ಶೀನಿವಾಸಪುರ: ಸಮಾಜದ ಎಲ್ಲ ವರ್ಗದ ಜನ ಪರಿಸರ ಮಾಲಿನ್ಯ ತಡೆಯಲು ಸಹಕರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸ್ವಚ್ಛ ಭಾರತ್ ಮಿಷನ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ಸರ್ಕಾರಿ ಕಚೇರಿಗಳು, ನಿಗಮ ಮಂಡಳಿಗಳು, ಶಾಲಾ ಕಾಲೇಜುಗಳು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛ ಭಾರತ್ ಮಿಷನ್ ಅಭಿಯಾನ ಕಾರ್ಯಕ್ರಮ ಜಾರಿಗೊಳಿಸಬೇಕು ಎಂದು ಹೇಳಿದರು.ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್ ಮಾತನಾಡಿ, ನಾಗರಿಕರು ವಸ್ತುಗಳ ಬಳಕೆ ಕಡಿಮೆ ಮಾಡಬೇಕು. ಸಾಧ್ಯವಾದಷ್ಟು […]
ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಸರ್ವ ಸದಸ್ಯರ ಸಭೆಯನ್ನು ಸೆ.15 ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ಕೃಷ್ಣನ್ ತಿಳಿಸಿದ್ದಾರೆ.ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕಾಸ್ಕಾರ್ಡ್ ಬ್ಯಾಂಕ್ನ ರಾಜ್ಯ ನಿರ್ದೇಶಕ ಯಲವಾರ ಸೊಣ್ಣೇಗೌಡ ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶ್ರೀನಿವಾಸಪುರ: ಶಿಕ್ಷಕ ಸಮುದಾಯ ಪ್ರತಿಭಾವಂತ ಮಕ್ಕಳನ್ನು ಗುರ್ತಿಸಿ ಪ್ರೋತ್ಸಾಹಿಸಬೇಕು ಎಂದು ಯರಂವಾರಿಪಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೈ.ಆರ್.ಶ್ರೀನಿವಾಸರೆಡ್ಡಿ ಹೇಳಿದರು.ತಾಲ್ಲೂಕಿನ ಬೂರಮಾಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದವರು, ಮಕ್ಕಳಲ್ಲಿನ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.ಸೌಲಭ್ಯ ಹಾಘೂ ಅವಕಾಶಗಳ ಕೊರತೆಯಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹಿಂದುಳಿದಿದ್ದಾರೆ. ಮಗುವಿನ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂಬುದನ್ನು ಮರೆಯಲಾಗದು. […]
ಶ್ರೀನಿವಾಸಪುರ 1 : ಪರಿಸರ ಪ್ರಜ್ಞೆಯ ಜೀವನಶೈಲಿಯನ್ನು ಉತ್ತೇಜಿಸಿ , ಹವಾಮಾನ ಸ್ನೇಹಿ ಕ್ರಮಗಳನ್ನು ಕೈಗೊಳ್ಳಲು ವ್ಯಕ್ತಿಗಳನ್ನು ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ್ ಹೇಳಿದರು.ಪಟ್ಟಣದ ಪುರಸಭೆ ಕಛೇರಿಯಲ್ಲಿ ಗುರುವಾರ ಕಛೇರಿ ಸಭಾಂಗಣದಲ್ಲಿ ತ್ರೈಮಾಸಿಕ ಸಭೆಗೆ ಚಾಲನೆ ನೀಡಿ ಮಾತನಾಡಿದರು.ಮನೆಗಳಲ್ಲಿ , ಕಛೇರಿಗಳಲ್ಲಿ ಹಸಿಗೊಬ್ಬರ, ಒಣಗೊಬ್ಬರಗಳನ್ನು ಬೇರ್ಪಡಿಸುವ ವಿಧಾನಗಳ ಬಗ್ಗೆ ವಿವರಿಸಿದರು. ಸ್ವಚ್ಚ ಭಾರತ್ ಮಿಷನ್ ಅಭಿಯಾನದ ಅಡಿಯಲ್ಲಿ ಆರ್ಆರ್ಆರ್ ಕಾರ್ಯಕ್ರಮವನ್ನು ಎಲ್ಲಾ ಸರ್ಕಾರಿ ಕಛೇರಿಗಳು, ಸಂಸ್ಥೆಗಳು, ನಿಗಮ ಮಂಡಳಿಗಳು, ಶಾಲಾ ಕಾಲೇಜುಗಳಲ್ಲಿ […]
ಶ್ರೀನಿವಾಸಪುರ : ಭಾರತ ರತ್ನ ಡಾ. ಸರ್ವೇಪಲ್ಲಿ ರಾಧಾಕೃಷ್ಣ ರವರ ಜಯಂತಿಯ ನೆನಪಿನಲ್ಲಿ ನೇತಾಜಿ ಚಾರಿಟೇಬಲ್ ಟ್ರಸ್ಟ್ ಶ್ರೀನಿವಾಸಪುರ ರವರಿಂದ ಪಟ್ಟಣದ ಕರ್ನಾಟಕ ಮಾದರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಬೈರೆಗೌಡ ಶಿಕ್ಷಕ ವೃತ್ತಿಯಲ್ಲಿ ಉನ್ನತ ಹೆಸರನ್ನು ಪಡೆದು ಭಾರತರತ್ನ ಪುರಸಕೃತರಾದ ರಾಧಾಕೃಷ್ಣ ರವರ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈಗಿನ ದಿನಗಳಲ್ಲಿ ಪ್ರತಿಭೆಗಳುಳ್ಳವರು ಸನ್ಮಾಗಳನ್ನು ಪಡೆಯಬೇಕಿದ್ದರೆ ಸರ್ಕಾರದ ಮಟ್ಟದಲ್ಲಿ […]
ಶ್ರೀನಿವಾಸಪುರ: ಕೃಷ್ಣ ಜನ್ಮಾಷ್ಟಮಿ ಭಾರತೀಯ ಸಾಂಸ್ಕøತಿಕ ಪರಂಪರೆಯಲ್ಲಿ ಆಚರಿಸುವ ದೊಡ್ಡ ಹಬ್ಬ. ಪ್ರತಿಯೊಬ್ಬರೂ ಶ್ರದ್ಧಾ ಭಕ್ತಿಯಿಂದ ಕೃಷ್ಣ ನಾಮ ಜಪಿಸಿ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ವಿ.ಶ್ರೀನಿವಾಸ್ ಹೇಳಿದರು.ಪಟ್ಟಣದಲ್ಲಿ ತಾಲ್ಲೂಕು ಯಾದವರ ಸಂಘದಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬುಧವಾರ ಏರ್ಪಡಿಸಿದ್ದ ಕೃಷ್ಣನ ಭಾವ ಚಿತ್ರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಆಧ್ಯಾತ್ಮ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಆದ್ದರಿಂದಲೇ ತಾಲ್ಲೂಕಿನ ಯಾದವ ಸಮುದಾಯ ಮಳೆ, ಬೆಳೆ ಹಾಗೂ ಸಮೃದ್ಧ ಬದುಕು […]
ಶ್ರೀನಿವಾಸಪುರ: ನಿವೃತ್ತ ಸರ್ಕಾರಿ ನೌಕರರು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಚಟುವಟಿಕೆಯಿಂದ ಇರಲು ಪ್ರಯತ್ನಿಸಬೇಕು ಎಂದು ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ನಿವೃತ್ತ ನೌಕರರ ಮಾಸಿಕ ಸಭೆ, ಶಿಕ್ಷಕರ ದಿನಾಚರಣೆ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದಾರ್ಶನಿಕರ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.ಸಂಘದ ವತಿಯಿಂದ ಸಮಾಜ ಸೇವಾ ಕಾರ್ಯಕ್ರಮ ಕೈಗೊಳ್ಳಲಾಗುವುದು. ಪ್ರತಿಭಾವಂತ ವಿದಾರ್ಥಿಗಳಿಗೆ ಗೌರವ […]
ಕೋಲಾರ:- ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ,ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಸರ್ಕಾರಿ,ಅನುದಾನಿತ ಶಾಲೆಗಳ ಒಟ್ಟು 18 ಶಿಕ್ಷಕರನ್ನು ಸನ್ಮಾನಿಸಲಾಯಿತು.ಪ್ರತಿ ತಾಲ್ಲೂಕಿನಿಂದಲೂ ಕಿರಿಯಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲಾ ವಿಭಾಗಗಳು ಸೇರಿದಂತೆ ತಲಾ ಮೂವರು ಶಿಕ್ಷಕರನ್ನು ಆಯ್ಕೆ ಮಾಡಿದ್ದು, ಜಿಲ್ಲೆಯ ಎಲ್ಲಾ 6 ತಾಲ್ಲೂಕುಗಳ 18 ಶಿಕ್ಷಕರನ್ನು ಗೌರವಿಸಲಾಯಿತು.ಜಿಲ್ಲಾಮಟ್ಟದ ಉತ್ತಮ ಶಿಕ್ಷಕಪ್ರಶಸ್ತಿಗೆ ಭಾಜನರಾದ ಶಿಕ್ಷಕರೆಂದರೆ ಪ್ರೌಢಶಾಲಾ ವಿಭಾಗದಿಂದ ಕೋಲಾರ ತಾಲ್ಲೂಕಿನ ಕ್ಯಾಲನೂರು […]
ಕೋಲಾರ:- ನಗರದಲ್ಲಿ ಐದು ಕೋಟಿ ರೂ ಅಂದಾಜು ವೆಚ್ಚದಿಂದ ನಿರ್ಮಿಸಲು ಉದ್ದೇಶಿಸಿರುವ ಗುರುಭವನವನ್ನು 2026ರೊಳಗೆ ತಾವೇ ನೇತೃತ್ವವಹಿಸಿ ನಿರ್ಮಾಣ ಮಾಡಿ ಶಿಕ್ಷಕರಿಗೆ ಹಸ್ತಾಂತರ ಮಾಡುವುದಾಗಿ ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ಘೋಷಿಸಿದರು.ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ,ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗಳಿಸಿದ ಹಾಗೂ ನಿವೃತ್ತರಾದ ಶಿಕ್ಷಕರ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.ಶಿಕ್ಷಕ ಸಂಘಟನೆಗಳಲ್ಲಿನ ಗೊಂದಲ ಮತ್ತಿತರ ಕಾರಣಗಳಿಂದ ಈವರೆಗೂ 7 ಬಾರಿ ಶಂಕುಸ್ಥಾಪನೆಗೊಂಡಿರುವ ಗುರುಭವನದ […]

