ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಟಿ.ವಿ.ರೆಡ್ಡಪ್ಪ, ಉಪಾಧ್ಯಕ್ಷೆಯಾಗಿ ಮಂಗಮ್ಮ ಎರಡನೇ ಅವಧಿಗೆ ಗುರುವಾರ ಅವಿರೋಧ ಆಯ್ಕೆಯಾಗಿದ್ದಾರೆ.ಹಿಂದಿನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಗುರುವಾರ ಚುನಾವಣೆ ಏರ್ಪಡಿಸಲಾಗಿತ್ತು. ಗ್ರಾಮ ಪಂಚಾಯಿತಿಯ ಎಲ್ಲಾ 17 ಸದಸ್ಯರು ಹಾಜರಿದ್ದು, ಮತದಾನ ಇಲ್ಲದೆ ಅದ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅವಿರೋಧ ಆಯ್ಕೆ ಮಾಡಿದರು.ಚುನಾವಣಾಧಿಕಾರಿ ಎಂ.ಎನ್.ಗಣೇಶ್, ಪಿಡಿಒ ಚಂದ್ರಶೇಖರ್, ಮುಖಂಡ ದೊರೆಸ್ವಾಮಿರೆಡ್ಡಿ ಇದ್ದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶುಕ್ರವಾರ ಸೂರ್ಯನಾರಾಯಣಸ್ವಾಮಿ ದೇವಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶುಕ್ರವಾರ ತಾಲ್ಲೂಕು ದಲಿತ ಪರ ಸಂಘಟನೆಗಳ ಕಾರ್ಯಕರ್ತರು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ವರದಿ ಜಾರಿಗಾಗಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಕೈಗೊಂಡಿರುವ ಧರಣಿ ಸತ್ಯಾಗ್ರಹ ಬೆಂಬಲಿಸಿ ಮೆರವಣಿಗೆ ನಡೆಸಿದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ, ಆತ್ಮ ಯೋಜನೆ, ಕೃಷಿ ಇಲಾಖೆ, ಕೋಲಾರ, ತೋಟಗಾರಿಕೆ ಇಲಾಖೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 20.05.2022 ರಂದು “ವಿಶ್ವ ಜೇನುನೋಣ ದಿನ”ಯನ್ನು ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಅಶ್ವಥಾನಾರಾಯಣರೆಡ್ಡಿ, ಸಹಾಯಕ ಪ್ರಾಧ್ಯಾಪಕರು (ಕೀಟಶಾಸ್ತ್ರ), ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರರವರು ಮಾತನಾಡಿ ಜೇನಿನ ಮಹತ್ವ, ಅವುಗಳ ಸಂರಕ್ಷಣೆ, ವಿವಿಧ ರೀತಿಯ ಜೇನು ನೊಣಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ, ಮೇ.19, ಮಾನವೀಯತೆಯ ದೃಷ್ಠಿಯಿಂದ ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಮುಂದಾಗಿ ಹೊರ ರಾಜ್ಯದ ಟೊಮೇಟೊ ಆಮದು ನಿಲ್ಲಿಸುವ ಜೊತೆಗೆ ಮಾರುಕಟ್ಟೆ ಜಾಗದ ಸಮಸ್ಯೆ ಬಗೆಹರಿಸಿ ಅಭಿವೃದ್ಧಿಪಡಿಸಬೇಕು ಹಾಗೂ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತ ಸಂಘದಿಂದ ಕಾರ್ಯದರ್ಶಿ ವಿಜಯಲಕ್ಷ್ಮಿ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ದುಬಾರಿಯಾಗಿರುವ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳ ನಡುವೆಯೂ ಲಕ್ಷಾಂತರ ರೂಪಾಯಿ ಖಾಸಗಿ ಸಾಲ ಮಾಡಿ ಬೆಳೆದಂತಹ ಬೆಳೆಗೆ ಸಾಂಕ್ರಾಮಿಕ ರೋಗಗಳ ಹಾವಳಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರ ಜಿಲ್ಲೆಯ ವ್ಯಾಪ್ತಿಗೆ ಬರುವ ನಗರಸಭೆ , ಪುರಸಭೆ ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರ ಪ್ರತಿಯೊಂದು ಸಮಸ್ಯೆಗಳಿಗೂ ಅಧಿಕಾರಿಗಳು ಸ್ಪಂದಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ . ಶಿವಣ್ಣ ( ಕೋಟೆ ) ಅವರು ತಿಳಿಸಿದರು . ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಸರ್ಕಾರದ ವಿವಿಧ ಯೋಜನೆಗಳ ಮೂಲಕ ಅರ್ಹ ಅಲ್ಪಸಂಖ್ಯಾತರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ತಿಳಿಸಿದರು . ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾನ್ಯ ಪ್ರಧಾನ ಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿಯ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು . ಪೂರ್ಣ ಪ್ರಮಾಣದಲ್ಲಿ ಅಲ್ಪಸಂಖ್ಯಾತರಿಗೆ ಸೌಲಭ್ಯಗಳನ್ನು ಒದಗಿಸಬೇಕು . ನಮ್ಮಲ್ಲಿ 4 ಮೌಲಾನಾ ಶಾಲೆಗಳಿವೆ . […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ತನ್ನಯಜಮಾನನಿಗೆ ಪ್ರಾಣಕಂಟಕವಾಗಿಎದುರಾಗಿದ್ದ ನಾಗರಹಾವಿನೊಂದಿಗೆ ದಿಟ್ಟತನದಿಂದ ಹೋರಾಡಿದ ಶ್ವಾನವು ನಾಗರಹಾವನ್ನು ಕೊಂದು ಕೊನೆಗೆ ತನ್ನ ಪ್ರಾಣವನ್ನೂ ಸಮರ್ಪಿಸಿದ ಹೃದಯ ವಿದ್ರಾವಕಘಟನೆಇದಾಗಿದೆ.ಅದರ ಹೆಸರು ಕ್ಯಾಸಿ. ಅದುಅಮೇರಿಕನ್ ಬುಲ್ ತಳಿಯ ಹದಿಹರೆಯದ 3 ವರ್ಷದ ಹೆಣ್ಣು ಶ್ವಾನಇದಾಗಿದ್ದು ಮನೆಯ ಮಂದಿಯಅಕ್ಕರೆಯ ಮುದ್ದಿನ ಮಗುವಿನಂತಿತ್ತು.ಅಂದು ಮಠಮಠ ಮಧ್ಯಾಹ್ನತೋಟದ ಮನೆಯಲ್ಲಿಇದ್ದ ಮಾಲೀಕ ವಿಲಾಸ್‍ಅವರು ಮೊಬೈಲ್ ನಲ್ಲಿ ಮಾತನಾಡುತ್ತಾ ಹೊರಗೆ ಬಂದು ಮನೆಯಂಗಳದಲ್ಲಿ ಬೆಳೆದಿದ್ದ ಹಸಿರು ಹುಲ್ಲಿನ ನಡುವೆ ನಡೆದಾಡುತ್ತಿದ್ದರು. ಕ್ಯಾಸಿಯೂ ಸಹ ತನ್ನಯಜಮಾನನ್ನು ಹಿಂಬಾಲಿಸುತ್ತಿತ್ತು, ಅಷ್ಟರಲ್ಲಿ ಹುಲ್ಲಿನ ಮರೆಯಲ್ಲಿ ಮಲಗಿದ್ದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಮೇ.17: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳು ಮತ್ತು ಕಾರ್ಯನಿರತ ಪತ್ರಕರ್ತರ ಸಮಸ್ಯೆಗಳ ಪರಿಹಾರ ಹಾಗೂ ಸಮಾಲೋಚನಾ ಸಭೆಯನ್ನು ದಿನಾಂಕ 20-5-2022 ರಂದು ಶುಕ್ರವಾರ ಬೆಳಗ್ಗೆ 9-30 ಗಂಟೆಗೆ ಕೋಲಾರದ ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಸಭೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್ ಗಣೇಶ್, ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು ಇವರು ಸಹ ಉಪಸ್ಥಿತರಿರುವರು.ಕೋಲಾರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೇಳೆ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ […]