ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಶ್ರೀನಿವಾಸಪುರ ತಾಲೂಕಿನ ವ್ಯಾಪ್ತಿಯ ಕಸಬಾ ವಲಯದ ಬಗಳಹಳ್ಳಿ ಗ್ರಾಮದಲ್ಲಿ “ಶ್ರೀಆಂಜನೇಯ ಸ್ವಾಮಿ ದೇವಸ್ಥಾನ”ದಜೀರ್ಣೋಧ್ಧಾರಕ್ಕಾಗಿ ರೂ.200,000/- ಡಿ.ಡಿ ವಿತರಣೆ ಮಾಡಲಾಯಿತು, ಈ ಸಂದರ್ಭದಲ್ಲಿ ಶ್ರೀನಿವಾಸಪುರ ತಾಲೂಕಿನ ಯೋಜನಾಧಿಕಾರಿಗಳಾದ ಸುರೇಶ್ ಗೌಡ.ಎಸ್ ಹಾಗೂ ದೇವಸ್ಥಾನದ ಕಮಿಟಿ ಅಧ್ಯಕ್ಷರಾದ ನೇತಾಜಿ ಗೌಡ ಹಾಗೂ ಕಮಿಟಿ ಸದಸ್ಯರಾದ ನಾಚೇಗೌಡ, ಮುಕುಂದ ಕುಮಾರ ಮತ್ತು ಊರಿನ ಮುಖಂಡರಾದ ಬದ್ರಿನಾಥ್ ಹಾಗೂ ಕಸಬಾ ವಲಯದ ಮೇಲ್ವಿಚಾರಕರಾದ ಕಲಾವತಿ ಬಿ ಟಿ ಹಾಗೂ ಕಸಬಾ ವಲಯದ ಸೇವಾ […]
ಕೋಲಾರ ಜನವರಿ 25 : ಸ್ವಾತಂತ್ರ್ಯ ಭಾರತ ದೇಶದಲ್ಲಿ ಸಾಮಾಜಿಕ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಿದರೆ ದೇಶದ ಸಮಗ್ರ ಸಮಾನತೆಯ ಬೆಳವಣಿಗೆಗೆ ಸಹಕಾರಿಯಾಗುವುದು ಎಂದು ಸಿವಿಲ್ ನ್ಯಾಯಮೂರ್ತಿಗಳಾದ ಸುನಿಲ ಹೊಸಮನಿ ತಿಳಿಸಿದರು.ಕೋಲಾರ ತಾಲ್ಲೂಕು ಅರಾಭಿಕೊತ್ತನೂರು ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕೇರಿಗಳಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕೋಲಾರ ಇವರ ಸಹಯೋಗದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ […]
ಶ್ರೀನಿವಾಸಪುರ: ಬಲಿಜ ಸಮುದಾಯಕ್ಕೆ ಸರ್ಕಾರ ಪೂರ್ಣ ಪ್ರಮಾಣದ 2ಎ ಮೀಸಲಾತಿ ಹಿಂದಿರುಗಿಸಬೇಕು ಎಂದು ತಾಲ್ಲೂಕು ಬಲಿಜ ಸಮುದಾಯದ ಮುಖಂಡ ಎಲ್.ವಿ.ಗೋವಿಂದಪ್ಪ ಆಗ್ರಹಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಬಲಿಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬಲಿಜ ಸಮುದಾಯಕ್ಕೆ 2ಎ ಮೀಸಲಾತಿ ನೀಡಲಾಗಿತ್ತು. ಆದರೆ ಸಮುದಾಯದ ಗಮನಕ್ಕೆ ತರದೆ 3ಎ ಮೀಸಲಾತಿಗೆ ಸೇರಿಸಲಾಗಿತ್ತು. ಆದರೆ ಬಿ.ಎಸ್.ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾಗ, ಸಮುದಾಯದ ಮನವಿಗೆ ಸ್ಪಂದಿಸಿ, ಶಿಕ್ಷಣಕ್ಕೆ ಮಾತ್ರ 2ಎ ಮೀಸಲಾತಿ ನೀಡಲಾಯಿತು. ಆದರೆ […]
ಕೋಲಾರ:- ನನ್ನ ವಿರುದ್ದ ದಾಖಲಾಗಿರುವ 9 ಕೇಸ್ಗಳಿಗೆ ನಾನು ತಡೆಯಾಜ್ಞೆ ಪಡೆದುಕೊಂಡಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಇಂಚರಗೋವಿಂದರಾಜು ಸದರಿ ಪ್ರಕರಣಗಳ ಮಾಹಿತಿಯನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸಿದರೆ ಆ ಕ್ಷಣವೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿರುಗೇಟು ನೀಡಿದರು.ಇತ್ತೀಚೆಗೆ ಸುದ್ದಿಗೋಷ್ಟಿ ನಡೆಸಿದ್ದ ಗೋವಿಂದರಾಜು ಹೇಳಿಕೆ ನೀಡಿ, ಡಿಸಿಸಿ ಬ್ಯಾಂಕ್ನಲ್ಲಿನ ಭ್ರಷ್ಟಾಚಾರದ ವಿರುದ್ದ 9 ಕೇಸುಗಳು ಹೈಕೋರ್ಟ್ನಲ್ಲಿದ್ದು, ಅದಕ್ಕೆ ಗೋವಿಂದಗೌಡರು ತಡೆಯಾಜ್ಞೆ ತಂದುಕೊಂಡಿದ್ದಾರೆ ಎಂದು […]
ಕೋಲಾರ:- ಶಿಕ್ಷಣ ಇಲಾಖೆ ಆಯುಕ್ತರು ಹಠಕ್ಕೆ ಬಿದ್ದು ಇಂದು ನಡೆಸಲು ಮುಂದಾದ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಮುಂದೂಡಿಸುವಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಯಶಸ್ವಿಯಾಗಿದ್ದು, ಕಡೆಗೂ ಕೌನ್ಸಿಲಿಂಗ್ಅನ್ನು ಮುಂದಿನ ಆದೇಶದವರೆಗೂ ಮುಂದೂಡುವಂತೆ ಶಿಕ್ಷಣ ಸಚಿವರೇ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ತಿಳಿಸಿದ್ದಾರೆ.ರಾಜ್ಯಾದ್ಯಂತ ಇಂದು ಆರಂಭವಾದ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ಗೆ ಸಂಬಂಧಿಸಿದಂತೆ ಹೆಚ್ಚುವರಿ ಶಿಕ್ಷಕರನ್ನು ಗುರುತಿಸುವಲ್ಲಿ ಅವೈಜ್ಞಾನಿಕ ಕ್ರಮ ಅನುಸರಿಸಲಾಗಿದೆ, ಶಾಲೆಗಳಲ್ಲಿನ ಮಕ್ಕಳ ಹಾಜರಾತಿ ಸಂಖ್ಯೆಯನ್ನು ಕಳೆದ ವರ್ಷದ […]
ಕೋಲಾರ : ಪ್ರಜಾಧ್ವನಿ ಯಾತ್ರೆಯಲ್ಲಿ ಸೇರಿದ ಜನರನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ನೂರು ಬಾರಿ ಅಮಿತ್ ಶಾ , ಮೋದಿ ಬಂದ ಕಾಂಗ್ರೆಸ್ ಅಧಿಕಾರಕ್ಕೇರುವದು ಖಚಿತ ಎಂದರು. ನಗರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಭಾಗವಾಗಿ ಮಾತನಾಡಿದ ಅವರು , 13 ನೇ ಜಿಲ್ಲೆಯ ಪ್ರವಾಸ ಪ್ರತಿ ಜಿಲ್ಲೆಯಲ್ಲಿಯೂ ಪ್ರಜಾಧ್ವನಿಗೆ ನಿರೀಕ್ಷೆ ಮಾಡಿದ್ದಕ್ಕಿಂತಲೂ ಹೆಚ್ಚು ಸ್ಪಂದನೆ ಜನಸಮೂಹದಿಂದ ಹರಿದು ಬರುತ್ತಿದೆ. ರಾಜ್ಯದ ಜನ ಬಿಜೆಪಿ ಸರಕಾರದ ಆಡಳಿತದಿಂದ ಬೇಸತ್ತಿದ್ದಾರೆ , ನೊಂದಿದ್ದಾರೆ , ಅನೇಕ ಕಷ್ಟಗಳ […]
ಶ್ರೀನಿವಾಸಪುರ: ಇಲ್ಲಿನ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಆರ್ಯ ವೈಶ್ಯ ಸಮುದಾಯದ ವತಿಯಿಂದ ಕನ್ಯಕಾಪರಮೇಶ್ವರಿ ಆತ್ಮಾರ್ಪಣಾ ದಿನೋತ್ಸವ ಆಚರಿಸಲಾಯಿತು. ಆತ್ಮಾರ್ಪಣಾ ದಿನಾಚರಣೆ ಪ್ರಯುಕ್ತ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದೇವಾಲಯದಲ್ಲಿ ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಿಗೆ ಅಭಿಷೇಕ, ಗಣಪತಿ ಹೋಮ, ನವಗ್ರಹ ಹೋಮ. ದೇವಿ ಮೂಲ ವಿಗ್ರಹಕ್ಕೆ 108 ಕಳಶಗಳಿಂದ ವಿಶೇಷ ಅಭಿಷೇಕ ಮಾಡಲಾಯಿತು. ಈ ಸಂದರ್ಭದಲ್ಲಿ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.ಸಂಜೆ ಉಯ್ಯಾಲೋತ್ಸವ ಹಾಗೂ ಪ್ರಾಕಾರೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಲಘು ಉಪಹಾರದ […]
ಶ್ರೀನಿವಾಸಪುರ: ಓದಿನ ಜತೆ ವಿದ್ಯಾರ್ಥಿ ಜೀವನದಿಂದ ಮೌಲ್ಯಯುತ ಗುಣಗಳೊಂದಿಗೆ, ಸಂಸ್ಕಾರವನ್ನು ಮೈಗೂಡಿಸಿಕೊಂಡು ಉತ್ತಮ ನಾಗರೀಕರಾಗಿ ಬದುಕಬೇಕು ಎಂದು ಶ್ರೀನಿವಾಸಪುರ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಾಣೇಶ್ ಹೇಳಿದರು.ಗೊರವಿಮಾಕಲಪಲ್ಲಿ ಸಫಲಮ್ಮ ಸಮುದಾಯ ಭವನದಲ್ಲಿ ಬೆಂಗಳೂರಿನ ಋಷಿ ಪ್ರಭಾಕರ್ ವಿದ್ಯಾಕೇಂದ್ರದ ಸಹಯೋಗದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ದಿನದ ವಿದ್ಯಾರ್ಥಿಗಳಿಗೆ ಸೃಜನಾತ್ಮಕ ಬೆಳವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳಿಗೆ ವಿದ್ಯಾರ್ಥಿಗಳ ಸೃಜನಶೀಲ ಅಭಿವೃದ್ಧಿ ಆಧುನಿಕ ಶಿಕ್ಷಣದ ಅತ್ಯಂತ ತುರ್ತು ಕಾರ್ಯಾಗಳಲ್ಲಿ […]
ಶ್ರೀನಿವಾಸಪುರ:ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯ ಸಂಭ್ರಮ ಜೀವಂತವಾಗಿರುವಂತೆ ನೋಡಿಕೊಳ್ಳಬೇಕು. ಯುವ ಸಮುದಾಯ ಸಾಹಿತ್ಯ ಕೃತಿಗಳ ಓದಿಗೆ ಹಿಂದಿರುಗಬೇಕು ಎಂದು ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಯಲ್ದೂರಿನ ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಕನ್ನಡ ಪ್ರೀತಿಗೆ ಕೊರತೆಯಿಲ್ಲ. ಆದರೆ ಜನರು ತಮ್ಮ ದಿನನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಕೆ ಮಾಡದಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.ಸರ್ಕಾರ ಗಡಿ […]

