ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ನಡೆಯುತ್ತಿರುವ ಸ್ನಾತಕ ಪದವಿ ಪರೀಕ್ಷಾ ಕೇಂದ್ರಗಳಿಗೆ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆ ಬಾರದಂತೆ ಕೆಲಸ ಮಾಡಿ ಎಂದು ಸಿಬ್ಬಂದಿಗೆ ತಾಕೀತು ಮಾಡಿದರು. ಈ ಸಂದರ್ಭದಲ್ಲಿ ವಿವಿಯ ಕುಲಸಚಿವೆ ಪ್ರೊ.ಕುಮುದಾ ಮತ್ತಿತರರಿದ್ದರು.
ಕೋಲಾರ:- ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಹಿರಿಯ ರಾಜಕಾರಣಿ ಹಾಗೂ ಕೋಲಾರ ಜಿಲ್ಲೆಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ಜವಾಬ್ದಾರಿ ನೀಡಿರುವ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೆ.ಎಚ್. ಮುನಿಯಪ್ಪ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಸಿ. ಲಕ್ಷ್ಮೀನಾರಾಯಣ, ಪಕ್ಷದ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್ ಮತ್ತಿತರರು ಬುಧವಾರ ಬೆಳಗ್ಗೆ ಸಚಿವ ಕೆ.ಎಚ್. ಮುನಿಯಪ್ಪ ಅವರ […]
ಕೋಲಾರ:- ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 7 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಸಚಿವ ಕೆ.ಎಚ್.ಮುನಿಯಪ್ಪರನ್ನು ಅವಿಭಜಿತ ಜಿಲ್ಲೆಗೆ ಬರಬೇಡಿ ಎಂದು ಹೇಳಲು ನೀವ್ಯಾರು? ಈ ಜಿಲ್ಲೆಯಲ್ಲಿ ಅವರ ಲಕ್ಷಾಂತರ ಅಭಿಮಾನಿಗಳಿದ್ದಾರೆ, ಅವರು ಒಂದು ಕ್ಷೇತ್ರಕ್ಕೆ ಸೀಮಿತರಲ್ಲ ರಾಷ್ಟ್ರ ನಾಯಕರು ಎಂದು ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಕೆ.ಎಚ್.ಮುನಿಯಪ್ಪರನ್ನು ಟಿಕೀಸುತ್ತಿರುವ ಶಾಸಕರೇ, ನಾಯಕರೇ ಎರಡೂ ಜಿಲ್ಲೆಯ ಅವರ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದೀರಿ, ಅಭಿಮಾನಿಗಳು ಶಕ್ತಿ ಪ್ರದರ್ಶನಕ್ಕೆ ತಯಾರಿದ್ದೇವೆ ನೋಡಲು ಮತ್ತೆ […]
ಕೋಲಾರ:- ರೈತರು ಕಾಲ,ಮಾರುಕಟ್ಟೆ ವೈಪರಿತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಬೆಳೆ ಪದ್ದತಿ ಅಳವಡಿಸಿಕೊಂಡು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬೇಕು ಎಂದು ಚಿಂತಾಮಣಿ ರೇಷ್ಮೆ,ಕೃಷಿ ಮಹಾವಿದ್ಯಾಲಯದ ಡೀನ್ ರಾಮಕೃಷ್ಣ ನಾಯ್ಕ್ ಕರೆ ನೀಡಿದರು.ಕೋಲಾರ ಜಿಲ್ಲೆಯ ಕೊಳತೂರು ಗ್ರಾಮದ ಸೋಮೇಶ್ವರಸ್ವಾಮಿ ದೇವಾಲಯ ಆವವರಣದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯ ವಿದ್ಯಾರ್ಥಿಗಳ ಗ್ರಾಮೀಣ ಸಹಭಾಗಿತ್ವ ಮೌಲ್ಯಮಾಪನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಇಂದಿನ ಶಿಬಿರದಲ್ಲಿ ವಿದ್ಯಾರ್ಥಿಗಳು ಕೊಳತೂರು ಗ್ರಾಮದ ಸಾಮಾಜಿಕ ನಕ್ಷೆ, ಬೆಳೆಯ ಶ್ರೇಣಿ, ಚಲನಶೀಲತೆಯ ನಕ್ಷೆ, ಸಂಪನ್ಮೂಲ ನಕ್ಷೆ, ಋತುಮಾನ ನಕ್ಷೆ, ಸಮಸ್ಯಾತ್ಮಕ ನಕ್ಷೆಯ ಕುರಿತು […]
ಎಸ್ಡಿಸಿ ಕಾಲೇಜಿನ ನವರಸ ಸ್ವಾಗತ ಸಮಾರಂಭ ; ಸುಹಾ ನಝೀನ್ಗೆ ಪದವಿ, ಎಂಬಿಎ, ಪಿಎಚ್ಡಿ ವರೆಗೆ ಉಚಿತ ಶಿಕ್ಷಣದ ಭರವಸೆ ಶ್ರೀನಿವಾಸಪುರ : ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿ, ಆ ಗುರಿ ಸಾಧಿಸುವ ನಿಟ್ಟಿನಲ್ಲಿ ಗುರುಗಳ ಮಾರ್ಗದರ್ಶನ ಪಡೆದು ನಿರಂತರ ಪರಿಶ್ರಮಿಸಿದರೆ ಯಶಸ್ಸು ಖಚಿತ ಎಂದು ಎಸ್ಡಿಸಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಉಷಾ ಗಂಗಾಧರ್ ಹೇಳಿದರು. ಪಟ್ಟಣದ ಹೊರವಲಯದ ಮುಳಬಾಗಿಲು ಮುಖ್ಯ ರಸ್ತೆಯ ಕೇತಗಾನಹಳ್ಳಿ ಗ್ರಾಮದ ಸಮೀಪದ ಎಸ್ಡಿಸಿ ಕಾಲೇಜು ಆವರಣದಲ್ಲಿ ಮಹದೇವ […]
ಶ್ರೀನಿವಾಸಪುರ, ಜು.29: ವೃತ್ತಿಪರತೆ, ನಿಷ್ಪಕ್ಷಪಾತತೆ ಹಾಗೂ ಸಾಮಾಜಿಕ ಕಾಳಜಿಯನ್ನು ಮೈಗೂಡಿಸಿಕೊಂಡು ಕಾರ್ಯನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ಸಮಾಜದಲ್ಲಿ ಹೆಚ್ಚಿನ ಗೌರವ ದೊರೆಯುತ್ತದೆ ಎಂದು ಹಿರಿಯ ಪತ್ರಕರ್ತ ಹಾಗೂ ಮನ್ವಂತರ ಪ್ರಕಾಶನದ ಸಂಸ್ಥಾಪಕ ಪಾ.ಶ್ರೀ. ಅನಂತರಾಮಯ್ಯ ಹೇಳಿದರು. ಪಟ್ಟಣದ ಕನಕ ಸಮುದಾಯ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬುಧವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘಟನೆಯಲ್ಲಿ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಪರಸ್ಪರ ಸಹಕಾರ ಮತ್ತು ವಿಶ್ವಾಸದಿಂದ ಕಾರ್ಯನಿರ್ವಹಿಸಬೇಕು. ಪತ್ರಕರ್ತರು ತಮ್ಮ […]
ಶ್ರೀನಿವಾಸಪುರದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ವಾಸವಿ ಮಹಿಳಾ ಮಂಡಳಿ ವತಿಯಿಂದ ಏರ್ಪಡಿಸಿದ್ದ ಆಷಾಡಂ ಧಮಾಕಾ ಸೇಲ್ ಕಾರ್ಯಕ್ರಮವನ್ನು ಮಂಡಳಿಯ ಅಧ್ಯಕ್ಷೆ ವೈ.ಆರ್ಮಂಜುಳ ಶಿವಪ್ರಕಾಶ್ ಉದ್ಘಾಟಿಸಿದರು. ಗಮನ ಸೆಳೆದ ಆಷಾಡಂ ಧಮಾಕಾ ಸೇಲ್ ಶ್ರೀನಿವಾಸಪುರ: ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ವಾಸವಿ ಮಹಿಳಾ ಮಂಡಳಿ ವತಿಯಿಂದ ಆಷಾಡಂ ಧಮಾಕಾ ಸೇಲ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಆರ್ಯ ವೈಶ್ಯ ಮಂಡಳಿ ಟ್ರಸ್ಟ್ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ ಮಾತನಾಡಿ, ಸಮುದಾಯದ ಮಹಿಳೆಯರಲ್ಲಿ ಆರ್ಥಿಕ ವ್ಯವಹಾರ ಜ್ಞಾನ ಬೆಳೆಸುವ ಉದ್ದೇಶದಿಂದ […]
ಕೋಲಾರ ಜು.28: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅಧೀನದಲ್ಲಿರುವ ಎಲ್ಲ ಮಂಡಳಿ, ನಿಗಮ, ಕಾರ್ಪೊರೇಷನ್ಗಳು, ಪ್ರಾಧಿಕಾರಗಳು, ಸಹಕಾರಿ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆಗಳು, ವಿವಿಧ ಇಲಾಖೆಗಳ ಸಲಹಾ ಸಮಿತಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಆಡಳಿತಾತ್ಮಕ ಸಮಿತಿಗಳು ಸೇರಿದಂತೆ ಸರ್ಕಾರದ ಸಹಯೋಗದಲ್ಲಿ ಕಾರ್ಯನಿರ್ವಹಿಸುವ ವಿವಿಧ ಸಾರ್ವಜನಿಕ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಮರ್ಪಕ ಮೀಸಲಾತಿ ಹಾಗೂ ನ್ಯಾಯಯುತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿ ಸದಸ್ಯ ಶಬ್ಬೀರ್ ಅಹ್ಮದ್ ರಾಜ್ಯ ಮತ್ತು […]
ಶ್ರೀನಿವಾಸಪುರ, ಜು.18: ಮಾವಿನಕಾಯಿ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ನೋಂದಣಿ (ರಿಜಿಸ್ಟ್ರೇಷನ್) ಅವಧಿಯನ್ನು ತಕ್ಷಣ ವಿಸ್ತರಿಸಿ, ಹೆಚ್ಚುವರಿ ಪ್ರಮಾಣದ ಮಾವಿನಕಾಯಿಯನ್ನು ಖರೀದಿಸಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ಕೋಲಾರ ಜಿಲ್ಲಾ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ರೈತರು ಶ್ರೀನಿವಾಸಪುರ ಎಪಿಎಂಸಿ ಕಚೇರಿ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಬಳಿಕ ತಹಶೀಲ್ದಾರ್ ಜಿ.ಎನ್. ಸುಧೀಂದ್ರ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕೋಲಾರ ಜಿಲ್ಲಾ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಚಿನ್ನಪ್ಪರೆಡ್ಡಿ, ಜಿಲ್ಲಾಧಿಕಾರಿಗಳು, ತಾಲೂಕು […]

