ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ, ಸಂಪಾದಕರು: ಬರ್ನಾಡ್ ಡಿ’ಕೋಸ್ತಾ ಕೋಲಾರ:- ಸ್ವರ್ಧಾತ್ಮಕ ಜಗತ್ತಿನಲ್ಲಿ ಕಲಿಕೆಯಲ್ಲಿ ಮಕ್ಕಳು ಸದೃಢರಾಗಲು ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯವಾಗಿದ್ದು, ವಿವಿಧ ಕಂಪನಿಗಳ ಸಹಕಾರ ಪಡೆದ ಆಯ್ದ ಶಾಲೆಗಳ ಡಿಜಟಲೀಕರಣಕ್ಕೆ ಕ್ರಮವಹಿಸೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ತಿಳಿಸಿದರು.ತಾಲ್ಲೂಕಿನ ವೇಮಗಲ್ ಸರ್ಕಾರಿಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಕ ಗೆಳೆಯರ ಬಳಗದ ಆಶ್ರಯದಲ್ಲಿ ಎಪ್ಸನ್ ಕಂಪನಿ ಕೊಡುಗೆಯಾಗಿ ನೀಡಿರುವ 1 ಲಕ್ಷಕ್ಕೂ ಹೆಚ್ಚು ನೋಟ್ ಪುಸ್ತಕ ವಿತರಿಸಿ ಅವರು ಮಾತನಾಡುತ್ತಿದ್ದರು.ವಿವಿಧ ಕಂಪನಿಗಳ ಸಹಕಾರ ಪಡೆದು ಆಯ್ದ ಶಾಲೆಗಳನ್ನು […]
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ, ಸಂಪಾದಕರು:ಬರ್ನಾಡ್ ಡಿ’ಕೋಸ್ತಾ ಶ್ರೀನಿವಾಸಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ 2021-22 ನೇ ಸಾಲಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ವಿಜ್ಞಾನ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುವ ಕಾಲೇಜಿನ ವಿದ್ಯಾರ್ಥಿನಿ ಮಿಸ್ಸಾ ತಬಸ್ಸುಮ್ ಅವರನ್ನು ಅಭಿನಂದಿಸಲಾಯಿತು . ಪ್ರಾಂಶುಪಾಲ ಎಸ್.ಸಣ್ಣ ವೀರಯ್ಯ , ಉಪನ್ಯಾಸಕರಾದ ಎಸ್.ಮಧು , ಡಾ.ವೆಂಕಟನಾರಾಯಣ , ಡಾ.ಮಂಜುನಾಥ್ , ಡಾ . ಮೃತ್ಯುಂಜಯ್ , ಎಚ್.ಮಹದೇವಯ್ಯ , ಚಿನ್ನಪ್ಪರೆಡ್ಡಿ , ಬಿ.ನವೀನ್ ಕುಮಾರ್ , ಪ್ರತಿಭಾ , ಪದ್ಮ ಇದ್ದರು.
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸಂಪಾದಕರು : ಬರ್ನಾಡ್ ಡಿ’ಕೋಸ್ತಾ ಕೋಲಾರ:- ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪುರಸ್ಕರಿಸಲು ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಜಿಲ್ಲಾ ಹಾಗೂ ತಾಲ್ಲೂಕು ನೌಕರರ ಸಂಘಗಳ ಅಧ್ಯಕ್ಷರ ದೃಢೀಕರಣ ಪತ್ರ ಕಡ್ಡಾಯವಾಗಿರುವುದರಿಂದ ನೌಕರರು ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸಲು ಸಂಘದ ಜಿಲ್ಲಾಧ್ಯಕ್ಷ ಸುರೇಶ್ಬಾಬು ಮನವಿ ಮಾಡಿದ್ದಾರೆ.ನೌಕರರು ತಮ್ಮ ಪ್ರತಿಭಾವಂತ ಮಕ್ಕಳ ಅರ್ಜಿಗಳನ್ನು ಸಲ್ಲಿಸುವ ಮುನ್ನಾ ಅರ್ಜಿಗಳನ್ನು ನೌಕರರ ಸಂಘದ ಕಚೇರಿಯಲ್ಲಿ ಸಲ್ಲಿಸಿ, ದೃಢೀಕರಣ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.ಈ ಕುರಿತು ಜಿಲ್ಲೆಯ ಸರ್ಕಾರಿ […]
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸಂಪಾದಕರು : ಬರ್ನಾಡ್ ಡಿ’ಕೋಸ್ತಾ ಕೋಲಾರದಲ್ಲಿ ಚಿನ್ಮಯ ವಿದ್ಯಾಲಯದ ಆಶ್ರಯದಲ್ಲಿ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ 623 ಅಂಕಗಳನ್ನು ಗಳಿಸಿ ಸಾಧನೆ ತೋರಿದ ಮುದುವಾಡಿ ಗ್ರಾಮದ ಡಿ.ಎನ್.ಫಣಿಕುಮಾರ್,ಜಯಲಕ್ಷ್ಮಿ ದಂಪತಿಗಳ ಪುತ್ರಿಯಾದ ಪಿ.ಸಹನಾರನ್ನು ಚಿನ್ಮಯ ಮಿಷನ್ನ ಸ್ವಾಮಿ ಬ್ರಹ್ಮಾನಂದಜೀ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು ಹಾಜರಿದ್ದರು.
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸಂಪಾದಕರು : ಬರ್ನಾಡ್ ಡಿ’ಕೋಸ್ತಾ ಕೋಲಾರ:- `ಸೋಷಿಯಲ್ ಇಮ್ಮರ್ಶನ್ ಪ್ರೋಗ್ರಾಂ’ ನಡಿ ಸಮುದಾಯದ ಅಗತ್ಯತೆಗಳಿಗೆ ವಿದ್ಯಾರ್ಥಿಗಳನ್ನು ಸಂವೇದನಾ ಶೀಲಗೊಳಿಸುವ ಮತ್ತು ಸಂಶೋಧನೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಗುರುತಿಸುವ ಪ್ರಯತ್ನವಾಗಿ ತಾಲ್ಲೂಕಿನ ವಕ್ಕಲೇರಿ ಹಾಗೂ ಶೆಟ್ಟಿಕೊತ್ತನೂರು ಗ್ರಾಮಗಳಲ್ಲಿ ಜಗದೀಶ್ ಶೇಠ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ವತಿಯಿಂದ ಉಚಿತ ವೈದ್ಯಕೀಯ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಶೀಬಿರದಲ್ಲಿ 450ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಆರೋಗ್ಯ ತಪಾಸಣೆಗೆ ಒಳಪಟ್ಟಿದ್ದು, ಮನೆಮನೆಗೂ ತೆರಳಿ ಜನರ ಸಮಸ್ಯೆಗಳನ್ನು ಆಲಿಸುವ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಗುರುತಿಸುವ ಅನನ್ಯ […]
ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸಂಪಾದಕರು:ಬರ್ನಾಡ್ ಡಿ’ಕೋಸ್ತಾ ಕೋಲಾರ:- ಮಹಿಳೆಯರಂತೆ ಪುರುಷರೂ ಸಾಲ ಮರುಪಾವತಿಯಲ್ಲಿ ಬದ್ದತೆ ತೋರಿದರೆ ಮತ್ತಷ್ಟು ಪುರುಷ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ನೀಡುವ ಮೂಲಕ ಸ್ವಾವಲಂಬಿ ಬದುಕಿಗೆ ನೆರವಾಗಲು ಬ್ಯಾಂಕ್ ಸಿದ್ದವಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಸ್ವಷ್ಟಪಡಿಸಿದರು.ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ನಗರದ ಶತಶೃಂಗ ಪುರುಷ ಸ್ವಸಹಾಯ ಸಂಘಕ್ಕೆ ಭದ್ರತೆ ರಹಿತ 5 ಲಕ್ಷ ರೂ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಅವಿಭಜಿತ ಜಿಲ್ಲೆಯ ಲಕ್ಷಾಂತರ ಮಹಿಳೆಯರಿಗೆ ಡಿಸಿಸಿ ಬ್ಯಾಂಕ್ ಭದ್ರತೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕ್ಷೇತ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಅವರನ್ನು ಬರಮಾಡಿಕೊಂಡು ಮಾತನಾಡಿದರು.ಪಟ್ಟಣದ ಸಂತೆ ಮೈದಾನದ ನಿವಾಸಿಗಳಿಗೆ ಮನೆ ಒದಗಿಸಲಾಗಿದೆ. ಜಾಕೀರ್ ಹುಸೇನ್ ಮೊಹಲ್ಲಾದ ವಸತಿ ರಹಿತರನ್ನು ಗುರುತಿಸಿ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಪಟ್ಟಣದ ಹೊರ ವಲಯದ ಅಮಾನಿ ಕೆರೆ ಮೈದಾನದಲ್ಲಿ ಸುಮಾರು ರೂ.500 ಕೋಟಿ ವೆಚ್ಚದಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಎಸ್ಸೆಸ್ಸೆಲ್ಸಿ ಸರ್ಕಾರಿ ಶಾಲೆಗಳ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ತಾಲ್ಲೂಕಿನ ಕ್ಯಾಲನೂರು ಕರ್ನಾಟಕ ಪಬ್ಲಿಕ್ ಶಾಲೆಯ ಕೆ.ಎಂ.ಲಿಖಿತಾ, ಲವೀನಾ ಮೆಂಡೋನ್ಸಾ, ಷಾಪೂರು ಸರ್ಕಾರಿ ಪ್ರೌಢಶಾಲೆಯ ವರಲಕ್ಷ್ಮಿ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ನಿಂದಾಗಿ ಆಗಿದ್ದ ಶೈಕ್ಷಣಿಕ ಹಿನ್ನಡೆಯ ನಡುವೆಯೂ ಈ ಮಕ್ಕಳು ಸಾಧನೆ ಮಾಡಿದ್ದಾರೆ, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯದಲ್ಲೇ 6ನೇ ಸ್ಥಾನ ಗಳಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.ತಾಲೂಕಿನ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜು.1: ಇಂದು ಮಾಧ್ಯಮಗಳು ಸಮರ್ಪಕವಾದ ಮಾಹಿತಿಗಳನ್ನು ನೀಡುವಲ್ಲಿ ವಿಫಲವಾಗಿವೆ, ಪತ್ರಿಕೆಗಳು ವಿಡಂಬನಾತ್ಮಕತೆ, ಟೀಕೆ ಟಿಪ್ಪಣಿಗಳು ಆರೋಗ್ಯಕರವಾಗಿರಬೇಕು. ಮಾಹಿತಿಗಳಲ್ಲಿ ಸತ್ಯಾಂಶವಿರಬೇಕು ಮತ್ತು ಲೇಖನಗಳು ಮಾನಹಾನಿಯಾಗಿರಬಾರದು ಎಂದು ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ ವಾನಳ್ಳಿ ತಿಳಿಸಿದರು.ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಇವರ ಸಹಯೋಗದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಪತ್ರಿಕಾ ದಿನಾಚರಣೆಯನ್ನು ಜುಲೈ 1 […]