
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಸ್.ಎಂ.ವೆಂಕಟಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.ಈ ಹಿಂದೆ ಅಧ್ಯಕ್ಷರಾಗಿದ್ದ ನರಸಿಂಹಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಸಲು ಸಿದ್ಧತೆ ಮಾಡಲಾಗಿತ್ತು. ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ ಪರಿಣಾಮವಾಗಿ ಎಸ್.ಎಂ.ವೆಂಕಟಸ್ವಾಮಿ ಅವಿರೋಧ ಆಯ್ಕೆಯಾಗಿರುವುದದಾಗಿ ಚುನಾವಣಾಧಿಕಾರಿ ಡಾ. ಮಂಜುನಾಥರೆಡ್ಡಿ ಪ್ರಕಟಿಸಿದರು.ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಮ್ಮ, ಪಿಡಿಒ ಮಂಜುನಾಥ್, ಕಾರ್ಯದರ್ಶಿ ವೆಂಕಟೇಶ್, ಎಫ್ಡಿಎ ದೇವರಾಜ್, ಮುಖಂಡರಾದ ಮುನಿವೆಂಕಟಪ್ಪ ಇದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕೊಳತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಎನ್.ಶ್ರೀನಿವಾಸ್ ಅವಿರೋಧ ಆಯ್ಕೆಯಾಗಿದ್ದಾರೆ.ಈ ಹಿಂದಿನ ಅಧ್ಯಕ್ಷೆ ಕವಿತಾ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಸಲು ಸಿದ್ಧತೆ ಮಾಡಲಾಗಿತ್ತು. ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ ಪರಿಣಾಮವಾಗಿ ಕೆ.ಎನ್.ಶ್ರೀನಿವಾಸ್ ಅವಿರೋಧ ಆಯ್ಕೆಯಾಗಿರುವುದದಾಗಿ ಚುನಾವಣಾಧಿಕಾರಿ ಎಂ.ಕೆ.ಹುಸೇನ್ ಸಾಬ್ ಪ್ರಕಟಿಸಿದರು.ಪಿಡಿಒ ಮೆಹರ್ ತಾಜ್, ಉಪಾಧ್ಯಕ್ಷೆ ವರಲಕ್ಷ್ಮಿ, ಮುಖಂಡರಾದ ಶಶಿಕುಮಾರ್, ಪ್ರಸನ್ನ, ಚಂಗಪ್ಪ, ದೇವರಾಜ್ ಇದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬಂಗಾರು ತಿರುಪತಿ ಎಂದೇ ಖ್ಯಾತವಾಗಿರುವ ಗುಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲೇ ಹೊಸ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಸಿರುವ ಶಾಸಕಿ ರೂಪಕಲಾ ಶಶಿಧರ್ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಕೊಠಡಿಗಳ ಲಭ್ಯತೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಬಂಗಾರು ತಿರುಪತಿ (ಗುಟ್ಟಹಳ್ಳಿ) ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಯ ನಿರ್ವಹಿಸುತ್ತಿದ್ದು ಇಲ್ಲಿ ಪದವಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ತಾಲ್ಲೂಕಿನ ವೇಮಗಲ್ ಹೋಬಳಿಯ ಮೇಡಿಹಾಳ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿಸಿಯವರಿಗೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಥಿಲ ಕಟ್ಟಡ ನೆಲಸಮಗೊಳಿಸಲು ಕೋರಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಶಿಕ್ಷಣ ಸಂಯೋಜಕ ಬೈರೆಡ್ಡಿ ಹಾಗೂ ಮುಖ್ಯಶಿಕ್ಷಕಿ ಗಾಯತ್ರಿದೇವಿ, ಶಾಲೆಗಾಗಿ 4 ಎಕರೆ ಜಮೀನು ಮಂಜೂರು ಮಾಡಿರುವ ತಮಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ, ಈಗ ಶಾಲೆಗೆ ಹೊಸ ಕಟ್ಟಡವಿದ್ದು, ಮಕ್ಕಳ […]

JANANUDI.COM NETWORK ಕುಂದಾಪುರ: ಸ್ಥಳೀಯ ಭಂಡಾರ್ಕಾರ್ ಪದವಿ ಪೂರ್ವ ಕಾಲೇಜು, 2021-2022ನೇ ಶೈಕ್ಷಣಿಕ ಸಾಲಿನಲ್ಲಿ ಭಂಡಾರ್ಕಾರ್ಕ್ ಪದವಿ ಪೂರ್ವ ಕಾಲೇಜಿಗೆ 91.33% ಫಲಿತಾಂಶ ಬಂದಿರುತ್ತದೆ. ವಿಜ್ಞಾನ ವಿಭಾಗದಲ್ಲಿ 589/600-9816% ಪಡೆದು ರಾಜ್ಯದಲ್ಲಿ 10 ನೇ ರೇಂಕ್ ಪಡೆದಿದ್ದಾಳೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ. ವಿಜ್ಞಾನ ವಿಭಾಗದಲ್ಲಿ ವಾಣಿಜ್ಯ ವಿಭಾಗದಲ್ಲಿವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸಕ ಡಾ. ರಂಗರಾವ್ ಅವರು ವೃದ್ಧೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7.2 ಕೆಜಿ ತೂಕದ ದುರ್ಮಾಂಸದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ.ಪಟ್ಟಣದ ರತ್ನಮ್ಮ (82) ಹೊಟ್ಟೆ ನೋವಿನಿಂದ ನರಳುತ್ತಿದ್ದರು. ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ರಂಗರಾವ್, ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ರತ್ನಮ್ಮ ಅವರನ್ನು ಪರೀಕ್ಷಿಸಿದ ಬಳಿಕ ಹೊಟ್ಟೆಯಲ್ಲಿ ದುರ್ಮಾಂಸ ಬೆಳೆದಿರುವುದನ್ನು ಪತ್ತೆಹಚ್ಚಿದರು. ಶಸ್ತ್ರ ಚಿಕಿತ್ಸೆ ಮಾಡಬೇಕಾದ ಅಗತ್ಯ ಕುರಿತು ತಿಳಿಸಿದರು. ಅದಕ್ಕೆ ಮನೆ ಮಂದಿ ಒಪ್ಪಿದರು.ಶುಕ್ರವಾರ ಶಸ್ತ್ರ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜೂ.17: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲೆಯ ಪತ್ರಕರ್ತರ ಕಲ್ಯಾಣಕ್ಕಾಗಿ ಸಂಗ್ರಹಿಸಲು ಉದ್ದೇಶಿಸಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಹಿರಿಯ ಪತ್ರಕರ್ತ ಪಾ.ಶ್ರೀ.ಅನಂತರಾಮ್ 25000 ರೂಗಳ ದೇಣಿಗೆ ನೀಡಿದ್ದಾರೆ.ಪತ್ರಕರ್ತರ ಸಂಘದ ಚುನಾವಣಾಧಿಕಾರಿಗಳಾಗಿದ್ದ ಅನಂತರಾಮ್ ಚುನಾವಣಾ ಪ್ರಕ್ರಿಯೆಯಲ್ಲಿ ಸಂಗ್ರಹಿಸಲಾಗಿದ್ದ ಹಣದಲ್ಲಿನ ಉಳಿತಾಯದ ಮೊತ್ತವನ್ನು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಕೊಡುಗೆಯಾಗಿ ನೀಡುವ ಮೂಲಕ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.ಶುಕ್ರವಾರ ನಡೆದ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸಭೆಯ ವೇಳೆಯಲ್ಲಿ 25000 ರೂಪಾಯಿ ದೇಣಿಗೆಯನ್ನು ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅವರಿಗೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಬೆಸ್ಕಾಂ ನೌಕರರ ಸಂಘದ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ ಅವರನ್ನು ಸನ್ಮಾನಿಸಲಾಯಿತು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಮ ಸಮಾಜ ನಿರ್ಮಾಣ ಕಾರ್ಯದಲ್ಲಿ ಬಾಬಾ ಸಾಹೇಬರ ಪಾತ್ರ ಹಿರಿದು ಎಂದು ಜಿಲ್ಲಾ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಎಲ್.ನಟರಾಜ್ ಹೇಳಿದರು.ಪಟ್ಟಣದ ಬೆಸ್ಕಾಂ ಕಚೇರಿ ಆವರಣದಲ್ಲಿ ತಾಲ್ಲೂಕು ಬೆಸ್ಕಾಂ ನೌಕರರ ಸಂಘದ ವತಿಯಿಂದ ಬುಧವಾರ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿ, ಅಂಬೇಡ್ಕರ್ ಅವರ ಜೀವನ ಸಮಾಜದ ಎಲ್ಲ ವರ್ಗದ ಜನರಿಗೂ ಪ್ರೇರಕ ಶಕ್ತಿಯಾಗಿದೆ. ಅವರ ಆದರ್ಶ ನಡೆ ಎಲ್ಲ ಕಾಲಕ್ಕೂ ಅನುಕರಣೀಯವಾಗಿದೆ ಎಂದು ಹೇಳಿದರು.ತಾಲ್ಲೂಕು ಬೆಸ್ಕಾಂ ಸಹಾಯಕ […]