ರಾಯಲ್ಪಾಡು 1 :ಈ ಚಾರ್ತರ್ಮಾಸದ ಸಮಯದಲ್ಲಿ ಭಕ್ತಿ ಮತ್ತು ತಪಸ್ಸು ಇತರ ತಿಂಗಳುಗಳಲ್ಲಿ ಮಾಡುವುದಕಿಂತ ಹೆಚ್ಚಿನ ಪುಣ್ಯವನ್ನು ಮತ್ತು ಭಕ್ತಿ ಮತ್ತು ತಪಸ್ಸಿನಿಂದ ನಮ್ಮ ಇಂದ್ರಿಯಗಳು ಮತ್ತು ಮನಸ್ಸು ಶುದ್ಧವಾಗುವುದು ಮತ್ತು ಶುದ್ಧವಾದ ಮನಸ್ಸು ಮಾತ್ರ ದೇವರಿಗೆ ಸಂಪರ್ಕ ಹೊಂದುತ್ತದೆ ಎಂದು ಚಾರ್ತಮಾಸ್ಯೆ ಸೇವಾ ಸಮಿತಿಯ ಪ್ರಧಾನ ಸಂಚಾಲಕ ಹಾಗೂ ಆಖಿಲ ಕರ್ನಾಟಕ ಬ್ರಾಹ್ಮಣರ ಸಂಘದ ಮಾಹಾ ಸಭೆಯ ಉಪಾಧ್ಯಕ್ಷ ಬಿ.ಎಸ್.ರಾಘವೇಂದ್ರಭಟ್ ಹೇಳಿದರು.ರಾಯಲ್ಪಾಡಿನ ಮೇಧಾಗುರು ಜ್ಯೋರ್ತಿವಿಜ್ಞಾನ ಕೇಂದ್ರದಲ್ಲಿ ಗುರುವಾರ ಬೆಂಗಳೂರಿನ ಚಾರ್ತಮಾಸ್ಯೆ ಸೇವಾ ಸಮಿತಿ ವತಿಯಿಂದ ಹರಿಹರ […]
ಕೋಲಾರದ ಮಾಜಿ ಸಂಸದರೂ ಆಗಿದ್ದು ಈಗ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿಯೂ ಅಧಿಕಾರ ವಹಿಸಿಕೊಂಡಿರುವ ಕೆ.ಎಚ್.ಮುನಿಯಪ್ಪ ಅವರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.
ಕೋಲಾರ,ಮೇ.23: ಸರಳತೆಯ ಸಾಹುಕಾರ, ಅಭಿವೃದ್ಧಿಯ ಹರಿಕಾರ, ನಮ್ಮ ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ರವರು ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಕೋಲಾರ ಜಿಲ್ಲೆಯ ನಾಯಕ ಜನಾಂಗದ ಮುಖಂಡರು ಸಚಿವರ ನಿವಾಸದಲ್ಲಿ ಭೇಟಿಯಾಗಿ ಶುಭ ಕೋರಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ನರಸಿಂಹಯ್ಯ, ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಎಂ.ಬಾಲಗೋವಿಂದ್, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಭಾ ತಾಲೂಕು ಅಧ್ಯಕ್ಷ ಆನಂದ್‍ಕುಮಾರ್, ಐತರಾಸನಹಳ್ಳಿ ನರಸಿಂಹಯ್ಯ, ಗರುಡನಹಳ್ಳಿ ಬಾಬು, ವಕ್ಕಲೇರಿ ಬಾಬು, ರಾಜ್ಯ ಸಂಘಟನಾ ಕಾರ್ಯದರ್ಶಿ ಬೆಳ್ಳೂರು […]
ಕೋಲಾರ : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯ ಅಬ್ಬರಕ್ಕೆ ಕೋಲಾರ ಜಿಲ್ಲೆಯ ಅಂದಾಜು 3000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದ್ದು , ರೈತರು ಕಂಗಾಲಾಗಿದ್ದಾರೆ . ಅಕಾಲಿಕ ಮಳೆಗೆ ರಾಜ್ಯದಲ್ಲೇ ಅತೀ ಹೆಚ್ಚು ಬೆಳೆ ನಷ್ಟ ಕೋಲಾರ ಜಿಲ್ಲೆಯಲ್ಲಾಗಿದ್ದು , ಅಂದಾಜು 3000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಪೂರ್ವ ಮಳೆ ಅಬ್ಬರ […]
ಕೋಲಾರ : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಯನ್ನು ರಾಜ್ಯದ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಒಳಿತಿಗಾಗಿ ಶ್ರಮಿಸುವ ಅವಕಾಶ ಎಂದು ಭಾವಿಸಿ ಕಾರ್ಯನಿರ್ವಹಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು. ಬುಧವಾರ ಸಂಜೆ ಬೆಂಗಳೂರಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ತಮಗೆ ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಪತ್ರಕರ್ತರು ಯಾವುದೇ ಸಂದರ್ಭದಲ್ಲಿ ವೃತ್ತಿಯ ಮೌಲ್ಯಗಳಿಗೆ ಕಳಂಕ ಬಾರದಂತೆ ನಡೆದುಕೊಳ್ಳಬೇಕು ಎಂದು ಹೇಳಿದರು. ಮುಖ್ಯಮಂತ್ರಿಗಳಿಗೆ ರಾಜಕೀಯ ಸಲಹೆಗಾರ, ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿಯಾಗುವ ಅವಕಾಶ ಇದ್ದರೂ ಸಹ ತಮ್ಮನ್ನು ಇದುವರೆಗೂ […]
ಶನಿವಾರ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿಯೂ ಕೋಲಾರ ಜಿಲ್ಲೆಯ ಯಾವುದೇ ಶಾಸಕ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿಲ್ಲ . ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಕ್ಷೇತ್ರದಿಂದ ಗೆದ್ದು ಶಾಸಕರಾಗಿಗೆದ್ದ ಕೆ.ಎಚ್. ಮುನಿಯಪ್ಪ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದೇ ಸದ್ಯ ಕೋಲಾರ ಜಿಲ್ಲೆಯ ಜನರ ಸಮಾಧಾನಕ್ಕೆ ಕಾರಣವಾಗಿದ್ದು , ಇವರೇ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಸಂತಸಕ್ಕೆ ಕಾರಣವಾಗಿದೆ . ಕೋಲಾರ ಜಿಲ್ಲೆಯ ಉಸ್ತುವಾರಿ ಮಂತ್ರಿಗಳಾಗಿ ದಿವಂಗತ ಸಿ.ಬೈರೇಗೌಡ […]
ಶ್ರೀನಿವಾಸಪುರ: ತಹಶೀಲ್ದಾರ್ ಶಿರಿನ್ ತಾಜ್ ಅವರ ನೇತೃತ್ವದಲ್ಲಿ ಸೋಮವಾರ ಕಂದಾಯ, ತೊಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಸಿದರು.ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತೋಟಗಾರಿಕಾ ಅಧಿಕಾರಿಗಳಾದ ಹರೀಶ್, ಎನ್.ಮಂಜುನಾಥ್, ಎಂ.ಎಸ್.ರಾಜೀವ್ ಇದ್ದರು.ತಾಲ್ಲೂಕಿನಲ್ಲಿ ಈ ಮುಂಗಾರಿನಲ್ಲಿ 2939 ಹೆಕ್ಟೇರ್‍ನಲ್ಲಿ ಬೆಳೆಯಲಾಗಿದ್ದ ತೋಟದ ಬೆಳೆಗೆ ಹಾನಿ ಉಂಟಾಗಿದೆ. ಆಪೈಕಿ 2500 ಹೆಕ್ಟೇರ್‍ನಲ್ಲಿ ಬೆಳೆಯಲಾಗಿದ್ದ ಮಾವಿನ ಫಸಲಿಗೆ […]
ಶ್ರೀನಿವಾಸಪುರ ಮೇ-20 : ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಮಾವಿಗೆ ಹೆಸರುವಾಸಿಯಾಗಿದೆ ಆದ್ದರಿಂದ ರೈತರು, ವರ್ತಕರು ಸಮನ್ವಯತೆಯಿಂದ ನಡೆದುಕೊಂಡು ಯಾವುದೇ ಅಡಚಣೆಗಳಿಲ್ಲದೆ ಮಾವಿನ ಸುಗ್ಗಿ ಪೂರ್ಣಗೊಳಿಸಬೇಕು ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಸೂಚಿಸಿದರು.ಎ.ಪಿ.ಎಂ.ಸಿ. ಪ್ರಾಂಗಣದಲ್ಲಿ ಶನಿವಾರ ಕರೆಯಲಾಗಿದ್ದ ವರ್ತಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಾರ್ಷಿಕ ಬೆಳೆ ಮಾವಿನ ಸುಗ್ಗಿ ಪ್ರಾರಂಭವಾಗಿದೆ ವರ್ತಕರು ರೈತರಿಗೆ ಯಾವುದೇ ತೊಂದರೆಯಾಗದಂತೆ ಪಾರದರ್ಶಕತೆಯನ್ನು ಕಾಪಾಡಬೇಕು ಕಾರ್ಮಿಕರಿಗೆ ಅಗತ್ಯವಾದ ಶುದ್ದ ಕುಡಿಯುವ ನೀರು, ವಿಶ್ರಾಂತಿಧಾಮ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ […]
ಶ್ರೀನಿವಾಸಪುರ: ಕರ್ನಾಟಕ ರಾಜಕೀಯದ ಅತ್ಯಂತ ಹಿರಿಯ ರಾಜಕಾರಣಿಯಾದ ಕೆ.ಎಚ್ ಮುನಿಯಪ್ಪ ಅವರು ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದು , ಇಂದು ( ಮೇ 20 ) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೆ.ಎಚ್ ಮುನಿಯಪ್ಪ ಅವರು 07 ಮಾಚ್ 1948 ರಂದು ಕೋಲಾರ ಜಿಲ್ಲೆಯ ಕಂಬದಹಳ್ಳಿ ಶ್ರೀ ಹನುಮಪ್ಪ ಹಾಗೂ ಶ್ರೀಮತಿ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ವೃತ್ತಿಯಲ್ಲಿ ವಕೀಲರಾಗಿರುವ ಕೆ.ಎಚ್ ಮುನಿಯಪ್ಪ ಸಮಾಜಿಕ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು. ನಾಗರತ್ನಮ್ಮ ಅವರನ್ನು ವಿವಾಹವಾಗಿರುವ ಕೆ.ಎಚ್ […]

