ಶ್ರೀನಿವಾಸಪುರ: ಹೈನುಗಾರಿಕೆ ಅಭಿವೃದ್ಧಿಯಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಹೆಬ್ಬಟ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತ ಸಮುದಾಯಕ್ಕೆ ಕ್ಷೀರೋತ್ಪಾದನೆ ಜೀವನಾಡಿಯಾಗಿದೆ. ಗ್ರಾಮೀಣ ಪ್ರದೇಶದ ಎಲ್ಲ ಸಮುದಾಯದ ಜನರ ಆರ್ಥಿಕಾಭಿವೃದ್ಧಿ ಹಾಲಿನ ಉತ್ಪಾದನೆ ಮೇಲೆ ನಿಂತಿದೆ ಎಂದು ಹೇಳಿದರು.ಡಿಸಿಸಿ ಬ್ಯಾಂಕ್ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಈಗ ನೀಡಲಾಗುತ್ತಿರುವ ರೂ.50 ಸಾವಿರ ಬಡ್ಡಿರಹಿತ ಸಾಲದ ಜತೆಗೆ, ಹೆಚ್ಚುವರಿಯಾಗಿ […]

Read More

ಕೋಲಾರ:- ಕೆಜಿಎಫ್ ನಗರದ ಸಮಗ್ರ ಅಭಿವೃದ್ದಿಗೆ ಟೊಂಕ ಕಟ್ಟಿ ನಿಂತಿರುವ ಶಾಸಕಿ ರೂಪಕಲಾ ರಸ್ತೆ ಕಾಮಗಾರಿಗೆ ಅಡ್ಡಿಯಾಗಿರುವ ವಿದ್ಯುತ್ ಕಂಬಗಳ ಸ್ಥಳಾಂತರ, ಮರಗಳ ತೆರವು ಕಾರ್ಯಾಚರಣೆ ಕುರಿತು ಶನಿವಾರ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಅರಣ್ಯ,ಬೆಸ್ಕಾಂ, ರಾಜ್ಯ ಹೆದ್ದಾರಿ ಯೋಜನೆಗಳ ಅಧಿಕಾರಿಗಳ ಸಭೆ ನಡೆಸಿ ಶೀಘ್ರ ಕ್ರಮಕ್ಕೆ ತಾಕೀತು ಮಾಡಿದರು.ಮಿನಿ ವಿಧಾನಸೌಧ ಸಿದ್ದಗೊಂಡಿದ್ದು, ಸೆಪ್ಟೆಂಬರ್ 2ನೇ ವಾರ ಉದ್ಘಾಟನೆಗೆ ರಾಜ್ಯದ ಕಂದಾಯ ಸಚಿವರು ದಿನಾಂಕ ನೀಡುವುದಾಗಿ ತಿಳಿಸಿದ್ದು ಆ ವೇಳೆಗೆ ಕೆಜಿಎಫ್ ನಗರದಲ್ಲಿ ಇದೀಗ ಕಾಮಗಾರಿ […]

Read More

ಕೋಲಾರ:- ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಇದೇ ಮೊದಲ ಬಾರಿಗೆ ಅಫೆಕ್ಸ್ ಬ್ಯಾಂಕಿನಿಂದ ರಾಜ್ಯದ ಎ ದರ್ಜೆ ಬ್ಯಾಂಕ್ ಪ್ರಶಸ್ತಿಗೆ ಭಾಜನವಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹರ್ಷವ್ಯಕ್ತಪಡಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು 1954ರಲ್ಲಿ ಆರಂಭವಾದ ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲೇ ಇದೇ ಮೊದಲಬಾರಿಗೆ ಅಪೆಕ್ಸ್ ಬ್ಯಾಂಕಿನಿಂದ ಎ ದರ್ಜೆ ಬ್ಯಾಂಕ್ ಎಂಬ ಗೌರವ ಸಿಕ್ಕಿದ್ದು ಇದಕ್ಕೆ ಕಾರಣರಾದ ಬ್ಯಾಂಕಿನ ಆಡಳಿತ ಮಂಡಳಿ ಸಿಬ್ಬಂದಿ ಹಾಗೂ ಪ್ಯಾಕ್ಸ್ ನ ಸಿಬ್ಬಂದಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ.ಕಳೆದ ಬಾರಿ […]

Read More

ಬೆಂಗಳೂರು: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಐಟಾ ಕರ್ನಾಟದ ವತಿಯಿಂದ ಸೆ.೫ ರಂದು ಸೋಮವಾರ ರಾತ್ರಿ ೯ಗಂಟೆಗೆ ರಾಜ್ಯಮಟ್ಟದ “ಆನ್‌ಲೈನ್ ಶಿಕ್ಷಕ ದಿನಾಚರಣೆ-೨೦೨೨” ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಜಿ ಸಚಿವ ಹಾಗೂ ಪ್ರತಿಪಕ್ಷದ ಉಪನಾಯಕ ಯು.ಟಿ.ಕಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಪಿ. ವೀರಭದ್ರಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಸೆಂಟ್ರಲ್ ಎಜ್ಯುಕೇಶನ್ ಬೋರ್ಡ್ ನಿರ್ದೇಶಕ ಶಿಕ್ಷಣ ತಜ್ಞ ಸೈಯ್ಯದ್ ತನ್ವೀರ್ ಆಹ್ಮದ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. […]

Read More

ಶ್ರೀನಿವಾಸಪುರ : ತಾಲ್ಲೂಕಿನ ನೆಲವಂಕಿ ಗ್ರಾಮಪಂಚಾಯಿತಿ ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ 2ನೇ ಅವಧಿಗಾಗಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಲುಮೇಲಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ತಾಲ್ಲೂಕಿನ ನೆಲವಂಕಿ ಗ್ರಾ.ಪಂ. ಸೇರಿದಂತೆ ಒಟ್ಟು 18 ಸದಸ್ಯರಿದ್ದು, ಅದರಲ್ಲಿ ಕಾಂಗ್ರೆಸ್ ಬೆಂಬಲಿತ 14, ಜೆಡಿಎಸ್ ಬೆಂಬಲಿತ 4 ಸದಸ್ಯರಿದ್ದು, ಈ ಹಿಂದಿನ ಉಪಾಧ್ಯಕ್ಷರಾಗಿದ್ದ ಮಮತಸೋಮಶೇಖರ್ ರಾಜೀನಾಮೆಯಿಂದ ತೆರವುಗೊಂಡಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಲುಮೇಲಮ್ಮ ಏಕೈಕ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ .ತಾ.ಪಂ ಮಾಜಿ ಸದಸ್ಯರಾದ ಕೆ.ಕೆ.ಮಂಜು ಮಾತನಾಡಿ ಶಾಸಕರಾದ […]

Read More

ಮುಳಬಾಗಿಲು-ಸೆ-02: ನಕಲಿ ಬಯೋ ಔಷಧಿಗಳನ್ನು ಮಾರಾಟ ಮಾಡಿ ರೈತರನ್ನು ವಂಚನೆ ಮಾಡುತ್ತಿದ್ದು, ರಘು ಆಗ್ರೋ ಟ್ರೇಡರ್ಸ್ ಅಂಗಡಿ ಮೇಲೆ ಕೃಷಿ ಜಂಟಿ ನಿರ್ದೇಶಕರಾದ ರೂಪಾದೇವಿ ಹಾಗೂ ತಾಲ್ಲೂಕು ಕೃಷಿ ಅಧಿಕಾರಿ ರವಿ ರವರ ನೇತೃತ್ವದಲ್ಲಿ 26-08-2022 ರಂದು ದಾಳಿ ಮಾಡಿ ಲಕ್ಷಾಂತರ ರೂಪಾಯಿ ಔಷಧಿಯನ್ನು ವಶಪಡಿಸಿಕೊಂಡು ಮಾಲೀಕರಾದ ರಘುನಾಥರೆಡ್ಡಿ ವಿರುದ್ದ ನಂಗಲಿಠಾಣೆಯಲ್ಲಿ ಕ್ರಿಮಿನಲ್ ಮೊಕದಮ್ಮೆ ದಾಖಲೆ ಮಾಡಿದರು.ರೈತ ಸಂಘದ ದೂರಿನ ಆಧಾರದ ಮೇಲೆ ಕೃಷಿ ಅಧಿಕಾರಿಗಳು ಮುಳಬಾಗಿಲು ತಾಲ್ಲೂಕು ಬೈರಕೂರು ಹೋಬಳಿ ಹೆಚ್.ಬಯ್ಯಪ್ಪನಹಳ್ಳಿ ಗಡಿ ಭಾಗದಲ್ಲಿ ರಘು […]

Read More

ಕೋಲಾರ:- ಗುರುಭವನ ನಿರ್ಮಾಣ ಈಗಾಗಲೇ ಸಾಕಷ್ಟು ವಿಳಂಬವಾಗಿದೆ, ಇದು ಸರಿಯಾದ ಕ್ರಮವಲ್ಲ ನೀವು ಕೂಡಲೇ ಶಿಲಾನ್ಯಾಸಕ್ಕೆ ದಿನಾಂಕ ನಿಗಧಿ ಮಾಡಿ, ಅದಕ್ಕೆ ಅಗತ್ಯವಾದ ಅನುದಾನ ಕ್ರೋಢೀಕರಿಸೋಣ ಎಂದು ಶಿಕ್ಷಕ ಸಂಘಟನೆಗಳ ಮುಖಂಡರಿಗೆ ವಿಧಾನಪರಿಷತ್ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ ಸೂಚಿಸಿದರು.ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಆಹ್ವಾನಪತ್ರಿಕೆ ನೀಡಲು ಆಗಮಿಸಿದ್ದ ಶಿಕ್ಷಕರ ಸಂಘಟನೆಗಳ ಮುಖಂಡರಿಗೆ ಸಲಹೆ ನೀಡಿದ ಅವರು, ಗುರುಭವನ ಶಿಲಾನ್ಯಾಸ ಮಾಡಿ ಕಾಮಗಾರಿ ಶೀಘ್ರ ಆರಂಭಿಸಲು ಕ್ರಮವಹಿಸಿ ಎಂದು ಕಿವಿಮಾತು ಹೇಳಿದರು.ನಿರಂತರ ಮಳೆ ಹಾಗೂ ಸಿದ್ದತೆಗಳ ಕೊರತೆಯಿಂದಾಗಿ ಸೆ.5 ರಂದು […]

Read More

ಕೋಲಾರ:- ನಗರದಲ್ಲಿ ಬಾಲಗಂಗಾಧರ ತಿಲಕ್ ವಿನಾಯಕ ವಿಸರ್ಜನಾ ಸಮಿತಿಯಿಂದ ನಡೆದ ಸಾರ್ವಜನಿಕ ಗಣಪತಿ ಮೂರ್ತಿಗಳ ಭವ್ಯ ಮೆರವಣಿಗೆಗೆ ಸಂಸದ ಎಸ್.ಮುನಿಸ್ವಾವಿ, ನಟ ಡಾಲಿ ಧನಂಜಯ್ ಹಾಗೂ ಮಾಜಿ ಸಚಿವ ವರ್ತೂರು ಪ್ರಕಾಶ್ ಚಾಲನೆ ನೀಡಿದರು.ಬಾಲಗಂಗಾಧರ ತಿಲಕ್ ವಿನಾಯಕ ವಿಸರ್ಜನಾ ಸಮಿತಿಯ 20ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಗಾಂಧಿವನದಲ್ಲಿ ನಿರ್ಮಿಸಿದ್ದ ಬೃಹತ್ ವೇದಿಕೆಯಲ್ಲಿ ಚಾಲನೆ ನೀಡಿದ್ದು, ಮೆರವಣಿಗೆಯ ಉಸ್ತುವಾರಿ ವಹಿಸಿದ್ದ ಬಜರಂಗದಳದ ಬಾಲಾಜಿ,ಬಾಬು, ಡಿ.ಆರ್.ನಾಗರಾಜ್, ಅಪ್ಪಿ,ಪುಟ್ಟು,ಮಂಜುನಾಥ್, ಕೆ.ಎಸ್.ರಾಜೇಂದ್ರ,ಬಿಆರ್‍ಎಂ ಸಂತೋಷ್ ಸೇರಿದಂತೆ ಹಲವಾರು ಮುಖಂಡರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸಾಂಸ್ಕøತಿಕ ಸಮನ್ವಯತೆಗೆ […]

Read More

ಶ್ರೀನಿವಾಸಪುರ : ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಕೆಳದ ಒಂದು ವಾರದಿಂದ ಸತತವಾಗಿ ಬೀಳುತ್ತಿರುವ ಮಳೆಗೆ ರೈತರ ಬೆಳೆಗಳು ನಷ್ಟವಾಗಿದ್ದರೂ ಅಧಿಕಾರಿಗಳನ್ನಾಗಲಿ ಜಿಲ್ಲಾಡಳಿತವನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಶಾಸಕರು ವಿಫಲರಾಗಿದ್ದಾರೆ ಎಂದು ಶಾಸಕ ಕೆ.ಆರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ವಾಗ್ದಾಳಿ ನಡೆಸಿದರು .ತಾಲೂಕಿನ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹೋಳೂರು ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾಗಿರು ರೈತರ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಸ್ಥಳೀಯ ರೈತರು ಹಾಗೂ […]

Read More