ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಕೋಲಾರದ ವತಿಯಿಂದ ಶ್ರೀನಿವಾಸಪುರ ತಾಲ್ಲೂಕಿನ ತರ್ನಹಳ್ಳಿ ಗ್ರಾಮದಲ್ಲಿ “ಸಮಗ್ರ ಬೆಳೆ ನಿರ್ವಹಣೆ” ಅಡಿಯಲ್ಲಿ ಮಾವು ಬೆಳೆಯ ಕ್ಷೇತ್ರೋತ್ಸವ ನಡೆಸಲಾಯಿತು. ಗ್ರಾಮದ ಮಂಜುನಾಥ್ ಎಂಬ ರೈತರ ಮಾವಿನ ತೋಟದಲ್ಲಿ ಕಳೆದ ವರ್ಷ ಸಮಗ್ರ ಬೆಳೆ ನಿರ್ವಹಣೆ ಅಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆಯನ್ನು ಕೈಗೊಂಡಿದ್ದು ಅದರ ಅಡಿಯಲ್ಲಿ “ಮಾವು ಬೆಳೆಯ ಕ್ಷೇತ್ರೋತ್ಸವ” ನಡೆಸಲಾಯಿತು. ಕೋಲಾರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ಮಾರ್ಗದರ್ಶನದಲ್ಲಿ ಸಮಗ್ರ ಬೆಳೆ ನಿರ್ವಹಣೆ ಕ್ರಮಗಳನ್ನು ಅನುಸರಿಸಿದ ತರ್ನಹಳ್ಳಿ ಗ್ರಾಮದ ಮಂಜುನಾಥರವರು ತಮ್ಮ ಮಾವಿನ […]

Read More

ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಬೇಕು. ಸರ್ಕಾರದ ಸೌಲಭ್ಯಗಳು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ಸಿಗುವಂತ ನೋಡಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮನೆ ನೀಡುವಲ್ಲಿ ಗುಡಿಸಲು ವಾಸಿಗಳು ಹಾಗೂ ವಾಸಿಸಲು ಯೋಗ್ಯವಲ್ಲದ ಮನೆಗಳಲ್ಲಿ ವಾಸಿಸುತ್ತಿರವ ಕುಟುಂಬಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ […]

Read More

ಕೋಲಾರ:- ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವುದು ಬಡ್ಡಿರಹಿತ ಸಾಲ ಮಹಿಳೆಯರು ವದಂತಿಗಳಿಗೆ ಕಿವಿಗೊಡದಿರಿ, ಪಡೆದ ಸಾಲ ಮರುಪಾವತಿಸಿ, ಬ್ಯಾಂಕ್ ಉಳಿಸಿ ಬೆಳೆಸಿದ ನೀವು ಬ್ಯಾಂಕ್ ಸಂಕಷ್ಟಕ್ಕೆ ಸಿಲುಕಲು ಕಾರಣರಾಗದಿರಿ ಎಂದು ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮನವಿ ಮಾಡಿದರು.ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ತೀರ್ಮಾನಕ್ಕೂ ಬ್ಯಾಂಕಿಗೂ ಸಂಬಂಧವಿಲ್ಲ ಏಕೆಂದರೆ ಬ್ಯಾಂಕಿನ ಸ್ವಂತ ಬಂಡವಾಳ, ಠೇವಣಿ ಜತೆಗೆ ಅಫೆಕ್ಸ್ ಬ್ಯಾಂಕ್,ನಬಾರ್ಡ್‍ನಿಂದ ಸಾಲ ತಂದು ಮಹಿಳೆಯರಿಗೆ ಬಡ್ಡಿರಹಿತ […]

Read More

ಮುಳಬಾಗಿಲು,ಜೂ.16 : ಮುಳಬಾಗಲು ಬೈರಕೂರು ಹೋಬಳಿ ಹೀರೇಗೌಡನಹಳ್ಳಿಯಲ್ಲಿ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡುತ್ತೇನೆಂದು ಮಾತು ತಪ್ಪಿದ ಸರ್ಕಾರದ ವಿರುದ್ದ ಸಾಲ ಕಟ್ಟಲ್ಲ ಎಂದು ಸಿಡಿದೆದ್ದ ಮಹಿಳೆಯರುಸಾಲ ಮನ್ನಾ ಮಾಡುತ್ತೇನೆಂದು ಮಾತಿದ ತಪ್ಪಿದ ಕಾಂಗ್ರೇಸ್ ಸರ್ಕಾರ ಮಹಿಳೆಯರ ಆಕ್ರೋಶಕ್ಕೆ ಗುರಿಯಾದ ಪಲವಾಗಿ ಇಂದು ಸಾಲವಸೂಲಿಗೆ ಹೋದ ಸೋಸೈಟಿ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದು ಆಗಿ ಸಾಲ ವಸೂಲಿ ಮಾಡಲು ಬಂದರೆ ಹುಷಾರ್ ಸಾಲ ಮನ್ನಾ ಮಾಡುತ್ತೇವೆಂದು ನಮಗೆ ಮೋಸ ಮಾಡಿದ ಮುಖ್ಯಮಂತ್ರಿಗಳ ಬಳಿ ಸಾಲ ವಸೂಲಿ ಮಾಡಿಕೊಳ್ಳಿ […]

Read More

ಕೋಲಾರ ಜೂ.16: ಕಳಪೆ ರೇಷ್ಮೆ ಹುಳ ವಿತರಣೆಯಿಂದ ನಷ್ಟವಾಗಿರುವ ರೈತರಿಗೆ ಪ್ರತಿ 100 ಮೊಟ್ಟೆಗೆ 1 ಲಕ್ಷ ಪರಿಹಾರ ಜೊತೆಗೆ ದುಬಾರಿ ಚಾಕಿ ಹುಳ ಬೆಲೆ ನಿಯಂತ್ರಣಕ್ಕೆ ತಂಡ ರಚನೆ ಮಾಡಿ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ರೇಷ್ಮೆ ಸಚಿವರನ್ನು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯ ಮಾಡಿದರು.ಕಳಪೆ ರೇಷ್ಮೆ ಹುಳ ವಿತರಣೆಯಿಂದ ನಷ್ಟವಾಗಿರುವ ವರದೇನಹಳ್ಳಿ ರೈತ ರಮೇಶ್ ಅವರ ಹುಳ ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ಟೊಮೇಟೊ ಮಾವಿಗೆ ರೋಗ ಬಾಧೆ, ಹೈನೋದ್ಯಮಕ್ಕೆ ಕಲಬೆರಕೆ […]

Read More

ಶ್ರೀನಿವಾಸಪುರ:  ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಹಾಗೂ ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ವಿರುದ್ಧ ಆಧಾರ ರಹಿತ ಆಪಾದನೆ ಮಾಡುತ್ತಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಶೇಷಾಪುರ ಗೋಪಾಲ್ ಅವರನ್ನು ಆ ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೆ.ಕೆ.ಮಂಜುನಾಥರೆಡ್ಡಿ ಆಗ್ರಹಿಸಿದರು.   ಪಟ್ಟಣದ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಕೆಲಸ ಮಾಡಿದ ಶೇಷಾಪುರ ಗೋಪಾಲ್ ಅವರಿಗೆ, ಕೆ.ಆರ್.ರಮೇಶ್ […]

Read More

ಕೋಲಾರ, ಜೂ.13: ಪ್ರಜಾಯಾತ್ರೆ ಸಮಾವೇಶಗಳಲ್ಲಿ ಸಾವಿರಾರು ಮಹಿಳೆಯರ ಸಮ್ಮುಖದಲ್ಲಿ ನಮ್ಮ ಪಕ್ಷಕ್ಕೆ ಮಹಿಳೆಯಾದ ನೀವು ಮತ ನೀಡಿದರೆ ಸಹಕಾರ ಬ್ಯಾಂಕ್‍ಗಳಲ್ಲಿ ಪಡೆದಿರುವ ಸ್ತ್ರೀಶಕ್ತಿ ಸಾಲ ಮನ್ನಾ ಮಾಡುತ್ತೇವೆಂಧು ಮಾತು ನೀಡಿ ಮತ ಪಡೆದ ಸಿದ್ದರಾಮಯ್ಯನವರ ಸರ್ಕಾರ ಸ್ತ್ರೀಶಕ್ತಿ ಸಾಲ ಮನ್ನಾ ಮಾಡದೆ ಇರುವುದು ಮಹಿಳೆಯರಿಗೆ ಮಾಡಿದ ದ್ರೋಹವನ್ನು ಖಂಡಿಸಿ ಹೊಸಮಟ್ನಹಳ್ಳಿ ಮತ್ತು ಮಂಗಸಂದ್ರ ಗ್ರಾಮಗಳಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಾಲ ವಸೂಲಾತಿಗೆ ನಮ್ಮ ಗ್ರಾಮಕ್ಕೆ ಬರಬೇಡಿ ಎಂದು ಬೋರ್ಡ ಹಾಕಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

Read More

ಕೋಲಾರ:- ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ವತಿಯಿಂದ ಜಿಲ್ಲೆಯಲ್ಲೆ ಮೊಟ್ಟ ಮೊದಲ ಸಂಚಾರಿ ರಕ್ತದಾನ ಘಟಕವನ್ನು ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಪ್ರಾರಂಭಿಸಿದ್ದು, ರಕ್ತದಾನಿಗಳು ಸಂಚಾರಿ ರಕ್ತದಾನ ಘಟಕದ ಸದುಪಯೋಗವನ್ನು ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ರವರು ಕರೆ ನೀಡಿದರು.ನಗರದ ಸರ್ಕಾರಿ ಬಾಲಕರ ಕಾಲೇಜು ವೃತ್ತದಲ್ಲಿ ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ಸಂಚಾರಿ ರಕ್ತದಾನ ಘಟಕದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಕಾರ್ಲ್ ಲ್ಯಾಂಡ್ ಸ್ಟೀನರ್ […]

Read More

ಶ್ರೀನಿವಾಸಪುರ ವಿಧಾನಸಭಾ ಕ್ಷೆತ್ರ ಹೊಸ ಮಟ್ನಹಳ್ಳಿ ಗ್ರಾಮದ ಮಡಿವಾಳ ವೃತ್ತಿಯಿಂದ ಜೀವನ ಮಾಡುವ ಬಸವರಾಜ್ ಅವರಿಗೆ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ಹೊಸ ಸೈಕಲ್ ಕೊಡುಗೆಯಾಗಿ ನೀಡಿದರು.

Read More