
ಶ್ರೀನಿವಾಸಪುರ: ರೋಣೂರು ಗ್ರಾಮದ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯಕ್ಕೆ ಮಂಗಳವಾರ ದ್ವಾದಶಿ ಪ್ರಯಕ್ತ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದರು.ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ತಾಲ್ಲೂಕು ಘಟಕದ ಅಧ್ಯಕ್ಷ ಎ.ಅಶೋಕರೆಡ್ಡಿ, ಮುಖಂಡರಾದ ರೋಣೂರು ಚಂದ್ರಶೇಖರ್ ಇದ್ದರು.ದೇವಾಲಯದ ಆವರಣದಲ್ಲಿ ಸಂಗೀತ ಕಲಾವಿದೆ ಮಾಯಾ ಬಾಲಚಂದ್ರ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಗೀತ ಕಲಾವಿದರಾದ ಕೆ.ನರಸಿಂಹಮೂರ್ತಿ ಹಾಗೂ ಬಾನುತೇಜ ಅವರಿಂದ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ತಾಲ್ಲೂಕಿನ ವಿವಿಧೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ […]

ಶ್ರೀನಿವಾಸಪುರ: ವಿದ್ಯಾರ್ಥಿಗಳು ಕುತೂಹಲ ಉಳಿಸಿಕೊಳ್ಳಬೇಕು. ಕುತೂಹಲವೇ ಹೊಸ ಸಂಶೋಧನೆಗೆ ದಾರಿ ಮಾಡಿಕೊಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ತಾಲ್ಲೂಕಿನ ಬೈರಪಲ್ಲಿ ಗ್ರಾಮದ ಭೈರವೇಶ್ವರ ವಿದ್ಯಾನಿಕೇತನದ ಆವರಣದಲ್ಲಿ ಭಾರತ ಸರ್ಕಾರದ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಟೆಕ್ನಾಲಜಿ ಕಮ್ಯುನಿಕೇಷನ್ ಸಹಕಾರದೊಂದಿಗೆ, ಕೆ.ಸಿ.ರೆಡ್ಡಿ ಸರೋಜಮ್ಮ ಕ್ಷೇಮಾಭಿವೃಧ್ಧಿ ಫೌಂಡೇಷನ್ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಂಟ್ಟದ ಪ್ರೌಢ ಶಾಲಾ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.ಸಮಾಜದ ಎಲ್ಲ ವರ್ಗದ ಜನರಲ್ಲೂ ಒಂದು ಮಟ್ಟದಲ್ಲಿ ಮೂಢನಂಬಿಕೆ ಮನೆಮಾಡಿದೆ. ಅರಿವಿಲ್ಲದೆ ಅದರ ಪಾಲನೆಯಾಗುತ್ತಿದೆ. ಆದ್ದರಿಂದ […]

ಕೋಲಾರ: ಸಾವಿತ್ರಿ ಬಾಯಿ ಪುಲೆ ಆದರ್ಶವನ್ನು ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ರೋಟರಿ ಸೆಂಟ್ರಲ್ ಕಟ್ಟಡದಲ್ಲಿ ಜಿಲ್ಲಾ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರ ಸಂಘದವತಿಯಿಂದ ಆಯೋಜಿಸಲಾಗಿದ್ದ ಸಾವಿತ್ರಿ ಬಾಯಿ ಪುಲೆ ಜನ್ಮ ದಿನಾಚರಣೆ ಮತ್ತು ಸಾಧಕ ಹತ್ತು ಮಂದಿ ಶಿಕ್ಷಕಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಶಿಕ್ಷಣ ಯಾವುದೇ ಮನುಷ್ಯನನ್ನು ಉನ್ನತ ಸ್ಥಾನಕ್ಕೇರಿಸುತ್ತದೆ, ಅದರಲ್ಲೂ ಮಹಿಳೆಯರು ವಿದ್ಯಾವಂತರಾದರೆ ಇಡೀ ಕುಟುಂಬ ವಿದ್ಯಾವಂತರಾದಂತಾಗುತ್ತದೆ, ಮಹಿಳೆಯರ ವಿದ್ಯಾಭ್ಯಾಸಕ್ಕೆ ಅಡ್ಡಿ ಇದ್ದ ಸಂದರ್ಭದಲ್ಲಿ […]

ಕೋಲಾರ:- ಮಾಧ್ಯಮಗಳು ಎಷ್ಟೇ ಆಧುನಿಕಗೊಂಡರೂ, ಸಮಾಜ ಪರಿವರ್ತನೆ ಹಾಗೂ ಸಮಾಜ ಸುಧಾರಣೆ ಜವಾಬ್ದಾರಿಗಳಿಂದ ಜಾರಿಕೊಳ್ಳಬಾರದು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲ ಸಚಿವ ಪ್ರೊ .ಡಾ.ಡಿ.ಡೊಮಿನಿಕ್ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನಮ್ಮ ಸುದ್ದಿ ಡಾಟ್ ನೆಟ್ ಸುದ್ದಿ ವೆಬ್ ಸೈಟ್ ಉದ್ಘಾಟಿಸಿ, ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ರವರ ಜನ್ಮದಿನಾಚರಣೆ ಪ್ರಯುಕ್ತ ಐವರು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿದ ಅವರು,ಕಾರ್ಪೊರೇಟ್ ಜಗತ್ತಿನಲ್ಲಿ ಯಾವುದೇ ನವ ಕಾರ್ಯಗಳನ್ನು ಮಾಡುವಾಗಲು ಹಣದ ಮೌಲ್ಯವೇ ಪ್ರಧಾನವಾಗಿ ಬಿಂಬಿತವಾಗುತ್ತದೆ. ಡಾಲರ್ […]

ಶ್ರೀನಿವಾಸಪುರ 1 : ಒತ್ತಡ ಜೀವನದಲ್ಲಿ ಆಧ್ಯಾತ್ಮ ಮತ್ತು ದೇವರ ಆರಾಧನೆಗೆ ಕೊಂಚ ಕಾಲವನ್ನು ವಿನಿಯೋಗಿಸುವ ಮೂಲಕ ನೆಮ್ಮದಿ ಪಡೆದುಕೊಳ್ಳಬಹುದು ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು.ಶ್ರೀನಿವಾಸಪುರ ತಾಲೂಕಿನ ರೋಣೂರು ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯಕ್ಕೆ ವೈಕುಂಠ ಏಕಾದಶಿ ಅಂಗವಾಗಿ ಬೇಟಿ ನೀಡಿ ಮಾತನಾಡಿ,ಮಾನವೀಯ ಮೌಲ್ಯಗಳನ್ನು ಬೆಳೆಸಲು ವಿಶೇಷ ಹಬ್ಬ,ಪರಂಪರೆಯ ಸಂಪ್ರದಾಯಗಳನ್ನು ಆಚರಿಸಬೇಕು ಹಾಗೂ ಅವುಗಳ ಮಹತ್ವದ ಬಗ್ಗೆ ಹಿರಿಯರಿಂದ ಯುವಪೀಳಿಗೆ ಅರಿಯಬೇಕೆಂದರು.ಸ್ವಾಮಿಗೆ ಪಾಂಚರಾತ್ರಾಗಮ ಪ್ರಕಾರ ಸುಪ್ರಬಾತ ಸೇವೆ ,ಪಂಚಾಮೃತ ಅಭಿಷೇಕ,ಅಲಂಕಾರ ಮುಂಜಾನೆ 5ಗಂಟೆಗೆ ವೈಕುಂಠದ್ವಾರ ಪೂಜೆ,ವೈಕುಂಠ ದ್ವಾರ ಪ್ರವೇಶ,ಶಾತ್ತುಮೊರೈ,ಮಹಾಮಂಗಳಾರತಿ,ತೀರ್ಥಪ್ರಸಾದ ವಿನಿಯೋಗ […]

ಕೋಲಾರ:- ಅಪಘಾತದಿಂದ ಕಾಲಿಗೆ ಶಸ್ತ್ರಚಿಕಿತ್ಸೆಗೆ ಇದ್ದೆಲ್ಲಾ ಹಣ ಖರ್ಚು ಮಾಡಿ ತನ್ನ ಮಗಳ ಮದುವೆಗೆ ಹಣವಿಲ್ಲದೇ ನೊಂದಿದ್ದ ಕುಟುಂಬಕ್ಕೆ ಹಾಗೂ ಪಾಶ್ರ್ವವಾಯು ಪೀಡಿತ ಇಬ್ಬರಿಗೆ ಆರ್ಥಿಕ ನೆರವು ನೀಡುವ ಮೂಲಕ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾನವೀಯತೆ ಮೆರೆದಿದ್ದಾರೆ.ಇಲ್ಲಿನ ಮುನೇಶ್ವರ ನಗರದ ನಿವಾಸಿಯಾಗಿದ್ದು, ಗಾರೆ ಕೆಲಸದಿಂದ ಜೀವನ ಸಾಗಿಸುತ್ತಿದ್ದ ನಾಗರಾಜ್ ಎಂಬುವವರಿಗೆ ಅಪಘಾತವಾಗಿ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮಗಳ ಮದುವೆಗೆಂದು ಕೂಡಿಟ್ಟಿದ್ದ ಒಂದೂವರೆ ಲಕ್ಷ ಹಣವನ್ನು ತಮ್ಮ ಚಿಕಿತ್ಸೆಗೆ ಖರ್ಚು ಮಾಡಿದ್ದರು.ಮಗಳ ಮದುವೆ ಮಾಡಲು […]

ಪಟ್ಟಣದ ಹಳೇ ಮಾವಿನ ಮಂಡಿ ಬಳಿ ನವ ಕರ್ನಾಟಕ ಸ್ವಾಭಿಮಾನಿ ವೇದಿಕೆ ಕಚೇರಿಯಲ್ಲಿ ಶನಿವಾರ 2023ರ ನೂತನ ಕ್ಯಾಲೆಂಡರ್‍ನ್ನು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಶಿವಾರೆಡ್ಡಿ ರವರು ಬಿಡುಗಡೆ ಮಾಡಿದರು.ಈ ಸಮಯದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ , ಮುಖಂಡರಾದ ಸಾಧಿಕ್ ಅಹಮ್ಮದ್, ರವಿ,ಜಗನ್, ಕಾರ್‍ಬಾಬು, ಬಕಾಶ್, ಇದಾಯಿತ್, ರಿಯಾಜ್,ಏಜಾಜ್ ಪಾಷ ಇದ್ದರು.

ಶ್ರೀನಿವಾಸಪುರ: ಮಾದಕ ವಸ್ತುಗಳ ಸೇವೆನೆಗೊಮ್ಮೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ ಇದರಿಂದ ಮಾದಕ ದ್ರವ್ಯದ ವ್ಯಸನಿಯ ಆರೋಗ್ಯ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತ ಎಚ್.ಎಂ.ರಮೇಶ್‍ಕುಮಾರ್ ಹೇಳಿದರು.ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ತಾಲೂಕು ಅಬಕಾರಿ ಇಲಾಖೆ , ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ತಾಲೂಕು ಅಬಕಾರಿ ನಿರೀಕ್ಷಕ ರೋಹಿತ್ ಮಾತನಾಡಿ ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯ […]

ಕೋಲಾರ:- ಆರು ವರ್ಷದ ಬಾಲಕಿಯೊಬ್ಬಳು ಕಳೆದ 2019 ರಲ್ಲಿ ಬ್ಲಡ್ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಸುದ್ದಿ ತಿಳಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಖುದ್ದ ಮಗುವಿನ ಮನೆಗೆ ಹೋಗಿ ಚಿಕಿತ್ಸೆಗೆ 1.5 ಲಕ್ಷ ನೆರವು ಒದಗಿಸಿದ್ದರಿಂದಾಗಿ ಆಕೆ ಇದೀಗ ಆರೋಗ್ಯವಂತಳಾಗಿ ಹೊಸ ಬದುಕಿನತ್ತ ಹೆಜ್ಜೆ ಹಾಕಿದ್ದು, ಜೀವ ಉಳಿಸಿದ ನೆರವಿಗೆ ಬ್ಯಾಂಕಿಗೆ ಆಗಮಿಸಿ ಧನ್ಯವಾದ ಸಲ್ಲಿಸಿದ ಘಟನೆ ಶನಿವಾರ ನಡೆಯಿತು.ತಾಲ್ಲೂಕಿನ ಬೆತ್ತನಿ ಗ್ರಾಮದ ಸುಮಂತ್ ಕುಮಾರ್,ಚೈತ್ರಾ ದಂಪತಿಗಳ ಈ ಮುದ್ದಾದ 6 ವರ್ಷದ ಬಾಲಕಿ ಕಾರುಣ್ಯ ಮಾರಕ […]