ಕೋಲಾರ : ಸಾರ್ವಜನಿಕರ ಅಹವಾಲುಗಳನ್ನು ಮುಖ್ಯಮಂತ್ರಿಗಳಿಗೆ ನೇರವಾಗಿ ನೀಡುವ ಜನತಾ ದರ್ಶನದ ಮುಂದುವರೆದ ಭಾಗವಾಗಿ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಿದೆ . ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು , ಕಾರ್ಯದರ್ಶಿಗಳು , ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಾರೆ. ಅಂತೆಯೇ ತಾಲ್ಲೂಕು ಮಟ್ಟದಲ್ಲಿ ಶಾಸಕರು , ತಹಶೀಲ್ದಾರ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಾರೆ. ಜಿಲ್ಲಾ ಮಟ್ಟದಲ್ಲಿ ಪ್ರತಿ ಮಾಹೆ ಒಂದರಂತೆ ಹಾಗೂ ಪ್ರತಿ […]
ಶ್ರೀನಿವಾಸಪುರ : ಯಾವುದೇ ಒಂದು ಸರ್ಕಾರ ರೈತರ ಹಿತವನ್ನು ಕಾಪಾಡಬೇಕು, ಯಾವುದೇ ಸರ್ಕಾರವಾಗಲಿ ರೈತರೊಂದಿಗೆ ಮಾತುಕತೆ ನಡೆಸಬೇಕು. ಇದನ್ನು ಬಿಟ್ಟು ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಲೀನ್ ಕುಮಾರ್ ಕಟೀಲ್ ಪ್ರಶ್ನಿಸದರು?ರೈತರು ಬೆಳೆದ ಬೆಳೆಗಳ ಫಸಲು ಕೀಳುವುದಕ್ಕೆ ಅವಕಾಶ ನೀಡದೆ, ರೈತರೊಂದಿಗೆ ಮಾತುಕತೆ ನೀಡದೆ ರಾತ್ರೋರಾತ್ರಿ ನೂರಾರು ಜೆಸಿಬಿ ಮುಖಾಂತರ ಬಂದು ಬೆಳೆಗಳನ್ನು ನಾಶ ಪಡಿಸುವುದು ಅವಶ್ಯಕತೆ ಆದರೂ ಏನು ಎಂದುತಾಲೂಕಿನ ಕೇತುಗಾನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆಯ ನಾಶಪಡಿಸಲಾದ ರೈತರ […]
ಶ್ರೀನಿವಾಸಪುರ : ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ವನ್ನು ಮಾಡುವುದರ ಮೂಲಕ ದೇಶ ಸೇವೆಯನ್ನ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜಸೇವಕ ಗುಂಜೂರು ಶ್ರೀನಿವಾಸರೆಡ್ಡಿ ಹೇಳಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿ ಮಾತನಾಡಿದರು.ಯುವಕರು ರಕ್ತದಾನವನ್ನು ಇನ್ನೂಬ್ಬರ ಜೀವವನ್ನು ಉಳಿಸಿ ನಿಟ್ಟಿನಲ್ಲಿ ರಕ್ತದಾನ ಮಾಡಿದ್ದಾರೆ. ದೇಶದ ಒಳಿತಿಗಾಗಿ ಒಂದು ದಿನವೂ ವಿಶ್ರಾಂತಿ ಪಡೆಯದೆ, ದೇಶದ ಏಳಿಗೆಗಾಗಿ ಹಗಲಿರಲು ದುಡಿಯವ ಮಹಾಚೇತನ ನರೇಂದ್ರಮೋದಿ ರವರ ಆರೋಗ್ಯವಾಗಲಿ ಇರಲಿ ಎನ್ನುವ ದೃಷ್ಟಿಯಲ್ಲಿ […]
ಶ್ರೀನಿವಾಸಪುರ 3 : ಪಟ್ಟನದ ಪುರಸಭೆ ಕಛೇರಿಗೆ ಭಾನುವಾರ ಪುರಸಭೆಯ ಕಡತಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಅಕ್ರಮಪಾಷ ಮಾತನಾಡಿದರು.ಪುರಸಭಾ ವ್ಯಾಪ್ತಿಯ ಇಂದಿರಾ ನಗರ , ಮಾರತಿ ನಗರ, ಡಾ. ಜಾಕೀರ್ ಹುಸೇನ್ ಮೊಹಲ್ಲಾ , ವೆಂಕಟೇಶ್ವರ ಬಡವಾಣೆ ಸೇರಿದಂತೆ ವಿವಿಧ ಬಡವಾಣೆಗಳಿಗೆ ಬೇಟಿ ನೀಡಿ ಸ್ವಚ್ಚತೆ, ಬೀದಿ ದೀಪಗಳ ಸಿಸಿಎಂಎಸ್ ಲೈಟ್ಸ್ ನಿರ್ವಹಣೆ ಹಾಗೂ ಮುಖ್ಯ ಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ನಿರ್ವಹಿಸಿರುವ ಸಿಸಿ ರಸ್ತೆ , ಮತ್ತು ಚರಂಡಿ ಕಾಮಗಾರಿ ಸೇರಿದಂತೆ ಡ್ರೈವೇಸ್ಟ್ ಮ್ಯಾನೇಜ್ಮೆಂಟ್ ನಿರ್ವಹಣೆ ಘಟಕಗಳನ್ನು ಖುದ್ಧಾಗಿ […]
ಶ್ರೀನಿವಾಸಪುರ : ಪಟ್ಟಣದ ಎಂಜಿ ರಸ್ತೆ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲೂಕು ವಿಶ್ವಕರ್ಮ ಸಮುದಾಯದವತಿಯಿಂದ ಭಾನುವಾರ ವಿಶ್ವಕರ್ಮ ದಿನಾಚರಣೆ ಆಯೋಜಿಸಲಾಗಿತ್ತು.ತಾಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಕೆ.ಮೋಹನಾಚಾರಿ, ವಕೀಲ ಸದಾಶಿವಾಚಾರಿ, ಮುಖಂಡರಾದ ರವಿಚಂದ್ರಚಾರಿ, ರಾಮಚಂದ್ರಾಚಾರಿ, ರತ್ನಚಾರಿ, ಕೃಷ್ಣಮೂರ್ತಿ, ಉಪ್ಪಕುಂಟೆ ಶಿಲ್ಪಿ ಮಂಜುನಾಥಚಾರಿ , ನಂದೀಶ್, ಸೋಮಶೇಖರ್, ಮಹಿಳಾ ಘಟಕದ ತಾಲೂಕು ಅಧ್ಯಕ್ಷ ರಾಧಮ್ಮ, ಸದಸ್ಯೆ ಅನ್ನಪೂರ್ಣಮ್ಮ ಅರ್ಚಕರಾದ ಮಂಜುನಾಥ್, ರಮೇಶ್ ಇದ್ದರು.
ಶ್ರೀನಿವಾಸಪುರ: ಸಾಲ ಪಡೆದಿರುವ ಫಲಾನುಭವಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಕಸಬಾ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ವಿ.ಅಯ್ಯಪ್ಪ ಹೇಳಿದರು.ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಂಘದ ಸದಸ್ಯರಿಗೆ ಪಕ್ಷಾತೀತವಾಗಿ ಸಾಲ ವಿತರಣೆ ಮಾಡಲಾಗಿದೆ. ಮರುಪಾವತಿ ಪ್ರಮಾಣ ತೃಪ್ತಿಕರವಾಗಿದ್ದರೂ, ಇನ್ನಷ್ಟು ಪ್ರಾಮಾಣಿಕವಾಗಿ ಸಮಯಕ್ಕೆ ಸರಿಯಾಗಿ ಸಾಲ […]
ಶ್ರೀನಿವಾಸಪುರ : ಪುರಸಭಾ ವ್ಯಾಪ್ತಿಯ ಇಂದಿರಾ ನಗರ, ಮಾರುತಿ ನಗರ, ಡಾ. ಜಾಕೀರ್ ಹುಸೇನ್ ಮೊಹಲ್ಲಾ, ವೆಂಕಟೇಶ್ವರ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಅಕ್ರಂಪಾಷ ರವರು ಇಂದು ಭೇಟಿ ನೀಡಿ ಸ್ವಚ್ಛತೆ, ಬೀದಿ ದೀಪಗಳ CCMS Lights ನಿರ್ವಹಣೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ನಿರ್ವಹಿಸಿರುವ ಸಿ.ಸಿ. ರಸ್ತೆ ಮತ್ತು ಚರಂಡಿ ಕಾಮಗಾರಿ ಸೇರಿದಂತೆ Dry Weste Management ನಿರ್ವಹಣೆ ಘಟಕಗಳನ್ನು ಖುದ್ದಾಗಿ ಪರಿಶೀಲಿಸಿದರು. ನಂತರ ಪುರಸಭಾ ಕಚೇರಿಗೆ ಭೇಟಿ ನೀಡಿದ […]
ಶ್ರೀನಿವಾಸಪುರ: ತಾಲೂಕಿನ ರೋಣೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವತಿಯಿಂದ ಶನಿವಾರ ದಿಂಬಾಲ ಗ್ರಾಮದ ಹೆಲ್ತ್ ಅಂಡ್ ವೆಲ್ನೆಸ್ ಸೆಂಟರ್ನ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .ರೋಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಉಮಾಭಾರತಿ, ಬಿಎಇಒ ಆಂಜಲಮ್ಮ, ಎಚ್ಐಒ ವಿಜಯಲಕ್ಷ್ಮಿ, ಸಿಎಚ್ಒ ಮೀನಾಕ್ಷಿ, ಪಿಎಚ್ಸಿಒ ಜಿ.ಸಿ.ಶ್ಯಾಮಲ, ಗ್ರಾ.ಪಂ ಸದಸ್ಯ ವೆಂಕಟರಮಣಾರೆಡ್ಡಿ ಇದ್ದರು.
ಶ್ರೀನಿವಾಸಪುರ: ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ಸೆ.16 ರಂದು ಮಧ್ಯಾಹ್ನ 3 ಗಂಟೆಗೆ ಬೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಭೆ ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ತಿಳಿಸಿದ್ದಾರೆ.ಸಭೆಯಲ್ಲಿ ಗ್ರಾಹಕರೊಂದಿಗೆ ಸಂವಾದ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು. ಗಣೇಶ ವಿಗ್ರಹ ಪ್ರತಿಷ್ಠಾಪನಾ ಸ್ಥಳಗಳಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

