
ಶ್ರೀನಿವಾಸಪುರ : ನಗರ ಪ್ರದೇಶದ ಬಡ ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ , ಕೆ.ಜಿ.ಎಫ್ ಹಾಗೂ ಮಾಲೂರು ಪಟ್ಟಣಗಳಲ್ಲಿ ಏಕಕಾಲಕ್ಕೆ ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟನೆ ಮಾಡಲಾಯಿತು. ಶ್ರೀನಿವಾಸಪುರದಲ್ಲಿ ಜಿಲ್ಲಾ ಮಟ್ಟದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗಫರ್ ಖಾನ್ ಮೊಹಲ್ಲಾದಲ್ಲಿ ಹೊಸದಾಗಿ ನಮ್ಮ ಕ್ಲಿನಿಕ್‌ನ್ನು ಪುರಸಭೆ ಅಧ್ಯಕ್ಷರಾದ ಲಲಿತ ಶ್ರೀನಿವಾಸ್ ಉದ್ಘಾಟನೆ ಮಾಡಿದರು. ರಾಜ್ಯಾದ್ಯಂತ 438 ಕ್ಲಿನಿಕ್‌ಗಳನ್ನು ಏಕಕಾಲಕ್ಕೆ ವರ್ಚುವಲ್ ಮೂಲಕ […]

ಶ್ರೀನಿವಾಸಪುರ : ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥ ಸುನಿಲ್ ಎಸ್.ಹೊಸಮನಿ ಭೇಟಿ ನೀಡಿ ಪರಿಶೀಲಿಸಿದರು . ಆಸ್ಪತ್ರೆಯ ವಿವಿಧ ಘಟಕಗಳು ಹಾಗೂ ಒಳ ರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು , ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಆಸತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಒದಗಿಸಬೇಕು . ರೋಗಿಗಳಿಗೆ ಚೆನ್ನಾಗಿ ಶುಚಿಗೊಳಿಸಿದ ಬಟ್ಟೆಗಳನ್ನು ನೀಡಬೇಕು ಎಂದು ಹೇಳಿದರು . […]

ಶ್ರೀನಿವಾಸಪುರ: ಗ್ರಾಮಸ್ಥರು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು. ತಮ್ಮ ಸಮಸ್ಯೆಗಳನ್ನು ನೇರವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಬೇಕು. ಪರಿಹಾರ ಪಡೆದುಕೊಳ್ಳಬೇಕು ಎಂದು ಗ್ರೇಡ್ 2 ತಹಶೀಲ್ದಾರ್ ಕೆ.ಎಲ್.ಜಯರಾಂ ಹೇಳಿದರು.ತಾಲ್ಲೂಕಿನ ಮಟ್ಟಕನ್ನಸಂದ್ರ ಗ್ರಾಮದಲ್ಲಿ ತಾಲ್ಲೂಕು ಆಡಳಿತದಿಂದ ಶನಿವಾರ ಏರ್ಪಡಿಸಿದ್ದ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಆಯಾ ಗ್ರಾಮದ ಸಮಸ್ಯೆಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.ಗ್ರಾಮದಲ್ಲಿ ಶುದ್ಧ […]

ಕೋಲಾರ:- ಸಾರ್ವಜನಿಕರಿಗೆ ಅಗತ್ಯ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತದ ವಿರುದ್ದ ಪ್ರಗತಿಪರ ಸಂಘಟನೆಗಳು ಇಂದು ಕೋಲಾರ ಬಂದ್ ನಡೆಸಿ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದರು.ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದಲೇ ಬಂದ್ ಯಶಸ್ಸಿಗಾಗಿ ಬೈಕ್ ರ್ಯಾಲಿ ನಡೆಸಿದ ಸಂಘಟಕರು, ನಗರದಾದ್ಯಂತ ಸಂಚರಿಸಿ ಬಂದ್‍ಗೆ ಬೆಂಬಲ ಕೋರಿದರು.ಈ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಚಿತ್ರಮಂದಿರ,ಹೋಟೆಲ್ ಬಂದ್ ಆಗಿದ್ದು, ಬಸ್ ಸಂಚಾರ ಕೆಲವೊತ್ತು ನಿಂತಿತ್ತಾದರೂ ನಂತರ ಸಹಜ ಸ್ಥಿತಿಗೆ ಬಂತು. ಆಟೋ […]

ಶ್ರೀನಿವಾಸಪುರ: ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು, ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಹೇಳಿದರು.ಪಟ್ಟಣದ ವೆಂಕಟೇಗೌಡ ಕಲ್ಯಾಣ ಮಂಟಪದಲ್ಲಿ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಘಟಕದ ನಿರ್ದೇಶಕ ಮುರಳೀಧರ ಶೆಟ್ಟಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ […]

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದಾನಿಗಳ ನೆರವು ಪಡೆದು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು ಎಂದು ಸಮಾಜ ಸೇವಕ ಎಚ್.ನಾರಾಯಣಸ್ವಾಮಿ ಹೇಳಿದರು.ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು. ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.ಶಾಲೆಯ ಮುಖ್ಯ ಶಿಕ್ಷಕಿ ಮಮತಾ ರಾಣಿ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದ ಎಲ್ಲ ಯೋಜನೆಗಳನ್ನೂ ಜಾರಿಗೆ […]

ಶ್ರೀನಿವಾಸಪುರ: ತಾಲ್ಲೂಕಿಗೆ ಮಂಗಳವಾರ ಭೇಟಿ ನೀಡಿದ್ದ ಐಎಎಸ್ ಅಧಿಕಾರಿ ವಿನಾಯಕ್ ಘೋರ್ಪಡೆ, ನರೇಗಾ ಯೋಜನೆಯಡಿ ಕೈಗೊಳ್ಳಲಾಗಿದ್ದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.ಸುರಿಯುತ್ತಿದ್ದ ಮಳೆ ಮಧ್ಯೆ ತಾಲ್ಲೂಕಿನ ಕಾಡುದೇವಂಡಹಳ್ಳಿ ಗ್ರಾಮದ ಸಮೀಪ ಧನಂಜಯಗೌಡ ನರೇಗಾ ಯೋಜನೆಯಡಿ ಬೆಳೆಸಿರುವ ಡ್ರ್ಯಾಗನ್ ಫ್ರೂಟ್ ತೋಟಕ್ಕೆ ಭೇಟಿ ನೀಡಿ ಪರಿಶೀಲಸಿದರು. ರೈತರು ವಿಶೇಷ ಕಾಳಜಿ ವಹಿಸಿ ಬೆಳೆಸಿರುವ ತೋಟ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.ಗಾಂಡ್ಲಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ ವೀಕ್ಷಿಸಿದರು. ಕಶೆಟ್ಟಿಪಲ್ಲಿ ಗ್ರಾಮದ ಹೊರವಲಯದಲ್ಲಿ ರೂ.5ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಸ್ಮಶಾನ ಅಭಿವೃದ್ಧಿ […]

ಕೋಲಾರ,ಡಿ.13 ನಗರದ ಹೊರವಲಯದಲ್ಲಿರುವ ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಸೂಕ್ಷ್ಮ ಧ್ಯಾನದ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಸಂಪನ್ಮೂಲ ವ್ಯಕ್ತಿಯಾಗಿ ಕೆನಡಾದ ಪೀಸ್ ಟ್ರೀ ಸಂಸ್ಥೆಯ ಡಾ. ಸುಮನ್ ಕೊಲ್ಲಿಪಾರ ಅವರು ಕ್ಷೇಮ ಹಾಗೂ ಏಕತಾ ಭಾವ ಸ್ವ-ಸಹಾನುಭೂತಿ ಸಾಧಿಸುವಲ್ಲಿ ಹೇಗೆ ಸಹಕಾರಿ ಎಂಬುದನ್ನು ತಿಳಿಸಿದರು. ಸೂಕ್ಷ್ಮ ಧ್ಯಾನ ಇದೊಂದು ಪ್ರಾಚೀನ ಚಿಕಿತ್ಸಾ ಪದ್ಧತಿಯಾಗಿದ್ದು, ಇದನ್ನು ಮಾಸ್ಟರ್ಸುನೀತಾ ಅಮ್ಮ ಅವರು ಪುನರ್ವಿನ್ಯಾಸಗೊಳಿಸಿದ್ದಾರೆ. ಈ ಚಿಕಿತ್ಸಾ ಪದ್ಧತಿಯು ಆಧುನಿಕ ಜೀವಶೈಲಿಯ ಅತಿ ಒತ್ತಡವನ್ನು ನಿಭಾಯಿಸಿಕೊಂಡು, ಯೋಗದ […]

ಕೋಲಾರ,ಡಿ.13: ಬೆಂಗಳೂರಿನ ಎಚ್.ಎಂ.ಟಿ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೋಲಾರ ಜಿಲ್ಲೆಯ ಜಪಾನ್ ಶಿಟೋರಿಯೋ ಕರಾಟೆ ಶಾಲೆಯ ವಿದ್ಯಾರ್ಥಿಗಳು ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿರುತ್ತಾರೆ.ಕೋಲಾರ ನಗರದ ವಿದ್ಯಾ ಜ್ಯೋತಿ ಶಾಲೆಯ ದೇವಿ ಶ್ರೀ ಭಾರ್ಗವ್, ರ್ಯಾಕ್ ವ್ಯಾಲ್ಯೂ ಇಂಟರ್ ನ್ಯಾಷನಲ್ ಶಾಲೆಯ ಖುಷಿ, ವಿಶ್ವೇಶ್ವರಯ್ಯ ಶಾಲೆಯ ಮಿಥುನ್, ನರಸಾಪುರದ ಸೂರ್ಯ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಾದ ಭಾನುಪ್ರಸಾದ್ ಹಾಗೂ ಮಾನ್ಯತಾ, ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಪಟಲಂ ಗುಡಿ ಕ್ರಾಸಿನಲ್ಲಿರುವ ವಿ.ವಿ.ಎಂ ಶಾಲೆಯ ವಿದ್ಯಾರ್ಥಿಗಳಾದ […]