ಶ್ರೀನಿವಾಸಪುರ; ಜು.26: ಅರಣ್ಯ ಭೂ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಅರಣ್ಯ ಭೂಮಿಗೆ ನಕಲಿ ದಾಖಲೆ ಸೃಷ್ಠಿಸಿರುವ ಕಂದಾಯ, ಸರ್ವೇ, ಅರಣ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಂಡು ಅರಣ್ಯ ಭೂಮಿಯನ್ನು ಉಳಿಸುವಂತೆ ರೈತಸಂಘದಿಂದ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಹೋರಾಟ ಮಾಡಲಾಯಿತು.ಅರಣ್ಯ ಇಲಾಖೆ ಸಚಿವರಿಗೆ, ವಲಯ ಅರಣ್ಯಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಅಧಿಕಾರ, ರಾಜಕೀಯ ಬಲವಿದ್ದರೆ ಕೆರೆ, ಕುಂಟೆ ಜೊತೆಗೆ ಅರಣ್ಯ ಭೂಮಿಯನ್ನು ಅಧಿಕಾರಿಗಳ ಮೇಲೆ ಒತ್ತಡ ಹಾಕಿ […]

Read More

ಕೋಲಾರ,ಜು.26: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ತಾಲೂಕಿನ ನರಸಾಪುರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾಜಿ ಸೈನಿಕ ಮೋಹನ್ ಕುಮಾರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯೋಗ ಸಮಿತಿಯ ಉಪಾಧ್ಯಕ್ಷ ರಾಜೇಂದ್ರ, ಮುಖ್ಯ ಶಿಕ್ಷಕ ಮಂಜುನಾಥ್, ಯೋಗ ಬಂಧುಗಳು ಹಾಜರಿದ್ದರು.

Read More

ಕೋಲಾರ,ಜು.25: ಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳಿರುವುದು ಗಮನಿಸಿದ್ದು ಅವುಗಳಿಗೆ ಶಾಶ್ವತವಾದ ಪರಿಹಾರಗಳನ್ನು ಹಂತ,ಹಂತವಾಗಿ ಕಲ್ಪಿಸಲು ಕ್ರಮ ಕೈಗೊಂಡು ರಾಜ್ಯದಲ್ಲಿ ಕೋಲಾರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಉತ್ತಮವಾದ ಆಡಳಿತ ನೀಡಲು ನಿಮ್ಮೆಲ್ಲರ ಸಹಕಾರದೊಂದಿಗೆ ಪಣ ತೊಡುವುದಾಗಿ ಜಿಲ್ಲಾಧಿಕಾರಿ ಅಕ್ರಂ ಪಾಷ ಘೋಷಿಸಿದರು.ನಗರದ ಪತ್ರಕರ್ತರ ಭವನದಲ್ಲಿನ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ, ನಾನು ಇದೇ ರಾಜ್ಯದ, ತುಮಕೊರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕುಗ್ರಾಮದಲ್ಲಿ ಜನಿಸಿ ಇದೇ ಅವಿಭಜಿತ ಜಿಲ್ಲೆಯಲ್ಲಿ ಶಿಕ್ಷಣ ಪಡೆದ ಕನ್ನಡಿಗನಾಗಿದ್ದೇನೆ. […]

Read More

ಶ್ರೀನಿವಾಸಪುರ 1 : ಆಟಗಳು ದೈಹಿಕ, ಮಾನಸಿಕವಾಗಿ ಧೈರ್ಯ,ಸ್ಥೈರ್ಯ ಹಾಗು ಜೀವರಕ್ಷಣಾ ಕೌಶಲ್ಯಗಳನ್ನು ಬೆಳಸುವಂತಾಗುತ್ತದೆ. ಹಾಗು ಕ್ರೀಡೆಗಳಿಂದ ಪ್ರೀತಿ,ಒಗ್ಗಟಿನಬಲ, ಏಕಾಗ್ರತೆ,ಕ್ರಿಯಾಶೀಲತೆ,ಬುದ್ದಿವಂತಿಕೆಯನ್ನು ಚುರುಕುಗೊಳಿಸುವಂತಾಗುತ್ತದೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಪ್ರೌಡಶಾಲಾವರಣದಲ್ಲಿ ಸೋಮವಾರ ರಾಯಲ್ಪಾಡು ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ದೇಶದ ಬೆನ್ನೆಲುಬಾದ ವಿದ್ಯಾರ್ಥಿಗಳು ಕೆಟ್ಟಹವ್ಯಾಸಗಳಿಗೆ ತಮ್ಮ ಅಮೂಲ್ಯವಾದ ಜೀವನವನ್ನು ಬಲಿಕೊಡದೆ ಆರೋಗ್ಯವಂತ ಜೀವನವನ್ನು ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗುಂಡು ಉತ್ತಮ ಸಾಧನೆಯ ಮೂಲಕ ದೇಶದ ಘನತೆ ಗೌರವವನ್ನು ಕಾಪಾಡುವಂತೆ ಕರೆನೀಡಿದರು.ರಾಯಲ್ಪಾಡು ಗ್ರಾಮದಲ್ಲಿ ನಾನು […]

Read More

ಶ್ರೀನಿವಾಸಪುರ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಪಟ್ಟಣದ ಪುರಸಭೆ ಆವರಣದಲ್ಲಿ ಸ್ಥಾಪಿಸಲಾಗಿರುವ ಎರಡು ದಾಖಲಾತಿ ಕೇಂದ್ರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪುರಸಭೆ ಕಂದಾಯ ಅಧಿಕಾರಿ ವಿ.ನಾಗರಾಜ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಭಾಗ್ಯಲಕ್ಷಿ ಯೋಜನೆ ಫಲಾನುಭವಿಗಳಿಗೆ, ಫಲಾನುಭವಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಯೋಜನೆ ಲಾಭ ಪಡೆಯುವ ಉದ್ದೇಶದಿಂದ ಎಲ್ಲ ಬ್ರೌಸಿಂಗ್ ಕೇಂದ್ರಗಳ ಮುಂದೆ ಮಹಿಳೆಯರು ಜಾತ್ರೆಯಂತೆ ನೆರೆದಿದ್ದಾರೆ. ದಟ್ಟಣೆ ತಪ್ಪಿಸುವುದಕ್ಕಾಗಿಯೇ ಇಲ್ಲಿ ಎರಡು ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.ಫಲಾನುಭವಿಗಳು ತಲಾ ರೂ.12 ನೀಡಿ […]

Read More

ಶ್ರೀನಿವಾಸಪುರ: ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆಯಾ ಶಾಲೆಯ ಹಳೆ ವಿದ್ಯಾರ್ಥಿಗಳು ಕೈ ಜೋಡಿಸಬೇಕು. ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ವಿಷಯಕ್ಕೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಹೇಳಿದರು.ಮಾರೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿ, ಸರ್ಕಾರಿ ಶಾಲಾ ಶಿಕ್ಷಕ ಎಸ್.ಆರ್.ಧರ್ಮೇಶ್, ಪ್ರತಿ ತಿಂಗಳೂ ತಮ್ಮ ಸಂಬಳದಲ್ಲಿ ರೂ.10 ಸಾವಿರ ತೆಗೆದಿಟ್ಟು ಸರ್ಕಾರಿ ಶಾಲಾ ಮಕ್ಕಳ […]

Read More

ಮಂಗಳೂರು, ಜುಲೈ 24 ಹಾಗೂ 25 ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟ್ಯಾಲೆಂಟ್ ಫೆಸ್ಟ್ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ತುಳು ರಂಗಭೂಮಿ ಮತ್ತು ತುಳು ಚಲನಚಿತ್ರೋದ್ಯಮದ ಖ್ಯಾತ ನಟ ಭೋಜರಾಜ್ ವಾಮಂಜೂರ್ ಇವರು ನೆರವೇರಿಸಿದರು. ವಿವಿಧ ಹಾಸ್ಯ ಹಾಗೂ ಹಾಡುಗಳ ಮುಖಾಂತರ ಮಕ್ಕಳನ್ನು ರಂಜಿಸಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಮಾರ್ಗದರ್ಶನವನ್ನು ನೀಡಿದರು. ಅಧ್ಯಕ್ಷೀಯ ಭಾಷಣದಲ್ಲಿ ವಂದನೀಯ ಗುರು ಆಂಡ್ರ್ಯೂ ಲಿಯೋ ಡಿಸೋಜಾ ರವರು ತಮ್ಮ ಸಂದೇಶದಲ್ಲಿ, ಪ್ರತಿಯೊಬ್ಬ ಮಗುವಿಗೆ ಒಂದಲ್ಲ ಒಂದು ರೀತಿಯ ಪ್ರತಿಭೆ […]

Read More

ಬೆಂಗಳೂರು : ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಜಂಟಿಯಾಗಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಗ್ರಾಮೀಣ ಪತ್ರಕರ್ತರ ಬಗ್ಗೆ ನನ್ನ ಬಳಿ ಪ್ರಸ್ತಾಪಿಸಿದ್ದಾರೆ. ಈ ಬಾರಿ ಗ್ಯಾರಂಟಿ ಯೋಜನೆ ಜಾರಿ ಆದ್ಯತೆ ಆಗಿದ್ದರಿಂದ ಇದೆಲ್ಲಾ ಸಾಧ್ಯವಾಗಲಿಲ್ಲ. ಚರ್ಚೆ […]

Read More

ಕೋಲಾರ:- ನಗರದ ಶ್ರೀ ದೇವರಾಜ್ ಅರಸ್ ಕಾಲೇಜ್ ಆಫ ನರ್ಸಿಂಗ್ ಸಂಶೋಧನಾ ಮತ್ತು ಅಭಿವೃದಿ ಇಲಾಖೆ ಮತ್ತು ಸಹಯೋಗದಿಂದ ಶ್ರೀ ದೇವರಾಜ್ ಅರಸ್ ವಿಶ್ವವಿದ್ಯಾಲಯರವರ ಶೈಕóಣಿಕ ಹಿರಿಯ ಶಿಕ್ಷಣ ಸಂಶೋಧನಾ ಕೆಂದ್ರ ಟಮಕ ಕೋಲಾರ ಸಂಸ್ಥೆಯವರ ಕಡೆಯಿಂದ ಭೌದ್ದಿಕ ಆಸ್ತಿ ಹಕ್ಕುಗಳ ಅರಿವು ಮಂಡಿಸುವ ಬಗ್ಗೆ ಕುರಿತು ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ಲೀಗಲ್ ಅಡೈಸರ್ ಸ್ಥಾಪಕರು ಹಾಗೂ ಸಿಇಓ ಆಫ್ ಲೈಫ್ಮ ಇಂಟಲೇಕಟ್ ಕನ್ಸಲ್ಟೇನ್ಸಿ (ಪ್ರೈ,ಲಿ.) ಲಿಪಿಕಾ ಸಾಹು ಗಿಡಕ್ಕೆ ನೀರುಣಿಸುವ ಮೂಲಕ ಉದಾಟಿಸಿ, ಭೌದ್ದಿಕ […]

Read More