ಶ್ರೀನಿವಾಸಪುರ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಆಯುಷ್ ಇಲಾಖೆ ವತಿಯಿಂದ ರೋಗ ನಿರೋಧಕ ಶಕ್ತಿ ವರ್ಧಕ ಔಷಧಿಗಳ ಕಿಟ್ಗಳನ್ನು ಪಟ್ಟಣದ ಆಟೋ ಚಾಲಕರಿಗೆ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಕಿಟ್ಗಳನ್ನು ವಿತರಿಸಿ ಮಾತನಾಡಿದರು. ಆರೋಗ್ಯ ಕಾಪಾಡಿಕೊಳ್ಳುವಲ್ಲಿ ರೋಗ ನಿರೋಧಕ ಶಕ್ತಿ ಪ್ರಮುಖವಾಗಿದ್ದು, ಆಯುಷ್ ಪದ್ಧತಿಯಲ್ಲಿ ನೀಡುವ ಔಷಧಿಗಳು ಸಾಮಾನ್ಯ ಜನರ ಆರೋಗ್ಯಕ್ಕೆ ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು. ಆಟೋ ಚಾಲಕರು ಸಾರ್ವಜನಿಕ ಸಂಪರ್ಕದಲ್ಲಿರುವುದರಿಂದ ಆರೋಗ್ಯದ ಬಗ್ಗೆ ಹೆಚ್ಚು ಎಚ್ಚರ ವಹಿಸಬೇಕು ಎಂದು […]
ಶ್ರೀನಿವಾಸಪುರ : ಸಾರ್ವಜನಿಕರ ಕೆಲಸ ದೇವರ ಕೆಲಸ ಎಂದ ಭಾವಿಸಿ ಪ್ರಾಮಾಣಿಕವಾಗಿ ಮಾಡಿದಾಗ ಹಳ್ಳಿಗಳ ಅಭಿವೃದ್ಧಿಯಲ್ಲಿ ಕುಂಠಿತವಾಗುವುದಿಲ್ಲ. ನನ್ನ ಕ್ಷೇತ್ರಕ್ಕೆ ಸಂಬಂಧಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡಿ, ಮತದಾರನ ಋಣವನ್ನು ತೀರಿಸುತ್ತಾ , ಮತದಾರನು ನೀಡಿರುವ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳುಲಾಗುವುದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಎಂದರು.ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು. […]
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಆತಂಕ ನಿವಾರಣೆಗೆ ವಿಶೇಷ ಕಾರ್ಯಗಾರ ಕರ್ನಾಟಕ ರಾಜ್ಯ ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಿಲ್ಲತ್ ವೆಲ್ಫೇರ್ ಟ್ರಸ್ಟ್ನಿಂದ ಮಾರ್ಗದರ್ಶನ ಕೋಲಾರ : ಕರ್ನಾಟಕ ರಾಜ್ಯ ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಸಮಿತಿ ಹಾಗೂ ಮಿಲ್ಲತ್ ವೆಲ್ಫೇರ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ, ಮಿಲ್ಲತ್ ಶಾಲೆಯ ಅಪ್ನ ಘರ್ ಸಭಾಂಗಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪರೀಕ್ಷಾ ಆತಂಕ ನಿರ್ವಹಣಾ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ […]
ಕೋಲಾರ : ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವಾಗಿ, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಕೆ.ಜಿ.ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿಯರಾದ ಕೃತಿಕ ಮತ್ತು ಪಲ್ಲವಿ ಅವರು ಮಳೆ ನೀರು ಕೊಯ್ಲು ಮಾದರಿಯ ಕಾರ್ಯವಿಧಾನವನ್ನು ಅತ್ಯುತ್ತಮವಾಗಿ ಪ್ರದರ್ಶಿಸಿ ವಿಭಾಗ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸೋಮವಾರ ಪುಣೆನಲ್ಲಿ ನಡೆಯಲಿರುವ ಜಿಜ್ಞಾಸ ವಿಜ್ಞಾನ ಮಾದರಿ ತಯಾರಿಕೆ ಹಾಗೂ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿದ್ಯಾರ್ಥಿನಿಯರು ತೆರಳಲಿದ್ದಾರೆ. ಶಿಕ್ಷಕಿ ರೇಷ್ಮಾ ಖಾನಂ ಅವರ ಮಾರ್ಗದರ್ಶನದಲ್ಲಿ […]
ಶ್ರೀನಿವಾಸಪುರ : (ಟಿಪಿಎಪಿಎಂಸಿ) ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆಯಲ್ಲಿ 11 ಸದಸ್ಯರು ಇದ್ದು , ಅದರಲ್ಲಿ ಅಧ್ಯಕ್ಷ ಗಾಧೆಗೆ ಆಲವಾಟ ವಿ.ವೆಂಕಟರೆಡ್ಡಿರವರೊಬ್ಬರು ನಾಮಪತ್ರ ಸಲ್ಲಿಸಿದ್ದು, ನಾಮಪತ್ರವನ್ನ ಪರಿಶೀಲಿಸಿದ ಹಿನ್ನೆಲೆಯಲ್ಲಿ ನಾಮಪತ್ರ ಕ್ರಮಬದ್ದವಾಗಿ ಇದ್ದ ಕಾರಣ ಅವರನ್ನ ಮುಂದಿನ ಐದು ವರ್ಷಕ್ಕಾಗಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಶಿವಪುರ ಬಿ.ಗರ್ರಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನಾಮಪತ್ರ ಕ್ರಮಬದ್ದವಾಗಿ ಇದ್ದ ಕಾರಣ ಅವರನ್ನ ಉಪಾಧ್ಯಕ್ಷರಾಗಿ ಐದು ವರ್ಷಕ್ಕಾಗಿ ಆಯ್ಕೆ ಮಾಡಲಾಗಿದೆ ಚುನಾವಣಾಧಿಕಾರಿ ಮುಸ್ತಾಕಅಹ್ಮದ್ ಮಾಹಿತಿ ನೀಡಿದರು.ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ […]
ಶ್ರೀನಿವಾಸಪುರ : ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಗುರುವಾರ ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಕಾಲೇಜಿನ ಆವರಣದಿಂದ ಪ್ರಾರಂಭವಾದ ಕಾರ್ಮಿಕ ಮತ್ತು ರೈತರ ರ್ಯಾಲಿ ಎಂಜಿ ರಸ್ತೆ , ಸಂತೆ ಮೈದಾನ, ರಾಜಾಜಿ ರಸ್ತೆ ಮತ್ತು ಜೆ.ಸಿ ರಸ್ತೆಯ ಮೂಲಕ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಆವರಣದಲ್ಲಿ ಮುಷ್ಕರದ ಬಹಿರಂಗ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು.ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಾದ ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳ ವಾಪಸ್ಸಿಗಾಗಿ, ಕಾರ್ಮಿಕರ ರಕ್ಷಣೆ, ಸಾಮಾಜಿಕ ಭದ್ರತೆ, ಹೋರಾಟದ ಹಕ್ಕಿಗಾಗಿ ಹಿಂದಿನ […]
ಶ್ರೀನಿವಾಸಪುರ : ತಾಲೂಕಿನ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗಳ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಏಕದಿನ ಶೈಕ್ಷಣಿಕ ಹಾಗೂ ಪರಿಸರ ಜಾಗೃತಿ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ಯದರೂರು ಗ್ರಾಮದ ಸರ್ಕಾರಿ ಉರ್ದು ಹೆಚ್.ಪಿ.ಎಸ್., ಚಿಂತಮಕನಪಳ್ಳಿ ಗ್ರಾಮದ ಸರ್ಕಾರಿ ಉರ್ದು ಎಲ್.ಪಿ.ಎಸ್. ಹಾಗೂ ಎಸ್. ವಡಿಗೇಪಳ್ಳಿ ಗ್ರಾಮದ ಸರ್ಕಾರಿ ಉರ್ದು ಎಲ್.ಪಿ.ಎಸ್. ಶಾಲೆಗಳ ವಿದ್ಯಾರ್ಥಿಗಳು ಪ್ರವಾಸದಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತಾಗಿ ಪ್ರಾಯೋಗಿಕ ಅರಿವು ಪಡೆದರು. ಕಾರ್ಯಕ್ರಮದ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಹಾಗೂ ಪರಿಸರ ಜಾಗೃತಿ ಬೆಳೆಸುವುದು […]
ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಐದು ವರ್ಷದ ಅವಧಿ ಫೆಬ್ರವರಿ 2026ರಲ್ಲಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಸಾರ್ವತ್ರಿಕ ಚುನಾವಣೆ ನಡೆಯದ ಕಾರಣಕ್ಕೆ ಅವುಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 41 ಮತ್ತು 42ರಂತೆ ಹಾಗೂ ಪ್ರಕರಣ 8(1)(ಬಿ)(ii)ರಡಿ ನೀಡಲಾದ ಅಧಿಕಾರವನ್ನು ಚಲಾಯಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು […]
ಶ್ರೀನಿವಾಸಪುರ : ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ (ಕೆಪಿಎಸ್) ಉನ್ನತೀಕರಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧದ ಆದೇಶ ಪ್ರತಿಯನ್ನು ಮಾಜಿ ವಿಧಾನಸಭಾ ಸ್ಪೀಕರ್ ಹಾಗೂ ಮಾಜಿ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರು ಎಪಿಜೆ ಅಬ್ದುಲ್ ಕಲಾಂ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮಜೀದ್ ಉರ್ ಅಪ್ಸರ್ ಪಾಷಾ ಅವರಿಗೆ ಹಸ್ತಾಂತರಿಸಿದರು. ಶಾಲಾ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ […]

