ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ 1 : ಮುದಿಮಡುಗು ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುದವಾರ ನಡೆದ ಚುನಾವಣೆಯಲ್ಲಿ ಚಿನ್ನರೆಡ್ಡಪ್ಪ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪಶು ಇಲಾಖೆಯ ನಿರ್ದೇಶಕ ಮಂಜುನಾಥರೆಡ್ಡಿ ತಿಳಿಸಿದರು. ಈ ಹಿಂದಿನ ಗ್ರಾ.ಪಂ. ಅಧ್ಯಕ್ಷ ಚಿನ್ನನಾರಾಯಣಪ್ಪರವರ ರಾಜಿನಾಮೆಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಚಿನ್ನರೆಡ್ಡಪ್ಪರವರು ಏಕೈಕ ನಾಮಪತ್ರ ಸಲ್ಲಿಸಿದ್ದು, ಅದರಲ್ಲಿ ಚಿನ್ನರೆಡ್ಡಪ್ಪ ಆಯ್ಕೆಯಾಗಿದ್ದಾರೆ. ಈ ಸಮಯದಲ್ಲಿ ಪಿಡಿಒ ನರೇಂದ್ರಬಾಬು, ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ ಗ್ರಾಮದ ಮುಖಂಡರಾದ ಅಮರನಾಥ್, ಜಯರಾಮ್,ಗಣೇಶ್,ಕೃಷ್ಣಾರೆಡ್ಡಿ,ಗೆಲ್ಜಿಗೂರು ರಾಮಸುಬ್ಬು, ರಾಜೇಂದ್ರ ಇತರರು […]
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ತಾಲ್ಲೂಕಿನ ಕಲ್ಲೂರು ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2022-23ನೇ ಸಾಲಿನಲ್ಲಿ 7,8 ಮತ್ತು 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆ ಮೂಲಕ ಭರ್ತಿ ಮಾಡಕೊಳ್ಳಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜು.27ರಂದು ಶಾಲೆಯಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ಶಾಲೆಯಿಂದ ಅರ್ಜಿ ಪಡೆದು ಜು.20ರೊಳಗೆ ಸಲ್ಲಿಸಬಹುತಾದಾಗಿದೆ ಎಂದು ಮುಖ್ಯ ಶಿಕ್ಷಕಿ ಕೆ.ಮಮತಾರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ 9731197976, 8660568686 ಸಂಪರ್ಕಿಸಲು ಕೋರಲಾಗಿದೆ.
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ತಾಲ್ಲೂಕಿನ ಶ್ರೀನಿವಾಸಪುರ, ತಾಡಿಗೋಳ್, ಲಕ್ಷ್ಮೀಪುರ, ಸೋಮಯಾಜಲಹಳ್ಳಿ, ಗೌನಿಪಲ್ಲಿ, ಅಡ್ಡಗಲ್ ಹಾಗೂ ರಾಯಲ್ಪಾಡ್ 66/11ಕೆವಿ ವಿದ್ಯುತ್ ಉಪ ಕೇಂದ್ರಗಳಲ್ಲಿ, ಜು.13 ರಂದು ಕೆಪಿಟಿಸಿಎಲ್ ವತಿಯಿಂದ ತ್ರೈಮಾಸಿಕ ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಳ್ಳಲಾಗಿದೆ. ಅದರ ಪರಿಣಾಮವಾಗಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಚಿಂತಾಮಣಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಮೇಲ್ಕಂಡ ಎಲ್ಲಾ ಉಪ ಕೇಂದ್ರಗಳ 11 ಕೆವಿ ಮಾರ್ಗಗಳಿಗೆ ವಿದ್ಯುತ್ ಸರಗರಾಜಿನಲ್ಲಿ ಅಡಚಣೆಯಾಗಲಿದೆ ಎಂದು […]
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ ಸಾಮಾಜಿಕ ವಲಯ ಅರಣ್ಯಾಧಿಕಾರಿಯಾಗಿ ಕೆ.ಮಹೇಶ್, ಬೇರೆಡೆಗೆ ವರ್ಗವಾಗಿರುವ ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್.ಸುರೇಶ್ ಬಾಬು ಅವರಿಂದ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ, (ಸಂಪಾದಕರು : ಬರ್ನಾಡ್ ಡಿ’ಕೋಸ್ತಾ) ಕೋಲಾರ ಜು.09 : ಕೋಲಾರ ರೋಟರಿ ಭವನದಲ್ಲಿ 2022-23 ನೇ ಸಾಲಿನ ರೋಟರಿ ಕ್ಲಬ್ ಅಧ್ಯಕ್ಷರು ಹಾಗೂ ಮಂಡಳಿ ಸದಸ್ಯರ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭಕ್ಕೆ ರೋಟರಿ ಆರ್.ಐ ಜಿಲ್ಲೆ 3190 ನಿಯೋಜಿತ ಜಿಲ್ಲಾ ರಾಜ್ಯಪಾಲರಾದ ರೋ. ಉದಯ್ ಕುಮಾರ್ ಭಾಸ್ಕರ್ ರವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನೂತನ ಅಧ್ಯಕ್ಷರಾದ ಬಿ.ಶಿವಕುಮಾರ್ ರವರಿಗೆ ಅಧ್ಯಕ್ಷರ ಕಾಲರ್ ಹಾಕುವುದರ ಮೂಲಕ ಈ ರೋಟರಿ ಸಾಲಿಗೆ […]
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ, (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರದ ನಗರೇಶ್ವರಸ್ವಾಮಿ ದೇವಾಲಯದಲ್ಲಿ ಗುರುವಾರ ಲೋಕ ಕಲ್ಯಾಣಾರ್ಥ ಚಂಡಿಕಾ ಹೋಮ ಏರ್ಪಡಿಸಲಾಗಿತ್ತು.
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ, (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ಕಾಂಗ್ರೆಸ್ ನಾಯಕತ್ವದ ಮೇಲೆ ನಂಬಿಕೆಯಿಟ್ಟು ಸ್ವಯಂ ಪ್ರೇರಣೆಯಿಂದ ಪಕ್ಷಕ್ಕೆ ಬರುವವರನ್ನು ಪ್ರೀತಿಯಿಂದ ಬರಮಾಡಿಕೊಳ್ಳಲಾಗುವುದುಎಂದು ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿ ಗುರುವಾರ ರಮೇಶ್ ನಗರದ ಜೆಡಿಎಸ್ ಬೆಂಬಲಿಗರಾದ ಬರ್ಕತ್ ಅಲಿ, ಚಾಂದ್, ಮಿಟ್ಟುಸಾಬ್ ಸೇರಿದಂತೆ 11 ಕುಟುಂಗಳ ಸದಸ್ಯರನ್ನು ಕಾಂಗ್ರೆಸ್ಗೆ ಬರಮಾಡಿಕೊಂಡು ಮಾತನಾಡಿದರು.ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದೇನೆ. ಕೆಸಿ ವ್ಯಾಲಿ ನೀರು ಜಿಲ್ಲೆಗೆ ಹರಿದು ಬಂದಿದೆ. ಕ್ಷೇತ್ರದ ಕೆಲವು ಕೆರೆಗಳನ್ನು ತುಂಬಿದೆ. ಹಂತ […]
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ, (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಸೌಲಭ್ಯ ತಲುಪಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸಾರ್ವಜನಿಕರು ಸಕಾಲ ಯೋಜನೆಯಡಿ ಸಲ್ಲಿಸಲಾಗಿರುವ ಅರ್ಜಿಗಳನ್ನು ನಿಗದಿತ ಕಾಲ ಮಿತಿಯೊಳಗೆ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರವಾಗಿ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.ಅಧಿಕಾರಿಗಳು ಪೌತಿ ಖಾತೆ ಮಾಡಲು ವಿಳಂಬ ಮಾಡಬಾರದು. ಭೂ ದಾಖಲೆಗಳನ್ನು […]
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ, ಸಂಪಾದಕರು: ಬರ್ನಾಡ್ ಡಿ’ಕೋಸ್ತಾ ಶ್ರೀನಿವಾಸಪುರ : ದಿವಂಗತ ಮಾಜಿ ಮುಖ್ಯ ಮಂತ್ರಿ ಹಾಗೂ ವಿಶ್ವವಿಖ್ಯಾತ ತೆಲಗು ನಟ ನಂದಮರಿ ತಾರಕ ರಾಮಾರಾವ್ ರವರ ಜಯಂತಿಯನ್ನು ಅಂದ್ರಪ್ರದೇಶದಲ್ಲಿ ಮಿನಿ ಮಹಾನಾಡು ಎಂಬ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮದನಪಲ್ಲಿಯ ಬುಧವಾರ ನಡೆದ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ನಾರ ಚಂದ್ರ ಬಾಬು ನಾಯುಡು ರವರು ತಾಲ್ಲೂಕಿನ ತಾಡಿಗೊಳ್ಳ ಕ್ರಾಸ್ ಮೂಲಕ ಹಾದು ಹೋದರು. ಹೈದರಾಬಾದ್ನಿಂದ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಸ್ತೆಯ ಮೂಲಕ ಅಂದ್ರಪ್ರದೇಶದ ಮದನಪಲ್ಲಿಗೆ ತೆರಳಲು ಶ್ರೀನಿವಾಸಪುರ ತಾಲ್ಲೂಕಿನ […]