ಶ್ರೀನಿವಾಸಪುರ: ಶಾಲಾ ಕಾಲೇಜು ಆವರಣ ಪ್ರವೇಶಿಸಿ ಅನೈತಿಕ ಚಟುವಟಿಕೆ ನಡೆಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾ ಸಂಸ್ಥೆಗಳ ಪಾವಿತ್ರ್ಯತೆ ಉಳಿಸಲು ಪೂರಕವಾದ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಸಾರ್ವಜನಿಕ ಇಲಾಖೆ ಉಪ ನಿರ್ದೇಶದಕರನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಹೇಳಿದರು.ಕೆಲವರು ಸರ್ಕಾರಿ ಶಾಲಾ ಕಾಲೇಜು ಆವರಣದಲ್ಲಿ ಕುಡಿಯುವುದು, […]

Read More

ಶ್ರೀನಿವಾಸಪುರ: ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ.ಎಸ್.ಅನಸೂಯ ಬಾಬು ಆಯ್ಕೆಯಾಗಿದ್ದಾರೆ.ಈ ಹಿಂದೆ ಅಧ್ಯಕ್ಷರಾಗಿದ್ದ ಗೀತಾ ರಾಮಚಂದ್ರ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಸಲಾಯಿತು.ಒಟ್ಟು 19 ಸದಸ್ಯರ ಪೈಕಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೆ.ಎಸ್.ಅನಸೂಯ ಬಾಬು 10 ಮತ ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಟಿ.ಎಚ್.ಲಕ್ಷ್ಮಿದೇವಮ್ಮ 9 ಮತ ಪಡೆದು ಸೋಲನ್ನಪ್ಪಿದರು.ಚುನಾವಣಾಧಿಕಾರಿ ಎಂ.ಶ್ರೀನಿವಾಸನ್, ಪಿಡಿಒ ಶಂಕರಪ್ಪ, ಮುಖಂಡರಾದ ಮಂಜುನಾಥರೆಡ್ಡಿ, ಭೀಮಣ್ಣ, ನಾಗಾರ್ಜುನ, ರಾಮಮೂರ್ತಿ, ಅಶೋಕ್, ಶ್ರೀರಾಮರೆಡ್ಡಿ ಇದ್ದರು.

Read More

ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜನವರಿ 13ರಂದು ಮಂಗಳೂರಿನ ಪ್ರತಿಷ್ಠಿತ ಗ್ಲೋಟಚ್ ಟೆಕ್ನಾಲಜೀಸ್ ಸಂಸ್ಥೆ( ದಿಯಾ ಸಿಸ್ಟಮ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ನಡೆಸಲು ಉದ್ದೇಶಿಸಿದೆ.ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್, ಸ್ಟಾಟಿಸ್ಟಿಕ್ಸ್, ಎಲೆಕ್ಟ್ರಾನಿಕ್ಸ್), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ.ಎಸ್),ಎಂಎಸ್ಸಿ, ಎಂಸಿಎ, ಬಿಇ,ಬಿಟೆಕ್ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.30 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೂಲ ಅಂಕಪಟ್ಟಿ, ಪದವಿ ಪ್ರಮಾಣ ಪತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. […]

Read More

ಶ್ರೀನಿವಾಸಪುರ: ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.ಬಂದಿತನನ್ನು ಆಂಧ್ರಪ್ರದೇಶದ ವೆಂಕಟರಮಣ ಎಂದು ಗುರುತಿಸಲಾಗಿದ್ದು, ಬಂಧಿತ ವ್ಯಕ್ತಿ ನೀಡಿದ ಸುಳಿವಿನ ಮೇರೆಗೆ ತಾಲ್ಲೂಕಿನ ಪುಲಗೂರುಕೋಟೆ ಗ್ರಾಮದಲ್ಲಿ ರೂ.50 ಸಾವಿರ ಮೌಲ್ಯದ 1 ಕೆಜಿ 100 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಯಿತು.

Read More

ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಜಾರ್ಯಕರ್ತರು ರಾಜ್ಯದ ರೈತರ ಭೂಮಿ ಹಕ್ಕಿಗಾಗಿ ಆಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಅರ್ಜಿ ಸಲ್ಲಿಸಿರುವ ಎಲ್ಲ ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರ ಹಕ್ಕುಪತ್ರ ನೀಡಬೇಕು. ವಿತರಣೆಯಲ್ಲಿ ಆಗುವ ಭ್ರಷ್ಟಾಚಾರ ತಡೆಯಬೇಕು ಎಂದು ಆಗ್ರಹಿಸಿದರು.ಸರ್ಕಾರಿ ಜಮೀನು ಸಾಗುವಳಿ ಮಾಡುವ ರೈತರಿಗೆ ಹಕ್ಕುಪತ್ರ ನೀಡುವ ಬದಲು ಗುತ್ತಿಗೆ ನೀಡುವ ಕ್ರಮವನ್ನು ಹಿಂಪಡೆಯಬೇಕು. ಅರಣ್ಯ ಹಕ್ಕು […]

Read More

ಕೋಲಾರ:- ಸ್ವಾತಂತ್ರ್ಯ, ಸ್ವಾಭಿಮಾನ ಮತ್ತು ಸ್ವಾವಲಂಬನೆಯ ಸಂಕೇತವಾಗಿರುವ ತ್ರಿವರ್ಣ ಧ್ವಜದ ಮಹತ್ವವನ್ನು ಪ್ರತಿಯೊಬ್ಬ ಭಾರತೀಯರು ಅರಿತು, ಹೆಮ್ಮೆಯಿಂದ ಗೌರವ ನೀಡಬೇಕೆಂದು ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು.ನಗರದ ಕಾರಂಜಿಕಟ್ಟೆ ಧರ್ಮರಾಯಸ್ವಾಮಿ ದೇವಾಲಯ ಸಮುದಾಯ ಭವನ ಸಭಾಂಗಣದಲ್ಲಿ ಶುಕ್ರವಾರ ಎಇಎಸ್ ಪಬ್ಲಿಕ್ ಶಾಲೆ ಮತ್ತು ಸುಭಾಷ್ ಶಾಲೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಧ್ವಜ ಅಂಗೀಕಾರ ಅಮೃತಮಹೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ದೇಶದ ಬಹಳಷ್ಟು ಜನರಿಗೆ ರಾಷ್ಟ್ರಧ್ವಜ ಸಂಹಿತೆಯ ಕುರಿತು ಅರಿವೇ ಇಲ್ಲವೆಂದು ವಿಷಾದಿಸಿದ ಅವರು, ಭಾರತ […]

Read More

ಶ್ರೀನಿವಾಸಪುರ: ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಹೆಚ್ಚಿನ ಮತಗಳಿಂದ ಚುನಾಯಿತರಾಗಿರುವುದನ್ನು ಸ್ವಾಗತಿಸಿ ಗುರುವಾರ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎಂ.ಲಕ್ಷ್ಮಣಗೌಡ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಆದಿವಾಸಿ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರು ದೇಶದ ರಾಷ್ಟ್ರತಿ ಸ್ಥಾನಕ್ಕೆ ಏರಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಇದು ಪ್ರಜಾಪ್ರಭುತ್ವದ ನಿಜವಾದ ಶಕ್ತಿಯಾಗಿದೆ ಎಂದು ಹೇಳಿದರು.ದೇಶದ ಪ್ರಥಮ ಪ್ರಜೆಯಾಗಿ ದ್ರೌಪದಿ ಮುರ್ಮು ಅವರು ಪ್ರಜಾಪ್ರಭುತ್ವದ ಘನತೆ ಗೌರವವನ್ನು ಹೆಚ್ಚಿಸಲಿದ್ದಾರೆ. ಅವರ ಗೆಲುವನ್ನು ಸಂತೋಷದಿಂದ ಸ್ವಾಗತಿಸಿ, ಅಭಿನಂದಿಸುತ್ತಿದ್ದೇವೆ ಎಂದು […]

Read More

ಶ್ರೀನಿವಾಸಪುರ :ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ ಐ ಎನ್ ಟಿ ಯು ಸಿ ಸಂಯೋಜಿತ ಶ್ರೀನಿವಾಸಪುರ ತಾಲ್ಲೂಕು ಸಮಿತಿ ವತಿಯಿಂದ ರಾಯಲ್ಪಾಡು ಹೋಬಳಿ ಸಮಾವೇಶದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶಾಸಕ ಕೆ.ಆರ್.ರಮೇಶ್ ಕುಮಾರ್ ರವರು ಕಾರ್ಮಿಕರ ಗುರುತಿನ ಚೀಟಿ ನೀಡುವುದರ ಮೂಲಕ ಉದ್ಘಾಟಿಸಿದರು.ಶಾಸಕ ಕೆ.ಆರ್ ರಮೇಶ್ ಕುಮಾರ್ ಮಾತನಾಡಿ ನೆಹರು ರವರು ಪ್ರಧಾನ ಮಂತ್ರಿಯಾಗಿದಾಗ ಮಹಾವೀರ ತ್ಯಾಗಿ ಎಂಬುವರು ಆಗ ಕಾರ್ಮಿಕ ಸಚಿವರಾಗಿದ್ದಗಿನಿಂದ ಕಾರ್ಮಿಕ ಇಲಾಖೆ ಕೆಲಸ ಮಾಡಿಕೊಂಡು ಬರುತ್ತಿದೆ. ಮಲ್ಲಿಕಾರ್ಜುನ ಖರ್ಗೆ ರವರು ಕೇಂದ್ರದಲ್ಲಿ ಕಾರ್ಮಿಕ […]

Read More

ಶ್ರೀನಿವಾಸಪುರ: ಅಧಿಕಾರಿಗಳು ಕಚೇರಿ ವ್ಯವಹಾರದಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿವಿಧ ಲಾಖೆಗಳ ಅಭಿವೃದ್ದಿ ಪರೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರಕ್ಕೆ 5200 ಮನೆ ಮಂಜೂರು ಮಾಡಿಸಲಾಗಿದೆ. ಆದರೆ ಪಿಡಿಒಗಳ ನಿಧಾನ ಧೋರಣೆಯಿಂದ ಇನ್ನೂ ಫಲಾನುಭವಿಗಳಿಗೆ ವಿತರಣೆಯಾಗಿಲ್ಲ. ವಿಶೇಷವಾಗಿ ಬೈರಗಾನಹಳ್ಳಿ ಹಾಗೂ ಗೌನಿಪಲ್ಲಿ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಫಲಾನುಭವಿಗಳ ಪಟ್ಟಿಯನ್ನು ಆನ್‍ಲೈನ್‍ಗೆ ಹಾಕಿಲಲ್ಲ. ಪಿಡಿಒಗಳ ಕಳ್ಳಾಟದಿಂದ ಫಲಾನುಭವಿಗಳು ಸೌಲಭ್ಯ ವಂಚಿತರಾಗುತ್ತಿದ್ದಾರೆ. ಪರಿಸ್ಥಿತಿ ಬದಲಾಗದಿದ್ದರೆ ಎಸಿಬಿ ತನಿಖೆ […]

Read More