ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು – ಶಿಕ್ಷಕರ ಸಭೆ ಕಡ್ಡಾಯ : ಶಿಕ್ಷಣ ಇಲಾಖೆ ಕ್ರಮಕ್ಕೆ ಸ್ವಾಗತ – ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು–ಶಿಕ್ಷಕರ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮ ಸಮಿತಿಯ ಸದಸ್ಯ ಶಬ್ಬೀರ್ ಅಹ್ಮದ್ ಸ್ವಾಗತಿಸಿದ್ದಾರೆ. ಈ ಕ್ರಮದಿಂದ ಶಾಲೆ, ಶಿಕ್ಷಕರು ಹಾಗೂ ಪೋಷಕರ ನಡುವೆ ಸಮನ್ವಯ ಮತ್ತಷ್ಟು ಬಲಪಡಲಿದ್ದು, ವಿದ್ಯಾರ್ಥಿಗಳ […]
ಶ್ರೀನಿವಾಸಪುರ : ಈಗಾಗಲೇ ಅರಣ್ಯ ಇಲಾಖೆ ಹಾಕಿರುವ ಸಿಮೆಂಟ್ ಪಿಲ್ಲರ್‌ಗಳನ್ನು ಗುರುವಾರದೊಳಗೆ ತೆರವುಗೊಳಿಸದಿದ್ದರೆ ಸ್ವಇಚ್ಛೆಯಿಂದಲೇ ರೈತರೇ ತೆರವುಗೊಳಿಸುತ್ತಾರೆ ಎಂದು ಕೆಪಿಆರ್‌ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್. ಸೂರ್ಯನಾರಾಯಣ ಎಚ್ಚರಿಸಿದರು.ಭೂಸಂತ್ರಸ್ಥ ಹೋರಾಟ ಸಮಿತಿಯ ವತಿಯಿಂದ ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಿಂದ ವಲಯ ಅರಣ್ಯಾಧಿಕಾರಿಗಳ ಕಚೇರಿವರೆಗೆ ರೈತರು ಅರಣ್ಯ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾವು ಬೆಳಗಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ, ರೈತರ ಜಮೀನುಗಳಿಗೆ ಅತಿಕ್ರಮ ಪ್ರವೇಶ ಮಾಡಿ ಉತ್ತರ […]
ಶ್ರೀನಿವಾಸಪುರ: ಯದರೂರು ಲಕ್ಷ್ಮಿಪುರ ಪ್ರದೇಶದಲ್ಲಿ ಕೈಗಾರಿಕಾ ವಲಯವನ್ನು ಸ್ಥಾಪಿಸಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶ ನನ್ನದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ತೊಟ್ಲಿ ಗ್ರಾಮದ ಶ್ರೀ ಸಾಯಿಬಾಬಾ ದೇವಸ್ಥಾನದಲ್ಲಿ ಗುರುವಾರ ಭಕ್ತಾದಿಗಳಿಂದ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೈಗಾರಿಕಾ ವಲಯ ಸ್ಥಾಪನೆಗೆ ಕೆಲವರು ಅನಗತ್ಯ ಅಡ್ಡಿಪಡಿಸುತ್ತಿರುವುದು ನೋವುಂಟು ಮಾಡಿದೆ. ಕೈಗಾರಿಕಾ ವಲಯ ಸ್ಥಾಪನೆ ಹಾಗೂ ಕ್ಷೇತ್ರದ ಅಭಿವೃದ್ಧಿಯಿಂದ ನಾನು ಏನಾದರೂ ಸ್ವಾರ್ಥ ಸಾಧಿಸಿಕೊಳ್ಳುತ್ತಿದ್ದೇನೆಯೇ ಎಂದು ಬೇಸರ ವ್ಯಕ್ತಪಡಿಸಿದರು.ಬುಧವಾರ ಶ್ರೀನಿವಾಸಪುರ […]
– ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣವೇ ಮೂಲಾಧಾರ. ವಿದ್ಯಾವಂತ ಸಮಾಜವೇ ಪ್ರಗತಿಶೀಲ ಸಮಾಜ ಎಂಬ ಸತ್ಯವನ್ನು ಒಪ್ಪಿಕೊಂಡರೂ, ಇಂದಿಗೂ ಹೆಣ್ಣು ಮಗು ಗಂಡು ಮಗು ಎಂಬ ಅಸಮಾನ ಮನೋಭಾವ ಕೆಲವೆಡೆ ಜೀವಂತವಾಗಿರುವುದು ಆತಂಕಕಾರಿ ವಿಚಾರ. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡಿದರೂ, ಆ ಹಕ್ಕುಗಳ ಅನುಷ್ಠಾನ ನೆಲಮಟ್ಟದಲ್ಲಿ ಸಮಾನವಾಗಿ ನಡೆಯುತ್ತಿಲ್ಲ ಎಂಬ ವಾಸ್ತವವನ್ನು ನಿರಾಕರಿಸಲು ಸಾಧ್ಯವಿಲ್ಲ. ವಿಶೇಷವಾಗಿ ಶಿಕ್ಷಣದ ವಿಷಯದಲ್ಲಿ ಲಿಂಗ ಆಧಾರಿತ ತಾರತಮ್ಯವು ಇನ್ನೂ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಶಿಕ್ಷಣವೇ ಸಾಮಾಜಿಕ […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಅವರಲ್ಲಿ ಸಾಮಾನ್ಯ ಜ್ಞಾನ ವೃದ್ಧಿಯಾಗುತ್ತದೆ ಎಂದು ತಾಲ್ಲೂಕು ಯೋಜನಾಧಿಕಾರಿ (ಟಿಪಿಒ) ಎಸ್. ವೆಂಕಟಸ್ವಾಮಿ ಹೇಳಿದರು. ತಾಲೂಕಿನ ಯಲ್ದೂರು ಗ್ರಾಮದಲ್ಲಿನ ಶ್ರೀ ಶ್ರೀನಿವಾಸ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಅಂತರ್‌ಶಾಲಾ ರಸಪ್ರಶ್ನೆ ಸ್ಪರ್ಧೆ ಹಾಗೂ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯೆ ಎಂಬುದು ಯಾರೊಬ್ಬರ ಸ್ವತ್ತಲ್ಲ. ಆಸಕ್ತಿ ಮತ್ತು ಶ್ರಮದಿಂದ ವಿದ್ಯೆ ಕಲಿಯುವವರಿಗೆ ಮಾತ್ರ ಅದು ಒಲಿಯುತ್ತದೆ. ಪೋಷಕರು ತಮ್ಮ ಮಕ್ಕಳನ್ನು […]
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ನೌಕರರ ಆರೋಗ್ಯ ಹಾಗೂ ಕಲ್ಯಾಣದ ದೃಷ್ಟಿಯಿಂದ ಮಹತ್ವದ ಹಾಗೂ ಪ್ರಗತಿಪರ ನಿರ್ಧಾರ ಕೈಗೊಂಡಿದೆ. ಮಹಿಳಾ ನೌಕರರಿಗೆ ಪ್ರತಿಮಾಸವೂ ಒಂದು ದಿನದ ಮಾಸಿಕ ಋತುಚಕ್ರ (ಮೆನ್ಸ್ಟ್ರುಯಲ್) ರಜೆ ನೀಡಲು ನಿಗಮ ಅನುಮೋದನೆ ನೀಡಿದ್ದು, ಈ ಸೌಲಭ್ಯವು 2026ರ ಜನವರಿ 1ರಿಂದ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ಈ ಆದೇಶವನ್ನು ಜಾರಿಗೆ ತರಲಾಗಿದ್ದು, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷಾ (ಐಎಎಸ್) […]
ಶ್ರೀನಿವಾಸಪುರ : ಅರಣ್ಯ ಇಲಾಖೆಯ ನೀತಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳ ವತಿಯಿಂದ ಪಟ್ಟಣದ ನೌಕರರ ಭವನದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ, ನಮ್ಮ ಸಂಘವು ಸದಾ ರೈತರ ಪರವಾಗಿ ನಿಂತಿದೆ. ಅರಣ್ಯ ಇಲಾಖೆಯ ಕ್ರಮಗಳಿಂದ ಭೂ ಸಂತ್ರಸ್ಥರಾಗಿರುವ ರೈತರಿಗೆ ಶಾಶ್ವತ ಪರಿಹಾರ ದೊರಕಬೇಕಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಎಲ್ಲಾ ಸಂಘಟನೆಗಳ ಮುಖಂಡರು ಹಾಗೂ ರೈತರು ಕೋಲಾರದಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ […]
ಶ್ರೀನಿವಾಸಪುರ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಅವರಲ್ಲಿ ಸಾಮಾನ್ಯ ಜ್ಞಾನ ವೃದ್ಧಿಯಾಗುತ್ತದೆ ಎಂದು ತಾಲ್ಲೂಕು ಯೋಜನಾಧಿಕಾರಿ (ಟಿಪಿಒ) ಎಸ್. ವೆಂಕಟಸ್ವಾಮಿ ಹೇಳಿದರು. ತಾಲೂಕಿನ ಯಲ್ದೂರು ಗ್ರಾಮದಲ್ಲಿನ ಶ್ರೀ ಶ್ರೀನಿವಾಸ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಅಂತರ್‌ಶಾಲಾ ರಸಪ್ರಶ್ನೆ ಸ್ಪರ್ಧೆ ಹಾಗೂ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯೆ ಎಂಬುದು ಯಾರೊಬ್ಬರ ಸ್ವತ್ತಲ್ಲ. ಆಸಕ್ತಿ ಮತ್ತು ಶ್ರಮದಿಂದ ವಿದ್ಯೆ ಕಲಿಯುವವರಿಗೆ ಮಾತ್ರ ಅದು ಒಲಿಯುತ್ತದೆ. ಪೋಷಕರು […]
ಶ್ರೀನಿವಾಸಪುರ : ತಾಲ್ಲೂಕಿನಲ್ಲಿ ಬೆಳೆಯುವ ಬೆಳೆಗಳಿಗೆ ಯಾವ ರೀತಿಯಲ್ಲಿ ಕೀಟನಾಶಕಗಳನ್ನು ಸಿಂಪಡಣೆ ಮಾಡಬೇಕು ಎಂಬುದರ ಬಗ್ಗೆ ಹೊಗಳಗೆರೆ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ/ಬಿ. ಆಂಜನೇಯರೆಡ್ಡಿ ಮಾಹಿತಿ ನೀಡಿದರು. ಪಟ್ಟಣದ ಕೃಷಿ ಇಲಾಖೆಯ ಸಭಾಂಗಣದಲ್ಲಿ ಮಂಗಳವಾರ ರೈತ ದಿನಚಾರಣೆಗೆ ಚಾಲನೆ ನೀಡಿ ಮಾತನಾಡಿ ಸಮಗ್ರ ಕೃಷಿ ಪದ್ದತಿ ಬಗ್ಗೆ ರೈತರಿಗೆ ಅರಿವು ಮೂಡಿಸಿದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಂ.ಮಹೇಶ್‌ಬಾಬು ಮಾತನಾಡಿ ಸರ್ಕಾರದಿಂದ ಬರುವ ಸೌಲಭ್ಯಗಳ ಬಗ್ಗೆ ವಿಸ್ತರಾವಾಗಿ ತಿಳಿಸುತ್ತಾ, ಸರ್ಕಾರ […]

