದು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಒತ್ತಿಹೇಳುತ್ತದೆ. ಡಾ. ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆಗಳನ್ನು ಗುರುತಿಸುವುದಲ್ಲದೆ, ಪ್ರಜಾಸತ್ತಾತ್ಮಕ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸುವಲ್ಲಿ ನಾಗರಿಕರ ತೊಡಗಿಸಿಕೊಳ್ಳುವಿಕೆಯನ್ನು ಪ್ರತಿಪಾದಿಸುವ ಆಚರಣೆಯಾಗಿದೆ. ಆದ್ದರಿಂದ ಸಂವಿಧಾನ ದಿನವನ್ನು ನಮ್ಮ ದೇಶದ ಉದ್ದಗಲಕ್ಕೂ ಆಚರಿಸಲಾಗುತ್ತದೆ. ವಿಶೇಷವಾಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ […]

ಶ್ರೀನಿವಾಸಪುರ : ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯತಿಯಿಂದ ಪುರಸಭೆ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಗೌನಿಪಲ್ಲಿ ಗ್ರಾಮದ ಅಮ್ಜದ್ ಖಾನ್ ರವರು ಗೌನಿಪಲ್ಲಿ ಯಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನ ವೇಳೆ ಸರ್ಕಾರಕ್ಕೆ ಹಾಗೂ ಸಂಬಂಧ ಪಟ್ಟ ಸಚಿವರಿಗೆ ಮನವಿ ಪತ್ರವನ್ನು ನೀಡಲು ಸತತ ಎರಡನೇ ಬಾರಿ ಪಾದಯಾತ್ರೆ ಮೂಲಕ ಹೊರಟಿದ್ದಾರೆ.ಇದೇ ಸಂದರ್ಭದಲ್ಲಿ ಮಾತನಾಡಿದ ಅಮ್ಜದ್ ಖಾನ್ ಗೌನಿಪಲ್ಲಿ ಗ್ರಾಮ ಪಂಚಾಯತಿ ಪುರಸಭೆಗೆ ಎಲ್ಲಾ ರೀತಿಯಲ್ಲಿಯೂ ಅರ್ಹತೆ ಹೊಂದಿದ್ದು ಕಳೆದ 2023 ರ ಅಧಿವೇಶನ ವೇಳೆಯೂ ಸಹಾ ಪಾದಯಾತ್ರೆ […]

ಶ್ರೀನಿವಾಸಪುರ,ನ.೨೩-ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ ರೈತ ಕೃಷಿ ಕಾರ್ಮಿಕ ವಿರೋದಿ ಸರಕಾರಗಳಿಂದ ಪ್ರಜಾಪ್ರಭುತ್ವ ಗಂಡಾಂತರಲ್ಲಿದೆ. ಬಹುರಾಷ್ಟ್ರೀಯ ದೇಶಿ ಬಂಡವಾಳ ಶಾಹಿಗಳಿಂದ ಕೃಷಿ ನಾಶವಾಗುತ್ತಿದೆ ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ಆರೋಪಿಸಿದರು. ಪಟ್ಟಣದ ಪುರಸಭೆ ಮುಂಭಾಗದ ಎಂಜಿ ರಸ್ತೆಯಲ್ಲಿ ಸಿಪಿಐಎಂ ಪಕ್ಷದಿಂದ ಏರ್ಪಡಿಸಿದ್ದ ೧೮ನೇ ಸಮ್ಮೇಳನ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ ಕೇಂದ್ರ ರಾಜ್ಯ ಸರಕಾರಗಳು ಬಡವರು ರೈತರನ್ನು ಕಡೆಗಣಿಸಿ ಕಾರ್ಪೂರೇಟ್ ಬಂಡವಾಳಗಾರರ ಪರ ನಿಂತಿವೆ ಎಂದು ಹೇಳಿದರು. ಭಾರತ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ […]

ಕೋಲಾರ,ನ.25: ರಾಜ್ಯ ಸರ್ಕಾರದ ಮುಂದಿನ ಬಜೆಟ್‍ನಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷರೂ ನೀಡಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳ ಪತ್ರಿಕಾ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ತುಮಕೂರಿನಲ್ಲಿ ನಡೆದ ಪತ್ರಕರ್ತರ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ಜಿಲ್ಲೆಯ ಘನತೆ ಹೆಚ್ಚಿಸಿದ ಪತ್ರಕರ್ತರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಬ್ಬಡ್ಡಿಯಲ್ಲಿ ಚಾಂಫಿಯನ್ ಆಗಿ ಹೊರಹೊಮ್ಮಿದ ಜಿಲ್ಲಾ ತಂಡಕ್ಕೆ ವೈಯಕ್ತಿಕವಾಗಿ ಇಪ್ಪತ್ತೈದು ಸಾವಿರ ರೂ ಬಹುಮಾನ ಘೋಷಿಸಿ ಅವರು ಮಾತನಾಡುತ್ತಿದ್ದರು.ರಾಜ್ಯದಲ್ಲೇ ಕೋಲಾರ ಜಿಲ್ಲಾ […]

ಕೋಲಾರ ; ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ದಿಸೆಯಲ್ಲಿ ಅವಧಿಗಿಂತ ಮುಂಚೆಯೇ ಗುರಿ ತಲುಪಿ ಕೋಲಾರ ಜಿಲ್ಲೆಯನ್ನು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವಂತೆ ಮಾಡಿದ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ರಾಜ್ಯ ಸರ್ಕಾರ ಅಭಿನಂದಿಸಿದೆ. ಕಂದಾಯ ಇಲಾಖೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಈ ಕುರಿತು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ಅಭಿನಂದನಾ ಪತ್ರ ಬರೆದಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ […]

ಶ್ರೀನಿವಾಸಪುರ : ಸರ್ಕಾರದ ಸೌಲಭ್ಯಗಳನ್ನು ಹಾಗು ದಾನಿಗಳು ನೀಡುವಂತಹ ಲೇಖನಿ ಸಾಮಾಗ್ರಿಗಳನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾವಂತರಾಗುವಂತೆ ಎಂದು ದಾನಿ ಆವಲಕುಪ್ಪ ಎಂ. ರಂಗಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ತಾಲೂಕಿನ ಆವಲಕುಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ದಾನಿಗಳಾದ ಎಂ. ರಂಗಪ್ಪ ಕುಟುಂಬದವರಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು , ಬ್ಯಾಗ್, ಲೇಖನಿ , ಆಟದ ಸಾಮಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು.ಹಿಂದೆ ಬಡತನದ ಕಾರಣಕ್ಕಾಗಿ ಅನೇಕ ಮಕ್ಕಳು ಶಾಲೆಯನ್ನು ತೊರೆಯುತ್ತಿದ್ದರು ದೂರದ ಊರುಗಳಿಗೆ ಹೋಗಿ ಶಿಕ್ಷಣವನ್ನು ಪಡೆಯಲು […]

ಶ್ರೀನಿವಾಸಪುರ : ನಮ್ಮ ನಾಯಕ ಕೆ.ಆರ್.ರಮೇಶ್‍ಕುಮಾರ್ ರವರಿಗೆ ದೇವರು ಆಯಸ್ಸು, ಆರೋಗ್ಯ ನೀಡಿ ಕಾಪಾಡಲಿ ಎಂದು ಆಶಿಸುತ್ತೇನೆ ಎಂದು ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ಹೇಳಿದರು.ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಆವರಣದಲ್ಲಿ ಶುಕ್ರವಾರ ಕೆ.ಆರ್.ರಮೇಶ್‍ಕುಮಾರ್‍ರವರ ಹುಟ್ಟುಹಬ್ಬದ ಆಚರಣೆ ಅಂಗವಾಗಿ ಕೇಕ್ ಕಟ್ಟುಮಾಡುವುದರ ಮೂಲಕ ಆಚರಣೆ ಮಾಡಿದರು.ಇದೇ ಸಂದರ್ಭದಲ್ಲಿ ಕೆ.ಆರ್ .ರಮೇಶ್ ಕುಮಾರ್‍ರವರ ಮಗ ಹರ್ಷ ರವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದರು.ಕೆಪಿಸಿಸಿ ಸದಸ್ಯ ಸಂಜಯ್‍ರೆಡ್ಡಿ , ಪಿಎಲ್‍ಡಿ ಬ್ಯಾಂಕ್ ನಿರ್ದೇಶಕ ಕೃಷ್ಣಾರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬೈರಪಲ್ಲಿ ವೆಂಕಟರೆಡ್ಡಿ, […]

ಐಸಿಎಆರ್ – ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ, ರೇಷ್ಮೆ ಇಲಾಖೆ, ಕೋಲಾರ, ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ “ಗುಣಮಟ್ಟದ ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ಸುಧಾರಿತ ಯಂತ್ರಗಳು ಮತ್ತು ಆಧುನಿಕ ತಾಂತ್ರಿಕತೆಗಳ” ಅರಿವು ಕಾರ್ಯಾಗಾರವನ್ನು ದಿನಾಂಕ: 20.11.2024 ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ಆಯೋಜಿಸಲಾಗಿತ್ತು.ಉದ್ಘಾಟನೆಯನ್ನು ನೆರವೇರಿಸಿದ ಶ್ರೀ. ನಾಗರಾಜ್ ಎಂ ರೇಷ್ಮೆ ಉಪನಿರ್ದೇಶಕರು, ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ, ಕೋಲಾರರವರು ಮಾತನಾಡಿ, ರೇಷ್ಮೆ ನೂಲು ಬಿಚ್ಚಾಣಿಕೆದಾರರು ಈ ಹಿಂದೆ ಚರಕ, […]

ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದ ಯಲ್ಲಪ್ಪರ ಪುತ್ರಿ ವಿದ್ಯಾರ್ಥಿನಿ ದಿವ್ಯಭಾರತಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಕಾರಣ ಡಾನ್ ಬೋಸ್ಕೋ ಕಾಲೇಜಿನ ರಾಜ್ಯೋತ್ಸವ ಸಮಾರಂಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿ ಪೆÇ್ರ.ನಿರಂಜನವಾನಳ್ಳಿ ಹಾಗೂ ಕಾಲೇಜಿನ ಮುಖ್ಯಸ್ಥರು ಸನ್ಮಾನಿಸಿದರು