ಹುತ್ತೂರು ಸೊಸೈಟಿಗೆ ಅಂಟಿರುವ ಕ್ಯಾನ್ಸರ್ ೨ ನೇ ಸ್ಟೇಜ್‌ಗೆ – ಬ್ಯಾಲಹಳ್ಳಿ ಗೋವಿಂದಗೌಡ ೩ ನೇಹಂತ ತಲುಪಿ ಸರ್ವನಾಶವಾಗೋ ಮುನ್ನಾ ಎಚ್ಚರವಹಿಸಿ – ಆಡಳಿತ ಮಂಡಳಿಗೆ ತಾಕೀತುಕೋಲಾರ : – ತಾಲ್ಲೂಕಿನ ಹುತ್ತೂರು ಸೊಸೈಟಿಗೆ ಅಂಟಿರುವ ಕ್ಯಾನ್ಸರ್ ೨ ನೇ ಹಂತ ತಲುಪಿದೆ , ಮೂರನೇ ಹಂತ ಮುಟ್ಟಿ ಸರ್ವನಾಶವಾಗುವ ಮುನ್ನಾ ಆಗಿರುವ ತಪ್ಪುಗಳನ್ನು ಸರಿಪಡಿಸಿ ಸಂಘಕ್ಕೆ ಜೀವ ತುಂಬಿ ಸರಿದಾರಿಗೆ ತನ್ನಿ ಎಂದು ಆಡಳಿತ ಮಂಡಳಿ ನಿರ್ದೇಶಕರಿಗೆ ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ […]
ಶ್ರೀನಿವಾಸಪುರ: ಜನರು ಆರೋಗ್ಯ ತಪಾಸಣೆಗೆ ಒಳಗಾಗುವುದರ ಮೂಲಕ ಸಂಭವನೀಯ ಅನಾರೋಗ್ಯದಿಂದ ಮುಕ್ತರಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಎಎಪಿ ಮುಖಂಡ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ಸಂತೆ ಮೈದಾನದಲ್ಲಿ ಶನಿವಾರ ತಾಲ್ಲೂಕು ಎಎಪಿ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಸಮಸ್ಯೆ ಹಾಗೂ ನಿರ್ಲಕ್ಷ್ಯದ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಹದಗೆಡುತ್ತಿದೆ ಎಂದು ಅಭಿಪ್ರಾಯಪಟ್ಟರು.ಗ್ರಾಮೀಣರು ಕೃಷಿ ಚಟುವಟಿಕೆ ಒತ್ತಡದಲ್ಲಿ ವೈಯಕ್ತಿಕ ಆರೋಗ್ಯದ ಕಡೆ […]
ಶ್ರೀನಿವಾಸಪುರ : ಕೇಂದ್ರ ಸರ್ಕಾರವು ಹಣವಂತರಿಗೆ ಒಂದು ನೀತಿ , ಬಡವರಿಗೆ ಒಂದು ನೀತಿಯನ್ನು ಅನುಸರಿಸುತ್ತಿದ್ದು, ಇದರಿಂದಾಗಿ ಜನಸಾಮಾನ್ಯರು ಕೇಂದ್ರ ಸರ್ಕಾರದ ದ್ವಂದ ನೀತಿಗಳಿಂದ ತತ್ತರಿಸುತ್ತಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ವ್ಯಕ್ತಡಿಸಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ರೈತ ಸಂಘದ ಜಿಲ್ಲಾ ಸಮ್ಮೇಳನದ ನಿರ್ಣಯಗಳ ಬಿಡುಗಡೆಗಾಗಿ ನಡೆದ ಪತ್ರಿಕಾಗೋಷ್ಟಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಕೇಂದ್ರ ಸರ್ಕಾರಕ್ಕೆ ರೈತ ಬಗ್ಗೆ ಕಾಳಜಿ ಇಲ್ಲ. ಅದೋನಿ ಆದಾಯ ವರ್ಷಕ್ಕೆ 11ಲಕ್ಷ […]
ಶ್ರೀನಿವಾಸಪುರ: ಪರೋಪಕಾರಕ್ಕೆ ಹೆಸರಾದ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಜಯರಾಂ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಪುರಸಭೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸುವುದರ ಮೂಲಕ ಸಮಾಜದ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪೌರ ಕಾರ್ಮಿಕರು, ಕಚೇರಿ ಸಿಬ್ಬಂದಿ, ನಿವೃತ್ತರಾದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಪೌರ ಕಾರ್ಮಿಕರ ಕ್ರೀಡಾ […]
ಶ್ರೀನಿವಾಸಪುರ: ಸಹಕಾರ ಸಂಘ ರೈತ ಸಮುದಾಯದ ಸಮಸ್ಯೆಗಳಿಗೆ ಸಂದ್ಸಿಸಿ ಕಾರ್ಯನಿರ್ವಹಿಸಬೇಕು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ವೆಂಕಟರೆಡ್ಡಿ ಹೇಳಿದರು.ತಾಲ್ಲೂಕಿನ ಮಣಿಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸ್ಥಳೀಯ ವ್ಯವಸಾಯ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿ ಅವರು, ಸಂಘ ಉಳಿಯಬೇಕಾದರೆ ಸಾಲ ವಸೂಲಾತಿ ಪ್ರಮಾಣ ನೂರಕ್ಕೆ ನೂರರಷ್ಟಿರಬೇಕು ಎಂದು ಅಭಿಪ್ರಾಯಪಟ್ಟರು.ಸಹಕಾರ ಸಂಘದ ಅಧ್ಯಕ್ಷ ಬಿ.ವಿ.ಸುರೇಶ್ ರೆಡ್ಡಿ ಮಾತನಾಡಿ, ಮಣಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ಸಾಲ ನೀಡಿಕೆ ಹಾಗೂ ಸಾಲ ವಸೂಲಾತಿಯಲ್ಲಿ ಜಿಲ್ಲೆಯಲ್ಲಿಯೇ […]
ಮುಖಾಂತರಮಾನ್ಯ ಜಿಲ್ಲಾಧಿಕಾರಿಗಳುಕೋಲಾರ ಜಿಲ್ಲೆ, ಕೋಲಾರ. ಮಾನ್ಯರೇ, ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿರವರ ಪ್ರತಿಮೆ ಸ್ಥಾಪಿಸಲು ಮತ್ತು ಕೋಲಾರ ನಗರದ ಡಿ.ವಿ.ಗುಂಡಪ್ಪ ಜಿಲ್ಲಾ ಗ್ರಂಥಾಲಯದ ಮುಂಭಾಗದಲ್ಲಿ ಡಿ.ವಿ.ಗುಂಡಪ್ಪನವರ ಪ್ರತಿಮೆ ಸ್ಥಾಪಿಸಲು ಕೋರಿ ಮನವಿ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪ್ರಥಮ ಮುಖ್ಯಮಂತ್ರಿಯಾದ ಕೋಲಾರ ಜಿಲ್ಲೆಯ, ಬೇತಮಂಗಲ ಹೋಬಳಿ ಕ್ಯಾಸಂಬಳ್ಳಿಯ ಕೆ.ಸಿ.ರೆಡ್ಡಿಯವರನ್ನು ನಮ್ಮ ಜಿಲ್ಲೆಯವರು ಎಂದು ಹೇಳಿಕೊಳ್ಳುವುದು ಹೆಮ್ಮಯ ವಿಷಯವಾಗಿದೆ. ಇಂತಹ ವ್ಯಕ್ತಿಯ ಪ್ರತಿಮೆಯು ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ ಸ್ಥಾಪನೆ ಮಾಡದಿರುವುದು ಸಹ ಬೇಸರದ ಸಂಗತಿ. ಜಿಲ್ಲಾಡಳಿತ ಕಛೇರಿಯ ಮುಂಭಾಗದಲ್ಲಿ […]
ಶ್ರೀನಿವಾಸಪುರ ; ಗರ್ಭಿಣಿ ಮತ್ತು ಬಾಣಾಂತಿಯರಿಗೆ ಅಪೌಷ್ಠಿಕತೆ ನಿವಾರಿಸಲು ಅಂಗನವಾಡಿ ಕಾರ್ಯಕರ್ತರು ಶ್ರಮಿಸುತ್ತಿರುವುದು ಶ್ಲಾಘನೀಯ ಅದೇ ರೀತಿ ಮಕ್ಕಳ ಬೆಳೆವಣಿಗೆಗೂ ತಮ್ಮ ಸೇವೆ ಪ್ರಾಮಾಣಿಕವಾಗಿ ಮಾಡಿದರೆ ಸಾರ್ಥಕತೆ ಹೆಚ್ಚುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ವಿಜಯಮ್ಮ ಹೇಳಿದರು.ಶ್ರೀನಿವಾಸಪುರ ವೃತ್ತ ಅಂಗನವಾಡಿ ಕಾರ್ಯಕರ್ತರು ಪಟ್ಟಣದ ರಂಗಾರಸ್ತೆ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನೆ ಶ್ರೀನಿವಾಸಪುರ ಇವರ ಸಹಯೋಗದಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ […]
ಶ್ರೀನಿವಾಸಪುರ: ಪ್ರಧಾನಿ ಮೋದಿ ಅವರ ಅಶಯದಂತೆ ಸ್ವಚ್ಛ ಪರಿಸರ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸ್ವಚ್ಛ ಭಾರತ ನಿರ್ಮಾಣಕ್ಕೆ ಹೆಚ್ಚಿನ ಮಹತ್ವ ನೀಡಿದೆ ಎಂದು ಹೇಳಿದರು.ಅಮೃತ್ ಸರೋವರ್ ಯೋಜನೆ ಅಡಿಯಲ್ಲಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು. ಕೆರೆ ತುಂಬಿದರೆ ಅಂತರ್ಜಲ ವೃದ್ಧಿಸಲು ಸಾಧ್ಯವಾಗುತ್ತದೆ. ಗ್ರಾಮೀಣ […]
ಕೋಲಾರ; ಸೆ.20: ಜಿಲ್ಲಾದ್ಯಂತ ಜಾನುವಾರುಗಳಿಗೆ ಬಾಧಿಸುತ್ತಿರುವ ಚರ್ಮ ಗಂಟು ರೋಗ ನಿಯಂತ್ರಣಕ್ಕೆ ಹಾಗೂ ಬಿತ್ತನೆ ಆಲೂಗಡ್ಡೆ ಬೆಲೆ ನಿಗಧಿ ಮಾಡಲು ವಿಶೇಷ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ನಿಲ್ಲಬೇಕೆಂದು ಆಗ್ರಹಿಸಿ ರೈತಸಂಘದಿಂದ ಡಿಸಿ ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಸಲ್ಲಿಸಿ ಮಾತನಾಡಿದ ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಹೈನುಗಾರಿಕೆಯೇ ಜೀವಾಳವಾಗಿರುವ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಸ್ವಾಭಿಮಾನ ಬದುಕು ಕಲ್ಪಿಸಿರುವ ಹೈನೋದ್ಯಮಕ್ಕೆ ಮಾರಕವಾಗಿರುವ ರೋಗ ನಿಯಂತ್ರಣ ಮಾಡುವಲ್ಲಿ ಪಶು ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ […]