ನಂಗಲಿ, ಅ-21,ಮುಳಬಾಗಿಲು ಬೈಪಾಸ್‍ನಿಂದ ನಂಗಲಿ ಗಡಿಭಾಗದವರೆಗೂ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ಸರಿಪಡಿಸುವವರೆಗೂ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿ ಜನ ಸಾಮಾನ್ಯರ ಅಮೂಲ್ಯ ಪ್ರಾಣವನ್ನು ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ಟೋಲ್ ಮೇನೇಜರ್ ಅಜಿತ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ರಾಷ್ಟ್ರೀಯ ಹೆದ್ದಾರಿ ತಪ್ಪು ಮಾಡದ ಜನ ಸಾಮಾನ್ಯರ ಪ್ರಾಣ ತೆಗೆಯುವ ಯಮದೂತ ರಸ್ತೆಯಾಗಿ ಮಾರ್ಪಟ್ಟಿದೆ. ಸಾವಿರಾರು ಕೋಟಿ ಜನರ ತೆರಿಗೆ ಹಣದಲ್ಲಿ ಅಭಿವೃದ್ದಿ ಪಡಿಸಿದರುವ ರಸ್ತೆಯಲ್ಲಿ ತಾನು ದುಡಿದ ಹಣವನ್ನು ನೀಡಿ ಅಮೂಲ್ಯವಾದ ಪ್ರಾಣವನ್ನು ತನ್ನ ಕೈಯಾರೆ ಕಳೆದುಕೊಳ್ಳುವ ಮಟ್ಟಕ್ಕೆ […]

Read More

ಶ್ರೀನಿವಾಸಪುರ: ಸದಸ್ಯರು ಸ್ವಯಂ ಪ್ರೇರಿತರಾಗಿ ಸದಸ್ಯತ್ವ ಪಡೆದುಕೊಂಡು ಯಾವುದೇ ಅಪೇಕ್ಷೆಯಿಲ್ಲದೆ ಸೇವಾ ಮನೋಬಾವದಿಂದ ಎಲ್ಲಾ ಸದಸ್ಯರ ಪರಸ್ಪರ ಸಹಕಾರದಿಂದ ಸಮಾಜದ ಒಳಿತಿಗಾಗಿ ಅನೇಕ ಜನಪರ ಸೇವಾ ಕಾರ್ಯಗಳಾದ ಶಿಕ್ಷಣ, ಆರೋಗ್ಯ, ಬಡ ಜನತೆಗೆ ಉಪಯೋಗವಾಕತಕ್ಕಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು 2022-23ನೇ ಸಾಲಿನ ಅದ್ಯಕ್ಷರಾದ ಸಿ.ಆರ್. ಶಿವರಾಜ್ ತಿಳಿಸಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ನ 2022-23ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿ ಮಾತನಾಡಿದ ಶಿವರಾಜ್, ರೋಟರಿ ಸಂಸ್ಥೆಯಲ್ಲಿ ಪ್ರತಿಯೊಬ್ಬರೂ […]

Read More

ಕೋಲಾರ:- ಹಣಕ್ಕಾಗಿ ಮತ ಮಾರಾಟ ಬೇಡ, ಸ್ವಾಭಿಮಾನದಿಂದ ನಿಮ್ಮ ಹಕ್ಕು ಚಲಾಯಿಸಿ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ನೈತಿಕತೆ ಉಳಿಸಿಕೊಳ್ಳುವ ಮೂಲಕ ಸಮಾಜದ ಪರಿವರ್ತನೆಗೆ ಹೆಣ್ಣು ಮಕ್ಕಳು ಸಂಕಲ್ಪ ಮಾಡಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು.ತಾಲ್ಲೂಕಿನ 27 ಮಹಿಳಾ ಸ್ವಸಹಾಯ ಸಂಘಗಳಿಗೆ 1.90 ಕೋಟಿ ರೂ ಶೂನ್ಯಬಡ್ಡಿ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಮತ ಮಾರಿಕೊಂಡರೆ ಅಭಿವೃದ್ದಿ ಶೂನ್ಯವಾಗುತ್ತದೆ, ಹಣಕ್ಕಾಗಿ ಕೈಚಾಚುವ ಮೂಲಕ ನಮ್ಮ ಸ್ವಾಭಿಮಾನವನ್ನೇ ಬಲಿಕೊಡುವುದು ಬೇಡ, ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು […]

Read More

ಶ್ರೀನಿವಾಸಪುರ: ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಅ.22 ರಂದು ಬೆಳಿಗ್ಗೆ 11.30ಕ್ಕೆ ಆರ್‍ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ. ಎಂ.ವೆಂಕಟಸ್ವಾಮಿ ಅವರನ್ನು, ಅವರ ಅಭಿಮಾನಿ ಬಳಗ ಹಾಗೂ ಪ್ರಗತಿಪರ ಸಂಘಟನೆಗಳಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಮಂಡಲಿ ಸದಸ್ಯ ಡಿ.ಎಂ.ಅಂಬರೀಶ ಹೇಳಿದರು.ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಎಂ.ವೆಂಕಟಸ್ವಾಮಿ, ತಾಲ್ಲೂಕಿನ ಮಲ್ಲಗಾನಹಳ್ಳಿ ಗ್ರಾಮದವರು. ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈಚೆಗೆ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ರಾಷ್ಟ್ರೀಯ […]

Read More

ಶ್ರೀನಿವಾಸಪುರ: ತಾಲ್ಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಿದರು.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಯಾವುದೇ ಕಾರಣಕ್ಕೂ ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸಬಾರದು. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಕೂಡಲೆ ಬೆಳೆ ವಿಮೆ ಕೊಡಿಸಬೇಕು. ಹಾಲಿಗೆ ಕನಿಷ್ಟ ರೂ.50 ಬೆಲೆ […]

Read More

ಶ್ರೀನಿವಾಸಪುರ: ರಾಮಾಯಣ ಜಗತ್ತಿಗೆ ದಾರಿದೀಪವಾಗಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷೆ ಮಾಯಾ ಬಾಲಚಂದ್ರ ಹೇಳಿದರು.ಪಟ್ಟಣದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ವಾಲ್ಮೀಕಿ ಕಾವ್ಯ ಒಂದು ಚಿಂತನೆ ಎಂಬ ಸಾಹಿತ್ಯ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ರಾಮಾಯಣ ಹಲವು ಆಯಾಮ ಒಳಗೊಂಡ ಕಾವ್ಯ. ಅಲ್ಲಿ ಬರುವ ಮಹಾ ಪಾತ್ರಗಳು ಹಾಗೂ ಕತೆ, ಉಪ ಕತೆಗಳು ಎಲ್ಲ ವಯೋಮಾನದ ಜನರನ್ನೂ ಸೂಜಿಗಲ್ಲಿನಂತೆ ಆಕರ್ಷಿಸುತ್ತವೆ ಎಂದು ಹೇಳಿದರು.ಉಪನ್ಯಾಸಕಿ […]

Read More

ಶ್ರೀನಿವಾಸಪುರ: ಪಿಯುಸಿ ತರಗತಿಯಲ್ಲಿ ಇಬ್ಬರು ಜೊತೆಯಲ್ಲೇ ವಿದ್ಯಾಬ್ಯಾಸ ಪೂರ್ಣ ಗೊಳಿಸಿ ನಂತರ ಉನ್ನತ ವಿದ್ಯಾಬ್ಯಾಸ ಮುಗಿಸಿ ಇಂಗ್ಲೇಂಡ್ ನಲ್ಲಿ ಗ್ಯಾಸ್ಟೋ ಸರ್ಜನ್ ಆಗಿ ಸೇವೆ ಸಲ್ಲಿಸಿ ಸ್ವಂತ ಮನೆಗೆ ಆಗಮಿಸಿದ್ದ ವೇಳೆಯಲ್ಲಿ ವಿದಾನಪರಿಷತ್ ಸದಸ್ಯ ಹಾಗು ಸರ್ಕಾರದ ಮುಖ್ಯ ಸಚೇತಕ ಡಾ|| ವೈ.ಎ ನಾರಾಯಣಸ್ವಾಮಿ ತನ್ನ ಸ್ನೇಹಿತ ಡಾ|| ವೈ.ಕೆ ವಿಶ್ವನಾಥ್ ನಿವಾಸಕ್ಕೆ ಬೇಟಿನೀಡಿ ಅಭಿನಂದಿಸಿ ಶುಭ ಕೋರಿದ್ದಾರೆ.ಪಟ್ಟಣದ ಎಂ.ಜಿ ರಸ್ತೆಯ ವೈ.ಎಸ್ ಕೃಷ್ಣಯ್ಯ ಶಟ್ಟಿ ಅವರ ನಿವಾಸಕ್ಕೆ ಡಾ|| ವೈ.ಎ ನಾರಾಯಣಸ್ವಾಮಿ ಬೇಟಿನೀಡಿ ಕೃಷ್ಣಯ್ಯ ಶಟ್ಟಿರವರ […]

Read More

ಶ್ರೀನಿವಾಸಪುರ: ಗ್ರಾಮಸ್ಥರು ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ತಾಲ್ಲೂಕಿನ ಬೀರಗಾನಹಳ್ಳಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೀರಗಾನಹಳ್ಳಿ ಗ್ರಾಮದ ಹೊರವಲಯದಲ್ಲಿ ಸ್ಮಶಾನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಚರಂಡಿ ಹಾಗೂ ಶಾಲಾ ಕೊಠಡಿ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಗ್ರಾಮದ ಇಬ್ಬರಿಗೆ ಪಡಿತರ ಚೀಟಿ ಸಮಸ್ಯೆ ಹಾಗೂ ಒಬ್ಬರಿಗೆ ಅಂಗವಿಕ ವೇತನದ ಸಮಸ್ಯೆ ಇರುವುದಾಗಿ ತಿಳಿಸಲಾಗಿದೆ. ಸಮಸ್ಯೆ ಪರಿಹರಿಸಲಾಗುವುದು. […]

Read More

ಶ್ರೀನಿವಾಸಪುರ: ಗೌಡತಾತನಗಡ್ಡ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವೆಂಕಟಕೃಷ್ಣಪ್ಪ, ಉಪಾಧ್ಯಕ್ಷರಾಗಿ ಅಂಗಡಿ ಶ್ರೀನಿವಾಸ್ ಅವಿರೋಧ ಆಯ್ಕೆಯಾಗಿದ್ದಾರೆ.ಸಂಘದಲ್ಲಿ ಒಟ್ಟು 12 ಸ್ಥಾನಗಳಿದ್ದು, ಆ ಪೈಕಿ ಜೆಡಿಎಸ್ ಬೆಂಬಲಿತ 11 ಹಾಗೂ ಕಾಂಗ್ರೆಸ್ ಬೆಂಬಲಿತ 1 ಸ್ಥಾನವಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಜೆಡಿಎಸ್ ಬೆಂಬಲಿತ ವೆಂಕಟಕೃಷ್ಣಪ್ಪ ಹಾಗೂ ಅಂಗಡಿ ಶ್ರೀನಿವಾಸ್ ಮಾತ್ರ ನಾಮಪತ್ರ ಸಲ್ಲಿಸಿದರು. ಆದ್ದರಿಂದ ಚುನಾವಣಾಧಿಕಾರಿ ಶಿವಲಿಂಗಪ್ಪ, ಅವರನ್ನು ಅವಿರೋಧ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.ಉಳಿದಂತೆ ಸಂಘದ ನಿರ್ದೇಶಕರಾಗಿ ಶ್ರೀರಾಮರೆಡ್ಡಿ, ಚಲಪತಿ, […]

Read More